logo
ಕನ್ನಡ ಸುದ್ದಿ  /  ಜೀವನಶೈಲಿ  /  ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 3000 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಕಡೆಯ ದಿನಾಂಕ ಸೇರಿ ಪೂರ್ಣ ವಿವರ ಇಲ್ಲಿದೆ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 3000 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಕಡೆಯ ದಿನಾಂಕ ಸೇರಿ ಪೂರ್ಣ ವಿವರ ಇಲ್ಲಿದೆ

Raghavendra M Y HT Kannada

Feb 23, 2024 08:50 AM IST

google News

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 3000 ಅಪ್ರೆಂಟಿಸ್‌ಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ

  • Central Bank of India Recruitment: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 3000 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಗೆ ಮಾರ್ಚ್ 6 ಕೊನೆಯ ದಿನಾಂಕವಾಗಿದೆ. ಇತರೆ ಮಾಹಿತಿ ಇಲ್ಲಿದೆ.

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 3000 ಅಪ್ರೆಂಟಿಸ್‌ಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 3000 ಅಪ್ರೆಂಟಿಸ್‌ಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ

Central Bank of India Recruitment 2024: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 3000 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಫೆಬ್ರವರಿ 22 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 6 ಕೊನೆಯ ದಿನವಾಗಿದೆ. ಬ್ಯಾಂಕಿನಲ್ಲಿ ಅಪ್ರೆಂಟಿಸ್‌ ಹುದ್ದೆಗೆ ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು www.nats.education.gov.in ಅಪ್ರೆಂಟಿಸ್‌ಶಿಪ್‌ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕು.

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2024: 3000 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2024 ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅಭ್ಯರ್ಥಿಗಳು 2021ರ ಮಾರ್ಚ್ 31 ರ ನಂತರ ಪದವಿಗೆ ಉತ್ತೀರ್ಣ ಪ್ರಮಾಣಪತ್ರವನ್ನು ಹೊಂದಿರಬೇಕು.

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2024: ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 400 ರೂಪಾಯಿ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಎಲ್ಲಾ ಮಹಿಳಾ ಅಭ್ಯರ್ಥಿಗಳು/ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 600 ರೂಪಾಯಿ ಅರ್ಜಿ ಶುಲ್ಕ ಹಾಗೂ ಇತರೆ ಅಭ್ಯರ್ಥಿಗಳಿಗೆ 800 ರೂಪಾಯಿ ಇದೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು www.nats.education.gov.in ನಲ್ಲಿ ಅಪ್ರೆಂಟಿಸ್ಶಿಪ್ ಪೋರ್ಟಲ್‌ಗೆ ಭೇಟಿ ನೀಡುವ ಮೂಲಕ "ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದೊಂದಿಗೆ ಅಪ್ರೆಂಟಿಸ್ಶಿಪ್" ಗಾಗಿ ಆನ್‌ಲೈನ್ ಅರ್ಜಿಯನ್ನು ಸಲ್ಲಿಸಬೇಕು. ಅಭ್ಯರ್ಥಿಯು ಮೊದಲು ಅಪ್ರೆಂಟಿಸ್ಶಿಪ್ ಪೋರ್ಟಲ್‌ ಲಾಗಿನ್ ಆಗಬೇಕು, "ಜಾಹೀರಾತು ಮಾಡಿದ ಖಾಲಿ ಹುದ್ದೆಯ ವಿರುದ್ಧ ಅರ್ಜಿ ಸಲ್ಲಿಸಿ" ಪ್ರದೇಶಕ್ಕೆ ನ್ಯಾವಿಗೇಟ್ ಮಾಡಬೇಕು, "ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದೊಂದಿಗೆ ಅಪ್ರೆಂಟಿಸ್ಶಿಪ್" ಎಂದು ಹುಡುಕಬೇಕು ಮತ್ತು ನಂತರ ಆಕ್ಷನ್ ಕಾಲಮ್‌ನಲ್ಲಿ ಲಭ್ಯವಿರುವ "ಅಪ್ಲೇ" ಬಟನ್ ಅನ್ನು ಆಯ್ಕೆ ಮಾಡಬೇಕು.

ಶೀಘ್ರದಲ್ಲೇ 1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ - ಕೃಷ್ಣಬೈರೇಗೌಡ

ಕಂದಾಯ ಇಲಾಖೆಯ ಕೆಲಸವನ್ನು ಮತ್ತಷ್ಟು ಚುರುಕುಗೊಳಿಸಲು ಹಾಗೂ ಜನರಿಗೆ ಸರಳ ಆಡಳಿತ ನೀಡುವ ಉದ್ದೇಶದಿಂದ ಶೀಘ್ರದಲ್ಲೇ 1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದರು.

ತಾಲೂಕುಗಳಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಸೇರಿದಂತೆ ಕಂದಾಯ ಇಲಾಖೆಯ ವಿವಿಧ ಹಂತದ ನೌಕರರನ್ನು ಬೇರೆಡೆ ನಿಯೋಜನೆಗೊಳಿಸಲಾಗುತ್ತಿದೆ. ಉದ್ಯೋಗಿಗಳ ಕೊರತೆಯಿಂದಾಗಿ ಕಂದಾಯ ಇಲಾಖೆಯಲ್ಲಿ ಜನರಿಗೆ ಸರಿಯಾದ ಸಮಯಕ್ಕೆ ಕೆಲಸವಾಗುತ್ತಿಲ್ಲ ಎಂದು ಸೋಮವಾರ (ಫೆಬ್ರವರಿ 19) ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೂಡ್ಲಿ ಅವರು ಪ್ರಶ್ನಿಸಿದ್ದರು. ಇದಕ್ಕೆ ಉತ್ತರವಾಗಿ ಸಚಿವರು 1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಬಗ್ಗೆ ಮಾಹಿತಿ ನೀಡಿದ್ದಾರೆ.

(This copy first appeared in Hindustan Times Kannada website. To read more like this please logon to kannada.hindustantimes.com )

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ