logo
ಕನ್ನಡ ಸುದ್ದಿ  /  ಜೀವನಶೈಲಿ  /  ಡಯಾಬಿಟಿಸ್‌ ಬಗ್ಗೆ ಚಿಂತೆ ಬೇಡ; ಸಕ್ಕರೆ ಮಟ್ಟವನ್ನು ನಿಯಂತ್ರಿಸಿ, ಆರೋಗ್ಯ ಕಾಪಾಡಿಕೊಳ್ಳಲು ಮಧುಮೇಹಿಗಳು ತಪ್ಪದೇ ಪಾಲಿಸಬೇಕಾದ ನಿಯಮಗಳಿವು

ಡಯಾಬಿಟಿಸ್‌ ಬಗ್ಗೆ ಚಿಂತೆ ಬೇಡ; ಸಕ್ಕರೆ ಮಟ್ಟವನ್ನು ನಿಯಂತ್ರಿಸಿ, ಆರೋಗ್ಯ ಕಾಪಾಡಿಕೊಳ್ಳಲು ಮಧುಮೇಹಿಗಳು ತಪ್ಪದೇ ಪಾಲಿಸಬೇಕಾದ ನಿಯಮಗಳಿವು

Reshma HT Kannada

May 19, 2024 07:30 AM IST

google News

ಸಕ್ಕರೆ ಮಟ್ಟವನ್ನು ನಿಯಂತ್ರಿಸಿ, ಆರೋಗ್ಯ ಕಾಪಾಡಿಕೊಳ್ಳಲು ಮಧುಮೇಹಿಗಳಿಗೆ ಇಲ್ಲಿದೆ 10 ಟಿಪ್ಸ್‌

    • ದೀರ್ಘಕಾಲ ಕಾಡುವ ಕಾಯಿಲೆಗಳಲ್ಲಿ ಮಧುಮೇಹವೂ ಒಂದು. ಭಾರತವು ಇತ್ತೀಚಿನ ದಿನಗಳಲ್ಲಿ ಮಧುಮೇಹಿಗಳ ನಾಡಾಗುತ್ತಿದೆ. ಹಿಂದೆಲ್ಲಾ ಸಿರಿವಂತರ ಕಾಯಿಲೆಯೆಂದೇ ಕುಖ್ಯಾತಿ ಪಡೆದಿದ್ದ ಮಧುಮೇಹ ಇಂದು ಮಧ್ಯಮ-ಬಡ ವರ್ಗದ ಜನತೆಯನ್ನೂ ಬಿಡದೇ ಕಾಡುತ್ತಿದೆ. ದೇಹದಲ್ಲಿನ ಸಕ್ಕರೆಮಟ್ಟವನ್ನು ನಿಯಂತ್ರಿಸಿ ಆರೋಗ್ಯ ಕಾಪಾಡಿಕೊಳ್ಳಲು ಮಧುಮೇಹಿಗಳಿಗೆ ಇಲ್ಲಿದೆ ಸಲಹೆ 
ಸಕ್ಕರೆ ಮಟ್ಟವನ್ನು ನಿಯಂತ್ರಿಸಿ, ಆರೋಗ್ಯ ಕಾಪಾಡಿಕೊಳ್ಳಲು ಮಧುಮೇಹಿಗಳಿಗೆ ಇಲ್ಲಿದೆ 10 ಟಿಪ್ಸ್‌
ಸಕ್ಕರೆ ಮಟ್ಟವನ್ನು ನಿಯಂತ್ರಿಸಿ, ಆರೋಗ್ಯ ಕಾಪಾಡಿಕೊಳ್ಳಲು ಮಧುಮೇಹಿಗಳಿಗೆ ಇಲ್ಲಿದೆ 10 ಟಿಪ್ಸ್‌

ಒಂದು ಕಾಲದಲ್ಲಿ ಸಿರಿವಂತರ ಕಾಯಿಲೆ ಎಂದೇ ಕುಖ್ಯಾತಿ ಪಡೆದಿದ್ದ ಮಧುಮೇಹವು ಇಂದು ಮಧ್ಯಮ ವರ್ಗ, ಬಡ ವರ್ಗದವರನ್ನೂ ಬಿಡುತ್ತಿಲ್ಲ. ಭಾರತವು ಮಧುಮೇಹಿಗಳ ನಾಡಾಗಿ ಬದಲಾಗುತ್ತಿದೆ. ಮಧುಮೇಹ ಗುಣಪಡಿಸಲಾಗದ ಕಾಯಿಲೆ ಎಂಬುದು ನಿಜವಾದರೂ ಮಧುಮೇಹದಿಂದ ಬಳಲುತ್ತಿರುವವರು ಸೂಕ್ತ ಜೀವನಶೈಲಿಯನ್ನು ಪಾಲಿಸುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ರಕ್ತದಲ್ಲಿನ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿ ಇಟ್ಟುಕೊಂಡು ಆರೋಗ್ಯ ಕಾಪಾಡಿಕೊಳ್ಳಲು ಮಧುಮೇಹಿಗಳಿಗೆ ಇಲ್ಲಿದೆ ಸಲಹೆ.

1) ನಿಯಮಿತ ಮೇಲ್ವಿಚಾರಣೆ

ಮಧುಮೇಹವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ರಕ್ತದಲ್ಲಿನ ಸಕ್ಕರೆಯ ಮಟ್ಟವು ಅವಶ್ಯ. ನೀವು ಮಧುಮೇಹ ಹೊಂದಿದ್ದರೆ ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಮೇಲ್ವಿಚಾರಣೆ ಮಾಡುವುದು ಮುಖ್ಯ. ಅದರಲ್ಲೂ ವಿಶೇಷವಾಗಿ ನೀವು ಇನ್ಸುಲಿನ್ ಅನ್ನು ಬಳಸಿದರೆ ಇದು ಬಹಳ ಮುಖ್ಯ. ಆಹಾರ, ದೈಹಿಕ ಚಟುವಟಿಕೆ, ಔಷಧಿಗಳು ಮತ್ತು ಒತ್ತಡದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸರಿಹೊಂದಿಸಲು ಅನುವು ಮಾಡಿಕೊಡುತ್ತದೆ.

2) ಆರೋಗ್ಯಕರ ಆಹಾರ ಸೇವನೆ 

ಸಮತೋಲಿತ ಮತ್ತು ಪೌಷ್ಟಿಕ ಆಹಾರವನ್ನು ಅಳವಡಿಸಿಕೊಳ್ಳುವುದು ಮಧುಮೇಹವನ್ನು ನಿರ್ವಹಿಸುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ. ಸಂಸ್ಕರಿಸಿದ ಸಕ್ಕರೆ, ಸ್ಯಾಚುರೇಟೆಡ್ ಕೊಬ್ಬು ಮತ್ತು ಸಂಸ್ಕರಿಸಿದ ಕಾರ್ಬೋಹೈಡ್ರೇಟ್‌ಗಳಿರುವ ಆಹಾರಗಳನ್ನು ಆದಷ್ಟು ಕಡಿಮೆ ಸೇವಿಸಿ. ಇದರ ಬದಲು ಧಾನ್ಯಗಳು, ಹಣ್ಣುಗಳು, ತರಕಾರಿಗಳು ಮತ್ತು ಆರೋಗ್ಯಕರ ಆಹಾರಗಳನ್ನು ಆರಿಸಿ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರ್ವಹಿಸಲು ಆಹಾರ ನಿಯಂತ್ರಣವು ಸಹ ಮುಖ್ಯವಾಗಿದೆ.

3) ಸಕ್ರಿಯರಾಗಿರುವುದು 

ನಿಯಮಿತ ದೈಹಿಕ ಚಟುವಟಿಕೆಯು ಮಧುಮೇಹವನ್ನು ನಿರ್ವಹಿಸಲು ಪ್ರಯೋಜನಕಾರಿಯಾಗಿದೆ. ಏಕೆಂದರೆ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಮತ್ತು ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಪ್ರತಿನಿತ್ಯ ಕನಿಷ್ಠ 30 ನಿಮಿಷಗಳ ವ್ಯಾಯಾಮ ಮಾಡಲು ಮುಂದಾಗಿ. ನಡಿಗೆ, ಸೈಕ್ಲಿಂಗ್, ಈಜು ಅಥವಾ ನೃತ್ಯ ಮುಂತಾದ ವ್ಯಾಯಾಮಗಳಲ್ಲಿ ತೊಡಗಿಸಿಕೊಳ್ಳಿ.

4) ಆರೋಗ್ಯಕರ ತೂಕ ಕಾಪಾಡಿಕೊಳ್ಳುವುದು 

ಮಧುಮೇಹವನ್ನು ನಿರ್ವಹಿಸಲು ಮತ್ತು ತೊಡಕುಗಳ ಅಪಾಯವನ್ನು ಕಡಿಮೆ ಮಾಡಲು ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳುವುದು ಅತ್ಯಗತ್ಯ. ನಿಯಮಿತ ದೈಹಿಕ ಚಟುವಟಿಕೆಯೊಂದಿಗೆ ಆರೋಗ್ಯಕರ ಆಹಾರವನ್ನು ಆಯ್ಕೆ ಮಾಡಬೇಕು. ಇದರಿಂದ ಆರೋಗ್ಯಕರ ತೂಕವನ್ನು ನಿರ್ವಹಿಸಬಹುದು.

5) ಒತ್ತಡ ನಿರ್ವಹಣೆ 

ಒತ್ತಡವು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಪರಿಣಾಮ ಬೀರಬಹುದು. ಹೀಗಾಗಿ ಒತ್ತಡವನ್ನು ನಿರ್ವಹಿಸಲು ಆರೋಗ್ಯಕರ ಮಾರ್ಗಗಳನ್ನು ಕಂಡುಹಿಡಿಯುವುದು ಮುಖ್ಯವಾಗಿದೆ. ಆಳವಾದ ಉಸಿರಾಟದ ವ್ಯಾಯಾಮಗಳು, ಧ್ಯಾನ, ಯೋಗ ಮುಂತಾದವು ಒತ್ತಡದ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

6) ಧೂಮಪಾನ ತ್ಯಜಿಸಿ 

ಹೃದ್ರೋಗ, ಪಾರ್ಶ್ವವಾಯು ಸೇರಿದಂತೆ ಮಧುಮೇಹಕ್ಕೆ ಸಂಬಂಧಿಸಿದ ತೊಡಕುಗಳನ್ನು ಅಭಿವೃದ್ಧಿಪಡಿಸುವ ಅಪಾಯವನ್ನು ಧೂಮಪಾನವು ಹೆಚ್ಚಿಸುತ್ತದೆ. ಧೂಮಪಾನವನ್ನು ತ್ಯಜಿಸಿದರೆ ಒಟ್ಟಾರೆ ಆರೋಗ್ಯವನ್ನು ಸುಧಾರಿಸುವಲ್ಲಿ ಸಹಾಯಕವಾಗಿದೆ.

7) ನಿಯಮಿತ ಆರೋಗ್ಯ ತಪಾಸಣೆಗಳನ್ನು ಪಡೆಯಿರಿ

ಹೃದಯರಕ್ತನಾಳದ ಕಾಯಿಲೆ, ಮೂತ್ರಪಿಂಡ ಕಾಯಿಲೆ, ನರರೋಗ ಮತ್ತು ಕಣ್ಣಿನ ಸಮಸ್ಯೆಗಳಂತಹ ಮಧುಮೇಹ-ಸಂಬಂಧಿತ ತೊಡಕುಗಳನ್ನು ಮೇಲ್ವಿಚಾರಣೆ ಮಾಡಲು ನಿಯಮಿತ ಆರೋಗ್ಯ ತಪಾಸಣೆಗಳು ಮುಖ್ಯವಾಗಿವೆ.

8) ವೈದ್ಯರು ಸೂಚಿಸಿದಂತೆ ಔಷಧಿಗಳನ್ನು ತೆಗೆದುಕೊಳ್ಳಿ

ಮಧುಮೇಹವನ್ನು ನಿರ್ವಹಿಸಲು ತಜ್ಞ ವೈದ್ಯರು ಸೂಚಿಸಿದ ಔಷಧಿಗಳನ್ನು ತೆಗೆದುಕೊಳ್ಳಿ. ತಜ್ಞ ವೈದ್ಯರನ್ನು ಸಂಪರ್ಕಿಸದೆಯೇ ಔಷಧಿಗಳನ್ನು ತೆಗೆದುಕೊಳ್ಳುವುದು ಆರೋಗ್ಯಕ್ಕೆ ಹಾನಿಕಾರಕ.

9) ಆಲ್ಕೋಹಾಲ್ ಸೇವನೆಯನ್ನು ಮಿತಿಗೊಳಿಸಿ

ಆಲ್ಕೋಹಾಲ್ ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಪರಿಣಾಮ ಬೀರಬಹುದು. ಹೀಗಾಗಿ ಆಲ್ಕೋಹಾಲ್ ಸೇವನೆಯನ್ನು ಆದಷ್ಟು ಮಿತಿಗೊಳಿಸಿ ಅಥವಾ ಕುಡಿಯದೇ ಇರುವುದು ಇನ್ನೂ ಒಳ್ಳೆಯದು.

10) ಮಧುಮೇಹ ನಿರ್ವಹಣೆಯ ಬಗ್ಗೆ ಮಾಹಿತಿ ಪಡೆಯಿರಿ

ಮಧುಮೇಹ ನಿರ್ವಹಣೆಯ ಬಗ್ಗೆ ಮಾಹಿತಿ ಪಡೆಯಲು ತಜ್ಞ ವೈದ್ಯರೊಂದಿಗೆ ಸಂಪರ್ಕ ಸಾಧಿಸಿ.

ಮಧುಮೇಹವು ದೀರ್ಘಕಾಲದ ಕಾಯಿಲೆಯಾಗಿದ್ದು, ಮೇದೋಜ್ಜೀರಕ ಗ್ರಂಥಿಯು ಸಾಕಷ್ಟು ಇನ್ಸುಲಿನ್ ಅನ್ನು ಉತ್ಪಾದಿಸದಿದ್ದಾಗ ಅಥವಾ ದೇಹವು ಉತ್ಪಾದಿಸುವ ಇನ್ಸುಲಿನ್ ಅನ್ನು ಪರಿಣಾಮಕಾರಿಯಾಗಿ ಬಳಸಲು ಸಾಧ್ಯವಾಗದಿದ್ದಾಗ ಇದು ಸಂಭವಿಸುತ್ತದೆ. ಇನ್ಸುಲಿನ್ ರಕ್ತದಲ್ಲಿನ ಗ್ಲೂಕೋಸ್ ಅನ್ನು ನಿಯಂತ್ರಿಸುವ ಹಾರ್ಮೋನ್ ಆಗಿದೆ. ಮಧುಮೇಹವು ಒಂದು ಸಲ ದೇಹವನ್ನು ವಕ್ಕರಿಸಿದರೆ ಎಂದಿಗೂ ದೂರವಾಗಲ್ಲ. ಇದನ್ನು ನಿಯಂತ್ರಣದಲ್ಲಿಡುವಲ್ಲಿ ಸದಾ ಗಮನಹರಿಸುವುದು ಮುಖ್ಯವಾಗಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ