logo
ಕನ್ನಡ ಸುದ್ದಿ  /  ಜೀವನಶೈಲಿ  /  ಸೇನಾ ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಮಾರ್ಚ್ 22 ಕೊನೆಯ ದಿನ; ನೇಮಕಾತಿಯ ಸಂಪೂರ್ಣ ವಿವರ ಇಲ್ಲಿದೆ

ಸೇನಾ ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಮಾರ್ಚ್ 22 ಕೊನೆಯ ದಿನ; ನೇಮಕಾತಿಯ ಸಂಪೂರ್ಣ ವಿವರ ಇಲ್ಲಿದೆ

Raghavendra M Y HT Kannada

Mar 21, 2024 02:28 PM IST

google News

ಸೇನಾ ಅಗ್ನಿವೀರ್ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಮಾರ್ಚ್ 22 ಕೊನೆಯ ದಿನವಾಗಿದೆ. ಆಸಕ್ತರು ಇದೇ ಅರ್ಜಿ ಸಲ್ಲಿಸಿ.

    • Indian Army Agniveer Recruitment 2024: ಸೇನಾ ಅಗ್ನಿವೀರ್ ನೇಮಕಾತಿಯಲ್ಲಿ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಾಳೆ (ಮಾರ್ಚ್ 22, ಶುಕ್ರವಾರ) ಕೊನೆಯ ದಿನವಾಗಿದೆ. 
ಸೇನಾ ಅಗ್ನಿವೀರ್ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಮಾರ್ಚ್ 22 ಕೊನೆಯ ದಿನವಾಗಿದೆ. ಆಸಕ್ತರು ಇದೇ ಅರ್ಜಿ ಸಲ್ಲಿಸಿ.
ಸೇನಾ ಅಗ್ನಿವೀರ್ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಮಾರ್ಚ್ 22 ಕೊನೆಯ ದಿನವಾಗಿದೆ. ಆಸಕ್ತರು ಇದೇ ಅರ್ಜಿ ಸಲ್ಲಿಸಿ.

ಭಾರತೀಯ ಸೇನೆಯಲ್ಲಿ (Indian Army) ಸೇವೆ ಮಾಡುವ ಅವಕಾಶ ಗಿಟ್ಟಿಸಿಕೊಳ್ಳುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಗ್ನಿವೀರ್ (Agniveer Recruitment 2024) ಹುದ್ದೆಗಳಿಗೆ ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ. ಯಾಕೆಂದರೆ ನಾಳೆ (ಮಾರ್ಚ್ 22, ಶುಕ್ರವಾರ) ಅರ್ಜಿ ಸಲ್ಲಿಸುವ ಕೊನೆಯ ದಿನವಾಗಿದೆ. ಫೆಬ್ರವರಿ 13 ರಿಂದ ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿತ್ತು. ಇದೀಗ ಈ ಪ್ರಕ್ರಿಯೆ ಕೊನೆಯ ಹಂತಕ್ಕೆ ಬಂದಿದೆ. ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್ indianarmy.nic.in ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಬಹುದಾಗಿದೆ. ಮಾರ್ಚ್ 22ರ ನಂತರ ಸಲ್ಲಿಸುವ ಯಾವುದೇ ಅರ್ಜಿಯನ್ನು ಪರಿಗಣಿಸುವುದಿಲ್ಲ ಎಂದು ಸೇನಾ ನೇಮಕಾತಿ ಅಧಿಕಾರಿಗಳು ಈಗಾಗಲೇ ಸ್ಪಷ್ಟಪಡಿಸಿದ್ದಾರೆ.

ಭಾರತೀಯ ಸೇನೆಯಲ್ಲಿ ಅಗ್ನಿವೀರ್ ವಿವಿಧ ಹುದ್ದೆಗಳ ಭರ್ತಿ ಅರ್ಜಿ ಆಹ್ವಾನ

ಅಗ್ನಿವೀರ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಇಲಾಕೆಯ ಅಗ್ನಿವೀರ್ ಜನರಲ್ ಡ್ಯೂಟಿ (ಜಿಡಿ), ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್ ಅಧಿಕಾರಿ ಸಹಾಯಕ/ಸ್ಟೋರ್ ಕೀಪರ್ ಟೆಕ್ನಿಕಲ್ ಹಾಗೂ ಅಗ್ನಿವೀರ್ ಟ್ರೇಡ್ಸ್‌ಮ್ಯಾನ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ.

ಅಗ್ನಿವೀರ್ ವಿವಿಧ ಹುದ್ದೆಗಳಿಗೆ ಯಾರು ಅರ್ಜಿ ಸಲ್ಲಿಸಲು ವಿದ್ಯಾರ್ಹತೆ

ಅಗ್ನಿವೀರ್ ಜನರ್ ಡ್ಯೂಟಿಗೆ ವಿದ್ಯಾರ್ಹತೆ: ವಿವಿಧ ಹುದ್ದೆಗಳಿಗೆ ಶೈಕ್ಷಣಿಕ ಅರ್ಹತೆ ವಿಭಿನ್ನವಾಗಿದೆ. ಅಗ್ನಿವೀರ್ ಜನರ್ ಡ್ಯೂಟಿಗೆ ಅಭ್ಯರ್ಥಿಗಳು 10ನೇ ತರಗತಿಯಲ್ಲಿ ಕನಿಷ್ಠ ಶೇಕಡಾ 45 ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

ತಾಂತ್ರಿಕ ಹುದ್ದೆಗಳಿಗೆ ವಿದ್ಯಾರ್ಹತೆ: ತಾಂತ್ರಿಕ ಹುದ್ದೆಗೆ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ಯಾವುದೇ ಶೈಕ್ಷಣಿಕ ಸಂಸ್ಥೆಯಿಂದ 12ನೇ ತರಗತಿಯಲ್ಲಿ ಅದರಲ್ಲೂ ವಿಶೇಷವಾಗಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಇಂಗ್ಲಿಷ್‌ನಲ್ಲಿ ಕನಿಷ್ಠ ಶೇಕಡಾ 50 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

ಕ್ಲರ್ಕ್ ಮತ್ತು ಶಾಪ್‌ಕೀಪರ್ ಟೆಕ್ನಿಕಲ್ ಹುದ್ದೆಗೆ ವಿದ್ಯಾರ್ಹತೆ: ಅಭ್ಯರ್ಥಿಗಳು ಯಾವುದೇ ಸ್ಟ್ರೀಮ್‌ನಿಂದ ಕನಿಷ್ಠ ಶೇಕಡಾ 60 ರಷ್ಟು ಅಂಕಗಳೊಂದಿಗೆ 12ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ಅಗ್ನಿವೀರ್ ನೇಮಕಾತಿಯಲ್ಲಿ ನೇಮಕಗೊಳ್ಳಲು ಜಿಡಿ, ತಾಂತ್ರಿಕ ಹಾಗೂ ಟ್ರೇಡ್ಸ್‌ಮನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಎತ್ತರವು 169 ಸೆಂಟಿ ಮೀಟರ್ ಇರಬೇಕು. ಸಹಾಯ ಮತ್ತು ಸ್ಟೋರ್ ಕೀಪರ್ ಟೆಕ್ನಿಕಲ್ ಹುದ್ದೆಗೆ ಅರ್ಜಿದಾರರ ಎತ್ತರ 162 ಸೆಂ.ಮೀ ಆಗಿರಬೇಕು. ಹೆಚ್ಚಿನ ವಿವರಗಳಿಗಾಗಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ.

ಅಗ್ನಿವೀರ್ ನೇಮಕಾತಿಯಲ್ಲಿ ವಯಸ್ಸಿನ ಮಿತಿ

ಸೇನೆಯಲ್ಲಿನ ಅಗ್ನಿವೀರ್ ಯಾವುದೇ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳಿಗೆ ಕನಿಷ್ಠ 17 ವರ್ಷ ಹಾಗೂ ಗರಿಷ್ಠ 21 ವರ್ಷ ವಯೋಮಿತಿ ಇದೆ.

ಅಗ್ನಿವೀರ್ ನೇಮಕಾತಿಯಲ್ಲಿ ಅರ್ಜಿ ಶುಲ್ಕ

ಇನ್ನ ಮೀಸಲಾತಿಯಡಿಯಲ್ಲಿ ವಿವಿಧ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ. ಅಗ್ನಿವೀರ್ ಅರ್ಜಿ ಭರ್ತಿ ಮಾಡಲು 250 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಅಗ್ನಿವೀರ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ

  • ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್ joinindianarmy.nic.in ಗೆ ಭೇಟಿ ನೀಡಿ
  • ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕಾದರೆ ಕ್ಯಾಪ್ಚಾವನ್ನು ನಮೂದಿಸಿದರೆ ಸೈಟ್ ತೆರೆದುಕೊಳ್ಳುತ್ತದೆ
  • ನಂತರ ಮುಖಪುಟಕ್ಕೆ ಹೋಗಿ ಆನ್‌ಲೈನ್ ನೋಂದಣಿ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು
  • ಪುಟದಲ್ಲಿ ಕಾಣುವ ಅರ್ಜಿ ನಮೂನೆಯನ್ನು ಭರ್ತಿ ಮಾಡಿ
  • ಮೊದಲು ನಿಮ್ಮ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಿ
  • ನಂತರ ಅಗತ್ಯವಿರುವ ಗಾತ್ರದಲ್ಲಿ ದಾಖಲೆಗಳನ್ನು ಅಪ್ಲೋಟ್ ಮಾಡಿ
  • ಅರ್ಜಿ ಶುಲ್ಕವನ್ನು ಪಾವತಿಸಿದ ನಂತರ ಸಬ್ಮಿಟ್ ಕೊಡಿ

ಮುಂದಿನ ದಾಖಲೆಗಾಗಿ ನೀವು ತುಂಬಿರುವ ಫಾರ್ಮ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ