logo
ಕನ್ನಡ ಸುದ್ದಿ  /  ಜೀವನಶೈಲಿ  /  Kpsc Recruitment 2022: ಕೆಪಿಎಸ್ಸಿಯಿಂದ ಗಣತಿದಾರರು, ಡೇಟಾ ಎಂಟ್ರಿ ಹುದ್ದೆಗೆ ಅರ್ಜಿ ಆಹ್ವಾನ; ಸಂಬಳ 42,000, ವಿದ್ಯಾರ್ಹತೆ ಪಿಯುಸಿ

KPSC Recruitment 2022: ಕೆಪಿಎಸ್ಸಿಯಿಂದ ಗಣತಿದಾರರು, ಡೇಟಾ ಎಂಟ್ರಿ ಹುದ್ದೆಗೆ ಅರ್ಜಿ ಆಹ್ವಾನ; ಸಂಬಳ 42,000, ವಿದ್ಯಾರ್ಹತೆ ಪಿಯುಸಿ

HT Kannada Desk HT Kannada

Oct 13, 2022 06:24 PM IST

ಕೆಪಿಎಸ್ಸಿಯಿಂದ ಗಣತಿದಾರರು, ಡೇಟಾ ಎಂಟ್ರಿ ಹುದ್ದೆಗೆ ಅರ್ಜಿ ಆಹ್ವಾನ; ಸಂಬಳ 42,000, ಪಿಯುಸಿ ಆಗಿದ್ರೆ ಅರ್ಜಿ ಸಲ್ಲಿಸಿ

    • ಕರ್ನಾಟಕ ಲೋಕಸೇವಾ ಆಯೋಗ, ರಾಜ್ಯ ಸರ್ಕಾರದ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯಲ್ಲಿ ’ಗ್ರೂಪ್ ಸಿ‘ ವಿಭಾಗದಲ್ಲಿ 13 ಗಣತಿದಾರರು ಮತ್ತು ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಕೆಪಿಎಸ್ಸಿಯಿಂದ ಗಣತಿದಾರರು, ಡೇಟಾ ಎಂಟ್ರಿ ಹುದ್ದೆಗೆ ಅರ್ಜಿ ಆಹ್ವಾನ; ಸಂಬಳ 42,000, ಪಿಯುಸಿ ಆಗಿದ್ರೆ ಅರ್ಜಿ ಸಲ್ಲಿಸಿ
ಕೆಪಿಎಸ್ಸಿಯಿಂದ ಗಣತಿದಾರರು, ಡೇಟಾ ಎಂಟ್ರಿ ಹುದ್ದೆಗೆ ಅರ್ಜಿ ಆಹ್ವಾನ; ಸಂಬಳ 42,000, ಪಿಯುಸಿ ಆಗಿದ್ರೆ ಅರ್ಜಿ ಸಲ್ಲಿಸಿ (KPSC)

ಕರ್ನಾಟಕ ಲೋಕಸೇವಾ ಆಯೋಗ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿಸುದ್ದಿಯೊಂದು ಅರಸಿ ಬಂದಿದೆ. ರಾಜ್ಯ ಸರ್ಕಾರದ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯಲ್ಲಿ ಹೈದರಾಬಾದ್ ಕರ್ನಾಟಕ (ಕಲ್ಯಾಣ ಕರ್ನಾಟಕ) ವೃಂದದ ’ಗ್ರೂಪ್ ಸಿ‘ ವಿಭಾಗದಲ್ಲಿ 13 ಗಣತಿದಾರರು ಮತ್ತು ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಟ್ರೆಂಡಿಂಗ್​ ಸುದ್ದಿ

Relationship tips: ವರ್ಷಗಳು ಸರಿದರೂ ದಾಂಪತ್ಯದಲ್ಲಿ ಪ್ರೀತಿಯ ತಾಜಾತನ ಉಳಿಬೇಕು ಅಂದ್ರೆ ಈ 4 ನಿಯಮಗಳನ್ನು ತಪ್ಪದೇ ಪಾಲಿಸಿ

Personality Test: ಚಿತ್ರವನ್ನು ಕಂಡಾಕ್ಷಣ ನಿಮಗೆ ಮೊದಲು ಕಂಡಿದ್ದೇನು? ನಿಮ್ಮ ವ್ಯಕ್ತಿತ್ವದ ಕುರಿತ ರಹಸ್ಯ ವಿಚಾರ ತಿಳಿಸುತ್ತೆ ಈ ಚಿತ್ರ

Brain Teaser: 212=25, 214=47 ಆದ್ರೆ, 215 = ಎಷ್ಟು? ಗಣಿತದಲ್ಲಿ ನೀವು ಜಾಣರಾದ್ರೆ 10 ಸೆಕೆಂಡ್‌ನಲ್ಲಿ ಉತ್ತರ ಹೇಳಿ

ಪಾಯಸದಿಂದ ಕೇಸರಿಬಾತ್‌ವರೆಗೆ, ಬಾಯಲ್ಲಿ ನೀರೂರಿಸುವ ಮಾವಿನಹಣ್ಣಿನ ಸಾಂಪ್ರದಾಯಿಕ ತಿನಿಸುಗಳಿವು; ಈ ರೆಸಿಪಿಗಳನ್ನು ನೀವೂ ಟ್ರೈ ಮಾಡಿ

ಆನ್‌ಲೈನ್‌ ಮ‌ೂಲಕ ಮಾತ್ರ ಅರ್ಜಿ ಸಲ್ಲಿಸುವ ಅವಕಾಶವಿದ್ದು, ಅರ್ಜಿ ಸಲ್ಲಿಸಲು ನವೆಂಬರ್ 11ಕೊನೆ ದಿನವಾಗಿದೆ. ಹಾಗಾದರೆ, ಈ ಹುದ್ದೆಗೆ ವಿದ್ಯಾರ್ಹತೆ ಏನು, ಶುಲ್ಕ ಎಷ್ಟು, ಅರ್ಜಿ ಸಲ್ಲಿಸುವುದು ಹೇಗೆ? ಈ ಎಲ್ಲ ವಿವರ ಈ ಕೆಳಗಿನಂತಿದೆ.

1ನೇ ಹಂತ : ಪ್ರೊಫೈಲ್ ಕ್ರಿಯೇಟ್‌ / ಅಪ್‌ಡೇಟ್‌

2ನೇ ಹಂತ : ಅಪ್ಲಿಕೇಶನ್ ಸಬ್‌ಮಿಷನ್

3ನೇ ಹಂತ : ಅಪ್ಲಿಕೇಶನ್‌ ಶುಲ್ಕ ಪಾವತಿ ಮಾಡುವುದು.

ಯಾರಿಗೆ ಎಷ್ಟು ಅರ್ಜಿ ಶುಲ್ಕ?

ಸಾಮಾನ್ಯ ಅಭ್ಯರ್ಥಿಗಳಿಗೆ 600, ಒಬಿಸಿ ಅಭ್ಯರ್ಥಿಗಳಿಗೆ 300 ಎಸ್.ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಶುಲ್ಕ ವಿನಾಯಿತಿ ಇದೆ.

ಈ ಹುದ್ದೆಗೆ ಶೈಕ್ಷಣಿಕ ವಿದ್ಯಾರ್ಹತೆ ಏನಿರಬೇಕು?

ಪಿ.ಯು.ಸಿ (12ನೇ ತರಗತಿ) ಅಥವಾ ತತ್ಸಮಾನ ತರಗತಿ ಮುಗಿಸಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ವಯೋಮಿತಿ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ. ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ ಮತ್ತು ಎಸ್.ಸಿ ಎಸ್.ಟಿ ಅಭ್ಯರ್ಥಿಗಳಿಗೆ 40ವಿದೆ.

ವೇತನ ಎಷ್ಟು?

ಗ್ರೂಪ್ ಸಿ ವಿಭಾಗದ ಈ ಹುದ್ದೆಗಳಿಗೆ ಆರಂಭಿಕ ವೇತನ ಶ್ರೇಣಿ 21,400 ರೂ. - 42000 ರೂ. ಇರಲಿದೆ.

ಆಯ್ಕೆ ವಿಧಾನ

ಎರಡು ಹಂತಗಳ ನಡೆಯುವ ಪರೀಕ್ಷೆಯಲ್ಲಿ ಮೊದಲಿಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಬಳಿಕ ಎರಡನೆಯ ಹಂತವಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಎಲ್ಲ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ಕಡ್ಡಾಯವಾಗಿರಲಿದೆ. 150 ಅಂಕಗಳ ಒಂದು ಪ್ರಶ್ನೆ ಪತ್ರಿಕೆ ಇದ್ದು, ಕನಿಷ್ಠ 50 ಅಂಕಗಳನ್ನು ಪಡೆಯಬೇಕು. ಇದು ಎಸ್.ಎಸ್.ಎಲ್.ಸಿ ಮಟ್ಟದ ಪ್ರಶ್ನೆ ಪತ್ರಿಕೆ ಆಗಿರುತ್ತದೆ. ಅದೇ ರೀತಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತಲಾ 100 ಅಂಕಗಳಂತೆ ಎರಡು ಪ್ರಶ್ನೆ ಪತ್ರಿಕೆಗಳು ಇರಲಿವೆ.

ಪಠ್ಯಕ್ರಮ ಏನಿರಲಿದೆ; ಪ್ರಚಲಿತ ಘಟನೆ, ದೈನಂದಿನ ಗ್ರಹಿಕೆಯ ವಿಷಯಗಳು, ಭಾರತದ ಸಂವಿಧಾನ, ಕರ್ನಾಟಕ್ಕಕೆ ಸಂಬಂಧಿಸಿದ ಭಾರತದ ಇತಿಹಾಸ, ಭಾರತದ ಭೂಗೋಳ, ರಾಜ್ಯ ಮತ್ತು ಪ್ರಾದೇಶಿಕ ಆಡಳಿತ ಕುರಿತ ವಿಷಯಗಳು, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಂಸ್ಥೆಗಳು ಮತ್ತು ಗ್ರಾಮೀಣ ಸಹಕಾರ ಸಂಸ್ಥೆಗಳಿಗೆ ಸಂಬಂಧಿಸಿದ ಉಪಕ್ರಮಗಳನ್ನು ಒಳಗೊಂಡಂತೆ ಕರ್ನಾಟಕದ ಆರ್ಥಿಕತೆಯ ಅಭಿವೃದ್ಧಿ ಕುರಿತ ವಿಷಯಗಳು, ಕರ್ನಾಟಕದ ಪರಿಸರ ಸಂಬಂಧಿ ಸಮಸ್ಯೆಗಳು ಮತ್ತು ಅಭಿವೃದ್ಧಿ ಕುರಿತ ವಿಷಯಗಳಿರುತ್ತವೆ.

ಪತ್ರಿಕೆ 2: ಮೂರು ವಿಭಾಗದಲ್ಲಿ 100 ಅಂಕಗಳ 100 ಪ್ರಶ್ನೆಗಳಿರುತ್ತವೆ. ಸಾಮಾನ್ಯ ಕನ್ನಡ (35 ಅಂಕ), ಸಾಮಾನ್ಯ ಇಂಗ್ಲಿಷ್ (35 ಅಂಕ), ಕಂಪ್ಯೂಟರ್ ಜ್ಞಾನ (30 ಅಂಕ). ಇದಕ್ಕೆ ಉತ್ತರಿಸಲು 2 ಗಂಟೆ ಸಮಯ ಇರುತ್ತದೆ. ತಪ್ಪು ಉತ್ತರಗಳಿಗೆ ನೆಗೆಟಿವ್‌ ಅಂಕ ಇರಲಿದೆ. ಗಣತಿದಾರರು, ಡೇಟಾ ಎಂಟ್ರಿ ಹುದ್ದೆ ಅಧಿಸೂಚನೆಗಾಗಿ https://kpsc.kar.nic.in ಲಿಂಕ್ ಕಣ್ಣಾಡಿಸಬಹುದು.

    ಹಂಚಿಕೊಳ್ಳಲು ಲೇಖನಗಳು