logo
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಮಾರ್ಚ್ 17; ಬೆಂಗಳೂರಲ್ಲಿ ಭಾಗಶಃ ಮೋಡ, ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಶಿಯಸ್, ಉಳಿದೆಡೆ ಉಷ್ಣಾಂಶ ಹೆಚ್ಚಳ

ಕರ್ನಾಟಕ ಹವಾಮಾನ ಮಾರ್ಚ್ 17; ಬೆಂಗಳೂರಲ್ಲಿ ಭಾಗಶಃ ಮೋಡ, ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಶಿಯಸ್, ಉಳಿದೆಡೆ ಉಷ್ಣಾಂಶ ಹೆಚ್ಚಳ

Umesh Kumar S HT Kannada

Mar 17, 2024 06:06 AM IST

google News

ಕರ್ನಾಟಕ ಹವಾಮಾನ ಮಾರ್ಚ್ 17

  • ಕರ್ನಾಟಕ ಹವಾಮಾನ ಮಾರ್ಚ್ 17: ಕರ್ನಾಟಕದಲ್ಲಿ ಮುಂದಿನ 24 ಗಂಟೆ ಒಣಹವೆ ಮುಂದುವರಿಯಲಿದೆ. ಇಂದು ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ಆಕಾಶ ಇದ್ದರೂ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಶಿಯಸ್ ಇರಲಿದೆ. ಕರ್ನಾಟಕದ ಒಳನಾಡಿನ ಹಲವೆಡೆ ತಾಪಮಾನ ಹೆಚ್ಚಳವಾಗಲಿದ್ದು, 40 ಡಿಗ್ರಿ ಸೆಲ್ಶಿಯಸ್ ದಾಟಲಿದೆ ಎಂದು ಭಾರತದ ಹವಾಮಾನ ಇಲಾಖೆ ಮುನ್ಸೂಚನಾ ವರದಿ ಹೇಳಿದೆ.

ಕರ್ನಾಟಕ ಹವಾಮಾನ ಮಾರ್ಚ್ 17
ಕರ್ನಾಟಕ ಹವಾಮಾನ ಮಾರ್ಚ್ 17

ಬೆಂಗಳೂರು: ಕರ್ನಾಟಕದಲ್ಲಿ ಕಡುಬೇಸಗೆಯ ಅನುಭವ ಇದ್ದು, ಮುಂದಿನ 24 ಗಂಟೆ ಅವಧಿಗೆ ಒಣಹವೆಯೇ ಇರಲಿದೆ. ಬೆಂಗಳೂರಲ್ಲಿ ಇಂದು ಭಾಗಶಃ ಮೋಡ ಕವಿದ ವಾತಾವರಣ ಇದ್ದರೂ ಗರಿಷ್ಠ ತಾಪಮಾನ 35 ಡಿಗ್ರಿ ಆಸುಪಾಸಿನಲ್ಲೇ ಇರಲಿದೆ. ಇನ್ನು ಉಳಿದಂತೆ ಕರ್ನಾಟಕದ ಒಳನಾಡುಗಳಲ್ಲಿ ಹಲವೆಡೆ ತಾಪಮಾನ ಹೆಚ್ಚಳವಾಗಲಿದ್ದು 40 ಡಿಗ್ರಿ ಸೆಲ್ಶಿಯಸ್ ದಾಟಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಇದರಂತೆ, ಕರ್ನಾಟಕದ ಒಳನಾಡಿನ ಕೆಲವು ಕಡೆಗಳಲ್ಲಿ ವಿಶೇಷವಾಗಿ ಬಾಗಲಕೋಟೆ, ಧಾರವಾಡ, ಕಲಬುರಗಿ, ಕೊಪ್ಪಳ, ಬೆಂಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಶಿಯಸ್ ಹೆಚ್ಚಾಗಲಿದೆ. ಮೀನುಗಾರರಿಗೆ ಪ್ರತ್ಯೇಕ ಎಚ್ಚರಿಕೆ ಏನೂ ಇಲ್ಲ.

ಇನ್ನು, ಕರ್ನಾಟಕದಲ್ಲಿ ಅತಿ ಹೆಚ್ಚಿನ ತಾಪಮಾನ ಅಂದರೆ 42.4 ಡಿಗ್ರಿ ಸೆಲ್ಶಿಯಸ್‌ ರಾಯಚೂರು ಜಿಲ್ಲೆಯ ಹಡಗನ್‌ಹಾಳ್ ಹೋಬಳಿಯಲ್ಲಿ ನಿನ್ನೆ (ಮಾರ್ಚ್ 16) ದಾಖಲಾಗಿದೆ. ಹಡಗನ್‌ಹಾಳ್‌, ಹಾಲಾಪುರ, ಕುರ್ಡಿ, ಸಿಂಧನೂರು, ಜಾಲಿಹಳ್ಳಿ, ಕೋಹಿನೂರ್‌, ಶಾಹಬಾದ್‌ ಸೇರಿ ಏಳು ಹೋಬಳಿಗಳಲ್ಲಿ ನಿನ್ನೆ 40 ಡಿಗ್ರಿ ಸೆಲ್ಶಿಯಸ್‌ಗಿಂತ ಹೆಚ್ಚು ಉ‍ಷ್ಣಾಂಶ ಕಂಡುಬಂದಿತ್ತು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.

ಬೆಂಗಳೂರು ಹವಾಮಾನ ಇಂದು (ಮಾ.17) ಗರಿಷ್ಠ 35 ಡಿಗ್ರಿ ಸೆಲ್ಶಿಯಸ್ ಕನಿಷ್ಠ 23 ಡಿಗ್ರಿ ಸೆಲ್ಶಿಯಸ್

ಬೆಂಗಳೂರು ನಗರದಲ್ಲಿ ಭಾಗಶಃ ಮೋಡಕವಿದ ಆಕಾಶ ಇದ್ದರೂ, ರಾಜಧಾನಿಯ ಸುತ್ತಮುತ್ತ ಮಳೆಯ ಲಕ್ಷಣಗಳಿಲ್ಲ. ಮಾರ್ಚ್‌ 18ರ ಬೆಳಗ್ಗೆ 8.30ರ ತನಕ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಶಿಯಸ್ ದಾಖಲಾಗುವ ಸಾಧ್ಯತೆ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ತಿಳಿಸಿದೆ.

ಇದೇ ರೀತಿ, ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದು (ಮಾರ್ಚ್‌ 17) ಗರಿಷ್ಠ 35 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 23 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಮಾ.16)ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 35.1 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 35 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 23 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ನಿನ್ನೆ (ಮಾರ್ಚ್ 16) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 35.3 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಮಾರ್ಚ್‌ 17 ರ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 26.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 51)

ಮಂಗಳೂರು – 27 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 70)

ಚಿತ್ರದುರ್ಗ – 27.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 68)

ಗದಗ – 27.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 52)

ಹೊನ್ನಾವರ – 31.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 50)

ಕಲಬುರಗಿ – 29.1 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 50)

ಬೆಳಗಾವಿ – 28 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 62)

ಕಾರವಾರ – 31.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 65 )

----------------------

(This copy first appeared in Hindustan Times Kannada website. To read more like this please logon to kannada.hindustantimes.com)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ