logo
ಕನ್ನಡ ಸುದ್ದಿ  /  ಕರ್ನಾಟಕ  /  Job News: ಯಾದಗಿರಿಯಲ್ಲಿ ಹೌಸ್‌ ಮದರ್‌ ಹುದ್ದೆಗೆ ಅರ್ಜಿ ಆಹ್ವಾನ; ಕೊನೆಯ ದಿನಾಂಕ, ಶೈಕ್ಷಣಿಕ ಅರ್ಹತೆ ಸೇರಿ ಪ್ರಮುಖ ಮಾಹಿತಿ ಹೀಗಿದೆ

Job News: ಯಾದಗಿರಿಯಲ್ಲಿ ಹೌಸ್‌ ಮದರ್‌ ಹುದ್ದೆಗೆ ಅರ್ಜಿ ಆಹ್ವಾನ; ಕೊನೆಯ ದಿನಾಂಕ, ಶೈಕ್ಷಣಿಕ ಅರ್ಹತೆ ಸೇರಿ ಪ್ರಮುಖ ಮಾಹಿತಿ ಹೀಗಿದೆ

HT Kannada Desk HT Kannada

Dec 11, 2023 10:13 PM IST

google News

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಯಾದಗಿರಿಯಲ್ಲಿ ಹೌಸ್‌ ಮದರ್‌ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ

  • ಯಾದಗಿರಿ ಜಿಲ್ಲೆಯಲ್ಲಿ ಹೌಸ್‌ ಮದರ್‌ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ ಸೇರಿ ಇತರೆ ಮಾಹಿತಿ ಇಲ್ಲಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಯಾದಗಿರಿಯಲ್ಲಿ ಹೌಸ್‌ ಮದರ್‌ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಯಾದಗಿರಿಯಲ್ಲಿ ಹೌಸ್‌ ಮದರ್‌ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ

ಯಾದಗಿರಿ: ಜಿಲ್ಲೆಯ ನಿರುದ್ಯೋಗಿ ಯುವತಿಯರಿಗೆ ಗುಡ್‌ ನ್ಯೂಸ್‌ ಇದಾಗಿದ್ದು, ಯಾದಗಿರಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹೌಸ್‌ ಮದರ್‌ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.

ಯಾದಗಿರಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯ ಅನುಷ್ಠಾನಕ್ಕಾಗಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಯಾದಗಿರಿಯಲ್ಲಿ ಒಂದು ಹೌಸ್ ಮದರ್ ಹುದ್ದೆ ಖಾಲಿ ಇದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ಈಗಾಗಲೇ ಪ್ರಕ್ರಿಯೆ ಆರಂಭವಾಗಿದ್ದು, ಡಿಸೆಂಬರ್‌ 21 ಅರ್ಜಿ ಸಲ್ಲಿಕೆ ಕೊನೆ ದಿನವಾಗಿದ್ದು, ಕೂಡಲೇ ಅರ್ಜಿ ಸಲ್ಲಿಸಿ.

ಶೈಕ್ಷಣಿಕ ಅರ್ಹತೆ: ಅರ್ಜಿ ಸಲ್ಲಿಸುವ ಆಸಕ್ತಿ ಅಭ್ಯರ್ಥಿಗಳು ಕರ್ನಾಟಕದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಡಿ.ಎಡ್ ಪೂರ್ಣಗೊಳಿಸಿರಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿದೆ.

ವಯೋಮಿತಿ ವಿವರ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 25 ವರ್ಷ ಮತ್ತು ಗರಿಷ್ಠ 38 ವರ್ಷ ಮೀರಿರಬಾರದು.

ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಸಿಗಲಿದೆ ಎಂದು ಇಲಾಖೆ ತಿಳಿಸಿದೆ. ಅರ್ಜಿ ಸಲ್ಲಿಸುವ ಎಲ್ಲ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ. ಈ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ (ಡಿಡಿ) ಮೂಲಕ ಪಾವತಿಸಬೇಕು ಎಂದು ತಿಳಿಸಿದೆ.

ಆಯ್ಕೆ ಹೇಗೆ?: ಅಭ್ಯರ್ಥಿಗಳಿಗೆ ಮೊದಲು ಕಂಪ್ಯೂಟರ್ ಜ್ಞಾನ ಮತ್ತು ಕೌಶಲ್ಯ (ಸ್ಕಿಲ್) ಪರೀಕ್ಷೆ ನಡೆಸಲಾಗುತ್ತದೆ. ಅದರಲ್ಲಿ ಉತ್ತೀರ್ಣ ಆದರವರಿಗೆ ಮುಂದಿನ ಸುತ್ತು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಲು ಅವಕಾಶ ಇರುತ್ತದೆ. ಇಲ್ಲಿ ಇಲಾಖೆ ಅಧಿಕಾರಿಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ.

ಆಯ್ಕೆಯಾದವರಿಗೆ ಯಾದಗಿರಿಯಲ್ಲಿ ಪೋಸ್ಟಿಂಗ್ ನೀಡಲಾಗುವುದು. ಸದ್ಯ ವೇತನ ನಿಗದಿ ಮಾಡಿಲ್ಲ. ಅಭ್ಯರ್ಥಿಗಳ ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ನೀಡಲಾಗುವುದು ಎಂದು ಇಲಾಖೆ ಮಾಹಿತಿ ನೀಡಿದೆ.

ಅರ್ಜಿ ಸಲ್ಲಿಕೆ ವಿಳಾಸ: ಅಭ್ಯರ್ಥಿಗಳು ಸೂಕ್ತ ದಾಖಲೆಗಳ ಸಹಿತ ಭರ್ತಿ ಅರ್ಜಿಯನ್ನು '' ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ (DCPO), ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ: C-17, 1 ನೇ ಮಹಡಿ, ಜಿಲ್ಲಾ ಆಡಳಿತ ಕಟ್ಟಡ ಸಂಕೀರ್ಣ ಯಾದಗಿರಿ. ಇಲ್ಲಿಗೆ ನಿಗದಿತ ದಿನಾಂಕದೊಳಗೆ ಅರ್ಜಿ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08473-253347 ಗೆ ಸಂಪರ್ಕಿಸಬಹುದಾಗಿದೆ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ