logo
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಮಾರ್ಚ್ 12; ಬೆಂಗಳೂರಲ್ಲಿ ಗರಿಷ್ಠ ಉಷ್ಣಾಂಶ ಹೆಚ್ಚಳ; ರಾಜ್ಯಾದ್ಯಂತ ಹಲವೆಡೆ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚು

ಕರ್ನಾಟಕ ಹವಾಮಾನ ಮಾರ್ಚ್ 12; ಬೆಂಗಳೂರಲ್ಲಿ ಗರಿಷ್ಠ ಉಷ್ಣಾಂಶ ಹೆಚ್ಚಳ; ರಾಜ್ಯಾದ್ಯಂತ ಹಲವೆಡೆ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚು

Umesh Kumar S HT Kannada

Mar 12, 2024 06:15 AM IST

google News

ಕರ್ನಾಟಕ ಹವಾಮಾನ ಮಾರ್ಚ್ 12;

  • ಕರ್ನಾಟಕ ಹವಾಮಾನ ಮಾರ್ಚ್ 12: ರಾಜ್ಯದ ಬಹುತೇಕ ಕಡೆಗಳಲ್ಲಿ ಕಡುಬೇಸಗೆಯ ಅನುಭವ. ಈ ನಡುವೆ ಬೆಂಗಳೂರಲ್ಲಿ ಗರಿಷ್ಠ ಉಷ್ಣಾಂಶ ಹೆಚ್ಚಳವಾಗಲಿದ್ದು, ರಾಜ್ಯಾದ್ಯಂತ ಹಲವೆಡೆ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚು ಎಂದು ಬಾರತೀಯ ಹವಾಮಾನ ಇಲಾಖೆಯ ಹವಾಮಾನ ಮುನ್ಸೂಚನಾ ವರದಿ ಹೇಳಿದೆ.

ಕರ್ನಾಟಕ ಹವಾಮಾನ ಮಾರ್ಚ್ 12;
ಕರ್ನಾಟಕ ಹವಾಮಾನ ಮಾರ್ಚ್ 12;

ಬೆಂಗಳೂರು: ಕರ್ನಾಟಕದಲ್ಲಿ ಒಣಹವೆ ಮುಂದುವರಿಯಲಿದೆ. ಮಾರ್ಚ್ 13ರ ಬೆಳಗ್ಗೆ 8.30ರ ತನಕದ ಹವಾಮಾನ ಮುನ್ಸೂಚನಾ ವರದಿ ಪ್ರಕಟಿಸಿರುವ ಭಾರತೀಯ ಹವಾಮಾನ ಇಲಾಖೆ, ಬೆಂಗಳೂರಲ್ಲಿ ಗರಿಷ್ಠ ಉಷ್ಣಾಂಶ ಹೆಚ್ಚಳವಾಗಲಿದೆ ಮತ್ತು ರಾಜ್ಯಾದ್ಯಂತ ಹಲವೆಡೆ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚು ಇರಲಿದೆ ಎಂಬ ಮುನ್ಸೂಚನೆ ನೀಡಿದೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿಯ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಶಿಯಸ್ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಶಿಯಸ್ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ವರದಿ ಹೇಳಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ವಿಶೇಷವಾಗಿ ಕರಾವಳಿ ಮತ್ತು ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ತಾಪಮಾನಗಳಲ್ಲಿ ಹೆಚ್ಚಿನ ಬದಲಾವಣೆ ಏನೂ ಆಗಿಲ್ಲ. ಆದಾಗ್ಯೂ ಉಷ್ಣಾಂಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ವಿಚಲನೆ ಕೆಲವು ಕಡೆ ಆಗಿದೆ. ಈ ಪೈಕಿ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 5.1 ಡಿಗ್ರಿ ಸೆಲ್ಶಿಯಸ್‌ಗಿಂತ ಹೆಚ್ಚು ತಾಪಮಾಣ ಇಳಿಕೆಯಾಗಿದೆ. ಇದೇ ರೀತಿ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಅಂದರೆ 3.1 ಡಿಗ್ರಿ ಸೆಲ್ಶಿಯಸ್‌ನಿಂದ 5 ಡಿಗ್ರಿ ಸೆಲ್ಶಿಯಸ್ ತನಕ ಗರಿಷ್ಠ ತಾಪಮಾನ ಏರಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಅಂದರೆ 3.1 ಡಿಗ್ರಿ ಸೆಲ್ಶಿಯಸ್‌ನಿಂದ 5 ಡಿಗ್ರಿ ಸೆಲ್ಶಿಯಸ್ ತನಕ ತಾಪಮಾನ ಇಳಿಕೆಯಾಗಿದೆ. ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಅಂದರೆ 1.6 ಡಿಗ್ರಿ ಸೆಲ್ಶಿಯಸ್‌ನಿಂದ 3 ಡಿಗ್ರಿ ಸೆಲ್ಶಿಯಸ್‌ ತನಕ ತಾಪಮಾನ ಹೆಚ್ಚಳವಾಗಿದೆ. ಕರಾವಳಿಯ ಕೆಲವು ಕಡೆಗಳಲ್ಲಿ, ಒಳನಾಡಿನ ಒಂದೆರಡು ಕಡೆಗಳಲ್ಲಿ ಇದೇ ಪ್ರಮಾಣದಲ್ಲಿ ತಾಪಮಾನ ಇಳಿಕೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಸಮತಟ್ಟು ಪ್ರದೇಶಗಳ ಪೈಕಿ ಗರಿಷ್ಠ ಉಷ್ಣಾಂಶ ಬಾಗಲೋಟೆಯಲ್ಲಿ 38.2 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ ದಾವಣಗೆರೆಯಲ್ಲಿ 19.5 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ.

ಬೆಂಗಳೂರು ಹವಾಮಾನ ಇಂದು (ಮಾ.12); ತಾಪಮಾನ ಹೆಚ್ಚಳ, ಬಿಸಿಲ ಧಗೆಯೂ ತೀವ್ರ

ಬೆಂಗಳೂರು ನಗರದಲ್ಲಿ ಆಕಾಶ ನಿರ್ಮಲವಾಗಿದ್ದು, ಮಳೆಯ ಲಕ್ಷಣಗಳಿಲ್ಲ. ಮಾರ್ಚ್‌ 13ರ ಬೆಳಗ್ಗೆ 8.30ರ ತನಕ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಶಿಯಸ್ ದಾಖಲಾಗುವ ಸಾಧ್ಯತೆ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ತಿಳಿಸಿದೆ.

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕಡು ಬೇಸಿಗೆ ವಾತಾವರಣ ಇದ್ದು, ಉಷ್ಣಾಂಶ ಸಾಮಾನ್ಯಕ್ಕಿಂತ ಹೆಚ್ಚಳವಾಗಲಿದೆ. ವಿಶೇಷವಾಗಿ ಬೆಂಗಳೂರು ನಗರದಲ್ಲಿ ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಶಿಯಸ್‌, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಶಿಯಸ್ ಇರಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರದ ವಿಜ್ಞಾನಿ ಸುಂದರ್ ಎಂ ಮೇತ್ರಿ ಹೇಳಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಮಳೆಯ ಲಕ್ಷಣಗಳಿಲ್ಲ. ಉಷ್ಣಾಂಶ ಗರಿಷ್ಠ 34 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಇರಬಹುದು. ನಿನ್ನೆ (ಮಾ.11)ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 34.2 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 21.6 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 34 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ನಿನ್ನೆ (ಮಾರ್ಚ್ 11) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 35.1 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಮಾರ್ಚ್‌ 13 ರ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 25 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 65)

ಮಂಗಳೂರು – 28 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 77)

ಚಿತ್ರದುರ್ಗ – 29 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 38)

ಗದಗ – 28.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 56)

ಹೊನ್ನಾವರ – 30 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 58)

ಕಲಬುರಗಿ – 27.1 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 35)

ಬೆಳಗಾವಿ – 34.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 26)

ಕಾರವಾರ – 32.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 58 )

----------------------

(This copy first appeared in Hindustan Times Kannada website. To read more like this please logon to kannada.hindustantimes.com)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ