logo
ಕನ್ನಡ ಸುದ್ದಿ  /  ಜೀವನಶೈಲಿ  /  Kannada Rajyotsva: ಮೈಸೂರು ಯಾವಾಗ ಕರ್ನಾಟಕವಾಯಿತು, ಕನ್ನಡ ರಾಜ್ಯೋತ್ಸವದ ಸಮಯದಲ್ಲಿ ಕರ್ನಾಟಕದ ಇತಿಹಾಸ ನೆನಪಿಸಿಕೊಳ್ಳೋಣ

Kannada Rajyotsva: ಮೈಸೂರು ಯಾವಾಗ ಕರ್ನಾಟಕವಾಯಿತು, ಕನ್ನಡ ರಾಜ್ಯೋತ್ಸವದ ಸಮಯದಲ್ಲಿ ಕರ್ನಾಟಕದ ಇತಿಹಾಸ ನೆನಪಿಸಿಕೊಳ್ಳೋಣ

Praveen Chandra B HT Kannada

Oct 30, 2023 06:00 AM IST

ಮೈಸೂರು ರಾಜ್ಯ ಕರ್ನಾಟಕ ರಾಜ್ಯವಾಗಿ ರೂಪುಗೊಂಡ ಇತಿಹಾಸ

    • ನವೆಂಬರ್‌ 1 ಕರ್ನಾಟಕ ರಾಜ್ಯೋತ್ಸವದ ಸಂಭ್ರಮ. ಈ ಸಮಯದಲ್ಲಿ ಕರ್ನಾಟಕದ ಇತಿಹಾಸವನ್ನು ತಿಳಿದುಕೊಳ್ಳುವುದು ಅಗತ್ಯವಾಯಿತು. ಮೈಸೂರು ರಾಜ್ಯವನ್ನು ಅಖಂಡ ಕರ್ನಾಟಕವಾಗಿ ಬದಲಾಯಿಸಿದ ಇತಿಹಾಸವನ್ನು ತಿಳಿದುಕೊಳ್ಳೋಣ ಬನ್ನಿ.
ಮೈಸೂರು ರಾಜ್ಯ ಕರ್ನಾಟಕ ರಾಜ್ಯವಾಗಿ ರೂಪುಗೊಂಡ ಇತಿಹಾಸ
ಮೈಸೂರು ರಾಜ್ಯ ಕರ್ನಾಟಕ ರಾಜ್ಯವಾಗಿ ರೂಪುಗೊಂಡ ಇತಿಹಾಸ

ನವೆಂಬರ್‌ 1 ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗುತ್ತದೆ. ಈ ರಾಜ್ಯೋತ್ಸವ ಏಕೆ ಆಚರಿಸಲಾಗುತ್ತದೆ. ಮೈಸೂರು ರಾಜ್ಯದ ಹೆಸರು ಕರ್ನಾಟಕವಾಗಿ ಬದಲಾಗಿರುವುದು ಯಾವಾಗ? ಕನ್ನಡ ರಾಜ್ಯೋತ್ಸವದ ಇತಿಹಾಸವೇನು? ಇತ್ಯಾದಿ ವಿವರವನ್ನು ಕನ್ನಡಿಗರಾದ ಎಲ್ಲರೂ ತಿಳಿದುಕೊಳ್ಳಬೇಕು. ಕೆಪಿಎಸ್‌ಸಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವವರಿಗೂ ಇದು ಉಪಯುಕ್ತ ಮಾಹಿತಿ. ಶಾಲಾ ಕಾಲೇಜುಗಳ ಪರೀಕ್ಷೆಯಲ್ಲಿಯೂ, ವಿಶೇಷವಾಗಿ ಇತಹಾಸ ವಿದ್ಯಾರ್ಥಿಗಳಿಗೂ ಕರ್ನಾಟಕದ ಇತಿಹಾಸದ ಅರಿವಿರಬೇಕು. ಕನ್ನಡಿಗರಾದ ನಾವು ನಮ್ಮ ರಾಜ್ಯದ ಇತಿಹಾಸವನ್ನು ತಿಳಿದುಕೊಳ್ಳುವುದು ಅತ್ಯಂತ ಅಗತ್ಯವಾಗಿದೆ.

ಟ್ರೆಂಡಿಂಗ್​ ಸುದ್ದಿ

ಮಾವಿನಹಣ್ಣಿನಿಂದ ತಯಾರಿಸಬಹುದು ಒಂದಲ್ಲ, ಎರಡಲ್ಲ ಮೂರು ಬಗೆಯ ಪಾಯಸ; ಈ ಭಾನುವಾರ ನೀವೂ ಮನೆಯಲ್ಲಿ ಟ್ರೈ ಮಾಡಿ, ರೆಸಿಪಿ ಇಲ್ಲಿದೆ

Relationship tips: ವರ್ಷಗಳು ಸರಿದರೂ ದಾಂಪತ್ಯದಲ್ಲಿ ಪ್ರೀತಿಯ ತಾಜಾತನ ಉಳಿಬೇಕು ಅಂದ್ರೆ ಈ 4 ನಿಯಮಗಳನ್ನು ತಪ್ಪದೇ ಪಾಲಿಸಿ

Personality Test: ಚಿತ್ರವನ್ನು ಕಂಡಾಕ್ಷಣ ನಿಮಗೆ ಮೊದಲು ಕಂಡಿದ್ದೇನು? ನಿಮ್ಮ ವ್ಯಕ್ತಿತ್ವದ ಕುರಿತ ರಹಸ್ಯ ವಿಚಾರ ತಿಳಿಸುತ್ತೆ ಈ ಚಿತ್ರ

Brain Teaser: 212=25, 214=47 ಆದ್ರೆ, 215 = ಎಷ್ಟು? ಗಣಿತದಲ್ಲಿ ನೀವು ಜಾಣರಾದ್ರೆ 10 ಸೆಕೆಂಡ್‌ನಲ್ಲಿ ಉತ್ತರ ಹೇಳಿ

ಕನ್ನಡ ರಾಜ್ಯೋತ್ಸವದ ಇತಿಹಾಸ

ಪ್ರತಿವರ್ಷ ನವೆಂಬರ್‌ 1ರಂದು ಕನ್ನಡ ಅಥವಾ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗುತ್ತದೆ. ಮೈಸೂರು ರಾಜ್ಯವು ಕರ್ನಾಟಕವಾದ ದಿನವನ್ನು ಕನ್ನಡ ರಾಜ್ಯೋತ್ಸವ ಎಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು ಯಾವಾಗ ಕರ್ನಾಟಕವಾಯಿತು ಎಂದು ತಿಳಿದುಕೊಳ್ಳುವುದು ಅತ್ಯಂತ ಅಗತ್ಯ. 1956ರ ನವೆಂಬರ್‌ 1ರಂದು ಮೈಸೂರು ರಾಜ್ಯ ಉದಯವಾಯಿತು. ದಕ್ಷಿಣ ಭಾರತದ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ಈ ಮೂಲಕ ವಿಲೀನಗೊಳಿಸಿ ಒಂದು ರಾಜ್ಯವಾಗಿ ಘೋಷಣೆ ಮಾಡಲಾಯಿತು. ಮೈಸೂರು ರಾಜ್ಯವು ರಾಜ್ಯದ ಹೆಸರು ನವೆಂಬರ್‌ 1, 1973 ರಂದು ಕರ್ನಾಟಕ ಎಂದು ಬದಲಾಯಿತು.

ಕರ್ನಾಟಕ ಏಕೀಕರಣ ಚಳುವಳಿಯ ಆರಂಭ

ಆಲೂರು ವೆಂಕಟರಾಯರನ್ನು ಕನ್ನಡದ ಕುಲಪುರೋಹಿತರು ಎಂದು ಕರೆಯಲಾಗುತ್ತದೆ. 1905ರಲ್ಲಿ ಕರ್ನಾಟಕ ಏಕೀಕರಣ ಚಳವಳಿಯನ್ನು ಆಲೂರು ವೆಂಕಟರಾಯರು ಆರಂಭಿಸಿದರು. 1950ರಲ್ಲಿ ಭಾರತ ಗಣರಾಜ್ಯವಾದ ಬಳಿಕ ಭಾಷೆಗಳ ಆಧಾರದಲ್ಲಿ ಪ್ರಾಂತ್ಯಗಳು ರೂಪುಗೊಂಡವು. ರಾಜರ ಆಳ್ವಿಕೆಯಲ್ಲಿದ್ದ ದಕ್ಷಿಣ ಭಾರತದ ಹಲವು ಸಂಸ್ಥಾನಗಳನ್ನು ಒಳಗೊಂಡ ರಾಜ್ಯಗಳು ರೂಪುಗೊಂಡವು. ಕನ್ನಡ ಮಾತನಾಡುವ ಪ್ರಾಂತ್ಯಗಳು ಮೈಸೂರು ರಾಜ್ಯವಾಯಿತು.

ಉತ್ತರ ಕರ್ನಾಟಕದ ಜನರ ತರ್ಕ ಮಾನ್ಯತೆಗಾಗಿ ನವೆಂಬರ್‌ 1, 1973 ರಂದು ಮೈಸೂರು ಹೆಸರನ್ನು ಕರ್ನಾಟಕ ಎಂದು ಬದಲಾಯಿಸಲಾಯಿತು. ಆಗ ದೇವರಾಜ ಅರಸ್ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಅನಕೃ, ಕೆ. ಶಿವರಾಮ ಕಾರಂತ, ಕುವೆಂಪು, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಎ.ಎನ್.ಕೃಷ್ಣರಾವ್ ಮತ್ತು ಬಿ.ಎಂ.ಶ್ರೀಕಂಠಯ್ಯ ಮುಂತಾದವರು ಕರ್ನಾಟಕ ಏಕೀಕರಣಕ್ಕೆ ಮಹತ್ವದ ಕೊಡುಗೆ ನೀಡಿದರು.

ರಾಜ್ಯದ ಹೆಸರನ್ನು ‘ಕರ್ನಾಟಕ’ ಎಂದು ಮಾರ್ಪಡಿಸುವ ಕುರಿತು ಸರ್ಕಾರದ ತೀರ್ಮಾನವನ್ನು ವಿಧಾನಸಭೆಯಲ್ಲಿ ಸ್ವತಃ ಮುಖ್ಯಮಂತ್ರಿ ದೇವರಾಜ ಅರಸು ಅವರೇ ಮಂಡಿಸಿದ್ದರು. ಆ ದಿನವನ್ನು ಅವರು ಇತಿಹಾಸದಲ್ಲಿ ಒಂದು ಹೊಸ ಅಧ್ಯಾಯದ ದಿವಸ ಎಂದು ಬಣ್ಣಿಸಿದ್ದರಲ್ಲದೆ, ‘ಕರ್ನಾಟಕ’ ಎನ್ನುವ ಹೆಸರನ್ನು ಹಿಂದೆ ರಾಜ್ಯ ಗುರುಗಳು ಉಪಯೋಗಿಸುತ್ತಿದ್ದರು. ಕರ್ನಾಟಕ ಸಿಂಹಾಸನಾಧೀಶ್ವರ ಎಂದು ಒಂದು ಕಾಲದಲ್ಲಿ ಮೈಸೂರು ರಾಜರು ಹೆಸರು ಇಟ್ಟುಕೊಂಡಿದ್ದರು. ಹೊಯ್ಸಳರು, ಕದಂಬರರೂ ಇಟ್ಟುಕೊಂಡಿದ್ದರು. ಹೀಗೆ ಒಂದಲ್ಲ ಒಂದು ರೀತಿಯಲ್ಲಿ ಈ ಹೆಸರು ಬರುತ್ತಲೇ ಇತ್ತು. ಸಾಹಿತಿಗಳು ಸಾಹಿತ್ಯದಲ್ಲಿ ‘ಕರ್ನಾಟಕ’ ಎಂಬ ಹೆಸರನ್ನು ಇಡಬಹುದು ಎಂದು ಹೇಳಿದ್ದಾರೆ. ಅದರಂತೆ ಇಲ್ಲಿ ನಿರ್ಣಯವನ್ನು ಮಂಡಿಸಿದ್ದೇನೆ ಎಂದು ವಿವರಣೆಯನ್ನೂ ನೀಡಿದ್ದರು ಎಂದು ಕನ್ನಡ ವಿಕಿಪೀಡಿಯಾದಲ್ಲಿ ವಿವರಣೆಯಿದೆ.

ಕನ್ನಡ ರಾಜ್ಯೋತ್ಸವದ ಸಂಭ್ರಮ

ಮೈಸೂರು ರಾಜ್ಯವು ಕರ್ನಾಟಕವಾಗಿ ರೂಪುಗೊಂಡ ಸವಿನೆನಪಿಗಾಗಿ ಪ್ರತಿವರ್ಷ ನವೆಂಬರ್‌ 1ರಂದು ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತದೆ. ಕನ್ನಡ ನಾಡಗೀತೆ (ಜಯಭಾರತ ಜನನಿಯ ತನುಜಾತೆ )ಯನ್ನು ಹಾಡಲಾಗುತ್ತದೆ. ಸರಕಾರಿ ಕಚೇರಿ ಮತ್ತು ಪ್ರಮುಖ ಪ್ರದೇಶಗಳಲ್ಲಿ ವಾಹನಗಳ ಮೇಲೆ ಭುವನೇಶ್ವರಿ ಚಿತ್ರವನ್ನಿಟ್ಟು ಮೆರವಣಿಗೆ ನಡೆಸಲಾಗುತ್ತದೆ. ರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕ ಸರಕಾರದ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ.

    ಹಂಚಿಕೊಳ್ಳಲು ಲೇಖನಗಳು