logo
ಕನ್ನಡ ಸುದ್ದಿ  /  Latest News  /  Karnataka Kannada Live News Updates March 27 2023
ರಾಹುಲ್​ ಗಾಂಧಿ

March 27 Kannada News Updates: ಸರ್ಕಾರಿ ಬಂಗಲೆ ಖಾಲಿ ಮಾಡಲು ರಾಹುಲ್​ ಗಾಂಧಿಗೆ ನೋಟಿಸ್​

Mar 27, 2023 10:16 PM IST

ರಾಜ್ಯ, ದೇಶ ಹಾಗೂ ವಿದೇಶದ ಎಲ್ಲಾ ಬ್ರೇಕಿಂಗ್‌ ಸುದ್ದಿಗಳು ಇಲ್ಲಿ ಲಭ್ಯ. ಪ್ರತಿ ಕ್ಷಣದ ನಿಖರ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

Mar 27, 2023 10:16 PM IST

ಮಾಡಾಳ್ ವಿರೂಪಾಕ್ಷಪ್ಪ ಅರೆಸ್ಟ್

ಲಂಚ ಪ್ರಕರಣದ ಆರೋಪಿಯಾಗಿರುವ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಇಂದು ಸಂಜೆ ಬಂಧಿಸಿದ್ದಾರೆ.

Mar 27, 2023 09:58 PM IST

ರೇಸ್ ಕೋರ್ಸ್ ರಸ್ತೆಗೆ ರೆಬಲ್ ಸ್ಟಾರ್ ಹೆಸರು.. ಅಂಬರೀಶ್​ ಸ್ಮಾರಕವೂ ಲೋಕಾರ್ಪಣೆ

ಬಿಬಿಎಂಪಿ ವ್ಯಾಪ್ತಿಯ ಮೌರ್ಯ ವೃತ್ತದಿಂದ ಬಸವೇಶ್ವರ ವೃತ್ತದವರೆಗಿನ ರೇಸ್ ಕೋರ್ಸ್ ರಸ್ತೆಗೆ "ರೆಬಲ್ ಸ್ಟಾರ್ ಡಾ. ಎಂ.ಹೆಚ್. ಅಂಬರೀಶ್ ರಸ್ತೆ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಮಕರಣ ಮಾಡಿ, ನಾಮಫಲಕ ಅನಾವರಣಗೊಳಿಸಿದರು. ಬಳಿಕ ಕಂಠೀರವ ಸ್ಟುಡಿಯೋದಲ್ಲಿ ನಿರ್ಮಾಣವಾದ ಅಂಬರೀಶ್ ಸ್ಮಾರಕವನ್ನು ಕೂಡ ಸಿಎಂ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದರು.

Mar 27, 2023 09:58 PM IST

ಸರ್ಕಾರಿ ಬಂಗಲೆ ಖಾಲಿ ಮಾಡಲು ರಾಹುಲ್​ ಗಾಂಧಿಗೆ ನೋಟಿಸ್​

ಲೋಕಸಭಾ ಸಂಸದ ಸ್ಥಾನದಿಂದ ಅನರ್ಹಗೊಂಡ ಬೆನ್ನಲ್ಲೇ ಏಪ್ರಿಲ್​ 23ರ ಒಳಗೆ ಸರ್ಕಾರಿ ಬಂಗಲೆ ತೆರವು ಮಾಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಲೋಕಸಭೆ ಸಚಿವಾಲಯ ನೋಟಿಸ್ ನೀಡಿದೆ.

 

Mar 27, 2023 06:11 PM IST

ಬಿಜೆಪಿ ನಾಯಕ ಮಂಜುನಾಥ್ ಕುನ್ನೂರ ಕಾಂಗ್ರೆಸ್​ ಸೇರ್ಪಡೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಲಗೈ ಭಂಟನಂತೆ ಇದ್ದ ಶಿಗ್ಗಾಂವ್ ಕ್ಷೇತ್ರದ ಬಿಜೆಪಿ ನಾಯಕ, ಮಾಜಿ ಸಂಸದ ಹಾಗೂ ಮಾಜಿ ಶಾಸಕ ಮಂಜುನಾಥ್ ಕುನ್ನೂರ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದು, ಬಿಜೆಪಿಯ ಶೋಚನೀಯ ಸ್ಥಿತಿಗೆ ಇದು ಸಾಕ್ಷಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

Mar 27, 2023 05:03 PM IST

ಶಿಕಾರಿಪುರದ ಯಡಿಯೂರಪ್ಪ ನಿವಾಸದ ಮೇಲೆ ಕಲ್ಲೆಸೆತ

ಪರಿಶಿಷ್ಟ ಜಾತಿ (ಎಸ್‌ಸಿ)ಗಳ ಒಳಮೀಸಲಾತಿ ಕುರಿತ ಎಜೆ ಸದಾಶಿವ ಸಮಿತಿಯ ವರದಿಯನ್ನು ಜಾರಿಗೊಳಿಸಲು ಕೇಂದ್ರಕ್ಕೆ ಶಿಫಾರಸು ಮಾಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಬಂಜಾರ ಸಮುದಾಯದವರು ಇಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.

ಶಿಕಾರಿಪುರದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರ 'ಮೈತ್ರಿ' ನಿವಾಸದ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿ, ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಶಿಕಾರಿಪುರಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದು, ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಶಾಂತಿ ಕಾಪಾಡಲು ಶಿಕಾರಿಪುರ ಪಟ್ಟಣದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

Mar 27, 2023 03:12 PM IST

ರಾಜ್ಯಸಭಾ ಕಲಾಪ ನಾಳೆಗೆ ಮುಂದೂಡಿಕೆ

ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳು ಅದಾನಿ ವಿಚಾರದಲ್ಲಿ ಜೆಪಿಸಿ ತನಿಖೆಗೆ ಒತ್ತಾಯಿಸಿ ಗದ್ದಲ ಸೃಷ್ಟಿಯಾದ ಪರಿಣಾಮ ಕಲಾಪವನ್ನು ನಾಳೆ ಬೆಳಗ್ಗೆ 11 ಗಂಟೆಗೆ ಮುಂದೂಡಲಾಗಿದೆ. 

Mar 27, 2023 02:07 PM IST

ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಉದ್ಘಾಟನೆ

ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಉದ್ಘಾಟನೆ, ಬೃಹತ್ ಫಲಾನುಭವಿಗಳ ಸಮ್ಮೇಳನ, ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ಹಾಗೂ ನಂದಿ ಬೆಟ್ಟ ರೋಪ್ ವೇ ಗೆ ಶಂಕುಸ್ಥಾಪನೆ ನೆರವೇರಿಸಿದರು.

ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ. ಬಿ ನಾಗರಾಜ್, ಸಚಿವ ಆರ್. ಅಶೋಕ್, ಎಸ್.ಮುನಿಸ್ವಾಮಿ, ಶಾಸಕರಾದ ಕೃಷ್ಣಾರೆಡ್ಡಿ, ವೈ.ಎ. ನಾರಾಯಣ ಸ್ವಾಮಿ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ: ಎಂ.ಕೆ.ರಮೇಶ್ ಮೊದಲಾದವರು ಉಪಸ್ಥಿತರಿದ್ದರು.

ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಉದ್ಘಾಟನೆ
ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಉದ್ಘಾಟನೆ

Mar 27, 2023 12:18 PM IST

ರಾಹುಲ್‌ ಪದಚ್ಯುತಿ, ಅದಾನಿ ವಿಷಯ: ಕಾಂಗ್ರೆಸ್‌ ಮುಖಂಡರಿಂದ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ

- ರಾಹುಲ್ ಗಾಂಧಿಯನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವ ವಿಷಯ ಮತ್ತು ಅದಾನಿ ಗ್ರೂಪ್‌ ವಿಷಯಗಳನ್ನು ಇಟ್ಟುಕೊಂಡು ಇಂದು ಕಾಂಗ್ರೆಸ್ ಸಂಸದರು ಸಂಸತ್​ನಲ್ಲಿ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದ್ದಾರೆ.

- ಇದಾದ ಬಳಿಕ ದೆಹಲಿಯ ಸಂಸತ್‌ ಸಂಕೀರ್ಣದಿಂದ ವಿಜಯ ಚೌಕ್‌ವರೆಗೆ ಕಪ್ಪು ಬಟ್ಟೆ ಧರಿಸಿ ಘೋಷಣೆಗಳನ್ನು ಕೂಗುತ್ತ ಸಾಗಿದ್ದಾರೆ.

- ಸಂಜೆ 4 ಗಂಟೆವರೆಗೆ ಲೋಕಸಭಾ ಕಲಾಪವನ್ನು ಮುಂದೂಡಲಾಗಿದೆ.

- ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿಯವರು ಕಪ್ಪು ಶಾಲು ಹಾಕಿಕೊಂಡರೆ, ಖರ್ಗೆ ಮತ್ತಿತ್ತರು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದ್ದಾರೆ.

ಕಾಂಗ್ರೆಸ್‌ ಮುಖಂಡರಿಂದ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ
ಕಾಂಗ್ರೆಸ್‌ ಮುಖಂಡರಿಂದ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ (PTI)

Mar 27, 2023 11:24 AM IST

ರಾಜೀನಾಮೆ ನೀಡಿದ ಗುಬ್ಬಿ ಜೆಡಿಎಸ್‌ ಶಾಸಕ ಎಸ್‌.ಆರ್‌.ಶ್ರೀನಿವಾಸ್‌, ಕಾಂಗ್ರೆಸ್‌ ಸೇರುವ ಸಾಧ್ಯತೆ

  • ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಶಾಸಕ ಎಸ್‌.ಆರ್‌.ಶ್ರೀನಿವಾಸ್‌ (ವಾಸು) ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
  • ರಾಜೀನಾಮೆ ನೀಡುತ್ತಿರುವ ಕುರಿತು ಇವರು ವಿಧಾನಸಭೆ ಸಬಾಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.
  • ಜೆಡಿಎಸ್‌ ತೊರೆದ ಇವರು ಕಾಂಗ್ರೆಸ್‌ ಸೇರಲಿದ್ದಾರೆ ಎನ್ನಲಾಗಿದೆ.
  • ಇವರು ಒಟ್ಟು ನಾಲ್ಕು ಬಾರಿ ಶಾಸಕರಾಗಿದ್ದರು.
  • ಪಕ್ಷೇತರರಾಗಿ ವಿಧಾನಸಭೆ ಪ್ರವೇಶಿಸಿದ ಇವರು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾಗಿದ್ದರು.

ಎಸ್‌.ಆರ್‌.ಶ್ರೀನಿವಾಸ್‌
ಎಸ್‌.ಆರ್‌.ಶ್ರೀನಿವಾಸ್‌

Mar 27, 2023 10:01 AM IST

ರಾಜ್ಯದಲ್ಲಿ ಸ್ಟೇಟ್‌ ಸಿಲೇಬಸ್‌ನ 5 ಮತ್ತು 8ನೇ ತರಗತಿ ಬೋರ್ಡ್‌ ಪರೀಕ್ಷೆ ಇಂದಿನಿಂದ ಆರಂಭ

  • ಕರ್ನಾಟಕ ರಾಜ್ಯ ಪಠ್ಯಕ್ರಮ ಅನುಸರಿಸುವ ಶಾಲೆಗಳಲ್ಲಿ ಇಂದಿನಿಂದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆಗಳು ನಡೆಯಲಿವೆ.
  • ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳ 5, 8ನೇ ತರಗತಿ ಮಕ್ಕಳಿಗೆ ಪರೀಕ್ಷೆ ಆರಂಭವಾಗಿದೆ.
  • ಇದೇ ಸಂದರ್ಭದಲ್ಲಿ ಈ ಪರೀಕ್ಷೆ ನಡೆಸುವ ಕುರಿತ ಅರ್ಜಿಗಳಿಗೆ ಸಂಬಂಧಪಟ್ಟಂತೆ ಇಂದು ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.

ಪರೀಕ್ಷೆಗೆ ಹೊರಟ ಮಕ್ಕಳು (ಸಾಂಕೇತಿಕ ಚಿತ್ರ)
ಪರೀಕ್ಷೆಗೆ ಹೊರಟ ಮಕ್ಕಳು (ಸಾಂಕೇತಿಕ ಚಿತ್ರ) (HT_PRINT/ Keshav Singh)

Mar 27, 2023 09:57 AM IST

ಮುಂಬೈ ಇಂಡಿಯನ್ಸ್ ಡಬ್ಲ್ಯೂಪಿಎಲ್ ಚಾಂಪಿಯನ್; ಹರ್ಮನ್ ಪಡೆಯ ಸಂಭ್ರಮಾಚರಣೆ

ಚೊಚ್ಚಲ ಆವೃತ್ತಿಯ ವಿಮೆನ್ಸ್‌ ಪ್ರೀಮಿಯರ್‌ ಲೀಗ್‌ (WPL 2023)ನಲ್ಲಿ ಮುಂಬೈ ಇಂಡಿಯನ್ಸ್ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿ, ಉದ್ಘಾಟನಾ ಆವೃತ್ತಿಯ ಪ್ರಶಸ್ತಿಯನ್ನು ಗೆದ್ದುಕೊಂಡಿತು.  ತಂಡದ ಸಂಭ್ರಮಾಚರಣೆಯ ಚಿತ್ರಗಳನ್ನು ನೋಡಿ

Mar 27, 2023 09:56 AM IST

ಕಿತ್ತೂರು ಕರ್ನಾಟಕದ ಜಿಲ್ಲೆಗಳಲ್ಲಿ ಕಾಂಗ್ರೆಸ್‌ಗೆ 40 ಸೀಟು ಗುರಿ

ಕಿತ್ತೂರು ಕರ್ನಾಟಕದಲ್ಲಿ ಮತ್ತೆ ಪ್ರಾಬಲ್ಯ ಸಾಧಿಸುವ ಕನಸಿನಲ್ಲಿ ಕಾಂಗ್ರೆಸ್‌ ಇದ್ದು, "ಐದು ಜಿಲ್ಲೆಗಳಲ್ಲಿ ಕನಿಷ್ಠ 40 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದ್ದೇವೆ" ಎಂದು ಕಾಂಗ್ರೆಸ್‌ ಪಕ್ಷದ ಮುಖಂಡರು ತಿಳಿಸಿದ್ದಾರೆ. ಕರ್ನಾಟಕದ ಗಡಿ ಜಿಲ್ಲೆಯಾದ ಬೆಳಗಾವಿಯು ಕಾಂಗ್ರೆಸ್‌ನ ಭದ್ರಕೋಟೆಯೆಂದು ಪರಿಗಣಿಸಲಾಗಿದ್ದು, ಅಲ್ಲಿ 70 ಮತ್ತು 80ರ ದಶಕಗಳಲ್ಲಿ ಪಕ್ಷವು ಎಲ್ಲಾ 18 ಸೀಟುಗಳಲ್ಲಿ ಗೆಲುವು ಪಡೆಯುತ್ತಿತ್ತು. ಇದೀಗ ಅಲ್ಲಿ ಕನಿಷ್ಠ 12 ಸೀಟುಗಳನ್ನು ಗೆಲ್ಲುವ ಗುರಿಯನ್ನು ಕಾಂಗ್ರೆಸ್‌ ಹೊಂದಿದೆ. ಈ ಕುರಿತ ವರದಿ ಇಲ್ಲಿದೆ.

Mar 27, 2023 10:46 AM IST

ಜೆಡಿಎಸ್ ಉಚ್ಛಾಟಿತ ಶಾಸಕ ಗುಬ್ಬಿ ಶಾಸಕ ಇಂದು ರಾಜೀನಾಮೆ

  • ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌. ಆರ್‌. ಶ್ರೀನಿವಾಸ್‌ ಅವರು ಮಾರ್ಚ್‌ 27ರ ಸೋಮವಾರದಂದು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
  • ಸೋಮವಾರ ಬೆಂಗಳೂರಿಗೆ ತೆರಳಿ ಸ್ಪೀಕರ್‌ಗೆ ರಾಜಿನಾಮ ಪತ್ರವನ್ನು ಸಲ್ಲಿಸುವ ಸೂಚನೆಯಿದೆ.
  • ಇವರು ಗುಬ್ಬಿ ಕ್ಷೇತ್ರದಿಂದಲೇ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.

ಜೆಡಿಎಸ್‌ಗೆ ಗುಬ್ಬಿ ಶಾಸಕ ರಾಜೀನಾಮೆ
ಜೆಡಿಎಸ್‌ಗೆ ಗುಬ್ಬಿ ಶಾಸಕ ರಾಜೀನಾಮೆ

Mar 27, 2023 07:17 AM IST

ವಿಮೆನ್ಸ್ ಪ್ರೀಮಿಯರ್ ಲೀಗ್ ಟ್ರೋಫಿ ಗೆದ್ದ ಮುಂಬೈ ಇಂಡಿಯನ್ಸ್

ಮುಂಬೈ ಇಂಡಿಯನ್ಸ್‌ (Mumbai Indians) ತಂಡವು ಚೊಚ್ಚಲ ವಿಮೆನ್ಸ್‌ ಪ್ರೀಮಿಯರ್‌ ಲೀಗ್‌ (Women's premier league) ಆವೃತ್ತಿಯಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧದ ಫೈನಲ್‌ ಪಂದ್ಯದಲ್ಲಿ 7 ವಿಕೆಟ್‌ಗಳ ಅಂತರದಿಂದ ಭರ್ಜರಿಯಾಗಿ ಗೆದ್ದ ಹರ್ಮನ್‌ ಪ್ರೀತ್‌ ಕೌರ್‌ ಪಡೆಯು, ಡಬ್ಲ್ಯೂಪಿಎಲ್‌ ಟ್ರೋಫಿ ಎತ್ತಿ ಹಿಡಿದಿದೆ.  ಈ ವರದಿ ಓದಿ

Mar 27, 2023 07:16 AM IST

ಇಂದು ವಿಶ್ವರಂಗ ಭೂಮಿ ದಿನ, ನಾಟಕ ಪ್ರಿಯರಿಗೆ ಸಂಭ್ರಮ

  • ಮಾರ್ಚ್‌ 27 ವಿಶ್ವರಂಗ ಭೂಮಿ ದಿನವಾಗಿದೆ.
  • ಕರ್ನಾಟಕ ಸೇರಿದಂತೆ ವಿಶ್ವದ್ಯಾಂತ ಹಲವು ನಾಟಕಗಳು ಇಂದು ಪ್ರದರ್ಶನಗೊಳ್ಳಲಿವೆ.
  • ಮೈಸೂರಿನ ರಂಗಾಯಣದ ಕಿರುರಂಗಮಂದಿರದಲ್ಲಿ ಮಾರ್ಚ್‌ 22ರಿಂದ ಮಾರ್ಚ್‌ 27ರವರೆಗೆ ಮೈಸೂರು ರಂಗಹಬ್ಬ ನಡೆಯುತ್ತಿದೆ. ನಿನ್ನೆ ರಂಗಭೂಮಿ- ಇಂದು ನಾಳೆ ವಿಷಯದ ಕುರಿತು ವಿಚಾರ ಸಂಕಿರಣ ನಡೆದಿತ್ತು.
  • ಕಲಬುರಗಿ ರಂಗಾಯಣ ವತಿಯಿಂದ ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ಡಾ.ಎಸ್.ಜಿ. ನಾಗಲೋಟಿಮಠ ಆತ್ಮಕಥೆ ಆಧಾರಿತ ಬಿಚ್ಚಿದ ಜೋಳಿಗೆ ನಾಟಕ ಪ್ರದರ್ಶನ ಹಾಗೂ ರಂಗ ಗೌರವ ಕಾರ್ಯಕ್ರಮವನ್ನು ಇದೇ ಮಾರ್ಚ್ 27 ರಂದು ಸಂಜೆ 5.30 ಗಂಟೆಗೆ ಕಲಬುರಗಿ ರಂಗಾಯಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ರಂಗಾಯಣ ಉಪನಿರ್ದೇಶಕರು ತಿಳಿಸಿದ್ದಾರೆ.

Theatre artistes performing during a play in Ludhiana. (HT photo)
Theatre artistes performing during a play in Ludhiana. (HT photo) (HT_PRINT)

Mar 27, 2023 07:12 AM IST

ಮಲಯಾಳಂ ಖ್ಯಾತ ಹಾಸ್ಯನಟ ಇನ್ನೊಸೆಂಟ್‌ ನಿಧನ

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಲಯಾಳಂನ ಖ್ಯಾತ ನಟ ಇನ್ನೊಸೆಂಟ್‌ ಭಾನುವಾರ ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇನ್ನೊಸೆಂಟ್‌ಗೆ 75 ವರ್ಷ ವಯಸ್ಸಾಗಿತ್ತು. ಹೆಚ್ಚಿನ ವಿವರ

ಮಾಜಿ ಸಂಸದ, ಮಲಯಾಳಂ ಖ್ಯಾತ ಹಾಸ್ಯನಟ ಇನ್ನೊಸೆಂಟ್‌
ಮಾಜಿ ಸಂಸದ, ಮಲಯಾಳಂ ಖ್ಯಾತ ಹಾಸ್ಯನಟ ಇನ್ನೊಸೆಂಟ್‌

Mar 27, 2023 07:11 AM IST

ಸಕ್ರಿಯ ರಾಜಕಾರಣಕ್ಕೆ ಸುಷ್ಮಾ ಸ್ವರಾಜ್‌ ಪುತ್ರಿ ಪ್ರವೇಶ

ದಿವಂಗತ ಸುಷ್ಮಾ ಸ್ವರಾಜ್ ಅವರ ಮಗಳು ಅವರ ಪುತ್ರಿ ಬನ್ಸುರಿ ಸ್ವರಾಜ್ ಅವರು ದೆಹಲಿ ಬಿಜೆಪಿಯ ಕಾನೂನು ಘಟಕದ ಸಹ ಸಂಚಾಲಕರಾಗಿ ನೇಮಕಗೊಂಡಿದ್ದು, ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸಿದ್ದಾರೆ.

ಸಕ್ರಿಯ ರಾಜಕಾರಣಕ್ಕೆ ಸುಷ್ಮಾ ಸ್ವರಾಜ್‌ ಪುತ್ರಿ ಪ್ರವೇಶ
ಸಕ್ರಿಯ ರಾಜಕಾರಣಕ್ಕೆ ಸುಷ್ಮಾ ಸ್ವರಾಜ್‌ ಪುತ್ರಿ ಪ್ರವೇಶ

Mar 27, 2023 07:10 AM IST

ಬ್ಯಾಲಿಸ್ಟಿಕ್‌ ಕ್ಷಿಪಣಿ ಉಡಾವಣೆ ಮಾಡಿದ ಉತ್ತರ ಕೊರಿಯಾ

ಉತ್ತರ ಕೊರಿಯಾವು ಶಂಕಿತ ಬ್ಯಾಲಿಸ್ಟಿಕ್‌ ಕ್ಷಿಪಣಿಯನ್ನು ಪರೀಕ್ಷಿಸಿದೆ. ಮಾರ್ಚ್ 27 ರಂದು ಕೊರಿಯನ್ ಪರ್ಯಾಯ ದ್ವೀಪದ ಪೂರ್ವಕ್ಕೆ ಕ್ಷಿಪಣಿಯನ್ನು ಉಡಾಯಿಸಲಾಗಿದೆ ಎಂದು ದಕ್ಷಿಣ ಕೊರಿಯಾದ ರಕ್ಷಣಾ ಪಡೆ ತಿಳಿಸಿದೆ. ಜಪಾನ್‌ನ ಕರಾವಳಿ ಪಡೆಯೂ ಕ್ಷಿಪಣಿ ಉಡಾವಣೆಯನ್ನು ಖಚಿತಪಡಿಸಿದೆ. ಆದರೆ, ಹೆಚ್ಚಿನ ವಿವರ ಲಭ್ಯವಿಲ್ಲ.

North Korea: ವಿನಾಶಕಾರಿ ಬ್ಯಾಲಿಸ್ಟಿಕ್‌ ಕ್ಷಿಪಣಿ ಉಡಾವಣೆ ಮಾಡಿದ ಉತ್ತರ ಕೊರಿಯಾ
North Korea: ವಿನಾಶಕಾರಿ ಬ್ಯಾಲಿಸ್ಟಿಕ್‌ ಕ್ಷಿಪಣಿ ಉಡಾವಣೆ ಮಾಡಿದ ಉತ್ತರ ಕೊರಿಯಾ (AFP)

    ಹಂಚಿಕೊಳ್ಳಲು ಲೇಖನಗಳು