logo
ಕನ್ನಡ ಸುದ್ದಿ  /  ಜೀವನಶೈಲಿ  /  2045ರೊಳಗೆ ಭಾರತದಲ್ಲಿ ಕ್ಯಾನ್ಸರ್ ಪ್ರಕರಣಗಳಲ್ಲಿ ಇನ್ನಷ್ಟು ಏರಿಕೆ ಸಾಧ್ಯತೆ; ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನದ ಉದ್ದೇಶ ತಿಳಿಯಿರಿ

2045ರೊಳಗೆ ಭಾರತದಲ್ಲಿ ಕ್ಯಾನ್ಸರ್ ಪ್ರಕರಣಗಳಲ್ಲಿ ಇನ್ನಷ್ಟು ಏರಿಕೆ ಸಾಧ್ಯತೆ; ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನದ ಉದ್ದೇಶ ತಿಳಿಯಿರಿ

Reshma HT Kannada

Nov 07, 2024 09:57 AM IST

google News

ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ

    • National Cancer Awareness Day: ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಕೂಡ ಒಂದು. ಕ್ಯಾನ್ಸರ್‌ನ ಆರಂಭಿಕ ಪತ್ತೆ, ತಡೆಗಟ್ಟುವಿಕೆ ಮತ್ತು ಚಿಕಿತ್ಸೆಯ ಆಯ್ಕೆಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಭಾರತದಲ್ಲಿ ನವೆಂಬರ್ 7 ರಂದು ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ ಆಚರಿಸಲಾಗುತ್ತದೆ. ಈ ದಿನದ ಇತಿಹಾಸ, ಆಚರಣೆಯ ಮಹತ್ವದ ವಿವರ ಇಲ್ಲಿದೆ.
ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ
ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ (PC: Canva)

ಭಾರತವನ್ನು ಕ್ಯಾನ್ಸರ್ ರಾಜಧಾನಿ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ಕ್ಯಾನ್ಸರ್‌ಗೆ ತುತ್ತಾಗುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಕ್ಯಾನ್ಸರ್ ಎಂಬ ಮಾರಕ ರೋಗವು ಹಲವರ ಜೀವ ತೆಗೆಯುತ್ತಿದೆ. ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿ, ಸೂಕ್ತ ಚಿಕಿತ್ಸೆ ಪಡೆದರೆ ಯಾವುದೇ ಸಮಸ್ಯೆ ಇಲ್ಲ. ಆದರೆ ಆರಂಭಿಕ ಹಂತದಲ್ಲಿ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ ಎಂದರೆ ಬಹಳ ಅಪಾಯ.

ಭಾರತದಲ್ಲಿ ಕ್ಯಾನ್ಸರ್ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿವರ್ಷ ನವೆಂಬರ್ 7 ರಂದು ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನವನ್ನು ಆಚರಿಸಲಾಗುತ್ತದೆ.

ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನವು ಆರಂಭಿಕ ಹಂತದಲ್ಲಿ ಕ್ಯಾನ್ಸರ್ ಅನ್ನು ಪತ್ತೆಹಚ್ಚುವುದು, ಅದರ ತಡೆಗಟ್ಟುವಿಕೆಯನ್ನು ಅರ್ಥಮಾಡಿಕೊಳ್ಳುವುದು ಮತ್ತು ಚಿಕಿತ್ಸಾ ಆಯ್ಕೆಗಳನ್ನು ಅನ್ವೇಷಿಸುವ ಮಹತ್ವವನ್ನು ಒತ್ತಿಹೇಳುತ್ತದೆ. ಇದರೊಂದಿಗೆ ಕ್ಯಾನ್ಸರ್ ಸಂಬಂದಿಸಿದ ಕಳಂಕ ಹಾಗೂ ಭಯವನ್ನು ಕಡಿಮೆ ಮಾಡುವ ಗುರಿಯನ್ನೂ ಈ ದಿನ ಹೊಂದಿದೆ. 2014ರಲ್ಲಿ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ದಿನವನ್ನು ಆಚರಿಸಲು ನಿರ್ಧರಿಸಲಾಯಿತು.

ಇಂದೇ ಜೀವನಶೈಲಿಯಲ್ಲಿ ಬದಲಾವಣೆ ತನ್ನಿ

ಪ್ರತಿ ವರ್ಷ, ಲಕ್ಷಾಂತರ ಹೊಸ ಕ್ಯಾನ್ಸರ್ ಪ್ರಕರಣಗಳು ವರದಿಯಾಗುತ್ತಿವೆ. ಇದು ಕ್ಯಾನ್ಸರ್ ಎಂಬ ಆರೋಗ್ಯ ಸವಾಲನ್ನು ಎದುರಿಸುವ ತುರ್ತು ಅಗತ್ಯವನ್ನು ಎತ್ತಿ ತೋರಿಸುತ್ತದೆ. ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನವು ಕ್ಯಾನ್ಸರ್ ಬಾರದಂತೆ ತಡೆಯುವ ನಿಟ್ಟಿನಲ್ಲಿ ನಮ್ಮ ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ತರಬೇಕು ಎಂಬುದನ್ನು ಒತ್ತಿ ಹೇಳುತ್ತದೆ.

ತಂಬಾಕು ಸೇವನೆ ತ್ಯಜಿಸುವುದು, ವ್ಯಾಯಾಮ ಮಾಡುವುದು, ಆರೋಗ್ಯಕರ ಆಹಾರ ಸೇವನೆ, ನಿಯಮಿತ ವಾಕಿಂಗ್‌, ನಿಯಮಿತ ತಪಾಸಣೆ, ಸಮತೋಲಿತ ಆಹಾರ, ಮತ್ತು ಹೆಚ್ಚು ಸಕ್ರಿಯ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು ಜೀವನಶೈಲಿಯಲ್ಲಿ ಇಂತಹ ಕೆಲವು ಬದಲಾವಣೆಗಳನ್ನು ತರುವ ಉದ್ದೇಶದಿಂದ ವಿವಿಧ ಅಭಿಯಾನಗಳು, ಆರೋಗ್ಯ ತಪಾಸಣಾ ಶಿಬಿರಗಳು, ಶೈಕ್ಷಣಿಕ ಕಾರ್ಯಕ್ರಮಗಳನ್ನು ಈ ದಿನ ಆಯೋಜಿಸಲಾಗುತ್ತದೆ.

ಈ ದಿನದ ಬಗ್ಗೆ ಅರಿವು ಮೂಡಿಸುವುದು ಕ್ಯಾನ್ಸರ್ ಪೀಡಿತ ರೋಗಿಗಳು ಮತ್ತು ಕುಟುಂಬಗಳಿಗೆ ಬೆಂಬಲ ವ್ಯವಸ್ಥೆಗಳು ಮತ್ತು ಲಭ್ಯವಿರುವ ಸಂಪನ್ಮೂಲಗಳ ಪ್ರಾಮುಖ್ಯತೆಯನ್ನು ಒತ್ತಿಹೇಳಲು ಸಹಾಯ ಮಾಡುತ್ತದೆ. ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನವು ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಸಮುದಾಯಗಳು, ಆರೋಗ್ಯ ಪೂರೈಕೆದಾರರು ಮತ್ತು ಸಂಸ್ಥೆಗಳನ್ನು ಒಂದುಗೂಡಿಸುತ್ತದೆ. ಕ್ಯಾನ್ಸರ್ ವಿರುದ್ಧ ಹೋರಾಡಿ ಬದುಕು ಕಟ್ಟಿಕೊಂಡವರನ್ನು ಯೋಧರು ಎಂದು ಸಂಭೋದಿಸಲಾಗುತ್ತದೆ.

ಭಾರತದಲ್ಲಿ ಕ್ಯಾನ್ಸರ್ ಪ್ರಮಾಣ

ವಿಶ್ವ ಆರೋಗ್ಯ ಸಂಸ್ಥೆ (WHO) ವರದಿಯೊಂದರ ಪ್ರಕಾರ ಭಾರತದಲ್ಲಿ 2022 ರಲ್ಲಿ 14.1 ಲಕ್ಷಕ್ಕೂ ಹೆಚ್ಚು ಹೊಸ ಕ್ಯಾನ್ಸರ್ ಪ್ರಕರಣಗಳು ಪತ್ತೆಯಾಗಿದ್ದವು, ಅಲ್ಲದೇ 9.1 ಲಕ್ಷಕ್ಕೂ ಹೆಚ್ಚು ಜನ ಕ್ಯಾನ್ಸರ್‌ನಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಕ್ಯಾನ್ಸರ್ ಏಜೆನ್ಸಿಯಾದ ಇಂಟರ್‌ನ್ಯಾಷನಲ್ ಏಜೆನ್ಸಿ ಫಾರ್ ರಿಸರ್ಚ್ ಆನ್ ಕ್ಯಾನ್ಸರ್‌ನ ಪ್ರಕಾರ ತುಟಿ, ಬಾಯಿ ಹುಣ್ಣು ಹಾಗೂ ಶ್ವಾಸಕೋಶದ ಕ್ಯಾನ್ಸರ್ ಪುರುಷರಲ್ಲಿ ಸಾಮಾನ್ಯವಾಗಿದೆ. ಮಹಿಳೆಯರಲ್ಲಿ, ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್‌ಗಳು ಹೆಚ್ಚಾಗಿ ಕಂಡುಬರುತ್ತವೆ, ಇದು ಹೊಸ ಪ್ರಕರಣಗಳಲ್ಲಿ ಶೇ 27 ಮತ್ತು ಶೇ 18 ರಷ್ಟಿದೆ.

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಭಾರತದಲ್ಲಿ ಕ್ಯಾನ್ಸರ್ ಪ್ರಕರಣಗಳು ಮತ್ತು ಸಾವಿನ ಸಂಖ್ಯೆ 2022 ಮತ್ತು 2045ರ ನಡುವೆ ಹೆಚ್ಚಾಗುವ ನಿರೀಕ್ಷೆಯಿದೆ ಇತ್ತೀಚೆಗೆ ಎಂದು ಹೇಳಿದೆ.

‘2020ಕ್ಕೆ ಹೋಲಿಸಿದರೆ 2025ರಲ್ಲಿ ಭಾರತದಲ್ಲಿ ಕ್ಯಾನ್ಸರ್ ಪ್ರಕರಣಗಳಲ್ಲಿ ಶೇ 12.8 ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದು ಎಂದು ಹೇಳಲಾಗುತ್ತಿದೆ.

ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ ಇತಿಹಾಸ, ಮಹತ್ವ

2014ರ ಸೆಪ್ಟೆಂಬರ್‌ನಲ್ಲಿ ಭಾರತದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ ಹರ್ಷವರ್ಧನ್ ಅವರು ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನವನ್ನು ಸ್ಥಾಪಿಸಿದರು. ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಒಂದು ಸಮಿತಿಯೊಂದನ್ನು ರಚಿಸಲಾಗಿತ್ತು.

ಕ್ಯಾನ್ಸರ್‌ನ ಚಿಕಿತ್ಸೆ ಮತ್ತು ಬದುಕುಳಿಯುವಿಕೆಯ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸುವಲ್ಲಿ ಮುಂಚಿನ ಮಧ್ಯಸ್ಥಿಕೆಯ ಪ್ರಾಮುಖ್ಯತೆಯ ಬಗ್ಗೆ ಸಾರ್ವಜನಿಕರಿಗೆ ತಿಳಿಸಲು ನವೆಂಬರ್ 7 ಅನ್ನು ವಾರ್ಷಿಕ ಆಚರಣೆಯ ದಿನವಾಗಿ ಆಯ್ಕೆ ಮಾಡಲಾಯಿತು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ