logo
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಮುನ್ಸೂಚನೆ ಗಮನಿಸಿದರೆ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಸಡಗರಗಳಿಗೆ ವರುಣ ದೇವ ಸ್ಪಂದಿಸುವ ಸಾಧ್ಯತೆ ಇದೆಯಾ

ಕರ್ನಾಟಕ ಹವಾಮಾನ ಮುನ್ಸೂಚನೆ ಗಮನಿಸಿದರೆ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಸಡಗರಗಳಿಗೆ ವರುಣ ದೇವ ಸ್ಪಂದಿಸುವ ಸಾಧ್ಯತೆ ಇದೆಯಾ

Umesh Kumar S HT Kannada

Aug 15, 2024 06:39 AM IST

google News

ಕರ್ನಾಟಕ ಹವಾಮಾನ ಮುನ್ಸೂಚನೆ ಗಮನಿಸಿದರೆ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಸಡಗರಗಳಿಗೆ ವರುಣ ದೇವ ಸ್ಪಂದಿಸುವ ಸಾಧ್ಯತೆ ಇದೆಯಾ.. (ಸಾಂಕೇತಿಕ ಚಿತ್ರ)

  • Karnataka Weather August 15 2024; ರಾಜ್ಯದ ಉದ್ಗಲಕ್ಕೂ ಮಳೆ ಬೀಳಲಿದೆ. ಕರ್ನಾಟಕ ಹವಾಮಾನ ಮುನ್ಸೂಚನೆ ಗಮನಿಸಿದರೆ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಸಡಗರಗಳಿಗೆ ವರುಣ ದೇವ ಸ್ಪಂದಿಸುವ ಸಾಧ್ಯತೆ ಇದೆಯಾ ಎನ್ನುವ ಕುತೂಹಲವೂ ಇದೆ. ಹಮಾಮಾನ ಮುನ್ಸೂಚನೆ ಪ್ರಕಾರ, ಮೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌, 6 ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಕಂಡುಬಂದಿದೆ.

ಕರ್ನಾಟಕ ಹವಾಮಾನ ಮುನ್ಸೂಚನೆ ಗಮನಿಸಿದರೆ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಸಡಗರಗಳಿಗೆ ವರುಣ ದೇವ ಸ್ಪಂದಿಸುವ ಸಾಧ್ಯತೆ ಇದೆಯಾ.. (ಸಾಂಕೇತಿಕ ಚಿತ್ರ)
ಕರ್ನಾಟಕ ಹವಾಮಾನ ಮುನ್ಸೂಚನೆ ಗಮನಿಸಿದರೆ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಸಡಗರಗಳಿಗೆ ವರುಣ ದೇವ ಸ್ಪಂದಿಸುವ ಸಾಧ್ಯತೆ ಇದೆಯಾ.. (ಸಾಂಕೇತಿಕ ಚಿತ್ರ)

ಬೆಂಗಳೂರು: ನಾಡಿನ ಉದ್ದಗಲಕ್ಕೂ ಭಾರತದ ಸ್ವಾತಂತ್ರ್ಯ ದಿನಾಚರಣೆ (Indian Independence day ) ಸಂಭ್ರಮ, ಸಡಗರ. ಆದಾಗ್ಯೂ, ಮಳೆಯ ತೀವ್ರತೆ ಇದಕ್ಕೆ ಅವಕಾಶ ನೀಡಲಿದೆಯಾ ಎನ್ನುವುದು ಒಂದು ಸಂದೇಹ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಹವಾಮಾನ ಮುನ್ಸೂಚನೆ ಪ್ರಕಾರ, ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯ ತೀವ್ರತೆ ಹಚ್ಚಿರಲಿದೆ. ಕರಾವಳಿಯಲ್ಲೂ ಮಳೆ ಸುರಿಯಲಿದೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ನಿಖರವಾಗಿ ಹೇಳಬೇಕು ಎಂದರೆ, ಬೆಂಗಳೂರು ಹವಾಮಾನ ಕೇಂದ್ರದ ಮಳೆ ಮುನ್ಸೂಚನೆ ವರದಿ ಪ್ರಕಾರ ಆಗಸ್ಟ್ 16ರ ಬೆಳಗ್ಗೆ 8.30ರ ತನಕದ ಅವಧಿಯಲ್ಲಿ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಈ ಜಿಲ್ಲೆಗಳ ಪೈಕಿ ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಬಹುದು. ಹೀಗಾಗಿ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌ ಅನ್ನು ಹವಾಮಾನ ಇಲಾಖೆ ಘೋಷಿಸಿದೆ. ಇನ್ನುಳಿದಂತೆ, ಮಂಡ್ಯ, ಮೈಸೂರುಗಳಲ್ಲೂ ಭಾರಿ ಮಳೆಯಾಗಲಿದ್ದು ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಮಿಕ್ಕ ಜಿಲ್ಲೆಗಳಲ್ಲಿ ಅಂದರೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ವಿಜಯನಗರ, ತುಮಕೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ವರದಿ ಹೇಳಿದೆ.

ಅದೇ ರೀತಿ, ಕರ್ನಾಟಕದ ಉತ್ತರ ಒಳನಾಡಿನಲ್ಲಿ ಎಲ್ಲ ಜಿಲ್ಲೆಗಳಲ್ಲೂ ಇಂದು ಮಳೆ ಸುರಿಯಲಿದೆ. ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಬೀದರ್, ಬೆಳಗಾವಿ, ಧಾರವಾಡ, ಕಲಬುರಗಿ, ವಿಜಯಪುರ,ಯಾದಗಿರಿ ಜಿಲ್ಲೆಗಳ ಹಲವೆಡೆ ಮಳೆಯಾಗಲಿದೆ.

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ ಎಂದು ಹವಾಮಾನ ಮುನ್ಸೂಚನೆ ವರದಿ ಹೇಳಿದೆ.

ಆರೆಂಜ್ ಅಲರ್ಟ್‌ ಇರುವ ಜಿಲ್ಲೆ: ಹಾಸನ, ಕೊಡಗು, ಚಿಕ್ಕಮಗಳೂರು

ಯೆಲ್ಲೋ ಅಲರ್ಟ್‌ ಇರುವ ಜಿಲ್ಲೆ: ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಹಾವೇರಿ, ಮಂಡ್ಯ, ಮೈಸೂರು,

ಬೆಂಗಳೂರು ಹವಾಮಾನ ಇಂದು (ಆಗಸ್ಟ್ 15); ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ವ್ಯಾಪಕ ಮಳೆ

ಬೆಂಗಳೂರು ನಗರದಲ್ಲಿ ಇಂದು (ಆಗಸ್ಟ್ 15) ಹಲವೆಡೆ ಮಳೆಯಾಗಬಹುದು. ಬಹುತೇಕ ಮೋಡ ಕವಿದ ವಾತಾವರಣ ಇರುತ್ತದೆ. ಗರಿಷ್ಠ ತಾಪಮಾನವು 31 ಡಿಗ್ರಿ ಸೆಲ್ಶಿಯಸ್ ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ಇರಬಹುದು ಎಂದು ಹವಾಮಾನ ಮುನ್ಸೂಚನಾ ವರದಿ ತಿಳಿಸಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 31 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ಇಂದು ವ್ಯಾಪಕ ಮಳೆಯಾಗಲಿದೆ. ನಿನ್ನೆ (ಆಗಸ್ಟ್ 14) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು.

ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 30 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಬೀಳುವ ಸಾಧ್ಯತೆ ಇದೆ. ನಿನ್ನೆ (ಆಗಸ್ಟ್‌ 14) ಗರಿಷ್ಠ ತಾಪಮಾನ 32.1 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 22.8 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. 9.8 ಮಿಮೀ ಮಳೆಯಾಗಿತ್ತು.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಆಗಸ್ಟ್ 15 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 23.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 90)

ಮಂಗಳೂರು – 25 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 100)

ಚಿತ್ರದುರ್ಗ – 23 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 88)

ಗದಗ – 22.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 93)

ಹೊನ್ನಾವರ – 26.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 89)

ಕಲಬುರಗಿ – 27 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 89)

ಬೆಳಗಾವಿ – 26 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 89)

ಕಾರವಾರ – 30.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 78 )

----------------------

(This copy first appeared in Hindustan Times Kannada website. To read more like this please logon to kannada.hindustantimes.com)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ