logo
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಮೇ 10; ಮೈಸೂರು, ಬೆಂಗಳೂರು ಸೇರಿ 25 ಜಿಲ್ಲೆಗಳಲ್ಲಿ ಸಾಧಾರಣ ಮಳೆ, ತುಮಕೂರು ಸೇರಿ 6 ಜಿಲ್ಲೆಗಳಲ್ಲಿ ಒಣಹವೆ

ಕರ್ನಾಟಕ ಹವಾಮಾನ ಮೇ 10; ಮೈಸೂರು, ಬೆಂಗಳೂರು ಸೇರಿ 25 ಜಿಲ್ಲೆಗಳಲ್ಲಿ ಸಾಧಾರಣ ಮಳೆ, ತುಮಕೂರು ಸೇರಿ 6 ಜಿಲ್ಲೆಗಳಲ್ಲಿ ಒಣಹವೆ

Umesh Kumar S HT Kannada

May 10, 2024 06:13 AM IST

ಕರ್ನಾಟಕ ಹವಾಮಾನ ಮೇ 10; ಮೈಸೂರು, ಬೆಂಗಳೂರು ಸೇರಿ 25 ಜಿಲ್ಲೆಗಳಲ್ಲಿ ಸಾಧಾರಣ ಮಳೆ, ತುಮಕೂರು ಸೇರಿ 6 ಜಿಲ್ಲೆಗಳಲ್ಲಿ ಒಣಹವೆ ಎಂದು ಮಳೆ ಮುನ್ಸೂಚನಾ ವರದಿ ಹೇಳಿದೆ.

  • ಕರ್ನಾಟಕ ಹವಾಮಾನ ಮೇ 10; ರಾಜ್ಯದಲ್ಲಿ ಇಂದು ಕೊಡಗು, ಮೈಸೂರು, ಮಂಡ್ಯ, ಬೆಂಗಳೂರು ಸೇರಿ 25 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು. ತುಮಕೂರು ಸೇರಿ 6 ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಹವಾಮಾನ ಮುನ್ಸೂಚನಾ ವರದಿ ಹೇಳಿದೆ.

ಕರ್ನಾಟಕ ಹವಾಮಾನ ಮೇ 10; ಮೈಸೂರು, ಬೆಂಗಳೂರು ಸೇರಿ 25 ಜಿಲ್ಲೆಗಳಲ್ಲಿ ಸಾಧಾರಣ ಮಳೆ, ತುಮಕೂರು ಸೇರಿ 6 ಜಿಲ್ಲೆಗಳಲ್ಲಿ ಒಣಹವೆ ಎಂದು ಮಳೆ ಮುನ್ಸೂಚನಾ ವರದಿ ಹೇಳಿದೆ.
ಕರ್ನಾಟಕ ಹವಾಮಾನ ಮೇ 10; ಮೈಸೂರು, ಬೆಂಗಳೂರು ಸೇರಿ 25 ಜಿಲ್ಲೆಗಳಲ್ಲಿ ಸಾಧಾರಣ ಮಳೆ, ತುಮಕೂರು ಸೇರಿ 6 ಜಿಲ್ಲೆಗಳಲ್ಲಿ ಒಣಹವೆ ಎಂದು ಮಳೆ ಮುನ್ಸೂಚನಾ ವರದಿ ಹೇಳಿದೆ.

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದು ಕೆಲವೆಡೆ ಚದುರಿದ ಮಳೆಯಾಗಲಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು ಬಿರುಗಾಳಿ ಸಹಿತ ಮಳೆಯಾಗಲಿದ್ದು, ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿ.ಮೀ. ಇರಲಿದೆ ಎಂದು ಹವಾಮಾನ ಇಲಾಖೆಯ ಮಳೆ ಮುನ್ಸೂಚನೆ ವರದಿ ಎಚ್ಚರಿಸಿದೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಟ್ರೆಂಡಿಂಗ್​ ಸುದ್ದಿ

CET Results2024: ಕರ್ನಾಟಕ ಸಿಇಟಿ ಫಲಿತಾಂಶ ಇಂದು ಪ್ರಕಟ ಸಾಧ್ಯತೆ, ನಿಮ್ಮ ಅಂಕ ನೋಡುವುದು ಹೀಗೆ

Bangalore News: ತಮಿಳುನಾಡಿನಲ್ಲಿ ಗುಂಡು ತಗುಲಿ ಬೆಂಗಳೂರಿನ ಯೋಧ ಸಾವು

Hassan Scandal: ಗೃಹ ಇಲಾಖೆ ಬೇರೆಯವರಿಂದ ಹೈಜಾಕ್‌‌, ಪ್ರಜ್ವಲ್‌ ರೇವಣ್ಣ ಪ್ರಕರಣ ಮುಚ್ಚಿಹಾಕಲು ಎಸ್‌ಐಟಿ ಸಿದ್ಧತೆ, ಅಶೋಕ ಆರೋಪ

Karnataka Rains: ಬೆಂಗಳೂರು, ಚಿಕ್ಕಮಗಳೂರು, ಕೊಡಗು, ಹೊಸದುರ್ಗ,ಚನ್ನಗಿರಿಯಲ್ಲಿ ಭಾರೀ ಮಳೆ, ನಿಮ್ಮೂರಲ್ಲಿ ಎಷ್ಟು ಮಳೆಯಾಗಿದೆ ?

ಇದೇ ರೀತಿ ಉತ್ತರ ಒಳನಾಡಿನ 8 ಜಿಲ್ಲೆಗಳಲ್ಲಿ ಕೆಲವು ಕಡೆ ಚದುರಿದ ಮಳೆ, ಗುಡುಗು ಮಿಂಚು ಕೂಡ ಉಂಟಾಗಬಹುದು. ವಿಶೇಷವಾಗಿ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ,ಹಾವೇರಿ, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಪ್ರದೇಶಗಳಲ್ಲಿ ಈ ರೀತಿ ಮಳೆಯಾಗಬಹುದು. ಇಲ್ಲಿ ಗಾಳಿಯ ವೇಗ ಗಂಟೆಗೆ 40 - 50 ಕಿ.ಮೀ. ಇರಲಿದೆ ಎಂದು ಹವಾಮಾನ ವರದಿ ಎಚ್ಚರಿಸಿದೆ. ಇನ್ನುಳಿದಂತೆ, ಯಾದಗಿರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಒಣಹವೆ ಇರಲಿದ್ದು, ಕೆಲವು ಕಡೆ ಮೋಡಕವಿದ ವಾತಾವರಣ ಇರಲಿದೆ.

ದಕ್ಷಿಣ ಒಳನಾಡಿನ ಹಲವಡೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ. ಬೆಂಗಳೂರು ನಗರ, ಗ್ರಾಮಾಂತರ ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋ‍ಷಿಸಲಾಗಿದೆ., ಬಳ್ಳಾರಿ, ಚಿತ್ರದುರ್ಗ, ತುಮಕೂರು ವ್ಯಾಪ್ತಿಯಲ್ಲಿ ಮಳೆ ಇಲ್ಲ. ಒಣಹವೆ ಇರಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ,ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳ ಹಲವೆಡೆ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋ‍ಷಿಸಲಾಗಿದೆ. ಉಳಿದಂತೆ, ಚಿಕ್ಕಬಳ್ಳಾಪುರ,ಚಿಕ್ಕಮಗಳೂರು, ದಾವಣಗೆರೆ, ಹಾಸನ, ರಾಮನಗರ, ಶಿವಮೊಗ್ಗ,ವಿಜಯನಗರಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗಲಿದ್ದು, ಗಾಳಿಯ ವೇಗ ಗಂಟೆಗೆ 40- 50 ಕಿ.ಮೀ. ಇರಲಿದೆ.

ಬೆಂಗಳೂರು ಹವಾಮಾನ ಇಂದು (ಮೇ 10), ಗರಿಷ್ಠ 34 ಡಿಗ್ರಿ ಸೆಲ್ಶಿಯಸ್ ಕನಿಷ್ಠ 22 ಡಿಗ್ರಿ ಸೆಲ್ಶಿಯಸ್

ಬೆಂಗಳೂರು ನಗರದಲ್ಲಿ ಇಂದು (ಮೇ 10) ಗರಿಷ್ಠ ತಾಪಮಾನವು 34 ಡಿಗ್ರಿ ಸೆಲ್ಶಿಯಸ್ ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು. ಮೋಡ ಕವಿದ ವಾತಾವರಣ ಮತ್ತು ಸಾಧಾರಣ ಮಳೆಯಾಗಲಿದೆ. ಗುಡುಗು ಗಾಳಿ ಸಹಿತ ಮಳೆಯಾಗಲಿದ್ದು, ಯಲ್ಲೋ ಅಲರ್ಟ್‌ ಘೋ‍ಷಣೆಯ ಮಾಡಲಾಗಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುನ್ಸೂಚನಾ ವರದಿ ತಿಳಿಸಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 34 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಮೇ 9) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 34.2 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 20.2 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ನಿನ್ನೆ (ಮೇ 9) 17.9 ಮಿ.ಮೀ. ಮಳೆಯಾಗಿತ್ತು.

ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 34 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದ್ದು, ಮಿಂಚಿನ ಎಚ್ಚರಿಕೆ ನೀಡಲಾಗಿದೆ. ನಿನ್ನೆ (ಮೇ 9) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 35.2 ಡಿಗ್ರಿ ಸೆಲ್ಶಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಶಿಯಸ್‌ ಇತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಮೇ 10 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 24.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 87)

ಮಂಗಳೂರು – 29 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 74)

ಚಿತ್ರದುರ್ಗ – 24.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 92)

ಗದಗ – 24.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 90)

ಹೊನ್ನಾವರ – 29.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 70)

ಕಲಬುರಗಿ – 27.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 60)

ಬೆಳಗಾವಿ – 26 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 84)

ಕಾರವಾರ – 33.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 66 )

----------------------

(This copy first appeared in Hindustan Times Kannada website. To read more like this please logon to kannada.hindustantimes.com)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ