ತೂಕ ಇಳಿಕೆಯಿಂದ ಮಧುಮೇಹ ನಿಯಂತ್ರಣದವರೆಗೆ: ಡ್ರ್ಯಾಗನ್ ಹಣ್ಣಿನ ಅದ್ಭುತ ಪ್ರಯೋಜನಗಳಿವು
Sep 29, 2024 06:12 PM IST
ಡ್ರ್ಯಾಗನ್ ಹಣ್ಣಿನ ಸೇವನೆಯಿಂದ ಅದ್ಭುತ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.
ಪಿಟಾಯಾ ಎಂದು ಕರೆಯಲ್ಪಡುವ ಡ್ರ್ಯಾಗನ್ ಹಣ್ಣು ಕೆಂಪು ಬಣ್ಣ ಹಾಗೂ ಬಿಳಿ ಬಣ್ಣವನ್ನು ಹೊಂದಿದ್ದು, ಕಪ್ಪು ಚುಕ್ಕೆಗಳಿವೆ. ಮಧ್ಯ ಅಮೆರಿಕ ಮೂಲದ್ದಾದರೂ ಇಂದು ಪ್ರಪಂಚದಾದ್ಯಂತ ಕಂಡುಬರುತ್ತವೆ. ಈ ಹಣ್ಣಿನ ಸೇವನೆಯಿಂದ ಅದ್ಭುತ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಈ ಬಗ್ಗೆ ಇಲ್ಲಿದೆ ಮಾಹಿತಿ:
ರೋಮಾಂಚಕ ಗುಲಾಬಿ ಚರ್ಮ ಹೊಂದಿರುವ ಡ್ರ್ಯಾಗನ್ ಹಣ್ಣು ನೋಡಲು ಮಾತ್ರವಲ್ಲ ತಿನ್ನಲೂ ಬಹಳ ರುಚಿಕರವಾಗಿರುತ್ತದೆ. ಮಧ್ಯ ಅಮೆರಿಕ ಮೂಲದ ಈ ಹಣ್ಣನ್ನು ಇಂದು ಪ್ರಪಂಚದಾದ್ಯಂತ ಉಷ್ಣವಲಯ ಮತ್ತು ಉಪೋಷ್ಣವಲಯದ ಪ್ರದೇಶಗಳಲ್ಲಿ ಬೆಳೆಸಲಾಗುತ್ತದೆ. ವಿಟಮಿನ್‌ಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ಡ್ರ್ಯಾಗನ್ ಹಣ್ಣನ್ನು ಸೇವಿಸುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಡ್ರ್ಯಾಗನ್ ಹಣ್ಣಿನಲ್ಲಿ ವಿಟಮಿನ್ ಸಿ ಅಂಶವಿದ್ದು, ಇದು ಪ್ರತಿರಕ್ಷಣಾ ಕಾರ್ಯ ಮತ್ತು ಚರ್ಮದ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ಇದರಲ್ಲಿ ಫೈಬರ್ ಅಂಶ ಅಧಿಕವಾಗಿದ್ದು, ಜೀರ್ಣಕಾರಿ ಆರೋಗ್ಯವನ್ನು ಉತ್ತೇಜಿಸುತ್ತದೆ ಹಾಗೆಯೇ ತೂಕ ನಿರ್ವಹಣೆಯಲ್ಲೂ ಪ್ರಮುಖ ಪಾತ್ರ ವಹಿಸುತ್ತದೆ. ಡ್ರ್ಯಾಗನ್ ಫ್ರೂಟ್‌ನಲ್ಲಿ ಕಂಡುಬರುವ ಉತ್ಕರ್ಷಣ ನಿರೋಧಕಗಳು, ಬೀಟಾಲೈನ್‌ಗಳು ಮತ್ತು ವಿಟಮಿನ್ ಇ, ಆಕ್ಸಿಡೇಟಿವ್ ಒತ್ತಡ ಮತ್ತು ಉರಿಯೂತವನ್ನು ನಿಭಾಯಿಸುವಲ್ಲಿ ಸಹಾಯಕವಾಗಿದೆ.
ನಿಮ್ಮ ದೈನಂದಿನ ಆಹಾರದಲ್ಲಿ ಡ್ರ್ಯಾಗನ್ ಹಣ್ಣನ್ನು ಸೇರಿಸಿಕೊಳ್ಳುವುದರಿಂದ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಹಾಗೆಯೇ ಸೇವಿಸಬಹುದು, ಸ್ಮೂಥಿಗಳನ್ನು ತಯಾರಿಸಿ ಅದರಲ್ಲಿ ಡ್ರ್ಯಾಗನ್ ಬೆರೆಸಿ ಸೇವಿಸಬಹುದು ಅಥವಾ ಸಲಾಡ್‌ನಲ್ಲೂ ಸೇವಿಸಬಹುದು. ಪಿಟಾಯಾ ಎಂದೂ ಕರೆಯಲ್ಪಡುವ ಡ್ರ್ಯಾಗನ್ ಒಂದು ರಸಭರಿತ ಹಣ್ಣಾಗಿದೆ. ಪ್ರತಿದಿನ ಡ್ರ್ಯಾಗನ್ ಹಣ್ಣನ್ನು ತಿನ್ನುವುದರಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳು ಸಿಗಲಿವೆ ಅನ್ನೋದು ಇಲ್ಲಿದೆ:
ಡ್ರ್ಯಾಗನ್ ಹಣ್ಣಿನ ಆರೋಗ್ಯ ಪ್ರಯೋಜನಗಳು
ಆಕ್ಸಿಡೇಟಿವ್ ಒತ್ತಡವನ್ನು ತಡೆಯುವಲ್ಲಿ ಸಹಕಾರಿ: ಡ್ರ್ಯಾಗನ್ ಹಣ್ಣಿನಲ್ಲಿ ಫ್ಲೇವನಾಯ್ಡ್‌ಗಳು, ಫೀನಾಲಿಕ್ ಆಮ್ಲ ಮತ್ತು ಬೆಟಾಸಯಾನಿನ್‌ನಂತಹ ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಇವು ಕ್ಯಾನ್ಸರ್ ಮತ್ತು ಅಕಾಲಿಕ ವಯಸ್ಸಾದಂತಹ ಕಾಯಿಲೆಗಳಿಗೆ ಕಾರಣವಾಗುವ ಸ್ವತಂತ್ರ ರಾಡಿಕಲ್‍ಗಳು, ಇನ್ನಿತರೆ ಚರ್ಮಕ್ಕೆ ಯಾವುದೇ ರೀತಿಯ ಹಾನಿಯುಂಟಾಗದಂತೆ ರಕ್ಷಿಸುವಲ್ಲಿ ಸಹಕಾರಿಯಾಗಿದೆ.
ತೂಕ ನಿರ್ವಹಣೆ: ಫೈಬರ್‌ನ ಅತ್ಯುತ್ತಮ ಮೂಲವಾಗಿರುವ ಡ್ರ್ಯಾಗನ್ ಹಣ್ಣಿನಲ್ಲಿ ಪೋಷಕಾಂಶಗಳು ಹೇರಳವಾಗಿವೆ. ಇದು ಜೀರ್ಣಕ್ರಿಯೆಯನ್ನು ಉತ್ತೇಜಿಸುತ್ತದೆ. ಡ್ರ್ಯಾಗನ್ ಹಣ್ಣಿನಲ್ಲಿರುವ ಕಡಿಮೆ ಕ್ಯಾಲೋರಿ ಅಂಶದಿಂದಾಗಿ ತೂಕ ನಷ್ಟಕ್ಕೆ ಅತ್ಯುತ್ತಮ ಆಯ್ಕೆಯಾಗಿದೆ. ಇದರಲ್ಲಿ ಫೈಬರ್ ಅಂಶ ಹೆಚ್ಚಿರುವುದರಿಂದ ಹೊಟ್ಟೆ ತುಂಬಿದ ಅನುಭವ ನೀಡುತ್ತದೆ. ಕಡುಬಯಕೆಗಳನ್ನು ನಿಗ್ರಹಿಸಲು ಮತ್ತು ಅತಿಯಾಗಿ ತಿನ್ನುವುದನ್ನು ತಡೆಯಲು ಸಹಾಯ ಮಾಡುತ್ತದೆ. ಹೆಚ್ಚಿನ ನೀರಿನ ಅಂಶವಿರುವುದರಿಂದ ದೇಹವನ್ನು ಹೈಡ್ರೀಕರಿಸುವಲ್ಲೂ ಪರಿಣಾಮಕಾರಿಯಾಗಿದೆ. ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದ್ದು, ಚಯಾಪಚಯ ಕ್ರಿಯೆಯನ್ನು ಉತ್ತೇಜಿಸುವುದಲ್ಲದೆ ತೂಕವನ್ನು ನಿರ್ವಹಣೆಗೂ ಸಹಕಾರಿಯಾಗಿದೆ.
ರೋಗನಿರೋಧಕ ಶಕ್ತಿ ಹೆಚ್ಚಿಸಲು ಸಹಕಾರಿ: ಡ್ರ್ಯಾಗನ್ ಹಣ್ಣನ್ನು ನಿಯಮಿತವಾಗಿ ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಿಸಲು ಸಹಕಾರಿಯಾಗಿದೆ. ಈ ಹಣ್ಣಿನಲ್ಲಿ ವಿಟಮಿನ್ ಸಿ, ಪ್ರಿಬಯಾಟಿಕ್‍ಗಳು ಹಾಗೂ ಉತ್ಕರ್ಷಣಾ ನಿರೋಧಕಗಳು ಸಮೃದ್ಧವಾಗಿರುವುದರಿಂದ ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗೆಯೇ ಅನಾರೋಗ್ಯ ಮತ್ತು ಸೋಂಕುಗಳು ಬಾರದಂತೆ ತಡೆಯುವಲ್ಲಿ ಸಹಕಾರಿಯಾಗಿದೆ.
ಕರುಳಿನ ಆರೋಗ್ಯವನ್ನು ಉತ್ತೇಜಿಸಲು ಸಹಕಾರಿ: ಪ್ರಿಬಯಾಟಿಕ್‍ಗಳನ್ನು ಹೊಂದಿರುವ ಡ್ರ್ಯಾಗನ್ ಹಣ್ಣು, ಕರುಳಿನಲ್ಲಿರುವ ಉತ್ತಮ ಹಾಗೂ ಕೆಟ್ಟ ಬ್ಯಾಕ್ಟೀರಿಯಾಗಳ ಸಮತೋಲನವನ್ನು ಸುಧಾರಿಸುತ್ತದೆ. ಡ್ರ್ಯಾಗನ್ ಹಣ್ಣಿನಲ್ಲಿ ಫೈಬರ್ ಅಂಶ ಹೇರಳವಾಗಿರುವುದರಿಂದ ಕರುಳಿನ ಆರೋಗ್ಯವನ್ನು ಉತ್ತೇಜಿಸಲು ಸಹಾಯಕವಾಗಿದೆ. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ಮಲಬದ್ಧತೆಯನ್ನು ತಡೆಯಲು ಸಹಾಯ ಮಾಡುತ್ತದೆ. ಹೆಚ್ಚಿನ ನೀರಿನ ಅಂಶವಿರುವುದರಿಂದ ಡ್ರ್ಯಾಗನ್ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಹೈಡ್ರೀಕರಿಸುತ್ತದೆ. ಡ್ರ್ಯಾಗನ್ ಹಣ್ಣಿನಲ್ಲಿರುವ ಉತ್ಕರ್ಷಣ ನಿರೋಧಕಗಳು ಕರುಳಿನ ಉರಿಯೂತವನ್ನು ಕಡಿಮೆ ಮಾಡುತ್ತದೆ ಮತ್ತು ಆಕ್ಸಿಡೇಟಿವ್ ಒತ್ತಡದಿಂದ ರಕ್ಷಿಸುತ್ತದೆ. ಡ್ರ್ಯಾಗನ್ ಹಣ್ಣನ್ನು ಸೇವಿಸುವುದರಿಂದ ಕರುಳಿನ ಆರೋಗ್ಯವನ್ನು ಉತ್ತೇಜಿಸಲು ಸಹಕಾರಿಯಾಗಿದೆ.
ಮಧುಮೇಹ ನಿಯಂತ್ರಣಕ್ಕೆ ಸಹಕಾರಿ: ಡ್ರ್ಯಾಗನ್ ಹಣ್ಣಿನಲ್ಲಿರುವ ಉತ್ಕರ್ಷಣಾ ನಿರೋಧಕಗಳು ಮತ್ತು ಸಂಯುಕ್ತಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಡ್ರ್ಯಾಗನ್ ಹಣ್ಣಿನಸ್ಸಿ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಮತ್ತು ಹೆಚ್ಚಿನ ಫೈಬರ್ ಅಂಶ ಇರುವುದರಿಂದಲೂ ಮಧುಮೇಹ ನಿರ್ವಹಿಸಲು ಪ್ರಯೋಜನಕಾರಿಯಾಗಿದೆ. ಈ ಹಣ್ಣು ಉತ್ಕರ್ಷಣ ನಿರೋಧಕಗಳು ಮತ್ತು ವಿಟಮಿನ್‌ಗಳಲ್ಲಿ ಸಮೃದ್ಧವಾಗಿದ್ದು, ಒಟ್ಟಾರೆ ಆರೋಗ್ಯವನ್ನು ಬೆಂಬಲಿಸುತ್ತದೆ ಮತ್ತು ಉರಿಯೂತವನ್ನು ಕಡಿಮೆ ಮಾಡುವಲ್ಲಿ ಸಹಕಾರಿಯಾಗಿದೆ.
ವಿಭಾಗ