Millets cooking Competition: ಸಿರಿಧಾನ್ಯ ಅಡುಗೆ ಮಾಡುತ್ತೀರಾ, ನಿಮಗಿದೇ ಇಲ್ಲಿ ಪಾಕ ಸ್ಪರ್ಧೆ: ಗೆದ್ದವರಿಗೆ ಬಹುಮಾನ
Dec 10, 2023 08:30 AM IST
ಕರ್ನಾಟಕ ಕೃಷಿ ಇಲಾಖೆಯು ಸಿರಿಧಾನ್ಯ ಅಡುಗೆ ಸ್ಪರ್ಧೆಯನ್ನು ಹಮ್ಮಿಕೊಂಡಿದೆ.
- Millets cooking competition ಕರ್ನಾಟಕ ಕೃಷಿ ಇಲಾಖೆಯು( Agriculture department) ಜಿಲ್ಲಾ ಮಟ್ಟಗಳಲ್ಲಿ ಸಿರಿಧಾನ್ಯ ಅಡುಗೆ ಸ್ಪರ್ಧೆ ಆಯೋಜಿಸಿದ್ದು, ವಿಜೇತರೊಂದಿಗೆ ರಾಜ್ಯಮಟ್ಟದ ಸ್ಪರ್ಧೆ ನಡೆಸಲಿದೆ.
![ಕರ್ನಾಟಕ ಕೃಷಿ ಇಲಾಖೆಯು ಸಿರಿಧಾನ್ಯ ಅಡುಗೆ ಸ್ಪರ್ಧೆಯನ್ನು ಹಮ್ಮಿಕೊಂಡಿದೆ. ಕರ್ನಾಟಕ ಕೃಷಿ ಇಲಾಖೆಯು ಸಿರಿಧಾನ್ಯ ಅಡುಗೆ ಸ್ಪರ್ಧೆಯನ್ನು ಹಮ್ಮಿಕೊಂಡಿದೆ.](https://images.hindustantimes.com/kannada/img/2023/12/09/550x309/millets_1702125507811_1702125514018.jpg)
ಮೈಸೂರು:ನೀವು ಸಿರಿಧಾನ್ಯದಿಂದ ಬಗೆ ಬಗೆಯ ಅಡುಗೆ ಮಾಡುತ್ತೀರಾ, ಹೊಸ ರುಚಿಯನ್ನು ಉಣ ಬಡಿಸಲು ಸಿದ್ದರಿದ್ದೀರಾ?
ಇದಕ್ಕಾಗಿ ಕೃಷಿ ಇಲಾಖೆ ಮೈಸೂರಿನಲ್ಲಿ ಸಿರಿಧಾನ್ಯ ಪಾಕ ಸ್ಪರ್ಧೆಯನ್ನು ಆಯೋಜಿಸಿದ್ದು. ನೀವು ಇದರಲ್ಲಿ ಪಾಲ್ಗೊಳ್ಳಬಹುದು. ನೀವು ತಯಾರಿಸುವ ಅಡುಗೆಯನ್ನು ಉಣ ಬಡಿಸಿ ಬಹುಮಾನವನ್ನು ಪಡೆದುಕೊಳ್ಳಬಹುದು.
ಅಂತರಾಷ್ಟ್ರೀಯ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ 2024 ರ ಅಂಗವಾಗಿ ಮೈಸೂರು ಜಿಲ್ಲೆಯಲ್ಲಿ ಸಿರಿಧಾನ್ಯ ಪಾಕಸ್ಪರ್ಧೆಯನ್ನು ಕೃಷಿ ಇಲಾಖೆಯಿಂದ ಡಿಸೆಂಬರ್ 13 ರಂದು ಏರ್ಪಡಿಸಲಾಗಿದೆ.
ಸ್ಪರ್ಧೆಯಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು/ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳನ್ನು ಹೊರತುಪಡಿಸಿ ಜಿಲ್ಲೆಯ ಎಲ್ಲಾ ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶವಿದೆ.
ಅಭ್ಯರ್ಥಿಗಳು ತಮ್ಮ ಭಾವ ಚಿತ್ರದೊಂದಿಗೆ ಹೆಸರು, ವಿಳಾಸ ಮತ್ತು ತಯಾರಿಸುವ ಖಾದ್ಯ ಬೇಕಾಗುವ ಸಾಮಾಗ್ರಿಗಳು, ತಯಾರಿಸಲು ಬೇಕಾಗುವ ಸಮಯ ಹಾಗೂ ತಯಾರಿಸುವ ವಿಧಾನದ ಸಂಕ್ಷಿಪ್ತ ಮಾಹಿತಿಯೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
ಡಿಸೆಂಬರ್ 11 ರ ಮಧ್ಯಾಹ್ನ 12 ಗಂಟೆಯೊಳಗೆ ಇ-ಮೇಲ್ ವಿಳಾಸ jdamysuru@gmail.com ಅಥವಾ ಖುದ್ದಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಸಾರ್ವಜನಿಕ ಕಛೇರಿಗಳ ಕಟ್ಟಡ, ನ್ಯೂ ಸಯ್ಯಾಜಿರಾವ್ ರಸ್ತೆ, ಮೈಸೂರು ಈ ವಿಳಾಸಕ್ಕೆ ಸಲ್ಲಿಸಲು ತಿಳಿಸಲಾಗಿದೆ.
ಪ್ರತಿ ಸ್ಪರ್ಧಿಗೆ ಒಂದೇ ಸಸ್ಯಾಹಾರಿ ತಿನಿಸು ತಯಾರಿಸಲು ಅವಕಾಶವಿದೆ. ಅದರಲ್ಲಿ ಖಾರ ಇಲ್ಲವೇ ಸಿಹಿಯಲ್ಲಿ ಒಂದನ್ನು ಆಯ್ಕೆಮಾಡಿಕೊಳ್ಳಬೇಕು.
ತಯಾರಿಸಿದ ತಿನಿಸುಗಳ ಪ್ರದರ್ಶನ,. ಬಳಸಿದ ಸಾಮಗ್ರಿಗಳು, ತೋರಿಕೆ. ರುಚಿ, ಸುವಾಸನೆ, ಪೌಷ್ಠಿಕತೆಗಳ ಮೇಲೆ ಅಂತಿಮ ತೀರ್ಪು ನೀಡಲಾಗುತ್ತದೆ.
ಜಿಲ್ಲಾ ಮಟ್ಟಕ್ಕೆ ಪ್ರಥಮ ಬಹುಮಾನವಾಗಿ ಖಾರ ತಿನಿಸು ಹಾಗೂ ಸಿಹಿ ತಿನಿಸಿಗೆ ತಲಾ ಐದು ಸಾವಿರ ರೂ. ಬಹುಮಾನ ನೀಡಲಾಗುತ್ತದೆ.
ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾಗಿ ಪ್ರಥಮ ಬಹುಮಾನ ಪಡೆದವರು ಡಿ. 23 ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸಿರಿಧಾನ್ಯ ಅಡುಗೆ ಸ್ಪರ್ಧೆಯಲ್ಲಿ ಭಾಗಿಯಾಗಬಹುದು.
ಖಾದ್ಯವನ್ನು ತಯಾರಿಸಲು ಬೇಕಾಗುವ ಸಾಮಗ್ರಿಗಳನ್ನು ಸ್ಪರ್ಧೆಯಲ್ಲಿ ಭಾಗವಹಿಸುವವರೇ ತೆಗೆದುಕೊಂಡು ಹೋಗಬೇಕು. ನಿಗದಿತ ಸ್ಥಳ ಹಾಗೂ ಸಮಯದಲ್ಲಿ ಖಾದ್ಯವನ್ನು ಅಲ್ಲಿಯೇ ತಯಾರಿಸಬೇಕು.
ಹೆಚ್ಚಿನ ಮಾಹಿತಿಗಾಗಿ. ಸಹಾಯಕ ಕೃಷಿ ನಿರ್ದೇಶಕರು ಜಂಟಿ ಕೃಷಿ ನಿರ್ದೇಶಕರ ಕಛೇರಿ, ಮೈಸೂರು ಇವರ ದೂ.ಸಂಖ್ಯೆ 8277933105 ಅನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಭಾಗ