logo
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಮಾರ್ಚ್ 14; ರಾಜ್ಯದ 31 ಹೋಬಳಿಗಳಲ್ಲಿ 40 ಡಿಗ್ರಿ ಸೆಲ್ಶಿಯಸ್‌ಗಿಂತ ಹೆಚ್ಚು ತಾಪಮಾನ

ಕರ್ನಾಟಕ ಹವಾಮಾನ ಮಾರ್ಚ್ 14; ರಾಜ್ಯದ 31 ಹೋಬಳಿಗಳಲ್ಲಿ 40 ಡಿಗ್ರಿ ಸೆಲ್ಶಿಯಸ್‌ಗಿಂತ ಹೆಚ್ಚು ತಾಪಮಾನ

Umesh Kumar S HT Kannada

Mar 14, 2024 06:16 AM IST

ಕರ್ನಾಟಕ ಹವಾಮಾನ ಮಾರ್ಚ್ 14

  • ಕರ್ನಾಟಕ ಹವಾಮಾನ ಮಾರ್ಚ್ 14: ಕರ್ನಾಟಕದಲ್ಲಿ ಒಣಹವೆ ಮುಂದುವರಿಯಲಿದೆ. ರಾಜ್ಯದ 31 ಹೋಬಳಿಗಳಲ್ಲಿ 40 ಡಿಗ್ರಿ ಸೆಲ್ಶಿಯಸ್‌ಗಿಂತ ಹೆಚ್ಚು ತಾಪಮಾನ ಇದ್ದು, ಬೆಂಗಳೂರು ಸೇರಿ ವಿವಿಧೆಡೆ ಬೇಸಿಗೆಯ ವಾತಾವರಣ ಇರಲಿದೆ ಎಂದು ಭಾರತದ ಹವಾಮಾನ ಇಲಾಖೆ ಮುನ್ಸೂಚನಾ ವರದಿ ಹೇಳಿದೆ.

ಕರ್ನಾಟಕ ಹವಾಮಾನ ಮಾರ್ಚ್ 14
ಕರ್ನಾಟಕ ಹವಾಮಾನ ಮಾರ್ಚ್ 14

ಬೆಂಗಳೂರು: ಕರ್ನಾಟಕದ 31 ಹೋಬಳಿಗಳಲ್ಲಿ 40 ಡಿಗ್ರಿ ಸೆಲ್ಶಿಯಸ್‌ಗಿಂತ ಹೆಚ್ಚು ತಾಪಮಾನ ಅನುಭವಕ್ಕೆ ಬಂದಿದೆ. ರಾಜ್ಯದೆಲ್ಲೆಡೆ ಇಂದು (ಮಾರ್ಚ್ 14) ಕೂಡ ಒಣಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಕೆಲವು ಕಡೆ, ಉತ್ತರ ಒಳನಾಡಿನ ಒಂದೆರಡು ಕಡೆ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಶಿಯಸ್‌ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತದ ಹವಾಮಾನ ಇಲಾಖೆಯ ಮುನ್ಸೂಚನಾ ವರದಿ ಹೇಳಿದೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಟ್ರೆಂಡಿಂಗ್​ ಸುದ್ದಿ

ಮಂಗಳೂರು ಖಾಸಗಿ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನ; ಆರೋಪಿ ಬಂಧನ

ಬೆಂಗಳೂರಿನಲ್ಲಿ ಸತತ ಎರಡನೇ ದಿನವೂ ಮಳೆ, ತೊಂದರೆ ಅನುಭವಿಸಿದರೂ ಮಳೆಯಾಗಿದ್ದಕ್ಕೆ ಖುಷಿಪಟ್ಟ ನಾಗರಿಕರು

ಕರ್ನಾಟಕ ಹವಾಮಾನ ಮೇ 10; ಮೈಸೂರು, ಬೆಂಗಳೂರು ಸೇರಿ 25 ಜಿಲ್ಲೆಗಳಲ್ಲಿ ಸಾಧಾರಣ ಮಳೆ, ತುಮಕೂರು ಸೇರಿ 6 ಜಿಲ್ಲೆಗಳಲ್ಲಿ ಒಣಹವೆ

ಬೆಂಗಳೂರು ಗುಡ್‌ಗಿಂಗ್ ಅಂಡ್ ಮಿಂಚಿಂಗ್ ಹೆವಿಲಿ: ಮಳೆ ಕಂಡು ಖುಷಿಯಾದ ನೆಟ್ಟಿಗರು ಹಂಚಿಕೊಂಡ ಖುಷಿ ವಿಡಿಯೊಗಳು ಇಲ್ಲಿವೆ

ರಾಜ್ಯದಲ್ಲಿ ನಿನ್ನೆ (ಮಾರ್ಚ್‌ 13) ಒಣಹವೆ ಇತ್ತು. ಎಲ್ಲೂ ದೊಡ್ಡ ಪ್ರಮಾಣದ ಮಳೆ ಬಿದ್ದಿಲ್ಲ. ಕಳೆದ 24 ಗಂಟೆಗಳ ಅವಧಿಯಲ್ಲಿ ಕರಾವಳಿಯ ಒಳನಾಡಿನ ಬಹುತೇಕ ಕಡೆಗಳ ಗರಿಷ್ಠ ಉಷ್ಣಾಂಶದಲ್ಲಿ ಮತ್ತು ಕನಿಷ್ಠ ಉಷ್ಣಾಂಶದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ಒಳನಾಡಿನ ಒಂದೆರಡು ಕಡೆ ಗರಿಷ್ಠ ತಾಪಮಾನವು 2.1 ಡಿಗ್ರಿ ಸೆಲ್ಶಿಯಸ್‌ನಿಂದ 4 ಡಿಗ್ರಿ ಸೆಲ್ಶಿಯಸ್ ತನಕ ಏರಿಕೆಯಾಗಿದೆ. ಅದೇ ರೀತಿ ಕೆಲವು ಕಡೆಗಳಲ್ಲಿ ಇದೇ ಪ್ರಮಾಣದಲ್ಲಿ ಉಷ್ಣಾಂಶ ಇಳಿಕೆಯೂ ಆಗಿದೆ. ರಾಜ್ಯದ ಸಮತಟ್ಟು ಪ್ರದೇಶಗಳ ಪೈಕಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಶಿಯಸ್ ಬಾಗಲಕೋಟೆಯಲ್ಲಿ ದಾಖಲಾಗಿದೆ. ಕನಿಷ್ಠ ಉಷ್ಣಾಂಶ 18.9 ಡಿಗ್ರಿ ಸೆಲ್ಶಿಯಸ್‌ ಚಾಮರಾಜನಗರದಲ್ಲಿ ದಾಖಲಾಗಿದೆ ಎಂದು ವರದಿ ಹೇಳಿದೆ.

ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 42.2 ಡಿಗ್ರಿ ಸೆಲ್ಶಿಯಸ್

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹಂಚಿಕೊಂಡಿರುವ ಮಾಹಿತಿ ಪ್ರಕಾರ, ಮಾರ್ಚ್ 13ರಂದು ರಾಯಚೂರು ಜಿಲ್ಲೆಯ ಹಡಗನ್‌ಹಾಳ್ ಹೋಬಳಿಯ ವಲಬಳ್ಳಾರಿ ಗ್ರಾಮ ಪಂಚಾಯಿತಿಯಲ್ಲಿ ಅತ್ಯಧಿಕ ಗರಿಷ್ಠ ತಾಪಮಾನ 42.2 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ.

ರಾಜ್ಯದ 31 ಹೋಬಳಿಗಳಲ್ಲಿ 40 ಡಿಗ್ರಿ ಸೆಲ್ಶಿಯಸ್‌ಗಿಂತ ಹೆಚ್ಚು ಉಷ್ಣಾಂಶ ದಾಖಲಾಗಿದೆ. ರಾಯಚೂರು, ಕಲಬುರಗಿ, ಯಾದಗಿರಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಬೀದರ್, ಬಳ್ಳಾರಿಗಳಲ್ಲೇ ಈ ಎಲ್ಲ ಹೋಬಳಿಗಳೂ ಇವೆ.

ಬೆಂಗಳೂರು ಹವಾಮಾನ ಇಂದು (ಮಾ.14) ಗರಿಷ್ಠ 35 ಡಿಗ್ರಿ ಸೆಲ್ಶಿಯಸ್ ಕನಿಷ್ಠ 21 ಡಿಗ್ರಿ ಸೆಲ್ಶಿಯಸ್

ಬೆಂಗಳೂರು ನಗರದಲ್ಲಿ ಆಕಾಶ ನಿರ್ಮಲವಾಗಿರಲಿದೆ. ರಾಜಧಾನಿಯ ಸುತ್ತಮುತ್ತ ಮಳೆಯ ಲಕ್ಷಣಗಳಿಲ್ಲ. ಮಾರ್ಚ್‌ 15ರ ಬೆಳಗ್ಗೆ 8.30ರ ತನಕ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಶಿಯಸ್ ದಾಖಲಾಗುವ ಸಾಧ್ಯತೆ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ತಿಳಿಸಿದೆ.

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಉಷ್ಣಾಂಶವು ಸಾಮಾನ್ಯಕ್ಕಿಂತ 2- 3 ಡಿಗ್ರಿ ಸೆಲ್ಶಿಯಸ್‌ ಹೆಚ್ಚಳವಾಗಲಿದೆ. ವಿಶೇಷವಾಗಿ ಬೆಂಗಳೂರು ನಗರದಲ್ಲಿ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಶಿಯಸ್‌, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಶಿಯಸ್ ಇರಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರದ ವಿಜ್ಞಾನಿ ಸುಂದರ್ ಎಂ ಮೇತ್ರಿ ಹೇಳಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಉಷ್ಣಾಂಶ ಗರಿಷ್ಠ 35 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಇರಬಹುದು. ನಿನ್ನೆ (ಮಾ.13)ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 34.6 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 35 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ನಿನ್ನೆ (ಮಾರ್ಚ್ 13) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಮಾರ್ಚ್‌ 15 ರ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 26.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 50)

ಮಂಗಳೂರು – 27 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 84)

ಚಿತ್ರದುರ್ಗ – 26.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 89)

ಗದಗ – 26 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 75)

ಹೊನ್ನಾವರ – 30.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 65)

ಕಲಬುರಗಿ – 26.5 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 20)

ಬೆಳಗಾವಿ – 25 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 74)

ಕಾರವಾರ – 32.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 63 )

----------------------

(This copy first appeared in Hindustan Times Kannada website. To read more like this please logon to kannada.hindustantimes.com)

    ಹಂಚಿಕೊಳ್ಳಲು ಲೇಖನಗಳು