logo
ಕನ್ನಡ ಸುದ್ದಿ  /  ಕರ್ನಾಟಕ  /  ಯಾದಗಿರಿ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ಪ್ರಕರಣ; ಅಕ್ರಮ ಮರಳು ದಂಧೆ ಚಿತ್ರೀಕರಿಸಿದ್ದಕ್ಕೆ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ

ಯಾದಗಿರಿ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ಪ್ರಕರಣ; ಅಕ್ರಮ ಮರಳು ದಂಧೆ ಚಿತ್ರೀಕರಿಸಿದ್ದಕ್ಕೆ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ

HT Kannada Desk HT Kannada

Oct 23, 2023 04:27 PM IST

google News

ಯಾದಗಿರಿ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ಪ್ರಕರಣ; ಅಕ್ರಮ ಮರಳು ದಂಧೆ ಚಿತ್ರೀಕರಿಸಿದ್ದಕ್ಕೆ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ

    • ಸಣ್ಣ ಕೈಗಾರಿಕಾ ಮತ್ತು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಕ್ಷೇತ್ರದಲ್ಲಿ ನಿಲ್ಲದ ಅಕ್ರಮ ಮರಳು ದಂಧೆ. ಅಕ್ರಮ ಮರಳು ದಂಧೆ ಚಿತ್ರೀಕರಿಸಿದ್ದಕ್ಕೆ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ. ಇಬ್ಬರನ್ನುಅಪಹರಿಸಿ ಕೃಷ್ಣಾ ನದಿಗೆ ಎಸೆಯಲು ಯತ್ನ.
ಯಾದಗಿರಿ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ಪ್ರಕರಣ; ಅಕ್ರಮ ಮರಳು ದಂಧೆ ಚಿತ್ರೀಕರಿಸಿದ್ದಕ್ಕೆ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ
ಯಾದಗಿರಿ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ಪ್ರಕರಣ; ಅಕ್ರಮ ಮರಳು ದಂಧೆ ಚಿತ್ರೀಕರಿಸಿದ್ದಕ್ಕೆ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ

ಯಾದಗಿರಿ: ಗಿರಿ ನಾಡಿಯಲ್ಲಿ ಮತ್ತೆ ಅಕ್ರಮ ಮರಳು ದಂಧೆ ಶುರುವಾಗಿದೆ. ಪೊಲೀಸರ ಭಯವಿಲ್ಲದೆ ಅಕ್ರಮ ದಂಧೆಕೋರರು ಮರಳು ಸಾಗಿಸುತ್ತಿದ್ದು, ಈ ಅಕ್ರಮ ಮರಳು ದಂಧೆ ಕುರಿತು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಪ್ರಶ್ನಿಸಿದ್ದಕ್ಕೆ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಅಪಹರಿಸಿ ಕೃಷ್ಣಾ ನದಿಯಲ್ಲಿ ಎಸೆಯಲು ಯತ್ನಿಸಿದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ವಿಭೂತಿ ಹಳ್ಳಿ ಬಳಿ ನಡೆದಿದೆ.

ರಾಜು ನಡಿಹಾಳ್ ಹಾಗೂ ಶರಣಗೌಡ ಹಯ್ಯಾಳ ಹಲ್ಲೆಗೊಳಗಾದವರು ಎಂದು ತಿಳಿದು ಬಂದಿದೆ. ರೌಡಿ ಶೀಟರ್ ವಿಜಯ ರಾಠೋಡ್ ಹಾಗೂ ಇತರರಿಂದ ಅಪಹರಣ ನಡೆದಿದೆ ಎಂದು ಆರೋಪಿಸಲಾಗಿದೆ. ವಿಜಯ ರಾಠೋಡ್ ಗ್ರಾಮ ಪಂಚಾಯಿತಿ ಸದಸ್ಯನಾಗಿದ್ದು, ಸಚಿವ ಶರಣಬಸಪ್ಪಗೌಡ ದರ್ಶನಾಪುರ ಬೆಂಬಲಿಗ ಎಂಬ ಮಾತುಗಳು ಕೇಳಿ ಬಂದಿವೆ.

ಆರೋಪಿಗಳು ಇಬ್ಬರನ್ನು ಕಾರಿನಲ್ಲಿ ಅಪಹರಿಸಿ ಡಿಕ್ಕಿಯೊಳಗೆ ಹಾಕಿ ರಾಡ್‌ನಿಂದ ಹಲ್ಲೆ ನಡೆಸಿದ್ದಾರೆ. ಬಳಿಕ ಇಬ್ಬರನ್ನು ಜೀವಂತವಾಗಿ ನದಿಗೆ ಎಸೆಯಲು ಸಂಚು ರೂಪಿಸಿದ್ದರು. ಸ್ಥಳೀಯರು ಗಮನಿಸಿದ್ದರಿಂದ ಇಬ್ಬರನ್ನು ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಹಲ್ಲೆಗೊಳಗಾದ ಇಬ್ಬರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸುರೆಡ್ಡಿ ಮಲ್ಲಾಬಾದ್ ಎಂಬಾತ ಕೃಷ್ಣಾ ನದಿಯಲ್ಲಿ ಅಕ್ರಮ ಮರಳು ದಂಧೆ ಮಾಡುತ್ತಿದ್ದ. ಇದನ್ನು ರಾಜು ನಡಿಹಾಳ್ ಹಾಗೂ ಶರಣಗೌಡ‌ ಹಯ್ಯಾಳ ಪ್ರಶ್ನಿಸಿದ್ದರು ಮತ್ತು ಅಕ್ರಮ ಮರಳು ಸಾಗಾಟ ಮಾಡುತ್ತಿರುವ ಕುರಿತು ಮೊಬೈಲ್‌ನಲ್ಲಿ ಚಿತ್ರೀಕರಣ ಮಾಡುತ್ತಿರುವ ಕಾರಣಕ್ಕೆ ಬಸುರೆಡ್ಡಿಯ ಸ್ನೇಹಿತನಾದ ವಿಜಯ ರಾಠೋಡ್ ಹಾಗೂ ಆತನ ಸಹಚರರು ಅಪಹರಿಸಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಹಲ್ಲೆಯಿಂದಾಗಿ ಶರಣಗೌಡ ಸ್ಥಿತಿ ಚಿಂತಾಜನಕವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ. ರಾಜುವಿನ ಎರಡೂ ಕಾಲುಗಳಿಗೆ ಬಲವಾದ ಪೆಟ್ಟು ಬಿದ್ದಿದೆ. ರಾಜುವಿನ ತಂದೆ ಬಸಯ್ಯ ಗುತ್ತೇದಾರ ನೀಡಿರುವ ದೂರಿನ ಮೇಲೆ ಶಹಾಪುರ ಪೊಲೀಸ್ ಠಾಣೆಯಲ್ಲಿ ವಿಜಯ ರಾಠೋಡ್, ಬಸುರೆಡ್ಡಿ, ಮಲ್ಲಿಕಾರ್ಜುನ, ಸೇರಿದಂತೆ ಏಳು ಜನ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರ ಬೆಂಬಲಿನಿಂದಲೇ ಅಕ್ರಮ ಮರಳು ದಂಧೆ ನಡೆಯುತ್ತಿದ್ದರೆ ಹೇಗೆ ಎಂಬ ನಾಗರಿಕರು ಪ್ರಶ್ನಿಸುವಂತಾಗಿದೆ. ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಬೆಂಬಲಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿ ಅಕ್ರಮ ಮರಳು ದಂಧೆ ಕಡಿವಾಣಕ್ಕೆ ಪ್ರಯತ್ನಿಸಿ ಆ ಮೂಲಕ ತಮ್ಮ ಹೆಸರಿಗೆ ಕಳಂಕ ತರದಂತೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಎಂಬುದು ಜನರ ಒತ್ತಾಸೆಯಾಗಿದೆ.

(ವರದಿ: ಎಸ್.ಬಿ.ರೆಡ್ಡಿ, ಕಲಬುರಗಿ)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ