logo
ಕನ್ನಡ ಸುದ್ದಿ  /  ಕರ್ನಾಟಕ  /  Yettinahole Project: ದೊಡ್ಡಬಳ್ಳಾಪುರ ತಾಲೂಕಿಗೆ ಸಮಗ್ರ ಕುಡಿಯುವ ನೀರು- ಪ್ರಗತಿಯಲ್ಲಿದೆ ಎತ್ತಿನಹೊಳೆ ಯೋಜನೆ; ಸದನಕ್ಕೆ ಸರ್ಕಾರದ ಮಾಹಿತಿ

Yettinahole project: ದೊಡ್ಡಬಳ್ಳಾಪುರ ತಾಲೂಕಿಗೆ ಸಮಗ್ರ ಕುಡಿಯುವ ನೀರು- ಪ್ರಗತಿಯಲ್ಲಿದೆ ಎತ್ತಿನಹೊಳೆ ಯೋಜನೆ; ಸದನಕ್ಕೆ ಸರ್ಕಾರದ ಮಾಹಿತಿ

HT Kannada Desk HT Kannada

Feb 14, 2023 07:57 PM IST

ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ

  • Yettinahole project: ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಎತ್ತಿನಹೊಳೆ ಬಯಲುಸೀಮೆ ಕುಡಿಯುವ ನೀರಿನ ಯೋಜನೆಯು ಪ್ರಗತಿಯಲ್ಲಿದ್ದು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಅಗತ್ಯ ಕ್ರಮ ವಹಿಸಲಾಗಿದೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು.

ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ
ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ

ಬೆಂಗಳೂರು: ದೊಡ್ಡಬಳ್ಳಾಪುರ ತಾಲೂಕಿಗೆ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಪ್ರಗತಿಯಲ್ಲಿದೆ. ನಿಗದಿತ ಅವಧಿಯಲ್ಲಿ ಇದನ್ನು ಪೂರ್ಣಗೊಳಿಸುವುದಕ್ಕೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಹೇಳಿದರು.

ಟ್ರೆಂಡಿಂಗ್​ ಸುದ್ದಿ

Belagavi News: ಚಾಲುಕ್ಯ ರೈಲಿನಲ್ಲಿ ಟಿಕೆಟ್‌ ತಪಾಸಣೆ ವೇಳೆ ಇರಿದ ಪ್ರಯಾಣಿಕ. ಸಿಬ್ಬಂದಿ ಸಾವು, ಆರೋಪಿ ಪರಾರಿ

Bangalore Crime: ಗೃಹ ಸಚಿವರ ಆಪ್ತ ಎಂದು ಹೇಳಿಕೊಂಡು ಬೆಂಗಳೂರಿನಲ್ಲಿ ಮಹಿಳೆಯೊಬ್ಬರಿಗೆ 1 ಕೋಟಿ ರೂ. ವಂಚಿಸಿದ್ದ ಯುವಕ ಬಂಧನ

Hassan Scandal: ರೇವಣ್ಣಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಒಂದು ದಿನಕ್ಕೆ ಮಾತ್ರ ಜಾಮೀನು, ಇಂದು ವಿಚಾರಣೆ

Forest Tales: ಮಳೆಗಾಲ ಬಂತು ಒಂದಾದರೂ ಸಸಿ ನೆಡೋಣ, ಬಿಸಿಲು ಬರದ ಬವಣೆಗೆ ಅರಣ್ಯ ಇಲಾಖೆಯೊಂದಿಗೆ ಕೈಜೋಡಿಸೋಣ ಬನ್ನಿ

ಅವರು ಮಂಗಳವಾರ ವಿಧಾನಸಭೆಯಲ್ಲಿ ದೊಡ್ಡಬಳ್ಳಾಪುರ ಶಾಸಕ ವೆಂಕಟರಮಣಯ್ಯ ಟಿ ಅವರ ಚುಕ್ಕೆಗುತಿನ ಪ್ರಶ್ನೆಗೆ ಉತ್ತರಿಸುತ್ತ ಈ ವಿಚಾರ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಎತ್ತಿನಹೊಳೆ ಬಯಲುಸೀಮೆ ಕುಡಿಯುವ ನೀರಿನ ಯೋಜನೆಯು ಪ್ರಗತಿಯಲ್ಲಿದ್ದು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಅಗತ್ಯ ಕ್ರಮ ವಹಿಸಲಾಗಿದೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು.

ಗೌರಿಬಿದನೂರು ಗುರುತ್ವ ಫೀಡರ್ ಕಾಮಗಾರಿ ನಿರ್ಮಾಣ

ಎತ್ತಿನಹೊಳೆ ಮುಖ್ಯ ನಾಲೆಯ ಸರಪಳಿ 258.570 ಕಿ.ಮೀ.ನಲ್ಲಿ ಕವಲೊಡೆಯುವ ಗೌರಿಬಿದನೂರು ಗುರುತ್ವ ಫೀಡರ್‌ನಿಂದ 1,826 ಟಿ.ಎಂ.ಸಿ ನೀರಿನ ಬಳಕೆಯೊಂದಿಗೆ ಗೌರಿಬಿದನೂರು ತಾಲೂಕಿಗೆ ಕುಡಿಯುವ ನೀರು ಮತ್ತು ಗೌರಿಬಿದನೂರು ತಾಲೂಕಿನ 86 ಕೆರೆಗಳು, ಮಧುಗಿರಿ ತಾಲೂಕಿನ 5 ಕೆರೆಗಳು ಒಟ್ಟು 107 ಕೆರೆಗಳನ್ನು ಅವುಗಳ ಸಾಮರ್ಥ್ಯದ ಪ್ರತಿಶತ ಶೇ.50 ಮೀರದಂತೆ ತುಂಬಿಸಲು ಉದ್ದೇಶಿಸಲಾಗಿದೆ. ಪ್ರಸ್ತುತ ಕಾಮಗಾರಿಯು ಪ್ರಗತಿಯಲ್ಲಿರುತ್ತದೆ.

ಈ ಪೀಡರ್‌ನ ಪೈಪ್‌ಲೈನ್‌ನ ಒಟ್ಟು ಉದ್ದ 81.60 ಕಿ.ಮೀ. ಇದ್ದು, ದೊಡ್ಡಬಳ್ಳಾಪುರ ತಾಲೂಕು ವ್ಯಾಪ್ತಿಯಲ್ಲಿ 27.411 ಕಿ.ಮೀ. ಉದ್ದದ ಪೈಪ್ ಲೈನ್ ಹಾದು ಹೋಗುತ್ತಿದೆ. ಈ ಪೈಕಿ 25.053 ಕಿ.ಮೀ. ಪೈಪ್‌ ಲೈನ್ ಕಾಮಗಾರಿಯು ಪೂರ್ಣಗೊಂಡಿದೆ. ಉಳಿಕೆ ಕಾಮಗಾರಿ ಪ್ರಗತಿಯಲ್ಲಿರುತ್ತದೆ. ಗುರುತ್ವ ಕಾಲುವೆ ವಿಸ್ತರಣಾ ಕಾಮಗಾರಿಗಳ ಪೈಕಿ ಒಟ್ಟು 2.25 ಕಿ.ಮೀ. ಉದ್ದವು ದೊಡ್ಡಬಳ್ಳಾಪುರ ತಾಲೂಕು ವ್ಯಾಪ್ತಿಯಲ್ಲಿ ಬರುತ್ತಿದೆ. ಪ್ರಸ್ತುತ ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿರುತ್ತದೆ.

ಸಮತೋಲನಾ ಜಲಾಶಯ ನಿರ್ಮಾಣ ಕಾಮಗಾರಿಯನ್ನು ಈಗಾಗಲೆ ಗುತ್ತಿಗೆಗೆ ವಹಿಸಲಾಗಿದೆ. ಇದರ ಕಾಮಗಾರಿಯನ್ನು ಪ್ರಾರಂಭಿಸಬೇಕಿರುತ್ತದೆ. ಸಮತೋಲನ ಜಲಾಶಯದ ನಂತರದ ಲಿಫ್ಟ್ ಕಾಂಪೋನೆಂಟ್ ಮತ್ತು ಡಿಸಿ-5 ನಂತರದ 22.30 ಕಿ.ಮೀ.ವರೆಗಿನ ಗ್ರಾವಿಟಿ ಮೇನೆ ನಿರ್ಮಾಣ ಕಾಮಗಾರಿ ಟೆಂಡರ್‌ಗೆ ಈಗಾಗಲೇ ಅನುಮೋದನೆ ಸಿಕ್ಕಿದೆ. ಗುತ್ತಿದಾರರೊಂದಿಗೆ ಕರಾರು ಒಪ್ಪಂದ ಮಾಡಿಕೊಳ್ಳಬೇಕಿರುತ್ತದೆ. ಈ ಎಲ್ಲ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಅಗತ್ಯ ಕ್ರಮ ವಹಿಸಲಾಗುತ್ತಿದೆ ಎಂದು ಸಚಿವರು ವಿಧಾನಸಭೆಯಲ್ಲಿ ತಿಳಿಸಿದರು.

ಭೂಸ್ವಾಧೀನ,ಸ್ಥಳೀಯರ ವಿರೋಧ: ದಂಡಾವತಿ ಜಲಾಶಯ ಯೋಜನೆ ಅನುಷ್ಠಾನ ಸಾಧ್ಯವಾಗಿಲ್ಲ

ಭೂಸ್ವಾಧೀನ ಪರಿಸರ ಮತ್ತು ಅರಣ್ಯ ತೀರುವಳಿ ಹಾಗೂ ಸ್ಥಳೀಯರ ವಿರೋಧವಿರುವುದರಿಂದ ದಂಡಾವತಿ ಯೋಜನೆಯನ್ನು ಅನುಷ್ಠಾನಗೊಳಿಸಲು ಸಾಧ್ಯವಾಗಿರುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವಿಧಾನ ಸಭೆಗೆ ಇಂದು ತಿಳಿಸಿದರು.

ಕುಮಾರ ಬಂಗಾರಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಅವರು ಸದರಿ ಯೋಜನೆಯ ಬದಲಾಗಿ ಸೊರಬ ತಾಲ್ಲೂಕಿನಲ್ಲಿ ಹರಿಯುತ್ತಿರುವ ದಂಡಾವತಿ ನದಿಗೆ ಯಡಗೊಪ್ಪ ಗ್ರಾಮದ ಹತ್ತಿರ ಏತ ನೀರಾವರಿ ಯೋಜನೆ ಮತ್ತು ವರದಾ ನದಿಗೆ ಗುಡವಿ ಮತ್ತು ಕೆರೆಹಳ್ಳಿ ಗ್ರಾಮಗಳ ಹತ್ತಿರ ಏತ ನೀರಾವರಿ ಯೋಜನೆಗಳನ್ನು ಕೈಗೆತ್ತಿಗೊಳ್ಳುವುದರ ಜತೆಗೆ ದಂಡಾವತಿ ನದಿಗೆ ಅಡ್ಡಲಾಗಿ ಜಂಗಿನಕೊಪ್ಪ ಗ್ರಾಮದ ಹತ್ತಿರ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಮಾಡಿ ಸುಮಾರು 23.85 ಕಿ.ಮೀ. ಉದ್ದದ ಬಲದಂಡೆ ಕಾಲುವೆ ಹಾಗೂ ಸುಮಾರು 14.06 ಕಿ.ಮೀ. ಉದ್ದದ ಎಡದಂಡೆ ಕಾಲುವೆ ಮೂಲಕ ಒಟ್ಟಾರೆ 9700 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸಲು ಹಾಗೂ ಕೆರೆಗಳನ್ನು ತುಂಬಿಸಲು ಉದ್ದೇಶಿಸಲಾಗಿದೆ ಎಂದು ಅವರು ಸದನಕ್ಕೆ ತಿಳಿಸಿದರು.

ಸದರಿ ಪ್ರಸ್ತಾವನೆಯು ಕರ್ನಾಟಕ ನೀರಾವರಿ ನಿಗಮದ ಪರಿಶೀಲನೆಯಲ್ಲಿದೆ. ಎಂದು ಸಚಿವರು ವಿವರಿಸಿದರು. ದಂಡಾವತಿ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಾಣ ಮಾಡಿ ಸೊರಬ, ಶಿಕಾರಿಪುರ ತಾಲೂಕು ಒಟ್ಟಾರೆ 6933 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲು 2009ರ ಜನವರಿ 12ರ ಸರ್ಕಾರದ ಆದೇಶದಲ್ಲಿ 272 ಕೋಟಿ ರೂಪಾಯಿ ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿತ್ತು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ