ಕರ್ನಾಟಕ ಹವಾಮಾನ ಮೇ 1; ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ ಸೇರಿ 19 ಜಿಲ್ಲೆಗಳಲ್ಲಿ ರಣಬಿಸಿಲು ಆರೆಂಜ್ ಅಲರ್ಟ್
May 01, 2024 06:09 AM IST
ಕರ್ನಾಟಕ ಹವಾಮಾನ ಮೇ 1 (ಇಂದು) ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ ಸೇರಿ 19 ಜಿಲ್ಲೆಗಳಲ್ಲಿ ರಣಬಿಸಿಲು ಕಾಡಲಿದ್ದು, ಆರೆಂಜ್ ಅಲರ್ಟ್ ಅನ್ನು ಭಾರತೀಯ ಹವಾಮಾನ ಇಲಾಖೆ ಘೋಷಿಸಿದೆ.
ಕರ್ನಾಟಕ ಹವಾಮಾನ ಮೇ 1; ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ ಸೇರಿ 19 ಜಿಲ್ಲೆಗಳಲ್ಲಿ ರಣಬಿಸಿಲು ಕಾಡಲಿದೆ. ಶಾಖದ ಅಲೆಗಳ ಮುನ್ನೆಚ್ಚರಿಕೆಯೊಂದಿಗೆ ಆರೆಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ. ಬೆಂಗಳೂರಿನಲ್ಲಿ ತಾಪಮಾನ ಹೆಚ್ಚಳವಾಗುವ ಸಾಧ್ಯತೆ ಇದ್ದು, ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಶಿಯಸ್ ಆಸುಪಾಸಿನಲ್ಲಿರಲಿದೆ.
ಬೆಂಗಳೂರು: ಕರ್ನಾಟಕದ ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ ಮಂಡ್ಯ, ತುಮಕೂರು, ವಿಜಯನಗರ ಸೇರಿ 19 ಜಿಲ್ಲೆಗಳಲ್ಲಿ ಇಂದು ರಣಬಿಸಿಲು ಕಾಡಲಿದೆ. ಶಾಖದ ಅಲೆಗಳ ಮುನ್ನೆಚ್ಚರಿಕೆಯೊಂದಿಗೆ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ. ಇದೇ ವೇಳೆ ಉಳಿದ ಜಿಲ್ಲೆಗಳಲ್ಲೂ ಗರಿಷ್ಠ ತಾಪಮಾನ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಮುನ್ಸೂಚನಾ ವರದಿ ವಿವರಿಸಿದೆ.
ಇದರಂತೆ, ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ ಮಂಡ್ಯ, ತುಮಕೂರು, ವಿಜಯನಗರ ಹೊರತುಪಡಿಸಿ ಉಳಿದ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು ಗರಿಷ್ಠ ತಾಪಮಾನದಲ್ಲಿ ಹೆಚ್ಚಳ ಉಂಟಾಗಬಹುದು.
ಉತ್ತರ ಒಳನಾಡಿನಲ್ಲಿ ಬಾಗಲಕೋಟೆ, ಕಲಬುರಗಿ, ಬೆಳಗಾವಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ರಾತ್ರಿ ಹೊತ್ತಿನಲ್ಲೂ ಗರಿಷ್ಠ ಉಷ್ಣಾಂಶ ಹೆಚ್ಚಳವಾಗಿ ಬಿಸಿ ವಾತಾವರಣ ಇರಲಿದೆ. ಇನ್ನುಳಿದಂತೆ, ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಶಾಖದ ಅಲೆಗಳ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ.
ಇದನ್ನೂ ವೀಕ್ಷಿಸಿ| ಕರ್ನಾಟಕದಲ್ಲಿ ರಣಬಿಸಿಲು, ಶಾಖದ ಅಲೆಯಿಂದ ರಕ್ಷಣೆಗೆ 7 ಸಲಹೆಗಳು - ವಿಡಿಯೋ
ಇನ್ನು, ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸುಡುಬಿಸಿಲು ಇರಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೇ 3ರ ತನಕ ಬಿಸಿ ವಾತಾವರಣ ಮತ್ತು ಆರ್ದ್ರತೆ ಇರಲಿದೆ. ಇದು ಸೆಖೆಯನ್ನು ಹೆಚ್ಚು ಮಾಡಲಿದೆ ಎಂದು ವರದಿ ಹೇಳಿದೆ.
ಬೆಂಗಳೂರು ಹವಾಮಾನ ಇಂದು (ಮೇ 1), ಗರಿಷ್ಠ 38 ಡಿಗ್ರಿ ಸೆಲ್ಶಿಯಸ್ ಕನಿಷ್ಠ 24 ಡಿಗ್ರಿ ಸೆಲ್ಶಿಯಸ್
ಬೆಂಗಳೂರು ನಗರದಲ್ಲಿ ಇಂದು (ಮೇ 1) ಗರಿಷ್ಠ ತಾಪಮಾನವು 38 ಡಿಗ್ರಿ ಸೆಲ್ಶಿಯಸ್ ಕನಿಷ್ಠ 24 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುನ್ಸೂಚನಾ ವರದಿ ತಿಳಿಸಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 38 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 24 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಏಪ್ರಿಲ್ 30) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 37.8 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 25.2 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 38 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 24 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ನಿನ್ನೆ (ಏಪ್ರಿಲ್ 30) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಶಿಯಸ್ ಇತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.
ಪ್ರಮುಖ ನಗರಗಳ ತಾಪಮಾನ
ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಮೇ 1 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.
ಬೆಂಗಳೂರು – 32.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 30)
ಮಂಗಳೂರು – 30.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 76)
ಚಿತ್ರದುರ್ಗ – 33 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 66)
ಗದಗ – 36 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 34)
ಹೊನ್ನಾವರ – 30.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 74)
ಕಲಬುರಗಿ – 37.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 35)
ಬೆಳಗಾವಿ – 34.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 53)
ಕಾರವಾರ – 33.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 71 )
----------------------
(This copy first appeared in Hindustan Times Kannada website. To read more like this please logon to kannada.hindustantimes.com)
ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.