logo
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಜುಲೈ 22; ಕರಾವಳಿ ಕರ್ನಾಟಕದಲ್ಲಿ ಮಳೆ ಇಳಿಮುಖ, 3 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌, ರಾಜ್ಯದ ಮಳೆ ಮುನ್ಸೂಚನೆ

ಕರ್ನಾಟಕ ಹವಾಮಾನ ಜುಲೈ 22; ಕರಾವಳಿ ಕರ್ನಾಟಕದಲ್ಲಿ ಮಳೆ ಇಳಿಮುಖ, 3 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌, ರಾಜ್ಯದ ಮಳೆ ಮುನ್ಸೂಚನೆ

Umesh Kumar S HT Kannada

Jul 22, 2024 06:09 AM IST

google News

ಕರ್ನಾಟಕ ಹವಾಮಾನ ಜುಲೈ 22; ಕರಾವಳಿ ಕರ್ನಾಟಕದಲ್ಲಿ ಮಳೆ ಇಳಿಮುಖ, 3 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌, ರಾಜ್ಯದ ಮಳೆ ಮುನ್ಸೂಚನೆ

  • ಕರ್ನಾಟಕ ಹವಾಮಾನ ಜುಲೈ 22; ರಾಜ್ಯದೆಲ್ಲೆಡೆ ಮಳೆಯ ತೀವ್ರತೆ ಕಡಿಮೆಯಾಗಲಿದ್ದು, ವಿಶೇಷವಾಗಿ ಕರಾವಳಿ ಕರ್ನಾಟಕದಲ್ಲಿ ಮಳೆ ಇಳಿಮುಖವಾಗಿದ್ದು, 3 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋ‍ಷಣೆಯಾಗಿದೆ. ಇನ್ನುಳಿದಂತೆ ಎಲ್ಲ ಜಿಲ್ಲೆಗಳಲ್ಲೂ ಮಳೆಯ ಪ್ರಮಾಣ ಇಳಿಕೆಯಾಗಲಿದೆ ಎಂದು ರಾಜ್ಯದ ಮಳೆ ಮುನ್ಸೂಚನೆಯಲ್ಲಿ ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ಹವಾಮಾನ ಜುಲೈ 22; ಕರಾವಳಿ ಕರ್ನಾಟಕದಲ್ಲಿ ಮಳೆ ಇಳಿಮುಖ, 3 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌, ರಾಜ್ಯದ ಮಳೆ ಮುನ್ಸೂಚನೆ
ಕರ್ನಾಟಕ ಹವಾಮಾನ ಜುಲೈ 22; ಕರಾವಳಿ ಕರ್ನಾಟಕದಲ್ಲಿ ಮಳೆ ಇಳಿಮುಖ, 3 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌, ರಾಜ್ಯದ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆಯ ತೀವ್ರತೆ ಕಡಿಮೆಯಾಗಲಿದ್ದು, ಇಂದು (ಜುಲೈ 22) ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಳೆದ ಒಂದು ವಾರದಿಂದ ರೆಡ್ ಅಲರ್ಟ್‌ ಘೋ‍ಷಣೆಯಲ್ಲಿದ್ದ ಈ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ನಿನ್ನೆಯಿಂದ ಕಡಿಮೆಯಾಗಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಗಣನೀಯವಾಗಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಇಂದು ಮಳೆಯ ತೀವ್ರತೆ ಇನ್ನಷ್ಟು ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು ಹವಾಮಾನ ಕೇಂದ್ರದ ಮಳೆ ಮುನ್ಸೂಚನೆ ವರದಿ ಪ್ರಕಾರ ಜುಲೈ 23 ರ ಬೆಳಗ್ಗೆ 8.30ರ ತನಕದ ಅವಧಿಯಲ್ಲಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಕೆಲವು ಕಡೆ ಗುಡುಗು ಮಿಂಚು ಸಹಿತ ಮಳೆಯಾಗಬಹುದು. ಸತತ ಮಳೆಯ ಕಾರಣ ಮುನ್ನೆಚ್ಚರಿಕೆಯ ಕ್ರಮವಾಗಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ. ಇದೇ ವೇಳೆ, ಉತ್ತರ ಒಳನಾಡಿನ ಶಿವಮೊಗ್ಗ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲೂ ಮಳೆಯ ತೀವ್ರತೆ ಗಣನೀಯವಾಗಿ ಇಳಿಮುಖವಾಗಿದೆ. ಇನ್ನು, ಬೀದರ್, ಕಲಬುರಗಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ.

ದಕ್ಷಿಣ ಒಳನಾಡಿನಲ್ಲಿ ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ವಿಜಯನಗರ, ತುಮಕೂರು,ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಮಳೆ ಮುನ್ಸೂಚನೆ ವರದಿ ಹೇಳಿದೆ.

ಯೆಲ್ಲೋ ಅಲರ್ಟ್ ಇರುವ ಜಿಲ್ಲೆ

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ,

ಬೆಂಗಳೂರು ಹವಾಮಾನ ಇಂದು (ಜುಲೈ 22); ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಬೆಂಗಳೂರು ನಗರದಲ್ಲಿ ಇಂದು (ಜುಲೈ 22) ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಬಹುದು. ಗರಿಷ್ಠ ತಾಪಮಾನವು 27 ಡಿಗ್ರಿ ಸೆಲ್ಶಿಯಸ್ ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಇರಬಹುದು ಎಂದು ಮಳೆ ಮುನ್ಸೂಚನಾ ವರದಿ ತಿಳಿಸಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 27 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಜುಲೈ 21) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 26.6 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 20.6 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು.

ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 27 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಬೀಳುವ ಸಾಧ್ಯತೆ ಇದೆ. ನಿನ್ನೆ (ಜುಲೈ 17) ಗರಿಷ್ಠ ತಾಪಮಾನ 27.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 21.5 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಜುಲೈ 22 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 21.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 88)

ಮಂಗಳೂರು – 26 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 100)

ಚಿತ್ರದುರ್ಗ – 22.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 90)

ಗದಗ – 22.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 93)

ಹೊನ್ನಾವರ – 25.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 98)

ಕಲಬುರಗಿ – 23.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 99)

ಬೆಳಗಾವಿ – 23 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 94)

ಕಾರವಾರ – 26.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 98 )

----------------------

(This copy first appeared in Hindustan Times Kannada website. To read more like this please logon to kannada.hindustantimes.com)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ