Railway Recruitment 2024: ಆಗ್ನೇಯ ಮಧ್ಯ ರೈಲ್ವೆಯಲ್ಲಿ 733 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Apr 01, 2024 10:23 AM IST
ಆಗ್ನೇಯ ಮಧ್ಯ ರೈಲ್ವೆಯಲ್ಲಿ 733 ಅಪ್ರೆಂಟೀಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದರ ವಿವರಗಳನ್ನು ಇಲ್ಲಿ ನೀಡಲಾಗಿದೆ.
- ಆಗ್ನೇಯ ಮಧ್ಯ ರೈಲ್ವೆ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದೆ. ವಿವಿಧ ವಿಭಾಗಗಳಲ್ಲಿ 733 ಅಪ್ರೆಂಟೀಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅದರ ವಿವರ ಇಲ್ಲಿದೆ.
ಆಗ್ನೇಯ ಮಧ್ಯ ರೈಲ್ವೆ (South East Central Railway) ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ ಆಗಿರುವ secr.indianrailways.gov.in ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಪ್ರಕ್ರಿಯೆಯಲ್ಲಿ ಒಟ್ಟು 733 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು 2024ರ ಏಪ್ರಿಲ್ 12ರ ಶುಕ್ರವಾರ ಕೊನೆಯ ದಿನವಾಗಿದೆ. ಅರ್ಹತೆ, ಆಯ್ಕೆ ಪ್ರಕ್ರಿಯೆ ಮತ್ತು ಇತರ ವಿವರಗಳಿಗಾಗಿ ಕೆಳಗೆ ಓದಿ.
ವಿದ್ಯಾರ್ಹತೆ: ಅಭ್ಯರ್ಥಿಗಳು 10+2 ಅಥವಾ ತತ್ಸಮಾನ ವಿದ್ಯಾರ್ಹತೆಯಡಿ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಮಾನ್ಯತೆ ಪಡೆದ ಸಂಸ್ಥೆಯಿಂದ ಸಂಬಂಧಿತ ಟ್ರೇಡ್‌ಗಳಲ್ಲಿ ಐಟಿಐ ಕೋರ್ಸ್‌ಗಳಲ್ಲಿ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 15 ರಿಂದ 24 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.
ಆಗ್ನೇಯ ಮಧ್ಯ ರೈಲ್ವೆ ಅಪ್ರೆಂಟಿಸ್ ಆಯ್ಕೆ ಪ್ರಕ್ರಿಯೆ
ಮೆಟ್ರಿಕ್ಯುಲೇಷನ್ ಮತ್ತು ಐಟಿಐ ಪರೀಕ್ಷೆ ಎರಡರಲ್ಲೂ ಅಭ್ಯರ್ಥಿಗಳು ಪಡೆದ ಅಂಕಗಳನ್ನು ಆಯ್ಕೆ ಪ್ರಕ್ರಿಯೆಯು ಒಳಗೊಂಡಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ದಾಖಲೆ ಪರಿಶೀಲನೆಯ ಸಮಯದಲ್ಲಿ ವೈದ್ಯಕೀಯ ಪ್ರಮಾಣಪತ್ರವನ್ನು ತರಬೇಕಾಗುತ್ತದೆ.
ಆಗ್ನೇಯ ಮಧ್ಯ ರೈಲ್ವೆಯಲ್ಲಿ ಅಪ್ರೆಂಟಿಸ್ ಅವಧಿ
ಆಯ್ಕೆಯಾದ ಅಭ್ಯರ್ಥಿಗಳನ್ನು ಅಪ್ರೆಂಟಿಸ್‌ಗಳಾಗಿ ನೇಮಿಸಿಕೊಳ್ಳಲಾಗುತ್ತದೆ. ಅವರು ಪ್ರತಿ ಟ್ರೇಡ್‌ಗೆ 1 ವರ್ಷದ ಅವಧಿಗೆ ಅಪ್ರೆಂಟಿಸ್‌ಶಿಪ್ ತರಬೇತಿ ಪಡೆಯುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಆಗ್ನೇಯ ಮಧ್ಯ ರೈಲ್ವೆಯ ಅಧಿಕೃತ ವೆಬ್‌ಸೈಟ್ ಅನ್ನು ಪರಿಶೀಲಿಸಬಹುದು. ಭಾರತದ 19 ರೈಲ್ವೆ ವಲಯಗಳಲ್ಲಿ ಆಗ್ನೇಯ ಮಧ್ಯ ರೈಲ್ವೆ ಕೂಡ ಒಂದಾಗಿದ್ದು, ಇದರ ಮುಖ್ಯ ಕಚೇರಿ ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿದೆ. ಬಿಲಾಸ್‌ಪುರ, ನಾಗ್ಪುರ್ ಹಾಗೂ ರಾಯ್‌ಪುರ್ ವಿಭಾಗಗಳನ್ನು ಬಿಲಾಸ್‌ಪುರ ಕಚೇರಿ ಒಳಗೊಂಡಿದೆ.
ಗುಪ್ತಚರ ದಳದ 660 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಬರುವ ರಾಷ್ಟ್ರೀಯ ಭದ್ರತೆಯನ್ನು ಕಾಪಾಡುವ ಪ್ರತಿಷ್ಠಿತ ಭದ್ರತಾ ಸಂಸ್ಥೆಯಾಗಿರುವ ಗುಪ್ತಚರ ದಳದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ (ACIO) ಯಿಂದ ಹಿಡಿದು ವೈಯಕ್ತಿಕ ಸಹಾಯಕ (PA) ವರೆಗೆ ವಿವಿಧ ವಿಭಾಗಗಳ ಒಟ್ಟು 660 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ವೇತನ, ಶೈಕ್ಷಣಿಕ ಅರ್ಹತೆ, ಹುದ್ದೆಗಳು ಸೇರಿ ನೇಮಕಾತಿಗೆ ಸಂಬಂಧಿಸಿ ಪ್ರಮುಖ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.