ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಏಪ್ರಿಲ್‌ 18; ಬೆಂಗಳೂರು ಗ್ರಾಮಾಂತರ, ಮೈಸೂರು, ಧಾರವಾಡ, ಶಿವಮೊಗ್ಗ ಸೇರಿ 22 ಜಿಲ್ಲೆಗಳಲ್ಲಿ ಒಂದೆರಡು ಕಡೆ ಮಳೆ ನಿರೀಕ್ಷೆ

ಕರ್ನಾಟಕ ಹವಾಮಾನ ಏಪ್ರಿಲ್‌ 18; ಬೆಂಗಳೂರು ಗ್ರಾಮಾಂತರ, ಮೈಸೂರು, ಧಾರವಾಡ, ಶಿವಮೊಗ್ಗ ಸೇರಿ 22 ಜಿಲ್ಲೆಗಳಲ್ಲಿ ಒಂದೆರಡು ಕಡೆ ಮಳೆ ನಿರೀಕ್ಷೆ

Umesh Kumar S HT Kannada

Apr 18, 2024 06:10 AM IST

ಕರ್ನಾಟಕ ಹವಾಮಾನ ಏಪ್ರಿಲ್‌ 18; ಹೀಗಿದೆ ಇಂದಿನ ಹವಾಮಾನ

  • ಕರ್ನಾಟಕ ಹವಾಮಾನ ಏಪ್ರಿಲ್ 18: ರಾಜ್ಯದ ಉದ್ದಗಲಕ್ಕೂ ಒಣಹವೆ ಇದ್ದರೂ, ಇಂದು ಬೆಂಗಳೂರು ಗ್ರಾಮಾಂತರ, ಮೈಸೂರು, ಧಾರವಾಡ, ಶಿವಮೊಗ್ಗ ಸೇರಿ 22 ಜಿಲ್ಲೆಗಳಲ್ಲಿ ಒಂದೆರಡು ಕಡೆ ಮಳೆ ಬೀಳಬಹುದು ಎಂದು ನಿರೀಕ್ಷಿಸಲಾಗಿದೆ. ಕರ್ನಾಟಕ ಹವಾಮಾನ ಮುನ್ಸೂಚನೆ ವರದಿ ಪ್ರಕಾರ, ಕರ್ನಾಟಕದಲ್ಲಿ ತಾಪಮಾನ ಪ್ರಮಾಣ ಕೊಂಚ ಇಳಿಕೆಯ ಸೂಚನೆ ಇದೆ.

ಕರ್ನಾಟಕ ಹವಾಮಾನ ಏಪ್ರಿಲ್‌ 18; ಹೀಗಿದೆ ಇಂದಿನ ಹವಾಮಾನ
ಕರ್ನಾಟಕ ಹವಾಮಾನ ಏಪ್ರಿಲ್‌ 18; ಹೀಗಿದೆ ಇಂದಿನ ಹವಾಮಾನ

ಬೆಂಗಳೂರು: ಕರ್ನಾಟಕದಲ್ಲಿ ಇಂದು ಒಣಹವೆ ಇದ್ದಾಗ್ಯೂ, ಬೆಂಗಳೂರು ಗ್ರಾಮಾಂತರ, ಮೈಸೂರು, ಧಾರವಾಡ, ಶಿವಮೊಗ್ಗ ಸೇರಿ 22 ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರವಾಗಿ ಚದುರಿದ ಮಳೆ ನಿರೀಕ್ಷೆ ಬೀಳುವ ನಿರೀಕ್ಷೆ ಇಟ್ಟುಕೊಳ್ಳಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಮಳೆ ಮುನ್ಸೂಚನಾ ವರದಿ ತಿಳಿಸಿದೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಟ್ರೆಂಡಿಂಗ್​ ಸುದ್ದಿ

ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ವಾಪಸ್ ಬಂದಿಲ್ಲ; ಲೋಕಸಭಾ ಚುನಾವಣೆ ಫಲಿತಾಂಶ ತನಕ ಬರುವ ನಿರೀಕ್ಷೆಯೂ ಇಲ್ಲ, ಎಸ್‌ಐಟಿ ಮೂಲ ಹೇಳಿಕೆ

ವಿಜಯಪುರದಿಂದ ಅಯೋಧ್ಯೆಗೆ ಬೈಕ್ ಸವಾರಿ; ಪ್ರಯಾಣಕ್ಕೆಷ್ಟು ದಿನ, ರೂಟ್ ಯಾವುದು ಶಿವಾನಂದ ಪರೀಟ ಅನುಭವ ಕಥನ

ಬಿಬಿಎಂಪಿಗೆ 10 ವರ್ಷದ ಹಿಂದೆ ಸೇರ್ಪಡೆಯಾದ 110 ಗ್ರಾಮಗಳಿಗೆ ಕಾವೇರಿ 5 ನೇ ಹಂತದಲ್ಲಿ ನೀರಿನ ಸಂಪರ್ಕ, ಅಧಿಕಾರಿಗಳಿಗೆ ಜಲಮಂಡಳಿ ಸೂಚನೆ

Anjali Murder Case; ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ನೆನಪು ಮಾಸುವ ಮೊದಲೇ 20 ವರ್ಷದ ಅಂಜಲಿಯ ಭೀಕರ ಹತ್ಯೆ, 10 ಅಂಶಗಳ ವಿವರ ವರದಿ

ಬೆಂಗಳೂರು ಹವಾಮಾನ ಕೇಂದ್ರದ ವರದಿ ಪ್ರಕಾರ, ಇಂದು (ಏಪ್ರಿಲ್ 18) ಬೆಳಗ್ಗೆ 8.30ರ ತನಕ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಅಂದರೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡಗಳಲ್ಲಿ ಒಣಹವೆ, ತಾಪಮಾನ ಹೆಚ್ಚಳ, ಆರ್ದ್ರತೆ ಇರಲಿದೆ. ಆ ಬಳಿಕ ನಾಳೆ ಬೆಳಗ್ಗೆ 8.30ರ ತನಕ ದಕ್ಷಿಣ ಕನ್ನಡದ ಒಂದೆರಡು ಕಡೆ ಹಗುರ ಚದುರಿದ ಮಳೆ ಬೀಳಬಹುದು. ಆದಾಗ್ಯೂ ಬಿಸಿ ಮತ್ತು ಆರ್ದ್ರತೆ ಮುಂದುವರಿಯಲಿದೆ. ಏಪ್ರಿಲ್ 19ರ ತನಕ ಈ ವಾತಾವರಣ ಇರಲಿದೆ. ಮುಂದಿನ 5 ದಿನಗಳ ಕಾಲ ತಾಪಮಾನ ಇನ್ನಷ್ಟು ಅಂದರೆ 2 ರಿಂದ 3 ಡಿಗ್ರಿ ಸೆಲ್ಶಿಯಸ್‌ನಷ್ಟು ಏರಲಿದೆ ಎಂದು ವರದಿ ಹೇಳಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರಗಳಲ್ಲಿ ಒಣಹವೆಯೊಂದಿಗೆ ಒಂದೆರಡು ಕಡೆ ಚದುರಿದ ಹಗುರ ಮಳೆಯಾಬಹುದು. ಉಳಿದಂತೆ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿಗಳಲ್ಲಿ ಒಣಹವೆ ಮುಂದುವರಿಯಲಿದೆ. ಏಪ್ರಿಲ್ 19 ರ ತನಕ ಒಂದೆರಡು ಕಡೆ ಗುಡುಗು ಮಿಂಚು, ಬಿರುಗಾಳಿ ಕಾಣಬಹುದು. ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಗರಿಷ್ಠ ತಾಪಮಾನ 2 ರಿಂದ 3 ಡಿಗ್ರಿ ಸೆಲ್ಶಿಯಸ್‌ನಷ್ಟು ಏರಲಿದೆ ಎಂದು ವರದಿ ಹೇಳಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರಗಳಲ್ಲಿ ಇಂದು ಒಂದೆರಡು ಕಡೆ ಚದುರಿದ ಹಗುರ ಮಳೆಯಾಗಬಹುದು. ಬೆಂಗಳೂರು ನಗರ ಭಾಗದಲ್ಲಿ ಮಾತ್ರ ಒಣಹವೆ ಇರಲಿದ್ದು, ಮಳೆ ಮುನ್ಸೂಚನೆ ಕಾಣುತ್ತಿಲ್ಲ ಎಂದು ವರದಿ ಹೇಳಿದೆ.

ಬೆಂಗಳೂರು ಹವಾಮಾನ ಇಂದು (ಏಪ್ರಿಲ್‌ 18), ಗರಿಷ್ಠ 37 ಡಿಗ್ರಿ ಸೆಲ್ಶಿಯಸ್ ಕನಿಷ್ಠ 22 ಡಿಗ್ರಿ ಸೆಲ್ಶಿಯಸ್

ಬೆಂಗಳೂರು ನಗರದಲ್ಲಿ ಇಂದು (ಏಪ್ರಿಲ್‌ 18) ಗರಿಷ್ಠ ತಾಪಮಾನವು 37 ಡಿಗ್ರಿ ಸೆಲ್ಶಿಯಸ್ ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು. ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುನ್ಸೂಚನಾ ವರದಿ ತಿಳಿಸಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 37 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಏಪ್ರಿಲ್ 17) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 36.7 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 24.5 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 37 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ನಿನ್ನೆ (ಏಪ್ರಿಲ್ 17) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 36.7 ಡಿಗ್ರಿ ಸೆಲ್ಶಿಯಸ್, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಶಿಯಸ್‌ ದಾಖಲಾಗಿತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಏಪ್ರಿಲ್ 18) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 29.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 43)

ಮಂಗಳೂರು – 29.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 72)

ಚಿತ್ರದುರ್ಗ – 28 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 88)

ಗದಗ – 28 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 71)

ಹೊನ್ನಾವರ – 27.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 84)

ಕಲಬುರಗಿ – 30 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 44)

ಬೆಳಗಾವಿ – 29.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 61)

ಕಾರವಾರ – 35.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 63 )

----------------------

(This copy first appeared in Hindustan Times Kannada website. To read more like this please logon to kannada.hindustantimes.com)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ