logo
ಕನ್ನಡ ಸುದ್ದಿ  /  ಜೀವನಶೈಲಿ  /  Pnb Recruitment 2024: ಫೆ 7 ರಿಂದ ಪಂಜಾಬ್ ನ್ಯಾಷನಲ್ ಬ್ಯಾಂಕ್‌ನ 1024 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ; ಸಂಪೂರ್ಣ ಮಾಹಿತಿ ತಿಳಿಯಿರಿ

PNB Recruitment 2024: ಫೆ 7 ರಿಂದ ಪಂಜಾಬ್ ನ್ಯಾಷನಲ್ ಬ್ಯಾಂಕ್‌ನ 1024 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ; ಸಂಪೂರ್ಣ ಮಾಹಿತಿ ತಿಳಿಯಿರಿ

Raghavendra M Y HT Kannada

Feb 05, 2024 04:27 PM IST

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 1024 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

  • PNB Recruitment 2024: ಪಿಎನ್‌ಬಿಯಲ್ಲಿ ಸ್ಪೆಷಲಿಸ್ಟ್ ಆಫೀಸರ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. pnbindia.in ನಲ್ಲಿ ಅರ್ಜಿ ಸಲ್ಲಿಸಬಹುದು.

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 1024 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 1024 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ದೆಹಲಿ: PNB Recruitment 2024: ಪಂಜಾಬ್ ನ್ಯಾಷನಲ್ ಬ್ಯಾಂಕ್ (Punjab National Bank) ಸ್ಪೆಷಲಿಸ್ಟ್ ಆಫೀಸರ್ (Special Officers) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಪಿಎನ್‌ಬಿ ಅಧಿಕೃತ ವೆಬ್‌ಸೈಟ್ pnbindia.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಪ್ರಕ್ರಿಯೆಯಲ್ಲಿ 1025 ಹುದ್ದೆಗಳನ್ನು ಭರ್ತಿ ಮಾಡುತ್ತದೆ.

ಟ್ರೆಂಡಿಂಗ್​ ಸುದ್ದಿ

ಮಳೆಗಾಲದಲ್ಲಿ ಕೇರಳಕ್ಕೆ ಟ್ರಿಪ್‌ ಹೋಗುವ ಪ್ಲಾನ್‌ ಇದ್ರೆ, ಈ 10 ಸಾಂಪ್ರದಾಯಿಕ ತಿನಿಸುಗಳನ್ನು ಟೇಸ್ಟ್‌ ಮಾಡದೇ ಬರಬೇಡಿ

Yoga Asanas: ತೂಕ ಇಳಿಯುವ ಜೊತೆಗೆ ದೇಹ ಫಿಟ್‌ ಆಗಿರಬೇಕಾ? ಈ ಸರಳ ಯೋಗಾಸನಗಳನ್ನ ಮನೆಯಲ್ಲೇ ಅಭ್ಯಾಸ ಮಾಡಿ

ಡಯಾಬಿಟಿಸ್‌ ಬಗ್ಗೆ ಚಿಂತೆ ಬೇಡ; ಸಕ್ಕರೆ ಮಟ್ಟವನ್ನು ನಿಯಂತ್ರಿಸಿ, ಆರೋಗ್ಯ ಕಾಪಾಡಿಕೊಳ್ಳಲು ಮಧುಮೇಹಿಗಳು ತಪ್ಪದೇ ಪಾಲಿಸಬೇಕಾದ ನಿಯಮಗಳಿವು

ಮಾವಿನಹಣ್ಣಿನಿಂದ ತಯಾರಿಸಬಹುದು ಒಂದಲ್ಲ, ಎರಡಲ್ಲ ಮೂರು ಬಗೆಯ ಪಾಯಸ; ಈ ಭಾನುವಾರ ನೀವೂ ಮನೆಯಲ್ಲಿ ಟ್ರೈ ಮಾಡಿ, ರೆಸಿಪಿ ಇಲ್ಲಿದೆ

ನೋಂದಣಿ ಪ್ರಕ್ರಿಯೆ ಫೆಬ್ರವರಿ 7 (ಬುಧವಾರ)ದಿಂದ ಪ್ರಾರಂಭವಾಗುತ್ತದೆ. ಇದೇ ತಿಂಗಳ ಅಂದರೆ ಫೆಬ್ರವರಿ 25 (ಭಾನುವಾರ) ಕೊನೆಗೊಳ್ಳುತ್ತದೆ. ಅರ್ಹತೆ, ಆಯ್ಕೆ ಪ್ರಕ್ರಿಯೆ ಮತ್ತು ಇತರ ವಿವರಗಳಿಗಾಗಿ ಕೆಳಗೆ ಓದಿ.

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನ ಹುದ್ದೆಗಳ ವಿವರ

  • ಅಧಿಕಾರಿ-ಕ್ರೆಡಿಟ್: 1000
  • ಸೀನಿಯರ್ ಮ್ಯಾನೇಜರ್-ಸೈಬರ್ ಸೆಕ್ಯುರಿಟಿ - 5
  • ಮ್ಯಾನೇಜರ್ ಫಾರೆಕ್ಸ್ - 15
  • ಮ್ಯಾನೇಜರ್ ಸೈಬರ್ ಸೆಕ್ಯುರಿಟಿ - 5

ಪಂಜಾಬ್ ನ್ಯಾಷನಲ್ ಬ್ಯಾಂಕ್‌ ಹುದ್ದೆಗಳಿಗೆ ಅರ್ಹತಾ ಮಾನದಂಡಗಳು

ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲ್ಲಿ ಲಭ್ಯವಿರುವ ವಿವರವಾದ ಅಧಿಸೂಚನೆಯ ಮೂಲಕ ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿಯನ್ನು ಪರಿಶೀಲಿಸಬಹುದು.

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನ ಹುದ್ದೆಗಳ ಆಯ್ಕೆ ಪ್ರಕ್ರಿಯೆ

ಆನ್‌ಲೈನ್ ಲಿಖಿತ ಪರೀಕ್ಷೆ, ವೈಯಕ್ತಿಕ ಸಂದರ್ಶನ ಅಥವಾ ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆಯು 100 ಅಂಕಗಳಿಗೆ ನಡೆಯಲಿದ್ದು, ಪರೀಕ್ಷೆಯ ಅವಧಿ 2 ಗಂಟೆಗಳು ಇರುತ್ತದೆ. 50 ಅಂಕಗಳಿಗೆ ವೈಯಕ್ತಿಕ ಸಂದರ್ಶನ ನಡೆಯುತ್ತದೆ.

ಅರ್ಜಿ ಶುಲ್ಕ

  • ಎಸ್ಸಿ/ಎಸ್ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 50 ರೂಪಾಯಿ + ಶೇಕಡಾ 18 ಜಿಎಸ್‌ಟಿ ಸೇರಿ 59 ರೂಪಾಯಿ
  • ಇತರೆ ವರ್ಗದ ಅಭ್ಯರ್ಥಿಗಳಿಗೆ 1000 ರೂಪಾಯಿ + ಶೇಕಡಾ 18 ಜಿಎಸ್‌ಟಿ ಸೇರಿ 1,180 ರೂಪಾಯಿ

ಡೆಬಿಟ್ ಕಾರ್ಡ್ (ರುಪೇ/ ವೀಸಾ/ ಮಾಸ್ಟರ್ ಕಾರ್ಡ್), ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್, ಐಎಂಪಿಎಸ್, ಕ್ಯಾಶ್ ಕಾರ್ಡ್/ ಮೊಬೈಲ್ ವ್ಯಾಲೆಟ್ ಅಥವಾ ಯುಪಿಐ ಬಳಸಿ ಪಾವತಿ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಪಂಜಾಬ್ ನ್ಯಾಷನಲ್ ಬ್ಯಾಂಕಿನ ಅಧಿಕೃತ ವೆಬ್ಸೈಟ್ ಅನ್ನು ಪರಿಶೀಲಿಸಬಹುದು. ವಿವರವಾದ ಅಧಿಸೂಚನೆ ಇಲ್ಲಿದೆ.

ಬಿಎಂಟಿಸಿಯಲ್ಲಿ 2,503 ಹುದ್ದೆಗಳ ಭರ್ತಿಗೆ ಶೀಘ್ರವೇ ಅರ್ಜಿ ಆಹ್ವಾನ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ-ಬಿಟಿಎಂಸಿಯಲ್ಲಿ ಖಾಲಿ ಇರುವ ನಿರ್ವಾಹಕರು, ಸಹಾಯಕ ಲೆಕ್ಕಿಗ ಹಾಗೂ ತಾಂತ್ರಿಕ ಸಿಬ್ಬಂದಿ ಸೇರಿದಂತೆ ಒಟ್ಟು 2503 ಹುದ್ದೆಗಳ ನೇಮಕಾತಿಗೆ ಮುಂದಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅರ್ಹ ಅಭ್ಯರ್ಥಿಗಳು ಬಿಎಂಟಿಸಿಯ ಅಧಿಕೃತ ಜಾಲತಾಣ mybmtc.karnataka.gov.in ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ.

ಕರ್ನಾಟಕ ಪರೀಕ್ಷೆ ಪ್ರಾಧಿಕಾರ ಹುದ್ದೆಗಳನ್ನು ಭರ್ತಿ ಮಾಡಲಿದೆ. ಆನ್‌ಲೈನ್‌ನಲ್ಲಿ ಶೀಘ್ರದಲ್ಲಿ ಅರ್ಜಿಗಳನ್ನು ಬಿಡುಗಡೆ ಮಾಡಲಾಗುತ್ತದೆ. ಬಿಎಂಟಿಸಿಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ, ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ವಿಧಾನ ಸೇರಿದಂತೆ ಪ್ರಮುಖ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಸದ್ಯದಲ್ಲಿ 2,500 ನಿರ್ವಾಹಕರನ್ನು ಆಯ್ಕೆ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗುತ್ತದೆ. ಇದರ ಜೊತೆಗೆ ಒಬ್ಬ ಸಹಾಯಕ ಲೆಕ್ಕಿಗ, ಓರ್ವ ಸ್ಟಾಫ್ ನರ್ಸ್ ಹಾಗೂ ಒಂದು ಫಾರ್ಮಾಸಿಸ್ಟ್ ಹುದ್ದೆಯನ್ನು ಭರ್ತಿ ಮಾಡಲಾಗುತ್ತದೆ.(This copy first appeared in Hindustan Times Kannada website. To read more like this please logon to kannada.hindustantime.com).

    ಹಂಚಿಕೊಳ್ಳಲು ಲೇಖನಗಳು