logo
ಕನ್ನಡ ಸುದ್ದಿ  /  ಜೀವನಶೈಲಿ  /  ಆರ್‌ಬಿಐ ಸಹಾಯಕ ಹುದ್ದೆಗಳ ಪ್ರಿಲಿಮ್ಸ್ ಪರೀಕ್ಷೆ ಅಂಕ ಬಿಡುಗಡೆ; ಮಾರ್ಕ್ಸ್ ಡೌನ್‌ಲೋಡ್ ಮಾಡಲು ಈ ಲಿಂಕ್ ಬಳಸಿ

ಆರ್‌ಬಿಐ ಸಹಾಯಕ ಹುದ್ದೆಗಳ ಪ್ರಿಲಿಮ್ಸ್ ಪರೀಕ್ಷೆ ಅಂಕ ಬಿಡುಗಡೆ; ಮಾರ್ಕ್ಸ್ ಡೌನ್‌ಲೋಡ್ ಮಾಡಲು ಈ ಲಿಂಕ್ ಬಳಸಿ

Raghavendra M Y HT Kannada

Feb 02, 2024 11:43 AM IST

ಭಾರತೀಯ ರಿಸರ್ವ್ ಬ್ಯಾಂಕ್

  • ಆರ್‌ಬಿಐ ಸಹಾಯಕ ಹುದ್ದೆಗಳ ಪ್ರಿಲಿಮ್ಸ್ ಪರೀಕ್ಷೆಯ ಮಾರ್ಕ್ಸ್‌ಕಾರ್ಡ್ ಬಿಡುಗಡೆಯಾಗಿದೆ. ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಈ ಕೆಳಗಿನ ಲಿಂಕ್ ಮೂಲಕ ತಮ್ಮ ಅಂಕಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಭಾರತೀಯ ರಿಸರ್ವ್ ಬ್ಯಾಂಕ್
ಭಾರತೀಯ ರಿಸರ್ವ್ ಬ್ಯಾಂಕ್

ದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್-(RBI) ಸಹಾಯಕ ಹುದ್ದೆಗಳ ಪ್ರಿಲಿಮ್ಸ್ ಪರೀಕ್ಷೆಯ ಅಂಕಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆಯಲ್ಲಿ ಭಾಗವಹಿಸಿದ್ದ ಅಭ್ಯರ್ಥಿಗಳು ಆರ್‌ಬಿಐನ ಅಧಿಕೃತ ವೆಬ್‌ಸೈಟ್ rbi.org.in ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಟ್ರೆಂಡಿಂಗ್​ ಸುದ್ದಿ

Mango Recipe: ಇಲ್ಲಿದೆ ಮ್ಯಾಂಗೋ ಮಲೈ ಖಾಂಡ್ವಿ ರೋಲ್‌ ರೆಸಿಪಿ; ಹೆಸರಷ್ಟೇ ಅಲ್ಲ ಈ ತಿಂಡಿಯ ರುಚಿಯೂ ಡಿಫ್ರೆಂಟ್‌

ಗಂಡು ಹೆಣ್ಣಿನ ಲಿಂಗ ತಾರತಮ್ಯ ನಿವಾರಣೆಗೆ ಪೋಷಕರ ವ್ಯಕ್ತಿತ್ವ, ಆಲೋಚನಾ ಕ್ರಮ ಹೇಗಿರಬೇಕು? ಮಕ್ಕಳ ಉತ್ತಮ ಮನಸ್ಥಿತಿಗೆ ಅಗತ್ಯ ವಿಧಾನಗಳಿವು

ಹಾಲು-ಮೀನು, ಪಾಲಕ್‌-ಪನೀರ್‌ ಆಯುರ್ವೇದದ ಪ್ರಕಾರ ಯಾವೆಲ್ಲಾ ಪದಾರ್ಥಗಳನ್ನು ಒಟ್ಟಿಗೆ ಸೇವಿಸಬಾರದು, ಇದರ ಪರಿಣಾಮ ಏನಾಗುತ್ತೆ ನೋಡಿ

ಮಳೆಗಾಲದಲ್ಲಿ ಕೇರಳಕ್ಕೆ ಟ್ರಿಪ್‌ ಹೋಗುವ ಪ್ಲಾನ್‌ ಇದ್ರೆ, ಈ 10 ಸಾಂಪ್ರದಾಯಿಕ ತಿನಿಸುಗಳನ್ನು ಟೇಸ್ಟ್‌ ಮಾಡದೇ ಬರಬೇಡಿ

ಆರ್‌ಬಿಐ ಸಹಾಯಕ ಪೂರ್ವಭಾವಿ ಪರೀಕ್ಷೆ 2023ರ ನವೆಂಬರ್ 18 (ಶನಿವಾರ) ಮತ್ತು 19 (ಭಾನುವಾರ) ರಂದು ನಡೆದಿತ್ತು. ಈ ನೇಮಕಾತಿಯಲ್ಲಿ ಒಟ್ಟು 450 ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಗುರಿ ಹೊಂದಲಾಗಿದೆ. ಆರ್‌ಬಿಐ ಸಹಾಯಕ ಪ್ರಿಲಿಮ್ಸ್ ಸ್ಕೋರ್‌ಕಾರ್ಡ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಲು ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ, ಜನ್ಮ ದಿನಾಂಕವನ್ನು ಬಳಸಬಹುದು. ವೆಬ್‌ಸೈಟ್‌ನಲ್ಲಿ ಲಾಗಿನ್ ಆಗಲು ಆ ಮಾಹಿತಿಯ ಅಗತ್ಯವಾಗಿದೆ. ಪರೀಕ್ಷಾ ಪ್ರಾಧಿಕಾರ 2023ರ ಡಿಸೆಂಬರ್ 31 ರಂದು ಆರ್‌ಬಿಐ ಸಹಾಯಕ ಹುದ್ದೆಗಳಿಗೆ ಮುಖ್ಯ ಲಿಖಿತ ಪರೀಕ್ಷೆಯನ್ನು ನಡೆಸಿದೆ. ಫಲಿತಾಂಶ ಬಾಕಿ ಇದೆ. ಅಭ್ಯರ್ಥಿಗಳನ್ನು ಪ್ರಿಲಿಮ್ಸ್ ಮತ್ತು ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಆರ್‌ಬಿಐ ಸಹಾಯಕ ಪ್ರಿಲಿಮ್ಸ್ ಸ್ಕೋರ್ ಕಾರ್ಡ್ ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ?

ಆರ್‌ಬಿಐ ಸಹಾಯಕ ಪ್ರಿಲಿಮ್ಸ್ ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ತಮ್ಮ ಸ್ಕೋರ್ ಕಾರ್ಡ್ ಅವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಈ ಕೆಳಗಿನ ಹಂತಗಳನ್ನು ಅನುಸರಿಸಬಹುದು.

  • ಆರ್‌ಬಿಐ ಅಧಿಕೃತ ವೆಬ್‌ಸೈಟ್ rbi.org.in ಭೇಟಿ ನೀಡಿ
  • ಮುಖ ಪುಟದಲ್ಲಿ ನೇಮಕಾತಿ ಸಂಬಂಧಿತ ಜಾಹೀರಾತು ಟ್ಯಾಬ್ ಅನ್ನು ಕ್ಲಿಕ್ ಮಾಡಿ
  • ಬಳಿಕ ಆರ್‌ಬಿಐ ಸಹಾಯಕ ಸ್ಕೋರಕಾರ್ಡ್ ಲಿಂಕ್ ಹೊಂದಿರುವ ಮತ್ತೊಂದು ಪುಟ ತೆರೆದುಕೊಳ್ಳುತ್ತದೆ
  • ಇಲ್ಲಿ ಅಗತ್ಯ ಮಾಹಿತಿಯನ್ನು ಲಮೂದಿಸಿ
  • ಆರ್‌ಬಿಐ ಸಹಾಯಕ ಸ್ಕೋರ್‌ಕಾರ್ಡ್ ಪರದೆ ಮೇಲೆ ಕಾಣಿಸುತ್ತದೆ
  • ಸ್ಕೋರ್‌ಕಾರ್ಡ್‌ ಅನ್ನು ಡೌನ್‌ಲೋಡ್ ಮಾಡಿಕೊಳ್ಳಿ

ಮುಂದಿನ ಪ್ರಕ್ರಿಯೆಗಳಿಗಾಗಿ ಈ ಸ್ಕೋರ್‌ಕಾರ್ಡ್‌ ಪ್ರತಿಯನ್ನು ನಿಮ್ಮ ಬಳಿಯೇ ಇಟ್ಟುಕೊಳ್ಳಿ. (This copy first appeared in Hindustan Times Kannada website. To read more like this please logon to kannada.hindustantime.com).

    ಹಂಚಿಕೊಳ್ಳಲು ಲೇಖನಗಳು