logo
ಕನ್ನಡ ಸುದ್ದಿ  /  ಜೀವನಶೈಲಿ  /  ಯುಪಿಎಸ್‌ಸಿ ಸಿವಿಲ್ ಸರ್ವೀಸಸ್ ಪ್ರಿಲಿಮ್ಸ್ ಪರೀಕ್ಷೆ 2024; ಇಂದಿನಿಂದ ನೋಂದಣಿ ಆರಂಭ -Upsc Civil Services Prelims Exam 2024

ಯುಪಿಎಸ್‌ಸಿ ಸಿವಿಲ್ ಸರ್ವೀಸಸ್ ಪ್ರಿಲಿಮ್ಸ್ ಪರೀಕ್ಷೆ 2024; ಇಂದಿನಿಂದ ನೋಂದಣಿ ಆರಂಭ -UPSC Civil Services Prelims Exam 2024

Raghavendra M Y HT Kannada

Feb 14, 2024 06:10 AM IST

ಯುಪಿಎಸ್‌ಸಿ ಸಿವಿಲ್ ಸರ್ವೀಸಸ್ ಪ್ರಿಲಿಮ್ಸ್ ಪರೀಕ್ಷೆ 2024 ನೋಂದಣಿ ಫೆಬ್ರವರಿ 14 ರಿಂದ ಪ್ರಾರಂಭವಾಗಲಿದೆ.

  • UPSC Civil Services Prelims Exam: ಯುಪಿಎಸ್‌ಸಿ ಸಿವಿಲ್ ಸರ್ವೀಸಸ್ ಪ್ರಿಲಿಮ್ಸ್ ಪರೀಕ್ಷೆ 2024 ನೋಂದಣಿ ಫೆಬ್ರವರಿ 14 ರಿಂದ ಪ್ರಾರಂಭವಾಗಲಿದೆ. ಅರ್ಜಿ ಸಲ್ಲಿಸುವ ವಿಧಾನದ ಹಂತಗಳನ್ನು ಇಲ್ಲಿ ನೀಡಲಾಗಿದೆ.

ಯುಪಿಎಸ್‌ಸಿ ಸಿವಿಲ್ ಸರ್ವೀಸಸ್ ಪ್ರಿಲಿಮ್ಸ್ ಪರೀಕ್ಷೆ 2024 ನೋಂದಣಿ ಫೆಬ್ರವರಿ 14 ರಿಂದ ಪ್ರಾರಂಭವಾಗಲಿದೆ.
ಯುಪಿಎಸ್‌ಸಿ ಸಿವಿಲ್ ಸರ್ವೀಸಸ್ ಪ್ರಿಲಿಮ್ಸ್ ಪರೀಕ್ಷೆ 2024 ನೋಂದಣಿ ಫೆಬ್ರವರಿ 14 ರಿಂದ ಪ್ರಾರಂಭವಾಗಲಿದೆ.

ಕೇಂದ್ರ ಲೋಕಸೇವಾ ಆಯೋಗವು- ಯುಪಿಎಸ್‌ಸಿ ನಾಗರಿಕ ಸೇವೆಗಳ ಪ್ರಿಲಿಮ್ಸ್ ಪರೀಕ್ಷೆ 2024 ನೋಂದಣಿ ಪ್ರಕ್ರಿಯೆಯನ್ನು ಇಂದಿನಿಂದ (2024ರ ಫೆಬ್ರವರಿ 14, ಬುಧವಾರ) ಪ್ರಾರಂಭಿಸಲಿದೆ. ನಾಗರಿಕ ಸೇವೆಗಳ (ಪ್ರಿಲಿಮಿನರಿ) ಪರೀಕ್ಷೆ 2024 ಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯುಪಿಎಸ್ಸಿಯ ಅಧಿಕೃತ ವೆಬ್‌ಸೈಟ್‌ upsc.gov.in ಗೆ ಈ ಲಿಂಕ್ ಮೂಲಕ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬಹುದು.

ಟ್ರೆಂಡಿಂಗ್​ ಸುದ್ದಿ

ಮಳೆಗಾಲದಲ್ಲಿ ಕೇರಳಕ್ಕೆ ಟ್ರಿಪ್‌ ಹೋಗುವ ಪ್ಲಾನ್‌ ಇದ್ರೆ, ಈ 10 ಸಾಂಪ್ರದಾಯಿಕ ತಿನಿಸುಗಳನ್ನು ಟೇಸ್ಟ್‌ ಮಾಡದೇ ಬರಬೇಡಿ

Yoga Asanas: ತೂಕ ಇಳಿಯುವ ಜೊತೆಗೆ ದೇಹ ಫಿಟ್‌ ಆಗಿರಬೇಕಾ? ಈ ಸರಳ ಯೋಗಾಸನಗಳನ್ನ ಮನೆಯಲ್ಲೇ ಅಭ್ಯಾಸ ಮಾಡಿ

ಡಯಾಬಿಟಿಸ್‌ ಬಗ್ಗೆ ಚಿಂತೆ ಬೇಡ; ಸಕ್ಕರೆ ಮಟ್ಟವನ್ನು ನಿಯಂತ್ರಿಸಿ, ಆರೋಗ್ಯ ಕಾಪಾಡಿಕೊಳ್ಳಲು ಮಧುಮೇಹಿಗಳು ತಪ್ಪದೇ ಪಾಲಿಸಬೇಕಾದ ನಿಯಮಗಳಿವು

ಮಾವಿನಹಣ್ಣಿನಿಂದ ತಯಾರಿಸಬಹುದು ಒಂದಲ್ಲ, ಎರಡಲ್ಲ ಮೂರು ಬಗೆಯ ಪಾಯಸ; ಈ ಭಾನುವಾರ ನೀವೂ ಮನೆಯಲ್ಲಿ ಟ್ರೈ ಮಾಡಿ, ರೆಸಿಪಿ ಇಲ್ಲಿದೆ

ಯುಪಿಎಸ್‌ಸಿ ಕ್ಯಾಲೆಂಡರ್ ಪ್ರಕಾರ, ಅರ್ಜಿ ಸಲ್ಲಿಸಲು 2024ರ ಮಾರ್ಚ್ 5 ಕೊನೆಯ ದಿನಾಂಕವಾಗಿದೆ. 2024ರ ಮೇ 26 ರಂದು ಪರೀಕ್ಷೆ ನಡೆಸಲಾಗುವುದು. ಅಭ್ಯರ್ಥಿಯು ಭಾರತದ ಕೇಂದ್ರ ಅಥವಾ ರಾಜ್ಯ ಶಾಸಕಾಂಗದ ಕಾಯ್ದೆಯಿಂದ ಸಂಯೋಜಿಸಲ್ಪಟ್ಟ ಯಾವುದೇ ವಿಶ್ವವಿದ್ಯಾಲಯಗಳಿಂದ ಅಥವಾ ಸಂಸತ್ತಿನ ಕಾಯ್ದೆಯಿಂದ ಸ್ಥಾಪಿಸಲಾದ ಇತರ ಶಿಕ್ಷಣ ಸಂಸ್ಥೆಗಳಿಂದ ಪದವಿಯನ್ನು ಪಡೆದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 32 ವರ್ಷ ವಯಸ್ಸಾಗಿರಬೇಕು.

ಯುಪಿಎಸ್ಸಿ ಸಿವಿಲ್ ಸರ್ವೀಸಸ್ ಪ್ರಿಲಿಮ್ಸ್ ಪರೀಕ್ಷೆ 2024: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?

ಇದನ್ನೂ ಓದಿ: 500 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಐಡಿಬಿಐ ನಿರ್ಧಾರ; ಫೆ 12 ರಿಂದ ಅರ್ಜಿ ಸಲ್ಲಿಸಿ

  • ಯುಪಿಎಸ್‌ಸಿ ಅಧಿಕೃತ ವೆಬ್‌ಸೈಟ್‌ upsc.gov.in ಭೇಟಿ ನೀಡಿ
  • ಮುಖಪುಟದಲ್ಲಿ ಲಭ್ಯವಿರುವ ಯುಪಿಎಸ್ಸಿ ಸಿವಿಲ್ ಸರ್ವೀಸಸ್ ಪ್ರಿಲಿಮ್ಸ್ ಪರೀಕ್ಷೆ 2024 ಲಿಂಕ್ ಅನ್ನು ಕ್ಲಿಕ್ ಮಾಡಿ
  • ಹೊಸ ಪುಟ ತೆರೆಯುತ್ತದೆ, ಅಲ್ಲಿ ಅಭ್ಯರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು
  • ನೋಂದಣಿ ಮಾಡಿದ ನಂತರ, ಖಾತೆಗೆ ಲಾಗಿನ್ ಮಾಡಿ
  • ನಮೂನೆಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸಿ
  • ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ ಮತ್ತು ಪುಟವನ್ನು ಡೌನ್ಲೋಡ್ ಮಾಡಿ
  • ಹೆಚ್ಚಿನ ಅಗತ್ಯಕ್ಕಾಗಿ ಅದರ ಹಾರ್ಡ್ ಕಾಪಿಯನ್ನು ಇರಿಸಿಕೊಳ್ಳಿ

ಇದನ್ನೂ ಓದಿ: ವಿಜ್ಞಾನಿಗಳ ನೇಮಕಾತಿಗೆ ಮುಂದಾಗ ಐಸಿಎಂಆರ್; ಫೆ 16ರೊಳಗೆ ಅರ್ಜಿ ಸಲ್ಲಿಸಿ -ICMR Recruitment 2024

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಯುಪಿಎಸ್ಸಿಯ ಅಧಿಕೃತ ವೆಬ್‌ಸೈಟ್‌ ಅನ್ನು ಪರಿಶೀಲಿಸಬಹುದು. (This copy first appeared in Hindustan Times Kannada website. To read more like this please logon to kannada.hindustantime.com).

    ಹಂಚಿಕೊಳ್ಳಲು ಲೇಖನಗಳು