IDBI Recruitment 2024: 500 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಐಡಿಬಿಐ ನಿರ್ಧಾರ; ಫೆ 12 ರಿಂದ ಅರ್ಜಿ ಸಲ್ಲಿಸಿ
Feb 08, 2024 08:16 AM IST
ಬಿಡಿಬಿಐ ಬ್ಯಾಂಕ್‌ನಲ್ಲಿ 500 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್‌ಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
IDBI Bank Recruitment 2024: ಐಡಿಬಿಐ ಬ್ಯಾಂಕ್ 500 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ವಿಧಾನ ಸೇರಿ ಪ್ರಮುಖ ಮಾಹಿತಿ ತಿಳಿಯಿರಿ.
IDBI Bank Recruitment 2024: ಐಡಿಬಿಐ ಬ್ಯಾಂಕ್ 500 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ (Junior Assistant Manager Posts) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಫೆಬ್ರವರಿ 12 ರಿಂದ ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಫೆಬ್ರವರಿ 26 ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು www.idbibank.in ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. 2024ರ ಮಾರ್ಚ್ 17 ರಂದು ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ.
ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ನೇಮಕಕ್ಕೆ ಸಂಬಂಧಿಸಿದ ಪ್ರಮುಖ ಮಾಹಿತಿ
ಐಡಿಬಿಐ ನೇಮಕಾತಿ 2024: 500 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಐಡಿಬಿಐ ನೇಮಕಾತಿ 2024: ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷಗಳು ಮತ್ತು ಗರಿಷ್ಠ ವಯಸ್ಸು 25 ವರ್ಷ
ಐಡಿಬಿಐ ನೇಮಕಾತಿ 2024 ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.
ಐಡಿಬಿಐ ನೇಮಕಾತಿ 2024 ಆಯ್ಕೆ ಪ್ರಕ್ರಿಯೆ: ಆಯ್ಕೆ ಪ್ರಕ್ರಿಯೆಯು ಆನ್‌ಲೈನ್ ಪರೀಕ್ಷೆ ಇರುತ್ತದೆ. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ವೈಯಕ್ತಿಕ ಸಂದರ್ಶನಕ್ಕೆ ಹಾಜರಾಗಬೇಕಾಗುತ್ತದೆ. ಆನ್ ಲೈನ್ ಪರೀಕ್ಷೆಯು ವಸ್ತುನಿಷ್ಠ ಮಾದರಿಯದ್ದಾಗಿರುತ್ತದೆ.
ಐಡಿಬಿಐ ನೇಮಕಾತಿ 2024 ಅರ್ಜಿ ಶುಲ್ಕ: ಎಸ್ಸಿ / ಎಸ್ಟಿ / ಪಿಡಬ್ಲ್ಯೂಡಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 200 ರೂಪಾಯಿ ಮತ್ತು ಇತರ ವರ್ಗದ ಅಭ್ಯರ್ಥಿಗಳಿಗೆ 1000 ರೂಪಾಯಿ.
ಐಡಿಬಿಐ ನೇಮಕಾತಿ 2024 ನೇಮಕಾತಿ: ಅರ್ಜಿ ಸಲ್ಲಿಸುವ ವಿಧಾನ ತಿಳಿಯಿರಿ
- ಐಡಿಬಿಐ ಬ್ಯಾಂಕ್ ಅಧಿಕೃತ ವೆಬ್‌ಸೈಟ್ www.idbibank.in ಭೇಟಿ ನೀಡ
- ಮುಖಪುಟದಲ್ಲಿ, ವೃತ್ತಿಜೀವನದ ಲಿಂಕ್ ಮೇಲೆ ಕ್ಲಿಕ್ ಮಾಡಿ
- ನಂತರ ಕರೆಂಟ್ ಓಪನಿಂಗ್ಸ್ ಮೇಲೆ ಕ್ಲಿಕ್ ಮಾಡಿ
- ಬಳಿಕ ಅರ್ಜಿ ತುಂಬುವ ಪ್ರಕ್ರಿಯೆಯೊಂದಿಗೆ ಮುಂದುವರಿಯಿರಿ
- ಅರ್ಜಿ ನಮೂನೆಯನ್ನು ಭರ್ತಿ ಮಾಡಿ
- ಅರ್ಜಿ ಶುಲ್ಕವನ್ನು ಪಾವತಿಸಿ
- ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ
ಅರ್ಜಿಯನ್ನು ಸಲ್ಲಿಸಿದ ಬಳಿಕ ಭವಿಷ್ಯದ ಪ್ರಕ್ರಿಯೆಗಳಿಗಾಗಿ ಅರ್ಜಿ ಸಲ್ಲಿಸಿದ ಪ್ರಿಂಟ್ಔಟ್ ತೆಗೆದುಕೊಳ್ಳಿ. ಅಭ್ಯರ್ಥಿಗಳು ವಿವರವಾದ ಅಧಿಸೂಚನೆಯನ್ನು ಇಲ್ಲಿ www.idbibank.in ಪರಿಶೀಲಿಸಬಹುದು.
ಯೂನಿಯನ್ ಬ್ಯಾಂಕ್‌ನಲ್ಲಿ 606 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ 606 ಸ್ಪೆಷಲಿಸ್ಟ್ ಆಫೀಸರ್ (SO) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 2023ರ ಫೆಬ್ರವರಿ 3 (ಶನಿವಾರ) ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಫೆಬ್ರವರಿ 23 (ಶುಕ್ರವಾರ) ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು www.unionbankofindia.co.in ಅಧಿಕೃತ ವೆಬ್‌ಸೈಟ್ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಪರೀಕ್ಷೆಯ ತಾತ್ಕಾಲಿಕ ದಿನಾಂಕ 2024 ರ ಮಾರ್ಚ್ ಅಥವಾ ಏಪ್ರಿಲ್ ಆಗಿರುವ ಸಾಧ್ಯತೆ ಇದೆ. (This copy first appeared in Hindustan Times Kannada website. To read more like this please logon to kannada.hindustantime.com).