logo
ಕನ್ನಡ ಸುದ್ದಿ  /  latest news  /  Nia Raid Dakshin Kannada: ದಕ್ಷಿಣ ಕನ್ನಡದ 16 ಕ್ಕೂ ಅಧಿಕ ಕಡೆ ಎನ್ಐಎ ದಾಳಿ

NIA Raid Dakshin Kannada: ದಕ್ಷಿಣ ಕನ್ನಡದ 16 ಕ್ಕೂ ಅಧಿಕ ಕಡೆ ಎನ್ಐಎ ದಾಳಿ

HT Kannada Desk HT Kannada

May 31, 2023 10:57 AM IST

google News

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎನ್‌ಐಎ ತಂಡದ ದಾಳಿ.

    • ದಕ್ಷಿಣ ಕನ್ನಡದ ಬಂಟ್ವಾಳ, ಬೆಳ್ತಂಗಡಿ, ವೇಣೂರು, ಉಪ್ಪಿನಂಗಡಿ ಸೇರಿದಂತೆ 16 ಕ್ಕೂ ಅಧಿಕ ಕಡೆ ಎನ್ಐಎ ದಾಳಿ. ಮನೆ, ಕಚೇರಿ, ಆಸ್ಪತ್ರೆಯಲ್ಲೂ ಶೋಧ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎನ್‌ಐಎ ತಂಡದ ದಾಳಿ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎನ್‌ಐಎ ತಂಡದ ದಾಳಿ.

ಮಂಗಳೂರು: ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದಲ್ಲಿ ವಿಧ್ದಂಸಕ ಕೃತ್ಯ ಎಸಗಲು ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಬೆಳ್ಳಂಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ( ಎನ್‌ಐಎ) ದಾಳಿ ನಡೆಸಿದೆ. 16ಕ್ಕೂ ಹೆಚ್ಚು ದಾಳಿ ನಡೆಸಿರುವ ತಂಡ ಕೂರ್ನಡ್ಕ, ತಾರಿಪಡ್ಪು, ಕುಂಬ್ರದ ಭಾಗದ ನಾಲ್ವರನ್ನು ವಶಕ್ಕೆ ಪಡೆದಿದೆ.

ಭಯೋತ್ಪಾದಕ ಕೃತ್ಯಕ್ಕೆ ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ ಬಳಕೆ ಆರೋಪದಲ್ಲಿ ದಾಳಿ ಮಾಡಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಸ್ಥಳೀಯ ಪೊಲೀಸ್ ಆಧಿಕಾರಿಗಳ ನೆರವು ಪಡೆದ ಎನ್‌ಐಎ ಅಧಿಕಾರಿಗಳಿ ಬೆಳ್ತಂಗಡಿ, ಪುತ್ತೂರು, ಬಂಟ್ವಾಳ ತಾಲೂಕಿನ 16 ಕಡೆ ಕಾರ್ಯಾಚರಣೆ ನಡೆಸಿದ್ದಾರೆ.

ಇತ್ತೀಚೆಗೆ ದಾಳಿ ಬಂಟ್ವಾಳ ಮತ್ತು ಪುತ್ತೂರಿನಲ್ಲಿ ದಾಳಿ ನಡೆಸಿದ್ದ ಎನ್‌ಐಎ ಅಧಿಕಾರಿಗಳಿಗೆ ಡಿಜಿಟಲ್ ಸಾಕ್ಷ್ಯಗಳು ಮತ್ತು ಕೋಟ್ಯಂತರ ರೂ. ವಹಿವಾಟು ನಡೆಸಿದ್ದು ಪತ್ತೆಯಾಗಿದ್ದವು. ಬಂಟ್ವಾಳ ನಿವಾಸಿ ಮಹಮ್ಮದ್ ಸಿನಾನ್, ಸಜಿಪ ಮೂಡದ ಸರ್ಫ್ರಾಜ್ ನವಾಜ್, ಇಕ್ಬಾಲ್, ಪುತ್ತೂರಿನ ಅಬ್ದುಲ್ ರಫೀಕ್ ಎಂಬುವವರನ್ನು ಬಂಧಿಸಿದ್ದರು. ಅಲ್ಲದೇ ಕೇರಳದ ಕಾಸರಗೋಡಿನ ಕುಂಜತ್ತೂರು ನಿವಾಸಿ ಅಬೀದ್ ಕೆ.ಎಂ. ಎಂಬಾತನನ್ನು ಬಂಧಿಸಲಾಗಿತ್ತು . ಅವರು ನೀಡಿದ ಮಾಹಿತಿ ಆಧರಿಸಿ ತನಿಖೆ ಮುಂದುವರೆಸಲಾಗಿತ್ತು.

ಭಾರತದಲ್ಲಿ ಭಯೋತ್ಪಾದನೆಗೆ ಆರ್ಥಿಕ ನೆರವು ನೀಡುತ್ತಿದ್ದ ಹವಾಲಾ ಸಂಪರ್ಕ ಜಾಲ ಇರುವ ಮಾಹಿತಿ ಆಧರಿಸಿ ಎನ್‌ಐಇ ತಂಡ ಜಾಲ ಬೆನ್ನು ಹತ್ತಿದೆ. ಅದರಲ್ಲೂ ಬಿಹಾರದ ಪಾಟ್ನಾದಲ್ಲಿ 2022ರ ಜುಲೈ ತಿಂಗಳಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ಈ ಹಣ ಬಳಕೆ ಮಾಡಲಾಗುತ್ತಿದೆ ಎನ್ನುವುದು ತನಿಖೆಯಿಂದ ಗೊತ್ತಾಗಿದೆ. ಈ ಕಾರಣದಿಂದ ದಾಳಿ ನಡೆಸಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ