logo
ಕನ್ನಡ ಸುದ್ದಿ  /  ಕರ್ನಾಟಕ  /  Yadagiri News: ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ; ಸ್ಥಳದಲ್ಲಿಯೇ ಐವರು ಸಾವು, 13 ಮಂದಿಗೆ ಗಾಯ

Yadagiri News: ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ; ಸ್ಥಳದಲ್ಲಿಯೇ ಐವರು ಸಾವು, 13 ಮಂದಿಗೆ ಗಾಯ

HT Kannada Desk HT Kannada

Jun 06, 2023 10:41 AM IST

ಯಾದಗಿರಿ ಅಪಘಾತದ ಚಿತ್ರ

    • Yadagiri accident: ಅಪಘಾತದಿಂದಾಗಿ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅವರೆಲ್ಲರೂ ಪರಸ್ಪರ ಸಂಬಂಧಿಕರು ಎಂಬ ಮಾಹಿತಿ ಲಭಿಸಿದೆ.
ಯಾದಗಿರಿ ಅಪಘಾತದ ಚಿತ್ರ
ಯಾದಗಿರಿ ಅಪಘಾತದ ಚಿತ್ರ

ಯಾದಗಿರಿ: ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿಯಾಗಿ ಐದು ಜನ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಬಳಿಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150 (ಎ)ನಲ್ಲಿ ಮಂಗಳವಾರ ಬೆಳಗ್ಗಿನ ಜಾವ ನಡೆದಿದೆ. ಅಪಘಾತದಲ್ಲಿ 13 ಜನ ಗಾಯಗೊಂಡಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಬೆಂಗಳೂರು ಎಡಿಎ ರಂಗಮಂದಿರದಲ್ಲಿ ಕಲಾವಿದೆ ವಿದ್ಯಾಶ್ರೀ ಎಚ್‌ಎಸ್ ಅವರ ಭರತನಾಟ್ಯ ರಂಗಾರೋಹಣ ನಾಳೆ

Hassan Scandal; ಹಾಸನ ಹಗರಣದ ಸಂತ್ರಸ್ತೆ ನಾಪತ್ತೆ ಆತಂಕಕಾರಿ, ಪ್ರಜ್ವಲ್‌ ರೇವಣ್ಣ ಬಂಧನ ಯಾವಾಗ, ಫೇಸ್‌ಬುಕ್ ಪೋಸ್ಟಲ್ಲಿ ವಾಸು ಎಚ್‌ವಿ ಕಳವಳ

Bengaluru Rains: ದಾಖಲೆಯ ಬಿಸಿ ಕಂಡ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ; ರಣ ಬಿಸಿಲಿಗೆ ಬೆಂದ ಜನ ಫುಲ್ ಖುಷ್

NEP ಅಥವಾ SEP: ಪದವಿ ಕೋರ್ಸ್ ಪ್ರವೇಶ ಗೊಂದಲ ರಾಜ್ಯವ್ಯಾಪಿ; ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ವಿದ್ಯಾರ್ಥಿಗಳ ಹಪಾಹಪಿ

ಆಂಧ್ರ ಪ್ರದೇಶದ ನಂದ್ಯಾಳ ಜಿಲ್ಲೆಯ 18 ಜನ ಕಲಬುರಗಿಯ ಖ್ಯಾತ ಬಂದೇನವಾಜ ದರ್ಗಾದ ಉರುಸ್ (ಜಾತ್ರೆಗೆ) ತೆರಳುತ್ತಿದ್ದರು. ನಸುಕಿನ ಜಾವ ನಾಲ್ಕು ಗಂಟೆಯ ವೇಳೆಗೆ ನಿದ್ದೆ ಮಂಪರಿನಲ್ಲಿದ್ದ ಕ್ರೂಸರ್ ಚಾಲಕ ಬಳಿಚಕ್ರ ಬಳಿ ರಸ್ತೆ ಪಕ್ಕ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಘಟನೆಯಲ್ಲಿ ಐವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಅವರೆಲ್ಲರೂ ಪರಸ್ಪರ ಸಂಬಂಧಿಕರು ಎಂಬ ಮಾಹಿತಿ ಲಭಿಸಿದೆ. ಇವರಲ್ಲಿ ತಂದೆ, ಮಗ ಮತ್ತು ಇಬ್ಬರು ಮಕ್ಕಳು ಸೇರಿದ್ದಾರೆ. ಆಂಧ್ರ ಪ್ರದೇಶದ ಬಂಡಿ ಆತ್ಮಕೂರ ಗ್ರಾಮದ ಮುನೀರ್ (40), ನಯಾಮತ್ (40), ಮುದಶಿರ್ (12), ರಮೀಜಾ ಬೇಗಂ (50), ಸುಮ್ಮಿ (12) ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಗಾಯಗೊಂಡ ಇನ್ನೂ 13 ಜನರನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿಬಿ ವೇದಮೂರ್ತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಗಾಯಾಳುಗಳನ್ನು ರಾಯಚೂರು ರಿಮ್ಸ್ ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ. ಈ ಕುರಿತು ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಹಂಚಿಕೊಳ್ಳಲು ಲೇಖನಗಳು