ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಏಪ್ರಿಲ್‌ 29; ಬೀದರ್, ಹಾವೇರಿ, ಕೋಲಾರ ಸೇರಿ 18 ಜಿಲ್ಲೆಗಳಲ್ಲಿ ರಣಬಿಸಿಲು, ಆರೆಂಜ್ ಅಲರ್ಟ್

ಕರ್ನಾಟಕ ಹವಾಮಾನ ಏಪ್ರಿಲ್‌ 29; ಬೀದರ್, ಹಾವೇರಿ, ಕೋಲಾರ ಸೇರಿ 18 ಜಿಲ್ಲೆಗಳಲ್ಲಿ ರಣಬಿಸಿಲು, ಆರೆಂಜ್ ಅಲರ್ಟ್

Umesh Kumar S HT Kannada

Apr 29, 2024 06:24 AM IST

ಕರ್ನಾಟಕ ಹವಾಮಾನ ಏಪ್ರಿಲ್‌ 29 (ಇಂದು) ಬೀದರ್, ಹಾವೇರಿ, ಕೋಲಾರ ಸೇರಿ 18 ಜಿಲ್ಲೆಗಳಲ್ಲಿ ರಣಬಿಸಿಲು ಇರಲಿದ್ದು, ಜನ ಮುನ್ನೆಚ್ಚರಿಕೆ ವಹಿಸಬೇಕು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಎಚ್ಚರಿಸಿದೆ.

  • ಕರ್ನಾಟಕ ಹವಾಮಾನ ಏಪ್ರಿಲ್ 29: ರಾಜ್ಯದ ಬೀದರ್, ಹಾವೇರಿ, ಮೈಸೂರು, ಕೋಲಾರ ಸೇರಿ 18 ಜಿಲ್ಲೆಗಳಲ್ಲಿ ಇಂದು ರಣಬಿಸಿಲು, ಬಿಸಿಗಾಳಿ ಹಾಗು ಶಾಖದ ಅಲೆಗಳಿದ್ದು ಆರೆಂಜ್ ಅಲರ್ಟ್‌ ಮುನ್ನೆಚ್ಚರಿಕೆಯನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿದೆ. ಬೆಂಗಳೂರು ಸುತ್ತಮುತ್ತ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಶಿಯಸ್ ದಾಟಬಹುದು ಎಂದು ವರದಿ ಹೇಳಿದೆ.

ಕರ್ನಾಟಕ ಹವಾಮಾನ ಏಪ್ರಿಲ್‌ 29 (ಇಂದು) ಬೀದರ್, ಹಾವೇರಿ, ಕೋಲಾರ ಸೇರಿ 18 ಜಿಲ್ಲೆಗಳಲ್ಲಿ ರಣಬಿಸಿಲು ಇರಲಿದ್ದು, ಜನ ಮುನ್ನೆಚ್ಚರಿಕೆ ವಹಿಸಬೇಕು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಎಚ್ಚರಿಸಿದೆ.
ಕರ್ನಾಟಕ ಹವಾಮಾನ ಏಪ್ರಿಲ್‌ 29 (ಇಂದು) ಬೀದರ್, ಹಾವೇರಿ, ಕೋಲಾರ ಸೇರಿ 18 ಜಿಲ್ಲೆಗಳಲ್ಲಿ ರಣಬಿಸಿಲು ಇರಲಿದ್ದು, ಜನ ಮುನ್ನೆಚ್ಚರಿಕೆ ವಹಿಸಬೇಕು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಎಚ್ಚರಿಸಿದೆ.

ಬೆಂಗಳೂರು: ರಾಜ್ಯದ ಬೀದರ್‌, ಬಾಗಲಕೋಟೆ, ಹಾವೇರಿ, ಕೋಲಾರ, ತುಮಕೂರು ಸೇರಿ 18 ಜಿಲ್ಲೆಗಳಲ್ಲಿ ಇಂದು (ಏಪ್ರಿಲ್ 29) ರಣಬಿಸಿಲು, ಬಿಸಿಗಾಳಿ ಮತ್ತು ಶಾಖದ ಅಲೆಗಳ ತೀವ್ರತೆ ಜನರನ್ನು ಕಾಡಲಿದೆ. ಈ ಜಿಲ್ಲೆಗಳಲ್ಲಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಆರೆಂಜ್ ಅಲರ್ಟ್‌ ನೀಡಿದೆ. ಇದೇ ವೇಳೆ. ಹವಾಮಾನ ಮುನ್ಸೂಚನಾ ಇಲಾಖೆ 16 ಜಿಲ್ಲೆಗಳಲ್ಲಿ ಹಳದಿ ಅಲರ್ಟ್‌ ಘೋಷಿಸಿದೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಟ್ರೆಂಡಿಂಗ್​ ಸುದ್ದಿ

Hassan Scandal: 6 ದಿನ ಜೈಲು ವಾಸದ ನಂತರ ಜಾಮೀನಿನ ಮೇಲೆ ರೇವಣ್ಣ ಬಿಡುಗಡೆ

Namma Metro: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ; ನಾಗಸಂದ್ರ-ಮಾದಾವರ ಮೆಟ್ರೋ ರೈಲು ಸಂಚಾರ ಜುಲೈ ಅಂತ್ಯಕ್ಕೆ ಆರಂಭ

Bengaluru News: ಬೆಳೆಸೋಕೆ ವರುಷ ಮಳೆಗೆ ನಿಮಿಷ; ಬೆಂಗಳೂರಿನಲ್ಲಿ ಒಂದೇ ವಾರದಲ್ಲಿ ಧರೆಗುರುಳಿದ 1000 ಮರಗಳು

ಮಳೆ ಕೊರತೆ, ಬಿಸಿಯಿಂದ ಕೈಕೊಟ್ಟ ಬೆಳೆಗಳು; ಬೆಂಗಳೂರಿನಲ್ಲಿ 60 ರೂ ಇದ್ದ ಕೆಜಿ ಬೀನ್ಸ್ 240 ರೂಪಾಯಿ, ಗಗನಕ್ಕೇರಿದ ತರಕಾರಿ ಬೆಲೆ

ಬೆಂಗಳೂರು ಸುತ್ತಮುತ್ತ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಶಿಯಸ್‌ ದಾಟಬಹುದು. ಏಪ್ರಿಲ್‌ನಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಶಿಯಸ್ ದಾಟಬಹುದು ಎಂಬ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಅದೇ ರೀತಿ ರಾಜ್ಯದ ಎಲ್ಲೆಡೆ ಒಣಹವೆ ಇರಲಿದ್ದು, ಗರಿಷ್ಠ ತಾಪಮಾನ ಹೆಚ್ಚಳ ಉಂಟಾಗಬಹುದು ಎಂಬ ಮುನ್ನೆಚ್ಚರಿಕೆಯನ್ನು ಇಲಾಖೆಯ ವರದಿ ನೀಡಿದೆ. ಕರಾವಳಿಯ ಜಿಲ್ಲೆಗಳಲ್ಲಿ ಅಂದರೆ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡಗಳಲ್ಲಿ ಸುಡುಬಿಸಿಲಿನ ಜೊತೆಗೆ ಆರ್ದ್ರತೆಯೂ ಇರಲಿದ್ದು, ಶುಷ್ಕತೆಯೊಂದಿಗೆ ಸುಡುಬಿಸಿಲು ಕಾಡಲಿದೆ ಎಂದು ಹವಾಮಾನ ಮುನ್ಸೂಚನಾ ವರದಿ ಹೇಳಿದೆ.

ಭಾರತೀಯ ಹವಾಮಾನ ಇಲಾಖೆಯ ಹವಾಮಾ ಮುನ್ಸೂಚನೆ ವರದಿ ಪ್ರಕಾರ, ಏಪ್ರಿಲ್ 30 ರ ಬೆಳಗ್ಗೆ 8.30ರ ತನಕದ ಅವಧಿಯಲ್ಲಿ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದೆ. ಆದಾಗ್ಯೂ, ಮೇ 2 ರ ತನಕ ಗರಿಷ್ಠ ಉಷ್ಣಾಂಶ 2 ರಿಂದ 2 ಡಿಗ್ರಿ ಸೆಲ್ಶಿಯಸ್ ಏರಿಕೆಯಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಬಿಸಿ ಮತ್ತು ಆರ್ದ್ರತೆಯೂ ಹೆಚ್ಛಾಗಲಿದೆ.

ಉತ್ತರ ಒಳನಾಡಿನ ಬಾಲಕೋಟೆ, ಬೀದರ್‌, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಶಾಖದ ಅಲೆಗಳ ಮುನ್ನೆಚ್ಚರಿಕೆ ನೀಡಿದ್ದು, ಹಳದಿ ಅಲರ್ಟ್ ಘೋಷಿಸಿದೆ. ಅದೇ ರೀತಿ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದೆ. ಆದರೆ, ಗರಿಷ್ಠ ತಾಪಮಾನ ಪ್ರಮಾಣ ಹೆಚ್ಚಾಗಲಿದೆ. ಈ ಪ್ರದೇಶಗಳಲ್ಲಿ ಮೇ 2ರ ತನಕ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಶಿಯಸ್ ಹೆಚ್ಚಳವಾಗು ಸಾಧ್ಯತೆ ಇದೆ ಎಂದು ವರದಿ ಎಚ್ಚರಿಸಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ರಣಬಿಸಿಲು, ಶಾಖದ ಅಲೆಗಳು ಕಾಡಬಹುದು. ಅದೇ ರೀತಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ರಾಮನಗರ, ಮೈಸೂರು, ಮಂಡ್ಯ, ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು, ಗರಿಷ್ಠ ತಾಪಮಾನದಲ್ಲಿ ಹೆಚ್ಚಳವಾಗಲಿದೆ. ಮೇ 2 ತನಕ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಶಿಯಸ್‌ನಷ್ಟು ಏರಿಕೆಯಾಗಬಹುದು ಎಂದು ಹವಮಾನ ಮುನ್ಸೂಚನಾ ವರದಿ ಎಚ್ಚರಿಸಿದೆ.

ಶಾಖದ ಅಲೆಗಳ ಮುನ್ನೆಚ್ಚರಿಕೆ ಆರೆಂಜ್ ಅಲರ್ಟ್

ಕರ್ನಾಟಕದಲ್ಲಿ ಇಂದು ಬೀದರ್, ಕಲಬರುಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗಬಹುದು. ಆದ್ದರಿಂದ, ರಣಬಿಸಿಲು ಮತ್ತು ಶಾಖದ ಅಲೆಯಿಂದ ರಕ್ಷಣೆ ಪಡೆಯಲು ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿ ಮುನ್ನೆಚ್ಚರಿಕೆಯ ಸಲಹೆ ನೀಡಿದೆ.

ಬೆಂಗಳೂರು ಹವಾಮಾನ ಇಂದು (ಏಪ್ರಿಲ್‌ 29), ಗರಿಷ್ಠ 38 ಡಿಗ್ರಿ ಸೆಲ್ಶಿಯಸ್ ಕನಿಷ್ಠ 23 ಡಿಗ್ರಿ ಸೆಲ್ಶಿಯಸ್

ಬೆಂಗಳೂರು ನಗರದಲ್ಲಿ ಇಂದು (ಏಪ್ರಿಲ್‌ 29) ಗರಿಷ್ಠ ತಾಪಮಾನವು 38 ಡಿಗ್ರಿ ಸೆಲ್ಶಿಯಸ್ ಕನಿಷ್ಠ 23 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು. ಮುಂಜಾನೆ ಹೊತ್ತು ಭಾಗಶಃ ಮೋಡಕವಿದ ವಾತಾವರಣ ಇರಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುನ್ಸೂಚನಾ ವರದಿ ತಿಳಿಸಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 38 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 23 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಏಪ್ರಿಲ್ 28) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 23.4 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 38 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 23 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ನಿನ್ನೆ (ಏಪ್ರಿಲ್ 28) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 38.1 ಡಿಗ್ರಿ ಸೆಲ್ಶಿಯಸ್, ಕನಿಷ್ಠ ತಾಪಮಾನ 22.5 ಡಿಗ್ರಿ ಸೆಲ್ಶಿಯಸ್‌ ಇತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಏಪ್ರಿಲ್ 29 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 28.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 50)

ಮಂಗಳೂರು – 30 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 83)

ಚಿತ್ರದುರ್ಗ – 30 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 91)

ಗದಗ – 31.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 62)

ಹೊನ್ನಾವರ – 30.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 76)

ಕಲಬುರಗಿ – 33.3 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 24)

ಬೆಳಗಾವಿ – 29 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 79)

ಕಾರವಾರ – 34.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 64 )

----------------------

(This copy first appeared in Hindustan Times Kannada website. To read more like this please logon to kannada.hindustantimes.com)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ