logo
ಕನ್ನಡ ಸುದ್ದಿ  /  ಜೀವನಶೈಲಿ  /  ಎಸ್‌ಬಿಐ ಮ್ಯಾನೇಜರ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಕೊನೆಯ ದಿನಾಂಕ, ಶುಲ್ಕದ ಮಾಹಿತಿ ತಿಳಿಯಿರಿ -Sbi Recruitment 2024

ಎಸ್‌ಬಿಐ ಮ್ಯಾನೇಜರ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಕೊನೆಯ ದಿನಾಂಕ, ಶುಲ್ಕದ ಮಾಹಿತಿ ತಿಳಿಯಿರಿ -SBI Recruitment 2024

Raghavendra M Y HT Kannada

Feb 14, 2024 02:26 PM IST

ಎಸ್‌ಬಿಐ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

  • SBI Recruitment 2024: ಎಸ್‌ಬಿಐ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ, ಶುಲ್ಕ ಸೇರಿ ಅಗತ್ಯ ಮಾಹಿತಿ ಇಲ್ಲಿದೆ.

ಎಸ್‌ಬಿಐ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ
ಎಸ್‌ಬಿಐ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ (HT File)

SBI Recruitment 2024: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸ್ಪೆಷಲಿಸ್ಟ್ ಕೇಡರ್ ಆಫೀಸರ್ (ಎಸ್‌ಸಿಒ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮಾರ್ಚ್ 4 ರಂದು ಕೊನೆಗೊಳ್ಳಲಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಟ್ರೆಂಡಿಂಗ್​ ಸುದ್ದಿ

ಮಳೆಗಾಲದಲ್ಲಿ ಕೇರಳಕ್ಕೆ ಟ್ರಿಪ್‌ ಹೋಗುವ ಪ್ಲಾನ್‌ ಇದ್ರೆ, ಈ 10 ಸಾಂಪ್ರದಾಯಿಕ ತಿನಿಸುಗಳನ್ನು ಟೇಸ್ಟ್‌ ಮಾಡದೇ ಬರಬೇಡಿ

Yoga Asanas: ತೂಕ ಇಳಿಯುವ ಜೊತೆಗೆ ದೇಹ ಫಿಟ್‌ ಆಗಿರಬೇಕಾ? ಈ ಸರಳ ಯೋಗಾಸನಗಳನ್ನ ಮನೆಯಲ್ಲೇ ಅಭ್ಯಾಸ ಮಾಡಿ

ಡಯಾಬಿಟಿಸ್‌ ಬಗ್ಗೆ ಚಿಂತೆ ಬೇಡ; ಸಕ್ಕರೆ ಮಟ್ಟವನ್ನು ನಿಯಂತ್ರಿಸಿ, ಆರೋಗ್ಯ ಕಾಪಾಡಿಕೊಳ್ಳಲು ಮಧುಮೇಹಿಗಳು ತಪ್ಪದೇ ಪಾಲಿಸಬೇಕಾದ ನಿಯಮಗಳಿವು

ಮಾವಿನಹಣ್ಣಿನಿಂದ ತಯಾರಿಸಬಹುದು ಒಂದಲ್ಲ, ಎರಡಲ್ಲ ಮೂರು ಬಗೆಯ ಪಾಯಸ; ಈ ಭಾನುವಾರ ನೀವೂ ಮನೆಯಲ್ಲಿ ಟ್ರೈ ಮಾಡಿ, ರೆಸಿಪಿ ಇಲ್ಲಿದೆ

ಎಸ್‌ಬಿಐ ಎಸ್‌ಸಿಒ ನೇಮಕಾತಿ 2024 ಹುದ್ದೆಗಳ ವಿವರಗಳು: 131 ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ

  • ಮ್ಯಾನೇಜರ್ (ಕ್ರೆಡಿಟ್ ಅನಾಲಿಸ್ಟ್): 50
  • ಅಸಿಸ್ಟೆಂಟ್ ಮ್ಯಾನೇಜರ್ (ಸೆಕ್ಯುರಿಟಿ ಅನಾಲಿಸ್ಟ್): 23
  • ಡೆಪ್ಯೂಟಿ ಮ್ಯಾನೇಜರ್ (ಸೆಕ್ಯುರಿಟಿ ಅನಾಲಿಸ್ಟ್): 51
  • ಮ್ಯಾನೇಜರ್ (ಸೆಕ್ಯುರಿಟಿ ಅನಾಲಿಸ್ಟ್): 3
  • ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (ಅಪ್ಲಿಕೇಶನ್ ಸೆಕ್ಯುರಿಟಿ): 3
  • ಸರ್ಕಲ್ ಡಿಫೆನ್ಸ್ ಬ್ಯಾಂಕಿಂಗ್ ಅಡ್ವೈಸರ್ (ಸಿಡಿಬಿಎ): 1

ಇದನ್ನೂ ಓದಿ: ಇಸ್ರೋದಲ್ಲಿ ವಿಜ್ಞಾನಿ, ತಾಂತ್ರಿಕ ಸಹಾಯಕ ಸಹಿತ 224 ಉದ್ಯೋಗ, ಮಾರ್ಚ್‌ 1 ಅರ್ಜಿ ಸಲ್ಲಿಕೆಗೆ ಕಡೆಯ ದಿನ

ಎಸ್‌ಬಿಐ ಎಸ್‌ಸಿಒ ನೇಮಕಾತಿ 2024 ಅರ್ಜಿ ಶುಲ್ಕ: ಸಾಮಾನ್ಯ / ಇಡಬ್ಲ್ಯೂಎಸ್ / ಒಬಿಸಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 750 ರೂ. ಎಸ್ಸಿ/ಎಸ್ಟಿ/ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಎಸ್‌ಬಿಐ ಎಸ್‌ಸಿಒ ನೇಮಕಾತಿ 2024: sbi.co.in ಅರ್ಜಿ ಸಲ್ಲಿಸುವುದು ಹೇಗೆ?

  • ಎಸ್‌ಬಿಐನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡಿ
  • ಮುಖಪುಟದಲ್ಲಿ, ಪ್ರಸ್ತುತ ಒಪನಿಂಗ್ಸ್ ಮೇಲೆ ಕ್ಲಿಕ್ ಮಾಡಿ
  • ಅರ್ಜಿ ನಮೂನೆಯನ್ನು ಭರ್ತಿ ಮಾಡಿ
  • ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ
  • ಅರ್ಜಿ ಶುಲ್ಕವನ್ನು ಪಾವತಿಸಿ

ಇದನ್ನೂ ಓದಿ: 500 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಐಡಿಬಿಐ ನಿರ್ಧಾರ; ಫೆ 12 ರಿಂದ ಅರ್ಜಿ ಸಲ್ಲಿಸಿ

ಫಾರ್ಮ್ ಅನ್ನು ಸಲ್ಲಿಸಿದ ಬಳಿಕ ಭವಿಷ್ಯದ ದಾಖಲೆಗಾಗಿ ಮುದ್ರಣವೊಂದನ್ನು ತೆಗೆದುಕೊಳ್ಳಿ. ಜಾಹೀರಾತು ಸಂಖ್ಯೆ: CRPD/SCO/2023-24/33). (This copy first appeared in Hindustan Times Kannada website. To read more like this please logon to kannada.hindustantime.com).

ವಿಭಾಗ

    ಹಂಚಿಕೊಳ್ಳಲು ಲೇಖನಗಳು