logo
ಕನ್ನಡ ಸುದ್ದಿ  /  ಜೀವನಶೈಲಿ  /  ಆರ್‌ಆರ್‌ಬಿಯಿಂದ 9144 ಟೆಕ್ನಿಷಿಯನ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಲಿಂಕ್, ಸಂಪೂರ್ಣ ವಿವರ ಇಲ್ಲಿದೆ -Rrb Technician Recruitment 2024

ಆರ್‌ಆರ್‌ಬಿಯಿಂದ 9144 ಟೆಕ್ನಿಷಿಯನ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಲಿಂಕ್, ಸಂಪೂರ್ಣ ವಿವರ ಇಲ್ಲಿದೆ -RRB Technician Recruitment 2024

Raghavendra M Y HT Kannada

Mar 10, 2024 08:51 PM IST

google News

ಮಾರ್ಚ್ 10 ರಿಂದ 9144 ಟೆಕ್ನಿಷಿಯನ್ ಹುದ್ದೆಗಳಿಗೆ ಆರ್‌ಆರ್‌ಬಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳ ಅರ್ಜಿ ಸಲ್ಲಿಸಲು ಇಲ್ಲಿದೆ ಸಂಪೂರ್ಣ ಮಾಹಿತಿ.

    • RRB Technician Recruitment 2024: ರೈಲ್ವೆ ಇಲಾಖೆಯ 9,144 ಟೆಕ್ನಿಷಿಯನ್ ಹುದ್ದೆಗಳಿಗೆ ಏಪ್ರಿಲ್ 8 ರೊಳಗೆ ಅರ್ಜಿ ಸಲ್ಲಿಸಿ. ಹುದ್ದೆಗಳ ವಿವರ, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹಾಗೂ ಲಿಂಕ್ ಸೇರಿದಂತೆ ಪ್ರಮುಖ ಮಾಹಿತಿ ಇಲ್ಲಿದೆ.
ಮಾರ್ಚ್ 10 ರಿಂದ 9144 ಟೆಕ್ನಿಷಿಯನ್ ಹುದ್ದೆಗಳಿಗೆ ಆರ್‌ಆರ್‌ಬಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳ ಅರ್ಜಿ ಸಲ್ಲಿಸಲು ಇಲ್ಲಿದೆ ಸಂಪೂರ್ಣ ಮಾಹಿತಿ.
ಮಾರ್ಚ್ 10 ರಿಂದ 9144 ಟೆಕ್ನಿಷಿಯನ್ ಹುದ್ದೆಗಳಿಗೆ ಆರ್‌ಆರ್‌ಬಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳ ಅರ್ಜಿ ಸಲ್ಲಿಸಲು ಇಲ್ಲಿದೆ ಸಂಪೂರ್ಣ ಮಾಹಿತಿ. (AP)

ರೈಲ್ವೆ ನೇಮಕಾತಿ ಮಂಡಳಿ (RRB) ಇತ್ತೀಚೆಗೆ ಹೊರಡಿಸಿದ್ದ ಅಧಿಕೃತ ಅಧಿಸೂಚನೆಯಂತೆ ಇಂದಿನಿಂದ (ಮಾರ್ಚ್ 10, ಭಾನುವಾರ) ರೈಲ್ವೆ ಇಲಾಖೆಯ ಟಿಕ್ನಿಷಿಯನ್ ಗ್ರೇಡ್-1 ಸಿಗ್ನಲ್ ಹಾಗೂ ಟೆಕ್ನಿಷಿಯನ್ ಗ್ರೇಡ್-3 ರ ವಿವಿಧ ಭಾಗಗಳ ಒಟ್ಟು 9,144 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 8 ರೊಳಗೆ ಅರ್ಜಿ ಸಲ್ಲಿಸಿ. ಮಾರ್ಚ್ 9ರ ಶನಿವಾರದಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಆರ್‌ಆರ್‌ಬಿಯ ಅಧಿಕೃತ ವೆಬ್‌ಸೈಟ್‌ rrbapply.gov.in ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ.

ಆರ್‌ಆರ್‌ಬಿ ನೇಮಕಾತಿಯ ಹುದ್ದೆಗಳ ವಿವರ

  • ಟೆಕ್ನಿಷಿಯನ್ ಗ್ರೇಡ್ 1 ಸಿಗ್ನಲ್: 1092 ಹುದ್ದೆಗಳು
  • ಟೆಕ್ನಿಷಿಯನ್ ಗ್ರೇಡ್ 3: 8052 ಹುದ್ದೆಗಳು

ಆರ್‌ಆರ್‌ಬಿ ನೇಮಕಾತಿಯ ಆಯ್ಕೆ ಪ್ರಕ್ರಿಯೆ

ಆಯ್ಕೆ ಪ್ರಕ್ರಿಯೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯನ್ನು ಒಳಗೊಂಡಿರುತ್ತದೆ. ಆರ್‌ಆರ್‌ಬಿ ವೆಬ್‌ಸೈಟ್‌, ಎಸ್ಎಂಎಸ್ ಮತ್ತು ಇಮೇಲ್ ಮೂಲಕ ಅರ್ಹ ಅಭ್ಯರ್ಥಿಗಳಿಗೆ ಪರೀಕ್ಷಾ ವೇಳಾಪಟ್ಟಿ ಮತ್ತು ಸ್ಥಳಗಳ ಮಾಹಿತಿಯನ್ನು ಸರಿಯಾದ ಸಮಯದಲ್ಲಿ ನೀಡಲಾಗುವುದು.

ಆರ್‌ಆರ್‌ಬಿ ಟೆಕ್ನಿಷಿಯನ್ ನೇಮಕಾತಿ 2024 ಹೀಗಿ ಅರ್ಜಿ ಸಲ್ಲಿಸಿ

  • ಅರ್ಜಿ ಸಲ್ಲಿಸಲು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆರ್‌ಆರ್‌ಬಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
  • ಆರ್‌ಆರ್‌ಬಿಯ ಅಧಿಕ ವೆಬ್‌ಸೈಟ್‌ಗೆ rrbapply.gov.in ಭೇಟಿ ನೀಡಿ
  • ಅಗತ್ಯ ವಿವರಗಳನ್ನು ಭರ್ತಿ ಮಾಡಿ ಮತ್ತು ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ
  • ನಿಮ್ಮ ವೈಯಕ್ತಿಕ ಮಾಹಿತಿಯನ್ನು ಪರಿಶೀಲಿಸಿ
  • ಅರ್ಜಿ ಶುಲ್ಕವನ್ನು ಪಾವತಿಸಿ ಮತ್ತು ಅರ್ಜಿ ನಮೂನೆಯನ್ನು ಸಲ್ಲಿಸಿ

1,930 ನರ್ಸಿಂಗ್ ಹುದ್ದೆಗಳಿಗೆ ಮಾರ್ಚ್ 27 ರೊಳಗೆ ಅರ್ಜಿ ಸಲ್ಲಿಸಿ

ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್‌ಸಿ) ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಯುಪಿಸಿಯ ಅಧಿಕೃತ ವೆಬ್‌ಸೈಟ್ upsconline.nic.in ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ನೌಕರರ ರಾಜ್ಯ ವಿಮಾನ ನಿಗಮದಲ್ಲಿ ಒಟ್ಟು 1,930 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮಾರ್ಚ್ 7 ರಿಂದ ಪ್ರಾರಂಭವಾಗಿದ್ದು, ಮಾರ್ಚ್ 27 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.

(This copy first appeared in Hindustan Times Kannada website. To read more like this please logon to kannada.hindustantimes.com )

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ