logo
ಕನ್ನಡ ಸುದ್ದಿ  /  ಜೀವನಶೈಲಿ  /  ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ; ಏ 5 ರೊಳಗೆ ಕಾರ್ಯನಿರ್ವಹಣಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿ

ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ; ಏ 5 ರೊಳಗೆ ಕಾರ್ಯನಿರ್ವಹಣಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿ

Raghavendra M Y HT Kannada

Mar 21, 2024 05:50 PM IST

google News

ಐಪಿಪಿಬಿ 47 ಕಾರ್ಯನಿರ್ವಾಹಕರನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ

  • ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ (ಐಪಿಪಿಬಿ) ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಉದ್ಯೋಗದ ನಿರೀಕ್ಷೆಯಲ್ಲಿರುವ ಆಸಕ್ತ ಯುವಜನತೆಗಾಗಿ ಐಪಿಪಿಬಿ ಹುದ್ದೆಗಳ ಕುರಿತ ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.

ಐಪಿಪಿಬಿ 47 ಕಾರ್ಯನಿರ್ವಾಹಕರನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ
ಐಪಿಪಿಬಿ 47 ಕಾರ್ಯನಿರ್ವಾಹಕರನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ

ದೆಹಲಿ: ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ (ಐಪಿಪಿಬಿ) ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಅರ್ಜಿ ಸಲ್ಲಿಸಲು ಏಪ್ರಿಲ್ 5 ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು www.ippbonline.com ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು

ಐಪಿಪಿಬಿ ನೇಮಕಾತಿ 2024 ಖಾಲಿ ಹುದ್ದೆಗಳ ವಿವರಗಳು: 47 ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಡ್ರೈವ್ ನಡೆಸಲಾಗುತ್ತಿದ್ದು, ಇದರಲ್ಲಿ 21 ಹುದ್ದೆಗಳು ಕಾಯ್ದಿರಿಸದ ವರ್ಗಗಳಿಗೆ, 4 ಹುದ್ದೆಗಳು ಇಡಬ್ಲ್ಯೂಎಸ್ ವರ್ಗಗಳಿಗೆ, 12 ಹುದ್ದೆಗಳು ಒಬಿಸಿ ವರ್ಗಗಳಿಗೆ, 7 ಹುದ್ದೆಗಳು ಎಸ್ಸಿ ವರ್ಗಕ್ಕೆ ಹಾಗೂ 3 ಹುದ್ದೆಗಳು ಎಸ್ಟಿ ವರ್ಗಕ್ಕೆ ಮೀಸಲಾಗಿವೆ.

ಐಪಿಪಿಬಿ ನೇಮಕಾತಿ 2024 ವಯಸ್ಸಿನ ಮಿತಿ: ಅಭ್ಯರ್ಥಿಯ ವಯಸ್ಸು 21 ರಿಂದ 35 ವರ್ಷಗಳ ನಡುವೆ ಇರಬೇಕು.

ಐಪಿಪಿಬಿ ನೇಮಕಾತಿ 2024 ಅರ್ಜಿ ಶುಲ್ಕ: ಎಸ್ಸಿ / ಎಸ್ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 150 ರೂಪಾಯಿ ಹಾಗೂ ಇತರೆ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 700 ರೂಪಾಯಿ ನಿಗದಿ ಮಾಡಲಾಗಿದೆ.

ಐಪಿಪಿಬಿ ನೇಮಕಾತಿ 2024 ಆಯ್ಕೆ ಪ್ರಕ್ರಿಯೆ: ಪದವಿ / ಗುಂಪು ಚರ್ಚೆ / ವೈಯಕ್ತಿಕ ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಐಪಿಪಿಬಿ ಕಾರ್ಯನಿರ್ವಾಹಕ ನೇಮಕಾತಿ 2024: ಅರ್ಜಿ ಸಲ್ಲಿಸುವುದು ಹೇಗೆ?

  • ಐಪಿಪಿಬಿ ಅಧಿಕೃತ ವೆಬ್‌ಸೈಟ್ ippbonline.com ಭೇಟಿ ನೀಡಿ
  • ಮುಖಪುಟದಲ್ಲಿ ‘ಕೆರಿಯರ್ಸ್’ ಆಯ್ಕೆಯ ಮೇಲೆ ಕ್ಲಿಕ್ ಮಾಡಿ
  • ಅರ್ಜಿ ನಮೂನೆಯನ್ನು ನೋಂದಾಯಿಸಿ ಮತ್ತು ಭರ್ತಿ ಮಾಡಿ
  • ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಅಪ್ ಲೋಡ್ ಮಾಡಿ
  • ಅರ್ಜಿ ಶುಲ್ಕವನ್ನು ಪಾವತಿಸಿ

ಅರ್ಜಿ ನಮೂನೆಯನ್ನು ಸಲ್ಲಿಸಿದ ಬಳಿಕ ಭವಿಷ್ಯದ ಉಲ್ಲೇಖಕ್ಕಾಗಿ ಪ್ರಿಂಟ್‌ಔಟ್ ತೆಗೆದುಕೊಳ್ಳಿ.

ಸೆಬಿಯಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ-(SEBI) ಗ್ರೇಡ್ ಎ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ವಿವರವಾದ ಜಾಹೀರಾತು ಮತ್ತು ಆನ್‌ಲೈನ್ ಅರ್ಜಿ ಲಿಂಕ್ ಅನ್ನು ಏಪ್ರಿಲ್ 13 ರಂದು ಲಭ್ಯವಿರುತ್ತದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ www.sebi.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಸೇನಾ ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾರ್ಚ್ 22 ಕೊನೆ ದಿನ

ಭಾರತೀಯ ಸೇನಾ ಅಡಿಯಲ್ಲಿ ಬರುವ ಅಗ್ನಿವೀರ್ (Agniveer Recruitment 2024) ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಅಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ. ನಾಳೆ (ಮಾರ್ಚ್ 22, ಶುಕ್ರವಾರ) ಅರ್ಜಿ ಸಲ್ಲಿಸುವ ಕೊನೆಯ ದಿನವಾಗಿದೆ. ಫೆಬ್ರವರಿ 13 ರಿಂದ ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿತ್ತು. ಇದೀಗ ಈ ಪ್ರಕ್ರಿಯೆ ಕೊನೆಯ ಹಂತಕ್ಕೆ ಬಂದಿದೆ. ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್ indianarmy.nic.in ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಬಹುದಾಗಿದೆ.

ಇಂಡಿಯನ್ ಬ್ಯಾಂಕ್‌ನಲ್ಲಿ 146 ಸ್ಪೆಷಲಿಸ್ಟ್ ಆಫೀಸ್‌ಗಳ ಹುದ್ದೆಗೆ ಅರ್ಜಿ ಆಹ್ವಾನ

ಇಂಡಿಯನ್ ಬ್ಯಾಂಕ್‌ನಲ್ಲಿ 146 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮಾರ್ಚ್ 12ರಿಂದಲ್ಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಏಪ್ರಿಲ್ 1 ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು www.indianbank.in ಅಧಿಕೃತ ವೆಬ್‌ ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಬ್ಯಾಂಕ್‌ಗಳಲ್ಲಿ ಕೆಲಸ ಮಾಡುವ ಆಸಕ್ತಿ ಹೊಂದಿದ್ದರೆ ಇಂಡಿಯನ್ ಬ್ಯಾಂಕ್ ಕೇಳಿರುವ ಅರ್ಹತೆ, ಮಾನದಂಡಗಳನ್ನು ನೀವು ಪೂರೈಸುವವರಾಗಿದ್ದರೆ ತಡಮಾಡದೆ ಇಂದೇ ಅರ್ಜಿ ಸಲ್ಲಿಸಿ.

ಉದ್ಯೋಗ ಮಾಹಿತಿಗಾಗಿ ಇಲ್ಲಿಗೆ ಬನ್ನಿ

ಸರ್ಕಾರಿ ಇಲಾಖೆಗಳು, ಸರ್ಕಾರಿ ಹಾಗೂ ಖಾಸಗಿ ಬ್ಯಾಂಕ್‌ಗಳು, ವಿವಿಧ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳು, ಪರೀಕ್ಷೆ ಹಾಗೂ ಕೊನೆಯ ದಿನಾಂಕಗಳು ಸೇರಿದಂತೆ ಉದ್ಯೋಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ದಲ್ಲಿ ಪ್ರಕಟಿಸಲಾಗುತ್ತದೆ. ಉದ್ಯೋಗ ಮಾಹಿತಿಗಾಗಿ ಆಗಾಗ ಸೈಟ್‌ಗೆ ಭೇಟಿ ನೀಡಿ ಅಗತ್ಯ ಮಾಹಿತಿ ಪಡೆಯಿರಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ