logo
ಕನ್ನಡ ಸುದ್ದಿ  /  ಜೀವನಶೈಲಿ  /  Union Bank Recruitment: 606 ಎಸ್‌ಒ ಹುದ್ದೆಗಳ ಭರ್ತಿಗೆ ಮುಂದಾದ ಯೂನಿಯನ್ ಬ್ಯಾಂಕ್; ಅರ್ಜಿ ಸಲ್ಲಿಕೆಗೆ ಫೆ 23 ಕೊನೆ ದಿನ

Union Bank Recruitment: 606 ಎಸ್‌ಒ ಹುದ್ದೆಗಳ ಭರ್ತಿಗೆ ಮುಂದಾದ ಯೂನಿಯನ್ ಬ್ಯಾಂಕ್; ಅರ್ಜಿ ಸಲ್ಲಿಕೆಗೆ ಫೆ 23 ಕೊನೆ ದಿನ

Raghavendra M Y HT Kannada

Feb 04, 2024 09:17 AM IST

606 ಸ್ಪಷೆಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಗೆ ಫೆಬ್ರವರಿ 23 ಕೊನೆಯ ದಿನವಾಗಿದೆ.

  • Union Bank Recruitment: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ 606 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿ ಪ್ರಮುಖ ಮಾಹಿತಿ ತಿಳಿಯಿರಿ.

606 ಸ್ಪಷೆಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಗೆ ಫೆಬ್ರವರಿ 23 ಕೊನೆಯ ದಿನವಾಗಿದೆ.
606 ಸ್ಪಷೆಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಗೆ ಫೆಬ್ರವರಿ 23 ಕೊನೆಯ ದಿನವಾಗಿದೆ.

Union Bank Recruitment 2024: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸ್ಪೆಷಲಿಸ್ಟ್ ಆಫೀಸರ್ (SO) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 2023ರ ಫೆಬ್ರವರಿ 3 (ಶನಿವಾರ) ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಫೆಬ್ರವರಿ 23 (ಶುಕ್ರವಾರ) ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು www.unionbankofindia.co.in ಅಧಿಕೃತ ವೆಬ್‌ಸೈಟ್ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಪರೀಕ್ಷೆಯ ತಾತ್ಕಾಲಿಕ ದಿನಾಂಕ 2024 ರ ಮಾರ್ಚ್ ಅಥವಾ ಏಪ್ರಿಲ್ ಆಗಿರುವ ಸಾಧ್ಯತೆ ಇದೆ.

ಟ್ರೆಂಡಿಂಗ್​ ಸುದ್ದಿ

Mango Recipe: ಇಲ್ಲಿದೆ ಮ್ಯಾಂಗೋ ಮಲೈ ಖಾಂಡ್ವಿ ರೋಲ್‌ ರೆಸಿಪಿ; ಹೆಸರಷ್ಟೇ ಅಲ್ಲ ಈ ತಿಂಡಿಯ ರುಚಿಯೂ ಡಿಫ್ರೆಂಟ್‌

ಗಂಡು ಹೆಣ್ಣಿನ ಲಿಂಗ ತಾರತಮ್ಯ ನಿವಾರಣೆಗೆ ಪೋಷಕರ ವ್ಯಕ್ತಿತ್ವ, ಆಲೋಚನಾ ಕ್ರಮ ಹೇಗಿರಬೇಕು? ಮಕ್ಕಳ ಉತ್ತಮ ಮನಸ್ಥಿತಿಗೆ ಅಗತ್ಯ ವಿಧಾನಗಳಿವು

ಹಾಲು-ಮೀನು, ಪಾಲಕ್‌-ಪನೀರ್‌ ಆಯುರ್ವೇದದ ಪ್ರಕಾರ ಯಾವೆಲ್ಲಾ ಪದಾರ್ಥಗಳನ್ನು ಒಟ್ಟಿಗೆ ಸೇವಿಸಬಾರದು, ಇದರ ಪರಿಣಾಮ ಏನಾಗುತ್ತೆ ನೋಡಿ

ಮಳೆಗಾಲದಲ್ಲಿ ಕೇರಳಕ್ಕೆ ಟ್ರಿಪ್‌ ಹೋಗುವ ಪ್ಲಾನ್‌ ಇದ್ರೆ, ಈ 10 ಸಾಂಪ್ರದಾಯಿಕ ತಿನಿಸುಗಳನ್ನು ಟೇಸ್ಟ್‌ ಮಾಡದೇ ಬರಬೇಡಿ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2024: 606 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2024: ಅರ್ಜಿ ಶುಲ್ಕ: ಸಾಮಾನ್ಯ / ಇಡಬ್ಲ್ಯೂಎಸ್ / ಒಬಿಸಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 850 ರೂಪಾಯಿ ಮತ್ತು ಎಸ್ಸಿ / ಎಸ್ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 175 ರೂಪಾಯಿ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2024 ಆಯ್ಕೆ ಪ್ರಕ್ರಿಯೆ: ಆಯ್ಕೆ ಪ್ರಕ್ರಿಯೆಯು ಅರ್ಜಿಗಳ ಸಂಖ್ಯೆ ಮತ್ತು ಅರ್ಹ ಅಭ್ಯರ್ಥಿಗಳನ್ನು ಅವಲಂಬಿಸಿ ಆನ್‌ಲೈನ್ ಪರೀಕ್ಷೆ, ಗುಂಪು ಚರ್ಚೆ, ಅಪ್ಲಿಕೇಶನ್ ಸ್ಕ್ರೀನಿಂಗ್ ಮತ್ತು / ಅಥವಾ ವೈಯಕ್ತಿಕ ಸಂದರ್ಶನವನ್ನು ಒಳಗೊಂಡಿರುತ್ತದೆ.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2024: ಅರ್ಜಿ ಸಲ್ಲಿಸುವ ವಿಧಾನ

  • ಯೂನಿಯನ್ ಬ್ಯಾಂಕ್ ಅಧಿಕೃತ ವೆಬ್‌ಸೈಟ್ www.unionbankofindia.co.in ಗೆ ಭೇಟಿ ನೀಡಿ
  • ಮುಖ ಪುಟದಲ್ಲಿ ನೇಮಕಾತಿ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ನಂತರ "ಯೂನಿಯನ್ ಬ್ಯಾಂಕ್ ನೇಮಕಾತಿ ಯೋಜನೆ 2024-25 (ವಿಶೇಷ ಅಧಿಕಾರಿಗಳು)" ಗಾಗಿ ಅರ್ಜಿ ಲಿಂಕ್ ಮೇಲೆ ಕ್ಲಿಕ್
  • ಅರ್ಜಿಯೊಂದಿಗೆ ಮುಂದುವರಿಯಿರಿ
  • ಅರ್ಜಿ ನಮೂನೆಯನ್ನು ಭರ್ತಿ ಮಾಡಿ
  • ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ
  • ಅರ್ಜಿ ಶುಲ್ಕವನ್ನು ಪಾವತಿಸಿ

ಇದನ್ನೂ ಓದಿ: ಹುಡುಕಿದ್ದಷ್ಟು ಉದ್ಯೋಗ ಸಿಗುತ್ತಿಲ್ಲವೇ, ಈ ರೀತಿ ಜಾಬ್‌ ಸರ್ಚ್‌ ಮಾಡಿ

ಅರ್ಜಿ ಸಲ್ಲಿಸಿದ ಬಳಿಕ ಮುಂದಿನ ಪ್ರಕ್ರಿಯೆಗಾಗಿ ಪ್ರಿಂಟ್ ಕಾಪಿಯೊಂದನ್ನು ತೆಗೆದಿಟ್ಟುಕೊಳ್ಳಿ. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ವಿವರವಾದ ಅಧಿಸೂಚನೆಯನ್ನು ಇಲ್ಲಿ ಪರಿಶೀಲಿಸಬಹುದು.

ಆರ್‌ಬಿಐ ಸಹಾಯಕ ಹುದ್ದೆಗಳ ಪ್ರಿಲಿಮ್ಸ್ ಪರೀಕ್ಷೆಯ ಅಂಕಗಳನ್ನು ಬಿಡುಗಡೆ

ಭಾರತೀಯ ರಿಸರ್ವ್ ಬ್ಯಾಂಕ್-ಆರ್‌ಬಿಐ ಸಹಾಯಕ ಹುದ್ದೆಗಳ ಪ್ರಿಲಿಮ್ಸ್ ಪರೀಕ್ಷೆಯ ಅಂಕಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆಯಲ್ಲಿ ಭಾಗವಹಿಸಿದ್ದ ಅಭ್ಯರ್ಥಿಗಳು ಆರ್‌ಬಿಐನ ಅಧಿಕೃತ ವೆಬ್‌ಸೈಟ್ rbi.org.in ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಆರ್‌ಬಿಐ ಸಹಾಯಕ ಪೂರ್ವಭಾವಿ ಪರೀಕ್ಷೆ 2023ರ ನವೆಂಬರ್ 18 (ಶನಿವಾರ) ಮತ್ತು 19 (ಭಾನುವಾರ) ರಂದು ನಡೆದಿತ್ತು. ಈ ನೇಮಕಾತಿಯಲ್ಲಿ ಒಟ್ಟು 450 ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಗುರಿ ಹೊಂದಲಾಗಿದೆ. ಆರ್‌ಬಿಐ ಸಹಾಯಕ ಪ್ರಿಲಿಮ್ಸ್ ಸ್ಕೋರ್‌ಕಾರ್ಡ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಲು ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ, ಜನ್ಮ ದಿನಾಂಕವನ್ನು ಬಳಸಬಹುದು. ವೆಬ್‌ಸೈಟ್‌ನಲ್ಲಿ ಲಾಗಿನ್ ಆಗಲು ಆ ಮಾಹಿತಿಯ ಅಗತ್ಯವಾಗಿದೆ.

ಪರೀಕ್ಷಾ ಪ್ರಾಧಿಕಾರ 2023ರ ಡಿಸೆಂಬರ್ 31 ರಂದು ಆರ್‌ಬಿಐ ಸಹಾಯಕ ಹುದ್ದೆಗಳಿಗೆ ಮುಖ್ಯ ಲಿಖಿತ ಪರೀಕ್ಷೆಯನ್ನು ನಡೆಸಿದೆ. ಫಲಿತಾಂಶ ಬಾಕಿ ಇದೆ. ಅಭ್ಯರ್ಥಿಗಳನ್ನು ಪ್ರಿಲಿಮ್ಸ್ ಮತ್ತು ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. (This copy first appeared in Hindustan Times Kannada website. To read more like this please logon to kannada.hindustantime.com).

    ಹಂಚಿಕೊಳ್ಳಲು ಲೇಖನಗಳು