logo
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಜುಲೈ 25; ಉತ್ತರ ಕನ್ನಡದಲ್ಲಿ ಇಂದು ಆರೆಂಜ್ ಅಲರ್ಟ್‌, 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌, ರಾಜ್ಯದಲ್ಲಿ ವ್ಯಾಪಕ ಮಳೆ

ಕರ್ನಾಟಕ ಹವಾಮಾನ ಜುಲೈ 25; ಉತ್ತರ ಕನ್ನಡದಲ್ಲಿ ಇಂದು ಆರೆಂಜ್ ಅಲರ್ಟ್‌, 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌, ರಾಜ್ಯದಲ್ಲಿ ವ್ಯಾಪಕ ಮಳೆ

Umesh Kumar S HT Kannada

Jul 25, 2024 07:42 PM IST

google News

ಕರ್ನಾಟಕ ಹವಾಮಾನ ಜುಲೈ 25; ಉತ್ತರ ಕನ್ನಡದಲ್ಲಿ ಇಂದು ಆರೆಂಜ್ ಅಲರ್ಟ್‌, 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌, ರಾಜ್ಯದಲ್ಲಿ ವ್ಯಾಪಕ ಮಳೆ ಬೀಳಲಿದೆ ಎಂದು ಹವಾಮಾನ ಮುನ್ಸೂಚನೆ ವರದಿ ತಿಳಿಸಿದೆ. (ಸಾಂಕೇತಿಕ ಚಿತ್ರ)

  • ಕರ್ನಾಟಕ ಹವಾಮಾನ ಜುಲೈ 25; ಕರ್ನಾಟಕದಲ್ಲಿ ಒಟ್ಟಾರೆಯಾಗಿ ಮಳೆಯ ತೀವ್ರತೆ ಕಡಿಮೆಯಾಗಿದ್ದರೂ, ಉತ್ತರ ಕನ್ನಡದಲ್ಲಿ ಇಂದು ಆರೆಂಜ್ ಅಲರ್ಟ್‌ ಘೋಷಣೆಯಾಗಿದೆ. ಅಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದೆ. ಅದೇ ರೀತಿ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಒಟ್ಟು 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ.

ಕರ್ನಾಟಕ ಹವಾಮಾನ ಜುಲೈ 25; ಉತ್ತರ ಕನ್ನಡದಲ್ಲಿ ಇಂದು ಆರೆಂಜ್ ಅಲರ್ಟ್‌, 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌, ರಾಜ್ಯದಲ್ಲಿ ವ್ಯಾಪಕ ಮಳೆ ಬೀಳಲಿದೆ ಎಂದು ಹವಾಮಾನ ಮುನ್ಸೂಚನೆ ವರದಿ ತಿಳಿಸಿದೆ. (ಸಾಂಕೇತಿಕ ಚಿತ್ರ)
ಕರ್ನಾಟಕ ಹವಾಮಾನ ಜುಲೈ 25; ಉತ್ತರ ಕನ್ನಡದಲ್ಲಿ ಇಂದು ಆರೆಂಜ್ ಅಲರ್ಟ್‌, 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌, ರಾಜ್ಯದಲ್ಲಿ ವ್ಯಾಪಕ ಮಳೆ ಬೀಳಲಿದೆ ಎಂದು ಹವಾಮಾನ ಮುನ್ಸೂಚನೆ ವರದಿ ತಿಳಿಸಿದೆ. (ಸಾಂಕೇತಿಕ ಚಿತ್ರ)

ಬೆಂಗಳೂರು: ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡುಗಳಲ್ಲಿ ಮಳೆಯ ತೀವ್ರತೆ ಕಡಿಮೆ ಆಗಿದೆ. ಆದಾಗ್ಯೂ, 7 ಜಿಲ್ಲೆಗಳಲ್ಲಿ ಇಂದು (ಜುಲೈ 25) ಮಳೆಯ ತೀವ್ರತೆ ಹೆಚ್ಚಾಗುವ ನಿರೀಕ್ಷೆ ಇದ್ದು ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಇನ್ನೊಂದೆಡೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಮತ್ತೆ ತೀವ್ರಗೊಂಡಿದ್ದು, ಇಂದು ಧಾರಾಕಾರ ಮಳೆಯಾಗುವ ನಿರೀಕ್ಷೆ ಇದೆ. ಹೀಗಾಗಿ ಅಲ್ಲಿ ಆರೆಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು ಹವಾಮಾನ ಕೇಂದ್ರದ ಮಳೆ ಮುನ್ಸೂಚನೆ ವರದಿ ಪ್ರಕಾರ ಜುಲೈ 26 ರ ಬೆಳಗ್ಗೆ 8.30ರ ತನಕದ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಲಿದ್ದು, ಕಳೆದ ಎರಡು ದಿನಗಳಿಂದ ಕಡಿಮೆಯಾಗಿದ್ದ ಮಳೆಯ ತೀವ್ರತೆ ಹೆಚ್ಚಾಗಲಿದೆ. ಹೀಗಾಗಿ ಇಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದೇ ಜಿಲ್ಲೆಯಲ್ಲಿ ಶಿರೂರು ಭೂಕುಸಿತ ಸಂಭವಿಸಿದ್ದು ಪರಿಹಾರ ಕಾರ್ಯಾಚರಣೆಗೆ ಅಡ್ಡಿ ಉಂಟಾಗಿದೆ.

ಇನ್ನೊಂದೆಡೆ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನ ಬೆಳಗಾವಿ, ಕಲುಬರಗಿ, ವಿಜಯಪುರ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಣೆಯಾಗಿದೆ. ಈ ಭಾಗದಲ್ಲಿ ಇಂದಿನಿಂದ 27ರ ತನಕ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಕೆಲವು ಕಡೆ ಗುಡುಗು ಮಿಂಚು ಸಹಿತ ಮಳೆಯಾಗಬಹುದು.

ಇನ್ನುಳಿದಂತೆ, ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಅಂತೆಯೇ, ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ವಿಜಯನಗರ, ತುಮಕೂರು,ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಮಳೆ ಮುನ್ಸೂಚನೆ ವರದಿ ಹೇಳಿದೆ.

ಕುಂದಾಪುರ , ಬೈಂದೂರು, ಹೆಬ್ರಿ ಹಾಗೂ ಕಾರ್ಕಳ ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ಇಂದು ರಜೆ: ಕುಂದಾಪುರ , ಬೈಂದೂರು, ಹೆಬ್ರಿ ಹಾಗೂ ಕಾರ್ಕಳ ತಾಲೂಕುಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಗಾಳಿ ಮಳೆಯಾಗುತ್ತಿರುವ ಹಿನ್ನೆಲೆ ಅಂಗನವಾಡಿ ,ಪ್ರಾಥಮಿಕ ಪಾಠಶಾಲೆ ,ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಜುಲೈ 25) ರಜೆಯನ್ನು ತಾಲ್ಲೂಕಿನ ತಹಸಿಲ್ದಾರ್ ಗಳು ಘೋಷಣೆ ಮಾಡಿದ್ದಾರೆ.

ಆರೆಂಜ್ ಅಲರ್ಟ್ ಇರುವ ಜಿಲ್ಲೆ

ಉತ್ತರ ಕನ್ನಡ,

ಯೆಲ್ಲೋ ಅಲರ್ಟ್ ಇರುವ ಜಿಲ್ಲೆ

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಕಲುಬರಗಿ, ವಿಜಯಪುರ

ಬೆಂಗಳೂರು ಹವಾಮಾನ ಇಂದು (ಜುಲೈ 25); ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಬೆಂಗಳೂರು ನಗರದಲ್ಲಿ ಇಂದು (ಜುಲೈ 25) ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಬಹುದು. ಗರಿಷ್ಠ ತಾಪಮಾನವು 28 ಡಿಗ್ರಿ ಸೆಲ್ಶಿಯಸ್ ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಇರಬಹುದು ಎಂದು ಮಳೆ ಮುನ್ಸೂಚನಾ ವರದಿ ತಿಳಿಸಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 28 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಜುಲೈ 24) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 20.2 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು.

ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 28 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಬೀಳುವ ಸಾಧ್ಯತೆ ಇದೆ. ನಿನ್ನೆ (ಜುಲೈ 24) ಗರಿಷ್ಠ ತಾಪಮಾನ 28.8 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಜುಲೈ 25 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 20.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 96)

ಮಂಗಳೂರು – 25 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 94)

ಚಿತ್ರದುರ್ಗ – 23 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 91)

ಗದಗ – 22.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 93)

ಹೊನ್ನಾವರ – 24.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 96)

ಕಲಬುರಗಿ – 23.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 98)

ಬೆಳಗಾವಿ – 23 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 94)

ಕಾರವಾರ – 30.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 84 )

----------------------

(ಕನ್ನಡದಲ್ಲಿ ಸ್ಪಷ್ಟ ಸುದ್ದಿ, ನಿಖರ ವಿಶ್ಲೇಷಣೆ, ಸಮಗ್ರ ಮಾಹಿತಿಗೆಎಚ್‌ಟಿ ಕನ್ನಡ ಬೆಸ್ಟ್‌.ಕರ್ನಾಟಕದ ತಾಜಾ ವಿದ್ಯಮಾನ, ಅದೇ ರೀತಿರಾಜಕೀಯ ವಿಶ್ಲೇಷಣೆ, ದೇಶ ಮತ್ತು ಜಗತ್ತಿನ ವಿದ್ಯಮಾನಗಳ ವರದಿಗಳನ್ನು ಓದಲುkannada.hindustantimes.com/nation-and-world ಕ್ಕೆ ಭೇಟಿ ನೀಡಿ.)

(This copy first appeared in Hindustan Times Kannada website. To read more like this please logon to kannada.hindustantimes.com)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ