logo
ಕನ್ನಡ ಸುದ್ದಿ  /  ಕರ್ನಾಟಕ  /  Who Is Kumble Sundar Rao:: ಕುಂಬಳೆ ಸುಂದರ ರಾವ್‌ ವಿಧಿವಶ, ಯಕ್ಷಗಾನ ಕಲಾವಿದ, ತಾಳಮದ್ದಳೆ ವಾಗ್ಮಿ ಕುಂಬಳೆ ಸುಂದರ ರಾವ್ ವ್ಯಕ್ತಿಚಿತ್ರಣ

Who is Kumble Sundar Rao:: ಕುಂಬಳೆ ಸುಂದರ ರಾವ್‌ ವಿಧಿವಶ, ಯಕ್ಷಗಾನ ಕಲಾವಿದ, ತಾಳಮದ್ದಳೆ ವಾಗ್ಮಿ ಕುಂಬಳೆ ಸುಂದರ ರಾವ್ ವ್ಯಕ್ತಿಚಿತ್ರಣ

Praveen Chandra B HT Kannada

Nov 30, 2022 10:12 AM IST

ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್‌

    • Who is Kumble Sundar Rao: ತಾಳಮದ್ದಳೆ ಮತ್ತು ಬಯಲಾಟ ಎಂಬ ಯಕ್ಷಗಾನದ ಎರಡೂ ವಿಭಾಗಗಳಲ್ಲಿ ಪ್ರಸಿದ್ಧಿಯನ್ನು ಪಡೆದಿದ್ದ ಕುಂಬಳೆ ಸುಂದರ ರಾವ್‌ 1994 ರಿಂದ 1999 ರವರೆಗೆ ಸುರತ್ಕಲ್ ಕ್ಷೇತ್ರದಿಂದ ಶಾಸಕರಾಗಿ ಗೆದ್ದು ಕರ್ನಾಟಕ ವಿಧಾನಸಭೆಯ ಸದಸ್ಯರಾಗಿದ್ದರು.
ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್‌
ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್‌ (ಚಿತ್ರಕೃಪೆ: yakshadeepa.com)

ಯಕ್ಷಗಾನ ಕ್ಷೇತ್ರದ ಸಾಧಕ ಕುಂಬ್ಳೆ ಸುಂದರ ರಾವ್‌ ಇಂದು ಮುಂಜಾನೆ ತಮ್ಮ ಸ್ವಗೃಹದಲ್ಲಿ ನಿಧನರಾದರು. ಯಕ್ಷಗಾನ ಅಭಿಮಾನಿಗಳಿಗೆ, ವಿಶೇಷವಾಗಿ ಕರಾವಳಿಯ ಜನತೆಗೆ ಇವರು ಚಿರಪರಿಚಿತರು. ತಾಳಮದ್ದಳೆ ಮತ್ತು ಬಯಲಾಟ ಎಂಬ ಯಕ್ಷಗಾನದ ಎರಡೂ ವಿಭಾಗಗಳಲ್ಲಿ ಪ್ರಸಿದ್ಧಿಯನ್ನು ಪಡೆದಿದ್ದ ಅವರು 1994 ರಿಂದ 1999 ರವರೆಗೆ ಸುರತ್ಕಲ್ ಕ್ಷೇತ್ರದಿಂದ ಶಾಸಕರಾಗಿ ಗೆದ್ದು ಕರ್ನಾಟಕ ವಿಧಾನಸಭೆಯ ಸದಸ್ಯರಾಗಿದ್ದರು. ಒಂದು ಅವಧಿಗೆ ಅವರು ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಟ್ರೆಂಡಿಂಗ್​ ಸುದ್ದಿ

HD Revanna: ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆ ಅಪಹರಣ ಆರೋಪ ಪ್ರಕರಣ; ಮಾಜಿ ಪ್ರಧಾನಿ ದೇವೇಗೌಡರ ಮನೆಯಲ್ಲೇ ಉಳಿದಿರುವ ಹೆಚ್‌ಡಿ ರೇವಣ್ಣ

ಬೆಂಗಳೂರು: ನಿಷೇಧಿತ ಮಾದಕ ವಸ್ತು ಗಾಂಜಾ, ಇ-ಸಿಗರೇಟ್, ವಿದೇಶಿ ಸಿಗರೆಟ್‌, ಎಂಡಿಎಂಎ ಮಾರಾಟಗಾರರ ಬಂಧನ, ಮಾದಕ ವಸ್ತುಗಳ ಜಪ್ತಿ

ದೊಡ್ಡಬಳ್ಳಾಪುರ: ಹೇಮಂತಗೌಡ ಹತ್ಯೆ ಪ್ರಕರಣದ 2ನೇ ಆರೋಪಿ ಬಂಧನ, ಪೊಲೀಸರ ಮೇಲೆ ಹಲ್ಲೆಗೆತ್ನಿಸಿದ್ದ ಕಾರಣ ಕಾಲಿಗೆ ಗುಂಡೇಟು

ಮಂಗಳೂರು ವಿಮಾನ ನಿಲ್ಧಾಣಕ್ಕೆ ಬಂದು ಗೊಂದಲಕ್ಕೆ ಒಳಗಾದ ಮಹಿಳೆ, ನೆರವಾದ ಭದ್ರತಾ ಸಿಬ್ಬಂದಿ, ನಾಪತ್ತೆ ಪ್ರಕರಣ ಸುಖಾಂತ್ಯ

ಕುಂಬಳೆ ಸುಂದರ ರಾವ್‌ ಸಾಧನೆ

(ಮಾಹಿತಿ: ವಿಕಾಸಟ್ರಸ್ಟ್‌)

ಕಾಸರಗೋಡು ಜಿಲ್ಲೆಯ ಕುಂಬಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಯಾಪು ಎಂಬಲ್ಲ ಕಾಯರ್ಪಾಡಿ ಕು, ಕಣ್ಣ ಮತ್ತು ಕಲ್ಯಾಣಿ ದಂಪತಿಗಳ ಪುತ್ರನಾಗಿ 20 ಮಾರ್ಚ್ 1934ರಂದು ಜನಿಸಿದ ಕುಂಬಳಿ ಸುಂದರ ರಾವ್ ಅವರು ತೆಂಕುತಿಟ್ಟು ಯಕ್ಷಗಾನ ಕಂಡ ವಿಶಿಷ್ಟ ಕಲಾವಿದ, ಯಕ್ಷಗಾನ ಮೇಳಗಳಲ್ಲ ಕಲಾವಿದರಾಗಿ, ಉತ್ತಮ ಭಾಷಣಕಾರನಾಗಿ, ರಾಜಕೀಯ, ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಸಂಘಟನಾ ಕ್ಷೇತ್ರಗಳಲ್ಲಿ ತಮ್ಮನ್ನು ನಿರಂತರ ತೊಡಗಿಸಿಕೊಂಡವರು

Kumble Sundar Rao death: ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್‌  ನಿಧನ

ಮಲಯಾಳಂ ಮನೆಮಾತಿನ ಇವರ ಕುಟುಂಬದ ವೃತ್ತಿ ಮಗ್ಗ ನೇಯುವುದು ಮತ್ತು ಬಟ್ಟೆಯ ವ್ಯಾಪಾರ, ತಂದೆಯ ಬಟ್ಟೆ: ಮಿಲ್ ಸಮೀಪದ ನಾಯ್ಡಾಪಿನಲ್ಲಿ ವಾರಕ್ಕೊಮ್ಮೆ ನಡೆಯುತ್ತಿದ್ದ ತಾಳಮದ್ದಳೆಯನ್ನು ನೋಡಿ ಅರ್ಥ ಹೇಳುತ್ತಾ ಯಕ್ಷಗಾನದಲ್ಲ. ಆಸಕ್ತಿ ಬೆಳೆಸಿಕೊಂಡರು. ಪ್ರಾಥಮಿಕ ವಿದ್ಯಾಭ್ಯಾಸವನ್ನು ನಾರಾಯಣಮಂಗಲ, ಕುಕ್ಲಾರು ಶಾಲೆಯಲ್ಲಿ ಪೂರೈಸಿದ ಇವರು ಸ್ವಲ್ಪ ಕಾಲ ಬೆಂಗಳೂರಿನಲ್ಲಿ ಹೋಟೆಲ್ ಮಾಣಿಯಾಗಿಯೂ ದುಡಿದಿದ್ದರು. ಹೆಚ್ಚಿನ ವಿದ್ಯಾಭ್ಯಾಸ ಪಡೆಯದಿದ್ದರೂ ಕನ್ನಡ, ಮಲಯಾಳಂ, ತುಳು, ಸಂಸ್ಕೃತ, ಹವ್ಯಕ, ತಮಿಳು ಭಾಷೆಗಳಲ್ಲಿ ಪಾಂಡಿತ್ಯವನ್ನು ಹೊಂದಿದ್ದರು.

ಕೂಡ್ಲು, ಕುತ್ಯಾಳ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಮೇಳದಲ್ಲಿ ವೃತ್ತಿ ಜೀವನ ಆರಂಭಿಸಿ ನಂತರ ಕುಂಡಾವು ಇರಾ ಶ್ರೀ ಸೋಮನಾಥೇಶ್ವರ ಯಕ್ಷಗಾನ ನಾಟಕ ಸಭಾ, ಶ್ರೀ ಮಹಮ್ಮಾಯಿ ಕೃಪಾ ಪೋಷಿತ ಯಕ್ಷಗಾನ ನಾಟಕ ಸಭಾ ಸುರತ್ಕಲ್, ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳ ಧರ್ಮಸ್ಥಳ ಮುಂತಾದೆಡೆಗಳಲ್ಲ. ಕಲಾವಿದರಾಗಿ ಯಕ್ಷಗಾನ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದರು.

Who is Kumble Sundar Rao:: ಕುಂಬಳೆ ಸುಂದರ ರಾವ್‌ ವಿಧಿವಶ, ಯಕ್ಷಗಾನ ಕಲಾವಿದ, ತಾಳಮದ್ದಳೆ ಕೂಟದ ವಾಗ್ಮಿ, ಮಾಜಿ ಶಾಸಕ ಕುಂಬಳೆ ಸುಂದರ ರಾವ್ ವ್ಯಕ್ತಿಚಿತ್ರ

ಸುಂದರ ರಾವ್ ಎಂದೊಡನೆ ಕಣ್ಣಮುಂದೆ ಬರುವುದು ಅವರ ಮಾತು. ಆರು ದಶಕಗಳ ಕಲಾ ಜೀವನದಲ್ಲ ರಾಮ, ಕೃಷ್ಣ, ಭರತ, ಉತ್ತರ, ಸುಧನ್ವ, ಚಾರ್ವಾಕರಂದ ಹಲವು ಪಾತ್ರಗಳನ್ನು ನಮ್ಮ ನಡುವೆ ಮತ್ತೆ ಮತ್ತೆ ಸೃಷ್ಟಿಸಿದರು. ಆಯಾ ಪಾತ್ರಗಳ ಜೊತೆ ನಾವೂ ಕುಳಿತು ಮಾತನಾಡುವ ಹಾಗಿತ್ತು ಅವರ ಅರ್ಥಧಾರಿಕ ಕುಣಿತ ಪ್ರವೀಣನಲ್ಲವಾದರೂ ಪ್ರಾಸಬದ್ಧ ಮಾತಿನ ಮೋಡಿ, ಭಾವಪೂರ್ಣತೆಯಿಂದ ಕಲಾಪ್ರೇಮಿಗಳ ಮನಗೆದ್ದ ಕಲಾವಿದ, ಯಕ್ಷಗಾನ ಅರ್ಥಗಾರಿಕೆಗೆ ಹೊಸ ಆಯಾಮ ನೀಡಿ, ಹೊಸ ದಾರಿ ತೋರಿಸಿದ ಉತ್ಕೃಷ್ಟ ಕಲಾವಿದರ ಸಾಲಲ್ಲ ಮೆರೆದ ಅಪೂರ್ವ ಪ್ರತಿಭೆ.

1994ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ದಿಸಿ 5 ವರ್ಷಗಳ ಕಾಲ ಸುರತ್ಕಲ್ ಕ್ಷೇತ್ರದ ಶಾಸಕರಾಗಿ ಕಾರ್ಯನಿರ್ವಹಿಸಿದ್ದರು. ಕರ್ನಾಟಕ ಯಕ್ಷಗಾನ ಅಕಾಡೆಮಿಯ ಪ್ರಥಮ ಅಧ್ಯಕ್ಷರಾಗಿ 2009ರಿಂದ 2012ರವರೆಗೆ ಮತ್ತು ಯಕ್ಷಗಾನ ಪಠ್ಯಪುಸ್ತಕ ರಚನಾ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ (1998), ಅಗರಿ ಪ್ರಶಸ್ತಿ (2013), ಯಕ್ಷಮಂಗಳ ಪ್ರಶಸ್ತಿ (2018) ಚಿಕಾಗೋ ಅಕ್ಕ ಸಮ್ಮೇಳನ, ವಿಶ್ವ ಕನ್ನಡ ಸಮ್ಮೇಳನ ಸೇರಿದಂತೆ ಹಲವೆಡೆ ಸನ್ಮಾನ, ಗೌರವ, ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಸುಂದರ ಕಾಂಡ ಎಂಬ ಅಭಿನಂದನಾ ಗ್ರಂಥವನ್ನು 2007ರಲ್ಲ. ಇವರಿಗೆ ಸಮರ್ಪಿಸಲಾಗಿದೆ.

ಮೂರು ಹೆಣ್ಣು ಮಕ್ಕಳು ಮತ್ತು ಇಬ್ಬರು ಗಂಡು ಮಕ್ಕಳ ತುಂಬು ಸಂಸಾರಿಯಾದ ಸುಂದರ ರಾಯರು ಪ್ರಸ್ತುತ ಮಂಗಳೂರಿನ ಪಂಪ್ ವೆಲ್ ಸಮೀಪ ಪತ್ನಿ ಸುಶೀಲ ಅವರೊಂದಿಗೆ ವಿಶ್ರಾಂತ ಜೀವನ ನಡೆಸುತ್ತಿದ್ದರು.

ಕುಂಬಳೆ ಸುಂದರ ರಾವ್ ನಡೆದು ಬಂದ ದಾರಿ

(ಮಾಹಿತಿ: ಯಕ್ಷದೀಪ)

ಕೂರ್ಮಾವತಾರದಲ್ಲಿ ಇವನಾಗಿದ್ದ ನನ್ನ ಚಿಪ್ಪು. ನೀನು ಇದನ್ನು ಒಪ್ಪು. ನರಸಿಂಹಾವತಾರದಲ್ಲಿ ಅವನು ನನ್ನ ನಖ, ಈಗ ನನ್ನ ಸಖ, ಒಪ್ಪದಿದ್ದರೆ ನಿನಗಿಲ್ಲ ಸುಖ. ಇಂತಹಾ ಪ್ರಾಸಬದ್ಧ ಮಾತುಗಳನ್ನು ಕೇಳಿದ ಯಕ್ಷರಸಿಕರು ಎಲ್ಲರೂ ಅವರು ಯಾರೆಂದು ಖಂಡಿತಾ ಊಹಿಸಬಹುದು.

ಯಾವುದೇ ಒಬ್ಬ ಪಾತ್ರಧಾರಿಯು ಪಾತ್ರವೊಂದರಲ್ಲಿ ಆತನು ಮೂಡಿಸಿದ ಶೈಲಿ ಚಿತ್ರಣಗಳನ್ನು ಆತನ ನಿವೃತ್ತಿಯ ನಂತರವೂ ಇತರ ಪಾತ್ರಧಾರಿಗಳು ಅನುಸರಿಸಿಕೊಂಡು ಹೋಗುತ್ತಾರೆ ಎಂದಾದರೆ ಅದು ಆ ಪಾತ್ರಧಾರಿಯ ದೊಡ್ಡ ಗೆಲುವು ಎಂದೇ ಅರ್ಥ. ಉದಾಹರಣೆಯಾಗಿ ಸುದರ್ಶನ ವಿಜಯ ಪ್ರಸಂಗದ ವಿಷ್ಣುವಿನ ಪಾತ್ರವೇ ಜ್ವಲಂತ ಸಾಕ್ಷಿ. ವಿಷ್ಣುವಾಗಿ ಕುಂಬಳೆ ಸುಂದರ ರಾಯರು ಕಟ್ಟಿದ ಪಾತ್ರಚಿತ್ರಣ ಈಗಲೂ ಹಾಗೆಯೇ ಇದೆ. ಅಲ್ಲಿ ಕುಂಬಳೆ ಸುಂದರ ರಾಯರು ಹೇಳುತ್ತಿದ್ದ ಪ್ರಾಸಬದ್ಧ ಮಾತುಗಳನ್ನು ಬೇರೆ ಕಲಾವಿದರು ಈಗಲೂ ಉಪಯೋಗಿಸುತ್ತಿದ್ದಾರೆ. ಇದು ಕುಂಬಳೆಯವರ ದೊಡ್ಡ ಗೆಲುವು.

ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್‌

ಕುಂಬಳೆ ಸುಂದರ ರಾವ್ ಅವರ ಭರತಾಗಮನದ ಭರತ, ವಿರಾಟ ಪರ್ವದ ಉತ್ತರ ಕುಮಾರ ಮೊದಲಾದುವುಗಳೆಲ್ಲಾ ಅವರಿಗೇ ಹೇಳಿ ಮಾಡಿಸಿದ ಪಾತ್ರಗಳು. ಕೃಷ್ಣ ಸಂಧಾನದ ಕರ್ಣ, ಕರ್ಣಪರ್ವದ ಕರ್ಣ, ಮಹಾಬ್ರಾಹ್ಮಣದಲ್ಲಿ ವಿಶ್ವಾಮಿತ್ರ (ವಿಶ್ವಾಮಿತ್ರ-ಮೇನಕೆ) ಸಮುದ್ರಮಥನದ ವಿಷ್ಣು, ದಕ್ಷಯಜ್ಞದ ಈಶ್ವರ ವಿವಿಧ ಪ್ರಸಂಗಗಳಲ್ಲಿ, ಭೀಷ್ಮ, ಕೃಷ್ಣ, ರಾಮ, ವಿಷ್ಣು, ಚ್ಯವನ, ಪರೀಕ್ಷಿತ, ಧರ್ಮಸ್ಥಳ ಕ್ಷೇತ್ರ ಮಹಾತ್ಮ್ಯೆಯ ಗೋವಿಂದ ದೀಕ್ಷಿತರ ಪಾತ್ರ ಇವರಿಗೆ ಬಹಳಷ್ಟು ಪ್ರಸಿದ್ಧಿಯನ್ನು ತಂದುಕೊಟ್ಟಿದೆ. ತ್ರಿಪುರ ಮಥನದ ‘ಚಾರ್ವಾಕ’ ಪಾತ್ರ ನಿರ್ವಹಣೆಯಂತೂ ಅದ್ಭುತ.

ಕುಂಬಳೆ ಸುಂದರ ರಾವ್ ಅವರ ಕುಟುಂಬದ ವೃತ್ತಿ ಮಗ್ಗ ನೇಯುವುದು ಮತ್ತು ಬಟ್ಟೆಯ ವ್ಯಾಪಾರ. ಮನೆಮಾತು ಮಲೆಯಾಳ. ಎಳವೆಯಲ್ಲೇ ವಿದ್ಯಾಭ್ಯಾಸಕ್ಕೆ ತಿಲಾಂಜಲಿ, ಯಕ್ಷಗಾನದ ಆಸಕ್ತಿ ಸೆಳೆಯಿತು. ಕೆಲಸಕ್ಕೆ ಬಾರದವನೆಂಬ ಭಾವನೆ ಅಪ್ಪನಲ್ಲಿದ್ದರೂ ಅಮ್ಮನ ಪ್ರೀತಿಯಿತ್ತು. ಶಾಲೆಯಲ್ಲಿ ಓದಿದ್ದು ಕಡಿಮೆಯಾದರೂ ಕುಂಬಳೆ ಸುಂದರ ರಾಯರು ಕನ್ನಡ, ಮಲಯಾಳ, ತುಳು, ಸಂಸ್ಕೃತ, ಹವ್ಯಕ, ತಮಿಳು ಭಾಷೆಗಳಲ್ಲಿ ಪಾಂಡಿತ್ಯವನ್ನು ಹೊಂದಿದ್ದರು.

ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್‌

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ