logo
ಕನ್ನಡ ಸುದ್ದಿ  /  ಜೀವನಶೈಲಿ  /  ಹೃದಯದ ಆರೋಗ್ಯವನ್ನು ಉತ್ತೇಜಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿರ್ವಹಿಸುವವರೆಗೆ: ಅಗಸೆ ಬೀಜಗಳ ಆರೋಗ್ಯ ಪ್ರಯೋಜನಗಳು ಹಲವು

ಹೃದಯದ ಆರೋಗ್ಯವನ್ನು ಉತ್ತೇಜಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿರ್ವಹಿಸುವವರೆಗೆ: ಅಗಸೆ ಬೀಜಗಳ ಆರೋಗ್ಯ ಪ್ರಯೋಜನಗಳು ಹಲವು

Priyanka Gowda HT Kannada

Sep 27, 2024 05:03 PM IST

google News

ಪೌಷ್ಟಿಕಾಂಶ ದಟ್ಟವಾದ ಅಗಸೆ ಬೀಜಗಳಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಇಲ್ಲಿದೆ ಮಾಹಿತಿ:

  • ನೋಡಲು ಚಿಕ್ಕದಾಗಿದ್ದರೂ ಈ ಅಗಸೆ ಬೀಜಗಳ ಆರೋಗ್ಯ ಪ್ರಯೋಜನಗಳು ಹಲವು. ಆಹಾರದಲ್ಲಿ ಅಗಸೆ ಬೀಜಗಳನ್ನು ಸೇರಿಸುವ ಮೂಲಕ ಹಲವಾರು ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಪೌಷ್ಟಿಕಾಂಶ ದಟ್ಟವಾದ ಅಗಸೆ ಬೀಜಗಳಿಂದ ಏನೆಲ್ಲಾ ಉಪಯೋಗಗಳಿವೆ ಇಲ್ಲಿದೆ ಮಾಹಿತಿ:

ಪೌಷ್ಟಿಕಾಂಶ ದಟ್ಟವಾದ ಅಗಸೆ ಬೀಜಗಳಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಇಲ್ಲಿದೆ ಮಾಹಿತಿ:
ಪೌಷ್ಟಿಕಾಂಶ ದಟ್ಟವಾದ ಅಗಸೆ ಬೀಜಗಳಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಇಲ್ಲಿದೆ ಮಾಹಿತಿ: (freepik)

ಅಗಸೆ ಬೀಜಗಳು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದ್ದು, ಒಮೆಗಾ-3 ಕೊಬ್ಬಿನಾಮ್ಲಗಳು, ಫೈಬರ್ ಮತ್ತು ಲಿಗ್ನಾನ್‌ಗಳಲ್ಲಿ ಸಮೃದ್ಧವಾಗಿದೆ. ಜೀರ್ಣಕ್ರಿಯೆಯನ್ನು ಬೆಂಬಲಿಸುವುದರಿಂದ ಹಿಡಿದು ಹೃದಯದ ಆರೋಗ್ಯವನ್ನು ಉತ್ತೇಜಿಸುವರೆಗೆ ಅಗಸೆ ಬೀಜಗಳು ಬಹಳ ಪ್ರಯೋಜನಕಾರಿಯಾಗಿದೆ. ಇದನ್ನು ಸೂಪರ್ ಫುಡ್ ಎಂದೂ ಪರಿಗಣಿಸಲಾಗುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಕೂಡ ಇದು ಸಹಾಯ ಮಾಡುತ್ತದೆ. ಉರಿಯೂತವನ್ನು ಕಡಿಮೆ ಮಾಡುವ, ಹಾರ್ಮೋನುಗಳ ಸಮತೋಲನವನ್ನು ಹಾಗೂ ಚರ್ಮ ಮತ್ತು ಕೂದಲಿನ ಆರೋಗ್ಯವನ್ನು ಹೆಚ್ಚಿಸುವ ಸಾಮರ್ಥ್ಯಕ್ಕೂ ಹೆಸರುವಾಸಿಯಾಗಿದೆ. ಅಗಸೆ ಬೀಜಗಳನ್ನು ಸ್ಮೂಥಿಗಳು ಅಥವಾ ಇನ್ನಿತರೆ ಆಹಾರಗಳಿಗೆ ಸೇರಿಸಿ ಸೇವಿಸಬಹುದು. ಅಗಸೆ ಬೀಜಗಳ ಏಳು ಆರೋಗ್ಯ ಪ್ರಯೋಜನಗಳ ಬಗ್ಗೆ ಇಲ್ಲಿ ತಿಳಿಸಲಾಗಿದೆ:

ಅಗಸೆ ಬೀಜಗಳ ಏಳು ಆರೋಗ್ಯ ಪ್ರಯೋಜನಗಳು

ಒಮೆಗಾ-3 ಕೊಬ್ಬಿನಾಮ್ಲಗಳಲ್ಲಿ ಸಮೃದ್ಧ: ಅಗಸೆ ಬೀಜಗಳು ಒಮೆಗಾ-3 ಕೊಬ್ಬಿನಾಮ್ಲಗಳಲ್ಲಿ ಸಮೃದ್ಧವಾಗಿದೆ. ಒಮೆಗಾ -3 ಉರಿಯೂತದ ಗುಣಲಕ್ಷಣಗಳನ್ನು ಹೊಂದಿದ್ದು, ಇದು ಹೃದಯದ ಆರೋಗ್ಯವನ್ನು ಬೆಂಬಲಿಸುತ್ತದೆ. ಅಲ್ಲದೆ, ದೀರ್ಘಕಾಲದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹಾಗೆಯೇ ಮೆದುಳಿನ ಕಾರ್ಯವನ್ನು ಸುಧಾರಿಸುವಲ್ಲೂ ಸಹಕಾರಿ.

ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧ: ಅಗಸೆ ಬೀಜಗಳು ಲಿಗ್ನಾನ್ಸ್, ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದೆ. ಇದು ಆಕ್ಸಿಡೇಟಿವ್ ಒತ್ತಡವನ್ನು ಎದುರಿಸಲು ಮತ್ತು ದೇಹದಲ್ಲಿ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಉತ್ಕರ್ಷಣ ನಿರೋಧಕಗಳು ಜೀವಕೋಶಗಳನ್ನು ಹಾನಿಯಿಂದ ರಕ್ಷಿಸುತ್ತವೆ. ಇದು ವಯಸ್ಸಾದ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ ಮತ್ತು ಕ್ಯಾನ್ಸರ್ ಮತ್ತು ಹೃದ್ರೋಗಕ್ಕೆ ಸಂಬಂಧಿಸಿದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

ಹೃದಯದ ಆರೋಗ್ಯವನ್ನು ಬೆಂಬಲಿಸಲು ಸಹಕಾರಿ: ಅಗಸೆ ಬೀಜಗಳು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು, ರಕ್ತದೊತ್ತಡವನ್ನು ನಿಯಂತ್ರಿಸಲು ಮತ್ತು ಅಪಧಮನಿಯ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇವೆಲ್ಲವೂ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ನಿರ್ಣಾಯಕವಾಗಿವೆ.

ಜೀರ್ಣಕ್ರಿಯೆಯ ಆರೋಗ್ಯವನ್ನು ಉತ್ತೇಜಿಸುವಲ್ಲಿ ಸಹಕಾರಿ: ಅಗಸೆ ಬೀಜಗಳು ಕರಗುವ ಮತ್ತು ಕರಗದ ಫೈಬರ್ ಎರಡರ ಅತ್ಯುತ್ತಮ ಮೂಲವಾಗಿದೆ. ಇದು ಕರುಳಿನ ಚಲನೆಯನ್ನು ನಿಯಂತ್ರಿಸಲು, ಮಲಬದ್ಧತೆಯನ್ನು ತಡೆಯಲು ಮತ್ತು ಕರುಳಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಆರೋಗ್ಯಕರ ಜೀರ್ಣಾಂಗ ವ್ಯವಸ್ಥೆಯು ಪೋಷಕಾಂಶಗಳನ್ನು ಹೀರಿಕೊಳ್ಳಲು ಮತ್ತು ಒಟ್ಟಾರೆ ಆರೋಗ್ಯಕ್ಕೆ ಅತ್ಯಗತ್ಯವಾಗಿದೆ.

ಹಾರ್ಮೋನುಗಳನ್ನು ಸಮತೋಲನಗೊಳಿಸಲು ಸಹಕಾರಿ: ಅಗಸೆ ಬೀಜಗಳಲ್ಲಿನ ಲಿಗ್ನಾನ್‌ಗಳು ಫೈಟೊಸ್ಟ್ರೋಜೆನಿಕ್ ಗುಣಲಕ್ಷಣಗಳನ್ನು ಹೊಂದಿವೆ. ವಿಶೇಷವಾಗಿ ಮಹಿಳೆಯರಲ್ಲಿ ಇವು ಹಾರ್ಮೋನ್ ಮಟ್ಟವನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ. ಇದು ಋತುಬಂಧದ ಲಕ್ಷಣಗಳನ್ನು ಸರಾಗಗೊಳಿಸುತ್ತದೆ. ಮೂಳೆಯ ಆರೋಗ್ಯವನ್ನು ಸುಧಾರಿಸುತ್ತದೆ ಮತ್ತು ಸ್ತನ ಕ್ಯಾನ್ಸರ್‌ನಂತಹ ಹಾರ್ಮೋನ್ ಸಂಬಂಧಿತ ಕ್ಯಾನ್ಸರ್‌ಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

ಆರೋಗ್ಯಕರ ಚರ್ಮ ಮತ್ತು ಕೂದಲನ್ನು ಉತ್ತೇಜಿಸಲು ಸಹಕಾರಿ: ಅಗಸೆ ಬೀಜಗಳಲ್ಲಿನ ಒಮೆಗಾ -3 ಕೊಬ್ಬಿನಾಮ್ಲಗಳು ಮತ್ತು ಉತ್ಕರ್ಷಣ ನಿರೋಧಕಗಳು ತ್ವಚೆಯ ಸುಕ್ಕುಗಳನ್ನು ಕಡಿಮೆ ಮಾಡಲು ಮತ್ತು ಆರೋಗ್ಯಕರ ಕೂದಲನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ತಾರುಣ್ಯದಂತೆ ಕಾಣಲು ಇದು ಸಹಕಾರಿ. ಹೊರನೋಟಕ್ಕೆ ಮಾತ್ರವಲ್ಲ, ಆಂತರಿಕವಾಗಿಯೂ ಚರ್ಮ ಹಾಗೂ ಕೂದಲಿನ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ.

ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರ್ವಹಿಸಲು ಸಹಕಾರಿ: ಅಗಸೆ ಬೀಜಗಳು ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿರುತ್ತವೆ. ಫೈಬರ್‌ನಲ್ಲಿ ಸಮೃದ್ಧವಾಗಿರುವ ಇವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಅಲ್ಲದೆ, ಟೈಪ್ 2 ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ