logo
ಕನ್ನಡ ಸುದ್ದಿ  /  Nation And-world  /  Amit Shah To Attend Road Show, Public Meeting In Poll-bound Karnataka Tomorrow

Amit Shah Karnataka visit: ನಾಳೆ ರಾಜ್ಯಕ್ಕೆ ಚುನಾವಣಾ ಚಾಣಾಕ್ಷ ಭೇಟಿ.. ರೋಡ್‌ ಶೋ, ಸಾರ್ವಜನಿಕ ಸಭೆಯಲ್ಲಿ ಭಾಗಿ

HT Kannada Desk HT Kannada

Jan 27, 2023 05:25 PM IST

ಕೇಂದ್ರ ಗೃಹ ಸಚಿವ ಅಮಿತ್ ಶಾ

    • ಕರ್ನಾಟಕದಲ್ಲಿ ವಿಧಾನಸಭಾ ಚುನಾವಣಾ ಕಾವು ಹೆಚ್ಚಾಗುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ನಾಳೆ (ಶನಿವಾರ) ರೋಡ್‌ ಶೋ, ಸಾರ್ವಜನಿಕ ಸಭೆ ಸೇರಿದಂತೆ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ
ಕೇಂದ್ರ ಗೃಹ ಸಚಿವ ಅಮಿತ್ ಶಾ

ನವದೆಹಲಿ: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣಾ ಕಾವು ಹೆಚ್ಚಾಗುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ನಾಳೆ (ಶನಿವಾರ) ರೋಡ್‌ ಶೋ, ಸಾರ್ವಜನಿಕ ಸಭೆ ಸೇರಿದಂತೆ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಟ್ರೆಂಡಿಂಗ್​ ಸುದ್ದಿ

Gold Rate Today: ಚಿನ್ನಾಭರಣ ಪ್ರಿಯರಿಗೆ ಇಲ್ಲಿದೆ ಗುಡ್‌ನ್ಯೂಸ್‌; 10ಗ್ರಾಂ ಚಿನ್ನಕ್ಕೆ 1000 ರೂ ಇಳಿಕೆ, ಬೆಳ್ಳಿ ದರವೂ ಕುಸಿತ

RED NOTICE: ಇಂಟರ್‌ಪೋಲ್ ರೆಡ್ ನೋಟಿಸ್‌ ಎಂದರೇನು, ಇದನ್ನು ಯಾರು ಯಾವಾಗ ಪ್ರಕಟಿಸುತ್ತಾರೆ, ಇದರ ಮಹತ್ವವೇನು

ಎಲ್‌ಪಿಜಿ ವಾಣಿಜ್ಯ ಸಿಲಿಂಡರ್ ದರ 19 ರೂ ಇಳಿಕೆ; ಬೆಂಗಳೂರು, ದೆಹಲಿ, ಮುಂಬಯಿ, ಚೆನ್ನೈನಲ್ಲಿ ಎಲ್‌ಪಿಜಿ ದರ ಹೀಗಿದೆ

Gold Rate Today: ಮೇ ತಿಂಗಳ ಮೊದಲ ದಿನ ಸ್ಥಿರವಾದ ಚಿನ್ನ, ಬೆಳ್ಳಿ ದರ; ಕರ್ನಾಟಕದ ಇಂದಿನ ಬೆಲೆ ಗಮನಿಸಿ

ಇಂದು ರಾತ್ರಿಯೇ ಅಮಿತ್​ ಶಾ ಹುಬ್ಬಳ್ಳಿಗೆ ಬಂದು ತಂಗಲಿರುವ ಸಾಧ್ಯತೆಯೂ ಇದೆ. ನಾಳೆ ಬೆಳಗ್ಗೆ 10.30 ಕ್ಕೆ ಹುಬ್ಬಳ್ಳಿಯ ಕೆಎಲ್‌ಇ ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ಬಿ.ವಿ.ಭೂಮರಡ್ಡಿ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಪ್ಲಾಟಿನಂ ಜುಬಿಲಿ ಕಾರ್ಯಕ್ರಮದಲ್ಲಿ ಅಮಿತ್​ ಶಾ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನದ ಸುಮಾರಿಗೆ ಧಾರವಾಡದಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯ (ಎನ್‌ಎಫ್‌ಎಸ್‌ಯು)ದ ಶಂಕುಸ್ಥಾಪನೆಯನ್ನು ಸಚಿವರು ನೆರವೇರಿಸಲಿದ್ದಾರೆ. ದಕ್ಷಿಣ ಭಾರತದಲ್ಲಿ ಪ್ರಪ್ರಥಮ ಬಾರಿಗೆ ಕರ್ನಾಟಕದಲ್ಲಿ ಅದರಲ್ಲೂ ಹುಬ್ಬಳ್ಳಿ- ಧಾರವಾಡ ನಗರಕ್ಕೆ ವಿಧಿ ವಿಜ್ಞಾನ ಶಾಸ್ತ್ರ ವಿಶ್ವವಿದ್ಯಾಲಯ ಸ್ಥಾಪಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಈ ಹಿಂದೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದರು.

ಬಳಿಕ ಧಾರವಾಡದ ಕುಂದಗೋಳದ ಬ್ರಹ್ಮದೇವರ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿ ರೋಡ್‌ಶೋ ನಡೆಸಲಿದ್ದಾರೆ. ಬಳಿಕ ಬೆಳಗಾವಿ ಜಿಲ್ಲೆಯಲ್ಲಿರುವ ಎಂ.ಕೆ.ಹುಬ್ಬಳ್ಳಿ ಗ್ರಾಮದಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ವರ್ಷ ಕರ್ನಾಟಕ, ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್ ಮತ್ತು ತ್ರಿಪುರ - ಈ 9 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿದೆ. ಕರ್ನಾಟಕದಲ್ಕಿ ಏಪ್ರಿಲ್​​ ತಿಂಗಳ ಮಧ್ಯದಲ್ಲಿ ಅಥವಾ ಮೇ ತಿಂಗಳ ಆರಂಭದಲ್ಲಿ ಚುನಾವಣೆ ನಡೆಯಲಿದೆ. ಈ ಚುನಾವಣೆಗಳು 2024ರ ಲೋಕಸಭಾ ಚುನಾವಣೆಗೆ ಸೆಮಿಫೈನಲ್​ ಇದ್ದಂತೆ. ಹೀಗಾಗಿ ಎಲ್ಲಾ ಪಕ್ಷಗಳು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿವೆ.

ಕರ್ನಾಟಕದಲ್ಲಿ ಮತ್ತೊಮ್ಮೆ ಸರ್ಕಾರ ರೂಪಿಸಲು ಬಿಜೆಪಿ ಪ್ಲಾನ್​ ಮಾಡುತ್ತಿದ್ದು, ಚುನಾವಣಾ ಚಾಣಾಕ್ಷ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಕಳೆದ ಡಿಸೆಂಬರ್​​ನಲ್ಲಿ ಮೂರು ದಿನಗಳ ಕಾಲ ಅಮಿತ್​ ಶಾ ರಾಜ್ಯ ಭೇಟಿಯಲ್ಲಿದ್ದರು. ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಹಳೆ ಮೈಸೂರು ಭಾಗದ ಮತದಾರರನ್ನು ಸೆಳೆಯಲು ಮಂಡ್ಯದಲ್ಕಿ ಲ್ಲಿ ಬೃಹತ್​ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಬಳಿಕ ಬೆಂಗಳೂರಿನಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗಿದ್ದರು.

Siddarmaiah:ಅಮಿತ್‌ ಶಾ ಒಂದಲ್ಲ, ನೂರು ಬಾರಿ ರಾಜ್ಯಕ್ಕೆ ಬಂದರೂ ಅಧಿಕಾರಕ್ಕೆ ಬರೋದು ನಾವೇ: ಸಿದ್ದರಾಮಯ್ಯ ಭರವಸೆ

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಕರ್ನಾಟಕಕ್ಕೆ ಹಲವು ಬಾರಿ ಭೇಟಿ ನೀಡಲಿದ್ದಾರೆ. ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೇರಿಸುವ ಪಣದೊಂದಿಗೆ, ಅಮಿತ್‌ ಶಾ ಹಲವು ತಂತ್ರಗಳನ್ನು ಹೆಣೆಯಲಿದ್ದಾರೆ. ಅದರೆ ಅಮಿತ್‌ ಶಾ ಅವರ ಭೇಟಿಯಿಂದ ಏನೂ ಪ್ರಯೋಜನವಾಗದು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಂದಲ್ಲ, ನೂರು ಬಾರಿ ರಾಜ್ಯಕ್ಕೆ ಬಂದರೂ ಬಿಜೆಪಿಯನ್ನು ಗೆಲ್ಲಿಸಲು ಸಾಧ್ಯವಿಲ್ಲ. ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಯಾಗುವುದು ಶತಸಿದ್ಧ ಎಂದು ಪ್ರತಿಪಕ್ಷ ಸಿದ್ದರಾಮಯ್ಯ ಗುಡುಗಿದ್ದಾರೆ. ಅಮಿತ್‌ ಶಾ ಅವರ ಪುನರಾವರ್ತಿತ ಭೇಟಿಯಿಂದ ಬಿಜೆಪಿಗೆ ಯಾವುದೇ ಲಾಭವಿಲ್ಲ ಎಂದು ಅಭಿಪ್ರಾಯಪಟ್ಟರು. ವಿವರ ಓದಿಗೆ ಇಲ್ಲಿ ಕ್ಲಿಕ್​ ಮಾಡಿ

    ಹಂಚಿಕೊಳ್ಳಲು ಲೇಖನಗಳು