ಕರ್ನಾಟಕ ಹವಾಮಾನ ಮೇ 27; ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್, ಉತ್ತರ ಕನ್ನಡ ಸೇರಿ 12 ಜಿಲ್ಲೆಗಳಲ್ಲಷ್ಟೆ ಮಳೆ
May 27, 2024 06:04 AM IST
ಕರ್ನಾಟಕ ಹವಾಮಾನ ಮೇ 27; ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ ಸೇರಿ 12 ಜಿಲ್ಲೆಗಳಲ್ಲಷ್ಟೆ ಮಳೆಯಾಗಬಹುದು ಎಂದು ಹವಾಮಾನ ಮುನ್ಸೂಚನೆ ವರದಿ ತಿಳಿಸಿದೆ. (ಸಾಂಕೇತಿಕ ಚಿತ್ರ)
ಕರ್ನಾಟಕ ಹವಾಮಾನ ಮೇ 27; ರಾಜ್ಯದಲ್ಲಿ ಇಂದು ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಕರಾವಳಿ ಕರ್ನಾಟಕದಲ್ಲಷ್ಟೆ ಮಳೆ ಹೆಚ್ಚು ಇರಲಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಗುಡುಗು ಮಿಂಚು ಸಹಿತ ಮಳೆಯಾಗಲಿರುವ ಕಾರಣ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ, ಉತ್ತರ ಕನ್ನಡ ಸೇರಿ 12 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು: ಕರ್ನಾಟಕದಲ್ಲಿ ಇಂದು (ಮೇ 27) ಮಳೆಯ ಪ್ರಮಾಣ ಇನ್ನಷ್ಟು ಕಡಿಮೆಯಾಗಲಿದ್ದು, ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಮಾತ್ರವೇ ಹೆಚ್ಚಿನ ಮಳೆ ಇರಲಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ ಸೇರಿ 12 ಜಿಲ್ಲೆಗಳಲ್ಲಷ್ಟೆ ಮಳೆ ಬೀಳಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ಮಳೆ ಮುನ್ಸೂಚನೆ ವರದಿ ತಿಳಿಸಿದೆ.
ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ಮಳೆ ಮುನ್ಸೂಚನೆ ವರದಿ ಪ್ರಕಾರ ಮೇ 28ರ ಬೆಳಗ್ಗೆ 8.30 ತನಕದ ಅವಧಿಯಲ್ಲಿ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಬಿರುಗಾಳಿ ಮತ್ತು ಗುಡುಗು ಮಿಂಚು ಸಹಿತ ಭಾರಿ ಪ್ರಮಾಣದ ಮಳೆಯಾಗಲಿರುವ ಕಾರಣ ಈ ಎರಡೂ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಅನ್ನು ಘೋಷಿಸಲಾಗಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆ ಮಳೆಯಾಗಲಿದ್ದು, ಕೆಲವು ಕಡೆ ಗುಡುಗು ಮಿಂಚು ಸಹಿತ ಮಳೆ ಬೀಳುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ.
ಕರ್ನಾಟಕದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ. ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನುಳಿದಂತೆ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ,ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ಕರ್ನಾಟಕದ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳ ಕೆಲವು ಕಡೆ ಮಳೆಯಾಗಬಹುದು. ವಿಜಯನಗರ, ರಾಮನಗರ, ಚಿತ್ರದುರ್ಗ, ಬಳ್ಳಾರಿ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಕಡಿಮೆ.
ಬೆಂಗಳೂರು ಹವಾಮಾನ ಇಂದು (ಮೇ 27); ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಬೆಂಗಳೂರು ನಗರದಲ್ಲಿ ಇಂದು (ಮೇ 27) ಕೂಡ ಕೆಲವು ಕಡೆಗಳಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಹಲವೆಡೆ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಬಹುದು. ಗರಿಷ್ಠ ತಾಪಮಾನವು 31 ಡಿಗ್ರಿ ಸೆಲ್ಶಿಯಸ್ ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ಇರಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುನ್ಸೂಚನಾ ವರದಿ ತಿಳಿಸಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 31 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಮೇ 26) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 30.7 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 21.6 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು.
ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 31 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ಜಿಲ್ಲೆಯಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ. ನಿನ್ನೆ (ಮೇ 26) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 30.5 ಡಿಗ್ರಿ ಸೆಲ್ಶಿಯಸ್, ಕನಿಷ್ಠ ತಾಪಮಾನ 21.8 ಡಿಗ್ರಿ ಸೆಲ್ಶಿಯಸ್ ಇತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.
ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.