ಶಿವಮೊಗ್ಗ ದಾವಣಗೆರೆ ಬಳ್ಳಾರಿ ಸೇರಿ 9 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ, ಬೆಂಗಳೂರು, ಉಳಿದಡೆ ಸಾಧಾರಣ ಮಳೆ - ಹವಾಮಾನ ಮುನ್ಸೂಚನೆ
Aug 17, 2024 06:02 AM IST
ಕರ್ನಾಟಕದ ಹವಾಮಾನ ಮುನ್ಸೂಚನೆ (ಸಾಂಕೇತಿಕ ಚಿತ್ರ)
Karnataka Weather August 17 2024; ಕರ್ನಾಟಕದ ಉದ್ದಗಲಕ್ಕೂ ಇಂದು ಮಳೆಯಾಗಲಿದ್ದು, ಶಿವಮೊಗ್ಗ ದಾವಣಗೆರೆ ಬಳ್ಳಾರಿ ಸೇರಿ 9 ಜಿಲ್ಲೆಗಳಲ್ಲ ಭಾರಿ ಮಳೆ ಮುನ್ನೆಚ್ಚರಿಕೆ ನೀಡಿರುವ ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಮತ್ತು ಉಳಿದ ಹಲವೆಡೆ ವ್ಯಾಪಕ ಮಳೆಯಾಗಬಹುದು ಎಂದು ಹೇಳಿದೆ.
ಬೆಂಗಳೂರು: ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲೂ ಇಂದು (ಆಗಸ್ಟ್ 17) ಮಳೆ ಸುರಿಯಬಹುದು ಎಂದು ಭಾರತೀಯ ಹವಾಮಾನ ಇಲಾಖೆ ತನ್ನ ಹವಾಮಾನ ಮುನ್ಸೂಚನೆ ವರದಿಯಲ್ಲಿ ತಿಳಿಸಿದೆ. ಇದರಂತೆ, ಶಿವಮೊಗ್ಗ ದಾವಣಗೆರೆ ಬಳ್ಳಾರಿ ಸೇರಿ 9 ಜಿಲ್ಲೆಗಳಲ್ಲ ಭಾರಿ ಮಳೆ ಮುನ್ನೆಚ್ಚರಿಕೆ ನೀಡಿರುವ ಹವಮಾನ ಇಲಾಖೆ, ಬೆಂಗಳೂರು ಮತ್ತು ಉಳಿದ ಜಿಲ್ಲೆಗಳಲ್ಲಿ ಹಲವೆಡೆ ವ್ಯಾಪಕ ಮಳೆಯಾಗಬಹುದು ಎಂದು ಹೇಳಿದೆ.
ಬೆಂಗಳೂರು ಹವಾಮಾನ ಕೇಂದ್ರದ ಮಳೆ ಮುನ್ಸೂಚನೆ ವರದಿ ಪ್ರಕಾರ ಆಗಸ್ಟ್ 18ರ ಬೆಳಗ್ಗೆ 8.30ರ ತನಕದ ಅವಧಿಯಲ್ಲಿ ಎಲ್ಲ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ (ಶೇಕಡ 50 ರಿಂದ 75 ಪ್ರದೇಶ) ವ್ಯಾಪಕ ಮಳೆಯಾಗಬಹುದು. ಈ ಪೈಕಿ ಕರ್ನಾಟಕದ ಉತ್ತರ ಒಳನಾಡಿನ 6 ಜಿಲ್ಲೆಗಳಲ್ಲಿ ಅಂದರೆ ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ತುಸು ಹೆಚ್ಚು ಮಳೆ ಸುರಿಯಬಹುದು. ಹೀಗಾಗಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಬಹುದು.
ಇದೇ ರೀತಿ, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳ ಹೆಚ್ಚಿನ ಪ್ರದೇಶಗಳಲ್ಲಿ (ಶೇಕಡ 50 ರಿಂದ ಶೇಕಡ 75 ಪ್ರದೇಶ) ವ್ಯಾಪಕ ಮಳೆಯಾಗಲಿದೆ. ಈ ಜಿಲ್ಲೆಗಳ ಪೈಕಿ ಬಳ್ಳಾರಿ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಸ್ವಲ್ಪ ಹೆಚ್ಚು ಮಳೆಯಾಗಬಹುದು. ಈ ಜಿಲ್ಲೆಗಳಿಗೆ ಅನ್ವಯವಾಗುವಂತೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನುಳಿದಂತೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಚಿತ್ರದುರ್ಗ, ವಿಜಯನಗರ, ಮೈಸೂರು, ಮಂಡ್ಯ, ತುಮಕೂರು ಜಿಲ್ಲೆಗಳ ಹೆಚ್ಚಿನ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ವರದಿ ಹೇಳಿದೆ.
ಇನ್ನೊಂದೆಡೆ, ಕರಾವಳಿಯ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಬಹುದು ಎಂದು ಹವಾಮಾನ ಮುನ್ಸೂಚನೆ ವರದಿ ಹೇಳಿದೆ.
ಯೆಲ್ಲೋ ಅಲರ್ಟ್ ಇರುವ ಜಿಲ್ಲೆ; ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ
ಬೆಂಗಳೂರು ಹವಾಮಾನ ಇಂದು (ಆಗಸ್ಟ್ 17); ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಭಾಗಶಃ ಮೋಡ, ಮಳೆ
ಬೆಂಗಳೂರು ನಗರದಲ್ಲಿ ಇಂದು (ಆಗಸ್ಟ್ 17) ಭಾಗಶಃ ಮೋಡ ಮತ್ತು ಹಲವೆಡೆ ಸಾಧಾರಣ ಮಳೆಯಾಗಬಹುದು. ಗರಿಷ್ಠ ತಾಪಮಾನವು 31 ಡಿಗ್ರಿ ಸೆಲ್ಶಿಯಸ್ ಕನಿಷ್ಠ 23 ಡಿಗ್ರಿ ಸೆಲ್ಶಿಯಸ್ ಇರಬಹುದು ಎಂದು ಹವಾಮಾನ ಮುನ್ಸೂಚನಾ ವರದಿ ತಿಳಿಸಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 31 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 23 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ಇಂದು ಬಹುತೇಕ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಭಾಗಶಃ ಮೋಡ ಕವಿದ ವಾತಾವರಣ ಇರಬಹುದು. ನಿನ್ನೆ (ಆಗಸ್ಟ್ 16) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 29.6 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 23.6 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು.
ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 31 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 23 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ನಿನ್ನೆ (ಆಗಸ್ಟ್ 16) ಗರಿಷ್ಠ ತಾಪಮಾನ 31.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. 3 ಮಿಮೀ ಮಳೆಯಾಗಿತ್ತು.
ಪ್ರಮುಖ ನಗರಗಳ ತಾಪಮಾನ
ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಆಗಸ್ಟ್ 17 ) ಬೆಳಗ್ಗೆ 5.30ಕ್ಕೆ ದಾಖಲಾಗಿರುವ ತಾಪಮಾನಗಳ ವಿವರ.
ಬೆಂಗಳೂರು – 23.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 91)
ಮಂಗಳೂರು – 26 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 94)
ಚಿತ್ರದುರ್ಗ – 23.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 90)
ಗದಗ – 24.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 90)
ಹೊನ್ನಾವರ – 26 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 98)
ಕಲಬುರಗಿ – 25.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 92)
ಬೆಳಗಾವಿ – 24 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 100)
ಕಾರವಾರ – 29.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 85 )
----------------------