logo
ಕನ್ನಡ ಸುದ್ದಿ  /  ಜೀವನಶೈಲಿ  /  Bob Recruitment: ಬ್ಯಾಂಕ್ ಆಫ್ ಬರೋಡಾದಲ್ಲಿ ಸೀನಿಯರ್ ಮ್ಯಾನೇಜರ್ ಹುದ್ದಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ

BOB Recruitment: ಬ್ಯಾಂಕ್ ಆಫ್ ಬರೋಡಾದಲ್ಲಿ ಸೀನಿಯರ್ ಮ್ಯಾನೇಜರ್ ಹುದ್ದಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ

HT Kannada Desk HT Kannada

Dec 26, 2023 12:02 PM IST

ಬ್ಯಾಂಕ್‌ ಆಫ್‌ ಬರೋಡಾದಲ್ಲಿ ಸೀನಿಯರ್‌ ಮ್ಯಾನೇಜರ್‌ ಹುದ್ದೆಗೆ ಅರ್ಜಿ ಆಹ್ವಾನ

  • Bank of Baroda: ಬ್ಯಾಂಕ್‌ ಆಫ್‌ ಬರೋಡಾದಲ್ಲಿ ಸೀನಿಯರ್‌ ಮ್ಯಾನೇಜರ್‌ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು ಅರ್ಜಿ ಸಲ್ಲಿಸಲು ಇಂದು (ಡಿ 26) ಕೊನೆಯ ದಿನವಾಗಿದೆ. ಆಸಕ್ತರು ಇಂದು ಸಂಜೆಯೊಳಗೆ ಅರ್ಜಿ ಸಲ್ಲಿಸಬಹುದು.

ಬ್ಯಾಂಕ್‌ ಆಫ್‌ ಬರೋಡಾದಲ್ಲಿ ಸೀನಿಯರ್‌ ಮ್ಯಾನೇಜರ್‌ ಹುದ್ದೆಗೆ  ಅರ್ಜಿ ಆಹ್ವಾನ
ಬ್ಯಾಂಕ್‌ ಆಫ್‌ ಬರೋಡಾದಲ್ಲಿ ಸೀನಿಯರ್‌ ಮ್ಯಾನೇಜರ್‌ ಹುದ್ದೆಗೆ ಅರ್ಜಿ ಆಹ್ವಾನ

Bank of Baroda: ಬ್ಯಾಂಕ್ ಆಫ್ ಬರೋಡಾ ಡಿಸೆಂಬರ್ 26, 2023 ರಂದು ಸೀನಿಯರ್ ಮ್ಯಾನೇಜರ್ ಪೋಸ್ಟ್‌ಗಳಿಗೆ ನೋಂದಣಿ ಪ್ರಕ್ರಿಯೆಯನ್ನು ನಿಲ್ಲಿಸಲಿದೆ. ಹಿರಿಯ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬ್ಯಾಂಕ್‌ ಆಫ್‌ ಬರೋಡಾದನ ಅಧಿಕೃತ ವೆಬ್‌ಸೈಟ್ bankofbaroda.in ಮೂಲಕ ಅಪ್ಲೈ ಮಾಡಬಹುದು. ನೋಂದಣಿ ಪ್ರಕ್ರಿಯೆಯನ್ನು ಡಿಸೆಂಬರ್ 6, 2023 ರಂದು ಪ್ರಾರಂಭಿಸಲಾಗಿತ್ತು. ಸುಮಾರು 250 ಹುದ್ದೆಗಳನ್ನು ಅರ್ಜಿ ಕರೆಯಲಾಗಿದೆ.

ಟ್ರೆಂಡಿಂಗ್​ ಸುದ್ದಿ

ಮಳೆಗಾಲದಲ್ಲಿ ಕೇರಳಕ್ಕೆ ಟ್ರಿಪ್‌ ಹೋಗುವ ಪ್ಲಾನ್‌ ಇದ್ರೆ, ಈ 10 ಸಾಂಪ್ರದಾಯಿಕ ತಿನಿಸುಗಳನ್ನು ಟೇಸ್ಟ್‌ ಮಾಡದೇ ಬರಬೇಡಿ

Yoga Asanas: ತೂಕ ಇಳಿಯುವ ಜೊತೆಗೆ ದೇಹ ಫಿಟ್‌ ಆಗಿರಬೇಕಾ? ಈ ಸರಳ ಯೋಗಾಸನಗಳನ್ನ ಮನೆಯಲ್ಲೇ ಅಭ್ಯಾಸ ಮಾಡಿ

ಡಯಾಬಿಟಿಸ್‌ ಬಗ್ಗೆ ಚಿಂತೆ ಬೇಡ; ಸಕ್ಕರೆ ಮಟ್ಟವನ್ನು ನಿಯಂತ್ರಿಸಿ, ಆರೋಗ್ಯ ಕಾಪಾಡಿಕೊಳ್ಳಲು ಮಧುಮೇಹಿಗಳು ತಪ್ಪದೇ ಪಾಲಿಸಬೇಕಾದ ನಿಯಮಗಳಿವು

ಮಾವಿನಹಣ್ಣಿನಿಂದ ತಯಾರಿಸಬಹುದು ಒಂದಲ್ಲ, ಎರಡಲ್ಲ ಮೂರು ಬಗೆಯ ಪಾಯಸ; ಈ ಭಾನುವಾರ ನೀವೂ ಮನೆಯಲ್ಲಿ ಟ್ರೈ ಮಾಡಿ, ರೆಸಿಪಿ ಇಲ್ಲಿದೆ

ಅರ್ಹತೆ ಏನಿರಬೇಕು?

ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಲ್ಲಾ ಸೆಮಿಸ್ಟರ್‌ಗಳಲ್ಲಿ ಕನಿಷ್ಠ 60% ಅಂಕಗಳೊಂದಿಗೆ ಯಾವುದೇ ವಿಭಾಗದಲ್ಲಿ ಪದವಿಯನ್ನು ಹೊಂದಿರಬೇಕು ಅಥವಾ ಸ್ನಾತಕೋತ್ತರ/ಎಂಬಿಎ (ಮಾರ್ಕೆಟಿಂಗ್ ಮತ್ತು ಹಣಕಾಸು) ಅಥವಾ ತತ್ಸಮಾನ ವೃತ್ತಿಪರ ಅರ್ಹತೆಯನ್ನು ಹೊಂದಿರಬೇಕು. ವಯೋಮಿತಿಯು 28 ರಿಂದ 37 ವರ್ಷಗಳ ನಡುವೆ ಇರಬೇಕು. ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸಬಹುದು.

ಬ್ಯಾಂಕ್‌ ಆಫ್‌ ಬರೋಡಾ ಸೀನಿಯರ್ ಮ್ಯಾನೇಜರ್ ನೇಮಕಾತಿ 2023: ಅರ್ಜಿ ಸಲ್ಲಿಸುವುದು ಹೇಗೆ?

  • bankofbaroda.in ನಲ್ಲಿ ಬ್ಯಾಂಕ್‌ ಆಫ್‌ ಬರೋಡಾದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
  • ಹೋಂ ಪೇಜ್‌ನಲ್ಲಿ ಲಭ್ಯವಿರುವ ಉದ್ಯೋಗಾವಕಾಶಗಳ ಲಿಂಕ್ ಕ್ಲಿಕ್ ಮಾಡಿ.
  • ಅಭ್ಯರ್ಥಿಗಳು ಬ್ಯಾಂಕ್‌ ಆಫ್‌ ಬರೋಡಾ ಸೀನಿಯರ್ ಮ್ಯಾನೇಜರ್ ನೇಮಕಾತಿ 2023 ಲಿಂಕನ್ನು ಕ್ಲಿಕ್ ಮಾಡಿದಾಗ ಹೊಸ ಪುಟ ತೆರೆಯುತ್ತದೆ.
  • ನೋಂದಣಿ ವಿವರಗಳನ್ನು ನಮೂದಿಸಿ ಮತ್ತು ಸಲ್ಲಿಸು ಕ್ಲಿಕ್ ಮಾಡಿ.
  • ಈಗ ಖಾತೆಗೆ ಲಾಗಿನ್ ಮಾಡಿ ಮತ್ತು ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಅರ್ಜಿ ಶುಲ್ಕವನ್ನು ಪಾವತಿಸಿ ಮತ್ತು ಸಲ್ಲಿಸು ಕ್ಲಿಕ್ ಮಾಡಿ.
  • ಮುಂದಿನ ಅಗತ್ಯಕ್ಕಾಗಿ ಪುಟವನ್ನು ಡೌನ್‌ಲೋಡ್ ಮಾಡಿ ಮತ್ತು ಅದರ ಹಾರ್ಡ್ ಕಾಪಿಯನ್ನು ನಿಮ್ಮ ಬಳಿ ಇಟ್ಟುಕೊಳ್ಳಿ.

ಸಾಮಾನ್ಯ, EWS, ಮತ್ತು OBC ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 600 ರೂ. SC, ST, PWD ಮತ್ತು ಮಹಿಳಾ ಅಭ್ಯರ್ಥಿಗಳಿಗೆ 100 ರೂ. ಆನ್‌ಲೈನ್ ಪರೀಕ್ಷೆ ನಡೆಸಿದರೂ ಅಥವಾ ನಡೆಸದಿದ್ದರೂ ಮತ್ತು ಅಭ್ಯರ್ಥಿಯು ಸಂದರ್ಶನಕ್ಕೆ ಶಾರ್ಟ್‌ಲಿಸ್ಟ್ ಆಗಿದ್ದರೂ ಅಥವಾ ಆಗದಿದ್ದರೂ ಕೂಡಾ ಅಭ್ಯರ್ಥಿಯು ಮರುಪಾವತಿಸಲಾಗದ ಅರ್ಜಿ ಶುಲ್ಕ/ಇಂಟಿಮೇಷನ್ ಶುಲ್ಕಗಳನ್ನು ಪಾವತಿಸಬೇಕಾಗುತ್ತದೆ. ಹೆಚ್ಚಿನ ಸಂಬಂಧಿತ ವಿವರಗಳಿಗಾಗಿ ಅಭ್ಯರ್ಥಿಗಳು ಬ್ಯಾಂಕ್‌ ಆಫ್‌ ಬರೋಡಾದನ ಅಧಿಕೃತ ವೆಬ್‌ಸೈಟ್ ಪರಿಶೀಲಿಸಬಹುದು.

ವಿಭಾಗ

    ಹಂಚಿಕೊಳ್ಳಲು ಲೇಖನಗಳು