logo
ಕನ್ನಡ ಸುದ್ದಿ  /  ಕರ್ನಾಟಕ  /  Kumble Sundar Rao Death: ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್‌ ನಿಧನ, ಮುಖ್ಯಮಂತ್ರಿ ಸಂತಾಪ

Kumble Sundar Rao death: ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್‌ ನಿಧನ, ಮುಖ್ಯಮಂತ್ರಿ ಸಂತಾಪ

Praveen Chandra B HT Kannada

Nov 30, 2022 09:15 AM IST

Kumble Sundar Rao death: ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್‌ ನಿಧನ

    • ಯಕ್ಷಗಾನ ಲೋಕದ ಮಾಣಿಕ್ಯವೊಂದು ಕಳಚಿಕೊಂಡಿದೆ. ಖ್ಯಾತ ಯಕ್ಷಗಾನ ಮತ್ತು ತಾಳೆ ಮದ್ದಳೆ ಕಲಾವಿದರಾದ, ಮಾಜಿ ಶಾಸಕ ಕುಂಬ್ಳೆ ಸುಂದರರಾವ್‌ (88) ಇಂದು ಮುಂಜಾನೆ ನಿಧನರಾಗಿದ್ದಾರೆ.
Kumble Sundar Rao death: ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್‌  ನಿಧನ
Kumble Sundar Rao death: ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್‌ ನಿಧನ

ಮಂಗಳೂರು: ಯಕ್ಷಗಾನ ಲೋಕದ ಮಾಣಿಕ್ಯವೊಂದು ಕಳಚಿಕೊಂಡಿದೆ. ಖ್ಯಾತ ಯಕ್ಷಗಾನ ಮತ್ತು ತಾಳೆ ಮದ್ದಳೆ ಕಲಾವಿದರಾದ, ಮಾಜಿ ಶಾಸಕ ಕುಂಬ್ಳೆ ಸುಂದರರಾವ್‌ (88) ಇಂದು ಮುಂಜಾನೆ ನಿಧನರಾಗಿದ್ದಾರೆ. ಇವರು ಪತ್ನಿ, ಇಬ್ಬರು ಪುತ್ರರು ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಮಂಗಳೂರಿನ ಪಂಪ್‌ವೆಲ್‌ನಲ್ಲಿ ಅವರು ವಾಸವಾಗಿದ್ದರು. ಅಂತ್ಯಸಂಸ್ಕಾರ ಇಂದು ನಡೆಯಲಿದೆ.

ಟ್ರೆಂಡಿಂಗ್​ ಸುದ್ದಿ

ಬೆಂಗಳೂರು: ನಿಷೇಧಿತ ಮಾದಕ ವಸ್ತು ಗಾಂಜಾ, ಇ-ಸಿಗರೇಟ್, ವಿದೇಶಿ ಸಿಗರೆಟ್‌, ಎಂಡಿಎಂಎ ಮಾರಾಟಗಾರರ ಬಂಧನ, ಮಾದಕ ವಸ್ತುಗಳ ಜಪ್ತಿ

ದೊಡ್ಡಬಳ್ಳಾಪುರ: ಹೇಮಂತಗೌಡ ಹತ್ಯೆ ಪ್ರಕರಣದ 2ನೇ ಆರೋಪಿ ಬಂಧನ, ಪೊಲೀಸರ ಮೇಲೆ ಹಲ್ಲೆಗೆತ್ನಿಸಿದ್ದ ಕಾರಣ ಕಾಲಿಗೆ ಗುಂಡೇಟು

ಮಂಗಳೂರು ವಿಮಾನ ನಿಲ್ಧಾಣಕ್ಕೆ ಬಂದು ಗೊಂದಲಕ್ಕೆ ಒಳಗಾದ ಮಹಿಳೆ, ನೆರವಾದ ಭದ್ರತಾ ಸಿಬ್ಬಂದಿ, ನಾಪತ್ತೆ ಪ್ರಕರಣ ಸುಖಾಂತ್ಯ

ದಕ್ಷಿಣ ಕನ್ನಡದ ಮಂಗಳೂರು, ಪುತ್ತೂರಲ್ಲಿ ಹಲಸು, ಮಾವು ಸೇರಿ ವಿವಿಧ ಹಣ್ಣುಗಳ ಮೇಳ, ದಿನಾಂಕ ಮತ್ತು ಇತರೆ ವಿವರ

ಯಕ್ಷಗಾನ ತೆಂಕತಿಟ್ಟು ಶೈಲಿಯ ಕಲಾವಿದರಾಗಿದ್ದ ಇವರು ಸುರತ್ಕಲ್‌, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಕೆಲಸ ಮಾಡಿದ್ದರು. ಕಾರ್ಯರ್ಕಾಡಿ ಕುಂಙಕಣ್ಣ ಮತ್ತು ಕಲ್ಯಾಣಿ ದಂಪತಿ ಸುಪುತ್ರರಾಗಿ 1934ರ ಮಾರ್ಚ್‌ 20ರಲ್ಲಿ ಇವರು ಕೇರಳದ ಕುಂಬಳೆಯಲ್ಲಿ ಜನಿಸಿದರು.

ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ಹಾಗೂ 1994ರಿಂದ 1999ರವರೆಗೆ ಬಿಜೆಪಿಯಿಂದ ಸುರತ್ಕಲ್‌ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಯಕ್ಷಗಾನ ಕಲಾವಿದರೊಬ್ಬರು ನೇರವಾಗಿ ಮತದಾರರಿಂಲೇ ಆರಿಸಲ್ಪಟ್ಟ ಶಾಸಕರೆಂಬ ಹೆಗ್ಗಳಿಕೆಗೆ ಇವರು ಪಾತ್ರವಾಗಿದ್ದರು.

ಖ್ಯಾತ ಯಕ್ಷಗಾನ ಕಲಾವಿದ, ತಾಳಮದ್ದಳೆ ಕೂಟದ ವಾಗ್ಮಿ, ಮಾಜಿ ಶಾಸಕ ಕುಂಬಳೆ ಸುಂದರ ರಾವ್ ನಿಧನದಿಂದ ಯಕ್ಷಗಾನ ಅಭಿಮಾನಿಗಳು ದುಃಖದ ಮಡುವಿನಲ್ಲಿದ್ದಾರೆ. ತಾಳಮದ್ದಳೆ ಮತ್ತು ಬಯಲಾಟ ಎಂಬ ಯಕ್ಷಗಾನದ ಎರಡೂ ವಿಭಾಗಗಳಲ್ಲಿ ಪ್ರಸಿದ್ಧಿಯನ್ನು ಪಡೆದಿದ್ದ ಅವರು 1994 ರಿಂದ 1999 ರವರೆಗೆ ಸುರತ್ಕಲ್ ಕ್ಷೇತ್ರದಿಂದ ಶಾಸಕರಾಗಿ ಗೆದ್ದು ಕರ್ನಾಟಕ ವಿಧಾನಸಭೆಯ ಸದಸ್ಯರಾಗಿದ್ದರು. ಒಂದು ಅವಧಿಗೆ ಅವರು ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಸುಂದರ್ ರಾವ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸುರತ್ಕಲ್ ಹಾಗೂ ಧರ್ಮಸ್ಥಳ ಮೇಳಗಳಲ್ಲಿ ಯಕ್ಷಗಾನ ಕಲಾವಿದರಾಗಿ ಸೇವೆ ಸಲ್ಲಿಸಿದ್ದ ಅವರು ತಮ್ಮ ಪ್ರಾಸಬದ್ಧ , ನಿರರ್ಗಳ ಅರ್ಥಗಾರಿಕೆಯಿಂದ ಮನೆಂತಾಗಿದ್ದರು. ಶಾಸಕರಾಗಿ, ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ಅವರ ಸೇವೆ ಸ್ಮರಣೀಯ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸು ವುದಾಗಿ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ನಳಿನ್‌ ಕುಮಾರ್‌ ಕಟೀಲ್‌ ಸಂತಾಪ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ