Free bus service: ಕರ್ನಾಟಕದಲ್ಲಿ ಮಹಿಳೆಯರಿಗೆ ಉಚಿತ ಸಾರಿಗೆ ಪ್ರಯಾಣ ಶುರು; ಮೊದಲ ದಿನವೇ ರಶ್
Jun 11, 2023 12:34 PM IST
ಕರ್ನಾಟಕದಲ್ಲಿ ಮಹಿಳೆಯರಿಗೆ ಉಚಿತ ಬಸ್ ಸಾರಿಗೆ ಸೇವೆ ನೀಡುವ ಶಕ್ತಿ ಯೋಜನೆ ಭಾನುವಾರ ಆರಂಭಗೊಂಡಿತು. ಮೈಸೂರು ಬಸ್ ನಿಲ್ದಾಣದಲ್ಲಿ ಕಂಡು ಬಂದ ವಾತಾವರಣ.
- ಬೆಂಗಳೂರು ಮಾತ್ರವಲ್ಲದೇ ರಾಜ್ಯದ ಎಲ್ಲಾ ಜಿಲ್ಲೆ,ತಾಲ್ಲೂಕುಗಳಲ್ಲೂ ಸಂಭ್ರಮದ ನಡುವೆ ಮಹಿಳೆಯರು ಶಕ್ತಿ ಯೋಜನೆಯಡಿ ಆರಂಭಿಸಿರುವ ಉಚಿತ ಸಾರಿಗೆ ಸೇವೆಯನ್ನು ಬಳಸಿಕೊಂಡರು. ಮಹಿಳೆಯರ ಉಚಿತ ಬಸ್ ಪ್ರಯಾಣ ಯೋಜನೆ ಗೆ ಉತ್ತಮ ಪ್ರತಿಕ್ರಿಯೆ ಎಲ್ಲೆಡೆ ದೊರೆಯಿತು. ಮೊದಲ ದಿನವೇ ಮಹಿಳೆಯರಿಂದ ಬಸ್‌ಗಳು ರಶ್ ಆಗಿದ್ದು ಕಂಡು ಬಂದಿತು.
ಬೆಂಗಳೂರು: ಕರ್ನಾಟಕದ ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಮಹಿಳೆಯರು ಪ್ರಯಾಣಿಸುವ ಶಕ್ತಿ ಯೋಜನೆಗೆ ಭಾನುವಾರ ಚಾಲನೆ ದೊರೆತಿದೆ.
ಬೆಂಗಳೂರಿನ ವಿಧಾನ ಸೌಧದ ಎದುರು ನಡೆದ ಸಮಾರಂಭದಲ್ಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಶಾಸಕರು, ಅಧಿಕಾರಿಗಳ ಉಪಸ್ಥಿತಿಯಲ್ಲಿ ಗುರುತಿನ ಚೀಟಿ ನೀಡುವ ಮೂಲಕ ಚಾಲನೆ ನೀಡಲಾಯಿತು.
ಬೆಂಗಳೂರು ಮಾತ್ರವಲ್ಲದೇ ರಾಜ್ಯದ ಎಲ್ಲಾ ಜಿಲ್ಲೆ,ತಾಲ್ಲೂಕುಗಳಲ್ಲೂ ಸಂಭ್ರಮದ ನಡುವೆ ಮಹಿಳೆಯರು ಸಾರಿಗೆ ಸೇವೆಯನ್ನು ಬಳಸಿಕೊಂಡರು. ಮಹಿಳೆಯರ ಉಚಿತ ಬಸ್ ಪ್ರಯಾಣ ಯೋಜನೆ ಗೆ ಉತ್ತಮ ಪ್ರತಿಕ್ರಿಯೆ ಎಲ್ಲೆಡೆ ದೊರೆಯಿತು. ಮೊದಲ ದಿನವೇ ಮಹಿಳೆಯರಿಂದ ಬಸ್‌ಗಳು ರಶ್ ಆಗಿದ್ದು ಕಂಡು ಬಂದಿತು.
ಬಹುತೇಕ ಆಯಾ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಕಾರ್ಯಕ್ರಮಗಳು ಉಸ್ತುವಾರಿ ಸಚಿವರು ಹಾಗೂ ಶಾಸಕರ ನೇತೃತ್ವದಲ್ಲಿ ನಡೆದವು. ನಿಲ್ದಾಣಗಳಲ್ಲಿ ಬಸ್‌ಗಳನ್ನು ವಿಶೇಷವಾಗಿ ಸಿಂಗರಿಸಲಾಗಿತ್ತು. ಮುಂಭಾಗದಲ್ಲಿಯೇ ಮಹಿಳೆಯರಿಗೆ ಉಚಿತ ಟಿಕೆಟ್ ನೀಡಿ ಸ್ವಾಗತಿಸಲಾಯಿತು. ಮಹಿಳೆಯರಿಗೆ ಕೆಲವು ಕಡೆ ಹೂವು ನೀಡಿದರೆ, ಇನ್ನಷ್ಟು ಕಡೆ ಸಿಹಿಯನ್ನು ನೀಡಲಾಯಿತು.
ಕಾಂಗ್ರೆಸ್ ಪಕ್ಷವು ಚುನಾವಣೆಗೂ ಮುನ್ನ ಮಹಿಳೆಯರಿಗೆ ಉಚಿತ ಬಸ್ ಪಾಸ್ ಸೇರಿದಂತೆ ಐದು ಗ್ಯಾರಂಟಿಗಳನ್ನು ಘೋಷಿಸಿತ್ತು. ಕಳೆದ ತಿಂಗಳು ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ರಚನೆಯಾಗುತ್ತಿದ್ದಂತೆ ಗ್ಯಾರಂಟಿಗಳ ಅನುಷ್ಠಾನಕ್ಕೆ ಒತ್ತಡ ಶುರುವಾಗಿತ್ತು. ಈ ಹಿನ್ನೆಲೆಯಲ್ಲಿ ಕಳೆದ ವಾರವೇ ಅಧಿಕಾರಿಗಳ ಸಭೆ ನಡೆಸಿದ್ದ ಸಿದ್ದರಾಮಯ್ಯ ಐದೂ ಗ್ಯಾರಂಟಿಗಳ ಜಾರಿ ಮಾಡುವುದಾಗಿ ಪ್ರಕಟಿಸಿದ್ದರು. ಅದರಂತೆ ಮೊದಲನೇ ಘೋಷಣೆಯಾಗಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಕಾರ್ಯಕ್ರಮ ಭಾನುವಾರ ಆರಂಭಗೊಂಡಿದೆ.
ಸದ್ಯಕ್ಕೆ ಯಾವುದಾದರೂ ಒಂದು ಗುರುತಿನ ಚೀಟಿ ತೋರಿಸಿ ಮಹಿಳೆಯರು ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಕರ್ನಾಟಕದೊಳಗೆ ಉಚಿತವಾಗಿ ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ. ಮೂರು ತಿಂಗಳಲ್ಲಿ ಸಾರಿಗೆ ಸಂಸ್ಥೆಯಿಂದಲೇ ಗುರುತಿನ ಚೀಟಿಯನ್ನು ನೀಡಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಇದಕ್ಕಾಗಿ ಅರ್ಜಿಯನ್ನು ಸಲ್ಲಿಸಿ ಗುರುತಿನ ಚೀಟಿಯನ್ನು ಮಹಿಳೆಯರು ಪಡೆಯಲು ಅವಕಾಶವಿದೆ.
ಇದನ್ನು ಓದಿರಿ
ವಿಭಾಗ