ಕರ್ನಾಟಕ ಹವಾಮಾನ ಫೆ 14; ಬೆಂಗಳೂರು, ಗ್ರಾಮಾಂತರಗಳಲ್ಲಿ ಮುಂಜಾನೆ ಮಂಜು, ಹಗಲು ಒಣಹವೆ; ಉಷ್ಣಾಂಶ ಗರಿಷ್ಠ 32, ಕನಿಷ್ಠ 17 ಡಿಗ್ರಿ ಸೆಲ್ಶಿಯಸ್
Feb 14, 2024 06:08 AM IST
ಕರ್ನಾಟಕ ಹವಾಮಾನ ಫೆ 14; ಬೆಂಗಳೂರು, ಗ್ರಾಮಾಂತರಗಳಲ್ಲಿ ಮುಂಜಾನೆ ಮಂಜು, ಹಗಲು ಒಣಹವೆ; ಉಷ್ಣಾಂಶ ಗರಿಷ್ಠ 32, ಕನಿಷ್ಠ 17 ಡಿಗ್ರಿ ಸೆಲ್ಶಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ. (ಸಾಂಕೇತಿಕ ಚಿತ್ರ)
ಕರ್ನಾಟಕ ಹವಾಮಾನ ಫೆ 14: ಬೆಂಗಳೂರು ನಗರ ಮತ್ತು ಗ್ರಾಮಾಂತರಗಳಲ್ಲಿ ಸಹಜವಾದ ಮುಂಜಾನೆ ಮಂಜು ಮುಸುಕಿದ ವಾತಾವರಣ ಇರಲಿದೆ. ಹಗಲು ಉಷ್ಣಾಂಶ ಹೆಚ್ಚಳದ ಕಾರಣ ಬಿಸಿಲಿನ ಬೇಗೆಯೂ ಕಾಡಲಿದೆ. ತಾಪಮಾನ ಬೆಂಗಳೂರು ನಗರ ಮತ್ತು ಗ್ರಾಮಾಂತರಗಳಲ್ಲಿ ಗರಿಷ್ಠ 32 ಮತ್ತು ಕನಿಷ್ಠ 17 ಡಿಗ್ರಿ ಸೆಲ್ಶಿಯಸ್ ಇರಲಿದೆ.
ಬೆಂಗಳೂರು: ವಾಡಿಕೆ ಲೆಕ್ಕಾಚಾರ ಪ್ರಕಾರ ನೋಡಿದರೆ ಶಿವರಾತ್ರಿ ತನಕವೂ ಚಳಿ ಮುಂದುವರಿಯುತ್ತದೆ. ಇದು ಮಾಘ ಮಾಸ ಬೇರೆ. ಚಳಿಗಾಲದ ಅವಧಿ. ಹಗಲು ಒಣಹವೆ ಇದ್ದರೆ, ರಾತ್ರಿ ಚಳಿ ಅನುಭವ ಸರ್ವೇ ಸಾಮಾನ್ಯ. ಬೆಂಗಳೂರು ನಗರ ಮತ್ತು ಗ್ರಾಮಾಂತರಗಳಲ್ಲಿ ಮುಂಜಾನೆ ಮಂಜು, ಚಳಿ ಅನುಭವ ಒಂದೆಡೆ, ಹಗಲು ಒಣಹವೆ ಇಂದು (ಫೆ.14) ಕೂಡ ಮುಂದುವರಿಯಲಿದೆ ಎಂದು ಹವಮಾನ ಮುನ್ಸೂಚನಾ ವರದಿ ಹೇಳಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ ಮತ್ತು ರಾಜ್ಯದ ಪ್ರಮುಖ ನಗರಗಳಲ್ಲಿ ಗರಿಷ್ಠ ತಾಪಮಾನ 32-35 ಡಿಗ್ರಿ ಆಸುಪಾಸಿನಲ್ಲಿರಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಗಳೂರು, ಚಿತ್ರದುರ್ಗ, ಕಲಬುರಗಿ, ಬೆಳಗಾವಿಯ ಕೆಲವೆಡೆ ಮೋಡ ಕವಿದ ವಾತಾವರಣ ಕೆಲ ಹೊತ್ತು ಇರಲಿದೆ. ಒಳನಾಡು ಪ್ರದೇಶಗಳಲ್ಲಿ ವಿಶೇಷವಾಗಿ ಮುಂಜಾನೆ ಮಂಜು ಮುಸುಕಿದ ವಾತಾವರಣ ಇರುವಲ್ಲಿ ತೀವ್ರ ಚಳಿ ಕಾಡಬಹುದು.
ಕರ್ನಾಟಕದ ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡುಗಳಲ್ಲಿ ಹಗಲು ತಾಪಮಾನ ಹೆಚ್ಚಳವನ್ನು ನಿರೀಕ್ಷಿಸಬಹುದು. ಗ್ರಾಮೀಣ ಭಾಗದಲ್ಲಿ ರಾತ್ರಿ ಮತ್ತು ಮುಂಜಾನೆ ಚಳಿ ಸಾಮಾನ್ಯ. ಹಗಲು ಒಣ ಹವೆ ಮುಂದುವರಿಯಲಿದೆ. ತಾಪಮಾನ ಸ್ವಲ್ಪ ಹೆಚ್ಚಳ ಅಂದರೆ 2 ರಿಂದ 3 ಡಿಗ್ರಿ ಸೆಲ್ಶಿಯಸ್ ತನಕ ಹೆಚ್ಚಾಗಬಹುದು ಎಂದು ಹವಾಮಾನ ಮುನ್ಸೂಚನಾ ವರದಿ ಹೇಳಿದೆ.
ಬೆಂಗಳೂರು ಹವಾಮಾನ ಇಂದು
ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಸುತ್ತಮುತ್ತ ಜಿಲ್ಲೆಗಳಲ್ಲಿ ಬುಧವಾರ (ಫೆ14.) ಕೆಲವೆಡೆ ಮುಂಜಾನೆ ಮಂಜು ಮುಸುಕಿದ ವಾತಾವರಣ ಇರಲಿದೆ. ಚಳಿ ಕೂಡ ಸಾಮಾನ್ಯ. ಬಹುತೇಕ ಕಡೆಗಳಲ್ಲಿ ಹಗಲು ನಿರ್ಮಲ ಆಕಾಶ ಕಾಣಬಹುದು. ಕೆಲವು ಕಡೆ ಸಂಜೆ ವೇಳೆ ಚಳಿ ಕಾಡಲಿದ್ದು, ಹಗಲಲ್ಲಿ ಒಣಹವೆ ಇರಲಿದೆ ಎಂದು ವರದಿ ಹೇಳಿದೆ.
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಇಂದು (ಫೆ.14) ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಶಿಯಸ್ ಅನುಭವಕ್ಕೆ ಬರಲಿದೆ. ನಿನ್ನೆ (ಫೆ.13) 32 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 17.2 ಡಿಗ್ರಿ ಸೆಲ್ಶಿಯಸ್ ಇತ್ತು. ಅದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಶಿಯಸ್ ಇರಲಿದೆ. ನಿನ್ನೆ (ಫೆ.12) ತಾಪಮಾನ 32 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಶಿಯಸ್ ಇತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪ್ರಮುಖ ನಗರಗಳಲ್ಲಿ ಈಗಿನ (ಫೆ.14 ರ ಬೆಳಗ್ಗೆ 6 ಗಂಟೆಗೆ) ತಾಪಮಾನ
ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಫೆ.14 ರ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.
ಬೆಂಗಳೂರು - 21.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 83)
ಮಂಗಳೂರು - 26.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 74)
ಚಿತ್ರದುರ್ಗ - 22.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 44)
ಗದಗ - 23.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 45)
ಹೊನ್ನಾವರ - 30.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 66)
ಕಲಬುರಗಿ - 26.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 48)
ಬೆಳಗಾವಿ - 32.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 18)
ಕಾರವಾರ - 33 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 60)
----------------------
(This copy first appeared in Hindustan Times Kannada website. To read more like this please logon to kannada.hindustantime.com)