logo
ಕನ್ನಡ ಸುದ್ದಿ  /  ಜೀವನಶೈಲಿ  /  ಪ್ರಧಾನಿ ನರೇಂದ್ರ ಮೋದಿ ಇಂದು ಪರೀಕ್ಷಾ ಪೇ ಚರ್ಚಾ; ಲೈವ್ ಸ್ಟ್ರೀಮ್ ಸೇರಿ ಪ್ರಮುಖ ಮಾಹಿತಿ ಇಲ್ಲಿದೆ

ಪ್ರಧಾನಿ ನರೇಂದ್ರ ಮೋದಿ ಇಂದು ಪರೀಕ್ಷಾ ಪೇ ಚರ್ಚಾ; ಲೈವ್ ಸ್ಟ್ರೀಮ್ ಸೇರಿ ಪ್ರಮುಖ ಮಾಹಿತಿ ಇಲ್ಲಿದೆ

Raghavendra M Y HT Kannada

Jan 29, 2024 12:07 PM IST

google News

ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 29 ರಂದು ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆಯ ಬಗ್ಗೆ ಟಿಪ್ಸ್ ನೀಡಲಿದ್ದಾರೆ.

  • ಪ್ರಧಾನಿ ಮೋದಿ ಅವರ ಪರೀಕ್ಷೆ ಪೇ ಚರ್ಚಾದಲ್ಲಿ ಭಾಗವಹಿಸಲು 2 ಕೋಟಿಗೂ ಅಧಿಕ ವಿದ್ಯಾರ್ಥಿಗಳು, 14.93 ಲಕ್ಷ ಶಿಕ್ಷಕರು ಹಾಗೂ 5.69 ಲಕ್ಷ ಪೋಷಕರು ನೋಂದಣಿ ಮಾಡಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 29 ರಂದು ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆಯ ಬಗ್ಗೆ ಟಿಪ್ಸ್ ನೀಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 29 ರಂದು ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆಯ ಬಗ್ಗೆ ಟಿಪ್ಸ್ ನೀಡಲಿದ್ದಾರೆ.

ದೆಹಲಿ: ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳಲ್ಲಿ ಉಂಟಾಗರುವ ಆತಂಕ ಹಾಗೂ ಭಯವನ್ನು ದೂರ ಮಾಡಿ ಧೈರ್ಯದಿಂದ ಪರೀಕ್ಷೆಯನ್ನು ಎದುರಿಸುವಂತೆ ಮಾಡುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿವರು ನಡೆಸುವ ‘ಪರೀಕ್ಷಾ ಪೇ ಚರ್ಚಾ’ ವಿದ್ಯಾರ್ಥಿಗಳೊಂದಿಗಳೊಂದಿಗೆ ಸಂವಾದ ಕಾರ್ಯಕ್ರಮ ಇಂದು (ಜನವರಿ 29, ಸೋಮವಾರ) ಬೆಳಗ್ಗೆ 11 ಗಂಟೆಗೆ ಪ್ರಸಾರವಾಗಲಿದೆ.

ಮೈಗೌ (MyGov) ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಮಾಹಿತಿ ಪ್ರಕಾರ, 2,50,62,000 ಲಭಕ್ಕೂ ಹೆಚ್ಚು ವಿದ್ಯಾರ್ಥಿಗಳು, 1 14.93 ಲಕ್ಷಕ್ಕೂ ಹೆಚ್ಚು ಶಿಕ್ಷಕರು ಹಾಗೂ 5.69 ಲಕ್ಷಕ್ಕೂ ಹೆಚ್ಚು ಪೋಷಕರು ಪಿಪಿಸಿ-2024ಗೆ ನೋಂದಣಿ ಮಾಡಿಕೊಂಡಿದ್ದಾರೆ.

ದೆಹಲಿಯ ಭಾರತ್ ಮಂಟಪಂನಲ್ಲಿ ಪರೀಕ್ಷಾ ಪೇ ಚರ್ಚಾ ನಡೆಯಲಿದ್ದು, ಸುಮಾರು 4,000 ಮಂದಿ ದೈಹಿಕವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಕಾರ್ಯಕ್ರಮದ ನೇರ ಪ್ರಸಾರವು ಪ್ರಧಾನಿ ಕಚೇರಿ, ಪಿಐಬಿ, ಶಿಕ್ಷಣ ಸಚಿವಾಲಯದ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಲಭ್ಯವಿರುತ್ತದೆ.

ಪರೀಕ್ಷೆಯ ಒತ್ತಡವನ್ನು ನಿವಾರಿಸುವ ಮಾರ್ಗಗಳ ಬಗ್ಗೆ ಸಾಮೂಹಿಕವಾಗಿ ಕಾರ್ಯತಂತ್ರ ರೂಪಿಸಲು ಎಕ್ಸಾಂ ವಾರಿಯರ್ಸ್ ಅತ್ಯಂತ ಸ್ಮರಣೀಯ ಸಭೆಯಾಗಿರುವ 'ಪರೀಕ್ಷಾ ಪೇ ಚರ್ಚಾ'ವನ್ನು ನಾನು ಕುತೂಹಲದಿಂದ ಎದುರು ನೋಡುತ್ತಿದ್ದೇನೆ. ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಅವಕಾಶಗಳ ಕಿಟಕಿಯಾಗಿ ಪರಿವರ್ತಿಸೋಣ" ಎಂದು ಪಿಎಂ ಮೋದಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು.

ದೇಶದಲ್ಲಿ ಬೋರ್ಡ್ ಪರೀಕ್ಷೆಗಳ ಆರಂಭಕ್ಕೂ ಮುನ್ನವೇ ಪ್ರಧಾನಿ ಮೋದಿ ಅವರು ಮಹತ್ವಕಾಂಕ್ಷೆಯ ಪರೀಕ್ಷಾ ಪೇ ಚರ್ಚಾ ಈ ವರ್ಷದ ಮೊದಲ ಕಾರ್ಯಕ್ರಮವಾಗಿದೆ. ಶಾಲಾ ವಿದ್ಯಾರ್ಥಿಗಳೊಂದಿಗೆ ನಮೋ ಸಂವಹನ ನಡೆಸುತ್ತಾರೆ, ಅವರ ಪ್ರಶ್ನೆಗಳಿಗೆ ಉತ್ತರಿಸುತ್ತಾರೆ ಜೊತೆಗೆ ಪರೀಕ್ಷೆಗಳು ಮತ್ತು ವೃತ್ತಿಜೀವನದ ಅಭಿವೃದ್ಧಿಯ ಬಗ್ಗೆ ಒಂದಷ್ಟು ಸಲಹೆಗಳನ್ನು ನೀಡಲಿದ್ದಾರೆ. (This copy first appeared in Hindustan Times Kannada website. To read more like this please logon to kannada.hindustantime.com).

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ