logo
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಮಾರ್ಚ್ 21; ಕೊಡಗು, ಮಂಡ್ಯ ಸೇರಿ 23 ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ, ಬೆಂಗಳೂರಲ್ಲಿ ಭಾಗಶಃ ಮೋಡ

ಕರ್ನಾಟಕ ಹವಾಮಾನ ಮಾರ್ಚ್ 21; ಕೊಡಗು, ಮಂಡ್ಯ ಸೇರಿ 23 ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ, ಬೆಂಗಳೂರಲ್ಲಿ ಭಾಗಶಃ ಮೋಡ

Umesh Kumar S HT Kannada

Mar 21, 2024 06:17 AM IST

ಕರ್ನಾಟಕ ಹವಾಮಾನ ಮಾರ್ಚ್ 21; ಕೊಡಗು, ಮಂಡ್ಯ ಸೇರಿ 23 ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

  • ಕರ್ನಾಟಕ ಹವಾಮಾನ ಮಾರ್ಚ್ 21: ಕೊಡಗು, ಮಂಡ್ಯ ಸೇರಿ 23 ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆ ಇಂದು (ಮಾರ್ಚ್ 21) ನಿರೀಕ್ಷಿಸಬಹುದು. ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಇರಲಿದ್ದು, ಉಷ್ಣಾಂಶದಲ್ಲಿ ಏರಿಕೆ ಕೂಡ ಇರಬಹುದು. ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆ ತಂಪೆರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಮುನ್ಸೂಚನೆ ವರದಿ ಹೇಳಿದೆ.

ಕರ್ನಾಟಕ ಹವಾಮಾನ ಮಾರ್ಚ್ 21; ಕೊಡಗು, ಮಂಡ್ಯ ಸೇರಿ 23 ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕ ಹವಾಮಾನ ಮಾರ್ಚ್ 21; ಕೊಡಗು, ಮಂಡ್ಯ ಸೇರಿ 23 ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (IMD)

ಬೆಂಗಳೂರು: ಕರ್ನಾಟಕದ ಕರಾವಳಿಯ ಎರಡು ಜಿಲ್ಲೆ, ಉತ್ತರ ಒಳನಾಡಿನ ಆರು ಜಿಲ್ಲೆ, ದಕ್ಷಿಣ ಒಳನಾಡಿನ 15 ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಧಾರಣ ಮಳೆಯಾಗಬಹುದು. ಬೆಂಗಳೂರು ಸುತ್ತಮುತ್ತ ಒಂದೆರಡು ಕಡೆಗಳಲ್ಲಿ ಮಳೆ ಬೀಳಬಹುದಾದರೂ, ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಉಷ್ಣಾಂಶದಲ್ಲಿ 2 ಡಿಗ್ರಿ ಸೆಲ್ಶಿಯಸ್‌ನಷ್ಟು ಏರಿಕೆ, ಇಳಿಕೆ ಕಂಡುಬರಬಹುದು ಎಂದು ಹವಾಮಾನ ಮುನ್ಸೂಚನೆ ವರದಿ ಹೇಳಿದೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಟ್ರೆಂಡಿಂಗ್​ ಸುದ್ದಿ

Indian Railways: ಬೆಂಗಳೂರು-ಧರ್ಮಪುರಿ, ಹರಿಪ್ರಿಯಾ, ಮೈಸೂರು-ಕಾಚೀಗುಡ, ವಾಸ್ಕೋ ಸಹಿತ 7 ರೈಲುಗಳ ಸಂಚಾರ ಸಮಯ ಬದಲು

ಪ್ರಜ್ವಲ್ ರೇವಣ್ಣ ಕೇಸ್‌; ಜರ್ಮನಿಯಿಂದ ಲಂಡನ್‌ಗೆ ಹೊರಟ್ರಾ ಹಾಸನ ಸಂಸದ, 2 ದಿನಗಳ 10 ವಿದ್ಯಮಾನಗಳು

Raghunandan S Kamath Death: ಐಸ್ ಕ್ರೀಮ್ ಮ್ಯಾನ್ ಆಫ್ ಇಂಡಿಯಾ ಖ್ಯಾತಿಯ ನ್ಯಾಚುರಲ್ ಐಸ್ ಕ್ರೀಂನ ರಘುನಂದನ್ ಕಾಮತ್ ಇನ್ನಿಲ್ಲ

ಪ್ರಜ್ವಲ್‌ ರೇವಣ್ಣ ಕೇಸ್‌; ಮೊದಲ ಬಾರಿ ಪ್ರತಿಕ್ರಿಯೆ ನೀಡಿದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ; ಕಾನೂನು ಕ್ರಮಕ್ಕೆ ತಕರಾರು ಇಲ್ಲ

ಬೆಂಗಳೂರು ಹವಾಮಾನ ಕೇಂದ್ರ ಮಾರ್ಚ್ 22ರ ಬೆಳಗ್ಗೆ ತನಕದ ರಾಜ್ಯದ ಮಳೆ ಮುನ್ಸೂಚನೆ ನೀಡಿದ್ದು, ಅದರಂತೆ, ಮುಂದಿನ 24 ಗಂಟೆ ಅವಧಿಯಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಧಾರಣ ಮೆಳಯಾಗುವ ಬಹಳಷ್ಟು ಸಾಧ್ಯತೆ ಇದೆ. ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ. ಇನ್ನು ತಾಪಮಾನ ಮುನ್ಸೂಚನೆ ಪ್ರಕಾರ, ಒಳನಾಡಿನ ಒಂದೆರಡು ಕಡೆಗಳಲ್ಲಿ ಅಂದರೆ ಬಾಗಲಕೋಟೆ, ಮೈಸೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಶಿಯಸ್‌ ಹೆಚ್ಚಾಗುವ ಸಾಧ್ಯತೆ ಇದೆ.

ಇನ್ನು, ಗರಿಷ್ಠ ಉಷ್ಣಾಂಶ ಹೇಳುವುದಾದರೆ ನಿನ್ನೆ (ಮಾರ್ಚ್‌ 20) ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮರಿಯಮ್ಮನ ಹೋಬಳಿಯಲ್ಲಿ ರಾಜ್ಯದ ಗರಿಷ್ಠ ತಾಪಮಾನ 41.5 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ. ಕಲಬುರಗಿಯ ಇಜೇರಿ, ಕಳಗಿ,ನಿಂಬರ್ಗ ತಾಂಡಾ, ಶಹಾಬಾದ್‌,ಕೂಡ್ಲಿ, ರಾಯಚೂರಿನ ಹಾಲಾಪುರ, ಹಡಗನಹಾಳ್‌,ವಲ್ಕಂದಿನ್ನಿ,ಬಳ್ಳಾರಿಯ ಕೊಲೂರುಗಳಲ್ಲಿ 40 ಡಿಗ್ರಿ ಸೆಲ್ಶಿಯಸ್‌ಗಿಂತ ಹೆಚ್ಚು ಉಷ್ಣಾಂಶ ದಾಖಲಾಯಿತು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.

ಎಲ್ಲೆಲ್ಲಿ ಮಳೆ ಬೀಳಲಿದೆ..

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಇಂದು ಮಳೆ ಬೀಳಬಹುದು. ಇದೇ ರೀತಿ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್,ಧಾರವಾಡ, ಗದಗ, ವಿಜಯಪುರ ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರುಗಳಲ್ಲಿ ಒಂದೆರಡು ಕಡೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಗಳಿವೆ ಎಂದು ಮಳೆ ಮುನ್ಸೂಚನೆ ವರದಿ ಹೇಳಿದೆ.

ಬೆಂಗಳೂರು ಹವಾಮಾನ ಇಂದು (ಮಾ.21) ಗರಿಷ್ಠ 34 ಡಿಗ್ರಿ ಸೆಲ್ಶಿಯಸ್ ಕನಿಷ್ಠ 21 ಡಿಗ್ರಿ ಸೆಲ್ಶಿಯಸ್

ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ಆಗಸ ಇದ್ದು, ರಾಜಧಾನಿಯ ಸುತ್ತಮುತ್ತ ಇಂದು (ಮಾರ್ಚ್ 21) ಮಳೆ ನಿರೀಕ್ಷಿಸಬಹುದು. ಮುಂದಿನ ಎರಡು ದಿನಗಳಲ್ಲಿ ಮಳೆ ಬೀಳುವ ನಿರೀಕ್ಷೆ ಇದ್ದು, ತಾಪಮಾನ ಕಡಿಮೆಯಾಗಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ತಿಳಿಸಿದೆ.

ಇದೇ ರೀತಿ, ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದು (ಮಾರ್ಚ್‌ 21) ಗರಿಷ್ಠ 34 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಮಾ.20)ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 34.5 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 34 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ನಿನ್ನೆ (ಮಾರ್ಚ್ 20) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 35.4 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಮಾರ್ಚ್‌ 21 ರ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 25.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 54)

ಮಂಗಳೂರು – 27 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 84)

ಚಿತ್ರದುರ್ಗ – 28.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 46)

ಗದಗ – 26.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 45)

ಹೊನ್ನಾವರ – 30.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 61)

ಕಲಬುರಗಿ – 31 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 34)

ಬೆಳಗಾವಿ – 28 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 27)

ಕಾರವಾರ – 32.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 63 )

----------------------

(This copy first appeared in Hindustan Times Kannada website. To read more like this please logon to kannada.hindustantimes.com)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ