logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Andhra Pradesh Election: ಏಪ್ರಿಲ್ ತಿಂಗಳಲ್ಲಿ ಆಂಧ್ರ ವಿಧಾನಸಭೆ ಚುನಾವಣೆ ಸಾಧ್ಯತೆ; ಚುನಾವಣಾ ಆಯೋಗದಿಂದ ಸಿದ್ಧತೆ ಪರಿಶೀಲನೆ

Andhra Pradesh Election: ಏಪ್ರಿಲ್ ತಿಂಗಳಲ್ಲಿ ಆಂಧ್ರ ವಿಧಾನಸಭೆ ಚುನಾವಣೆ ಸಾಧ್ಯತೆ; ಚುನಾವಣಾ ಆಯೋಗದಿಂದ ಸಿದ್ಧತೆ ಪರಿಶೀಲನೆ

Raghavendra M Y HT Kannada

Dec 23, 2023 05:07 PM IST

ಆಂಧ್ರಪ್ರದೇಶಕ್ಕೆ ಭೇಟಿ ನೀಡಿರುವ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳು ವಿಧಾನಸಭೆ ಚುನಾವಣೆಗೆ ನಡೆಯುತ್ತಿರುವ ಸಿದ್ಧತೆಗಳನ್ನು ಪರಿಶೀಲಿಸುತ್ತಿದೆ.

  • 2024ರ ಏಪ್ರಿಲ್‌ಗೆ ಆಂಧ್ರ ಪ್ರದೇಶ ವಿಧಾನಸಭೆಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ಕೇಂದ್ರ ಚುನಾವಣಾ ಆಯೋಗ ಎಪಿಗೆ ಭೇಟಿ ನೀಡಿದ್ದು, ಸಿದ್ಧತೆಗಳನ್ನು ಪರಿಶೀಲಿಸಿದೆ. 

ಆಂಧ್ರಪ್ರದೇಶಕ್ಕೆ ಭೇಟಿ ನೀಡಿರುವ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳು ವಿಧಾನಸಭೆ ಚುನಾವಣೆಗೆ ನಡೆಯುತ್ತಿರುವ ಸಿದ್ಧತೆಗಳನ್ನು ಪರಿಶೀಲಿಸುತ್ತಿದೆ.
ಆಂಧ್ರಪ್ರದೇಶಕ್ಕೆ ಭೇಟಿ ನೀಡಿರುವ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳು ವಿಧಾನಸಭೆ ಚುನಾವಣೆಗೆ ನಡೆಯುತ್ತಿರುವ ಸಿದ್ಧತೆಗಳನ್ನು ಪರಿಶೀಲಿಸುತ್ತಿದೆ.

ಬೆಂಗಳೂರು: ಆಂಧ್ರ ಪ್ರದೇಶದ ವೈಎಸ್‌ಆರ್ ಕಾಂಗ್ರೆಸ್ ಸರ್ಕಾರದ ಅವಧಿ 2024ರ ಮೇನಲ್ಲಿ ಮುಕ್ತಾಯವಾಗಲಿದೆ. ಆ ವೇಳೆಗಾಗಲೇ ಹೊಸ ಸರ್ಕಾರ ಅಧಿಕಾರಕ್ಕೆ ಬರಬೇಕಿದೆ. ಹೀಗಾಗಿ ಕೇಂದ್ರ ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇದರ ಭಾಗವಾದಿ ಇಸಿಐ ಅಧಿಕಾರಿಗಳು ಆಂಧ್ರದಲ್ಲಿ ಬೀಡು ಬಿಟ್ಟಿದ್ದು, ಎರಡನೇ ದಿನವಾದ ಇಂದು (ಡಿಸೆಂಬರ್ 23, ಶನಿವಾರ) ಕೂಡ ಪರಿಶೀಲನೆ ನಡೆಸುತ್ತಿದ್ದಾರೆ.

ಟ್ರೆಂಡಿಂಗ್​ ಸುದ್ದಿ

Gold Rate Today: ಶುಕ್ರವಾರವೂ ಏರಿಕೆಯಾದ ಚಿನ್ನ, ಬೆಳ್ಳಿ ದರ; ದೇಶದಲ್ಲಿಂದು ಆಭರಣ ದರ ಎಷ್ಟಾಗಿದೆ ಗಮನಿಸಿ

ಇಪಿಎಫ್‌ಒ; ಈ 3 ಕಾರಣ ನೀಡಿದ್ರೆ ಇಪಿಎಫ್‌ ಹಣ ಬೇಗ ಹಿಂಪಡೆಯಬಹುದು, ಹಂತ ಹಂತದ ಮಾರ್ಗದರ್ಶಿ ಇಲ್ಲಿದೆ ನೋಡಿ

ಗುವಾಹಟಿ ಬೀದಿಯಲ್ಲಿ ಸೋಷಿಯಲ್ ಮೀಡಿಯಾ ಪ್ರಭಾವಿಯ ಮಂಜುಲಿಕಾ ನೃತ್ಯನಾಟಕ, ದಂಗಾಗಿ ನೋಡುತ್ತ ನಿಂತ ಜನ-ವೈರಲ್ ವಿಡಿಯೋ

Gold Rate Today: ಬಂಗಾರ ಪ್ರಿಯರಿಗೆ ಮತ್ತೆ ನಿರಾಸೆ; ತುಸು ಕಡಿಮೆಯಾಗಿ ಪುನಃ ಹೆಚ್ಚಾದ ಚಿನ್ನದ ದರ, ಬೆಳ್ಳಿ ಬೆಲೆಯೂ ಏರಿಕೆ

ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಎಸ್ಪಿಗಳೊದಿಗೆ ಸಭೆ ನಡೆಸಿರುವ ಅಧಿಕಾರಿಗಳು, ಎರಡನೇ ದಿನವೂ ಜಿಲ್ಲಾ ಹಾಗೂ ರಾಜ್ಯ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ. ಚುನಾವಣೆ ನಿರ್ವಹಣೆ, ಮತಪಟ್ಟಿ ಪರಿಷ್ಕರಣೆ, ಅಂತಿಮ ಪಟ್ಟಿ ತಯಾರಿಕೆ ಕುರಿತು ಪ್ರಮುಖ ಸಲಹೆ ಹಾಗೂ ಸೂಚನೆಗಳನ್ನು ನೀಡಿದ್ದಾರೆ ಎಂದು ವರದಿಯಾಗಿದೆ.

ಮತಪಟ್ಟಿಗೆ ಸಂಬಂಧಿಸಿದಂತೆ ಕೇಳಿ ಬರುತ್ತಿರುವ ಆರೋಪಗಳನ್ನು ಆಯಾ ಕ್ಷೇತ್ರ ಮಟ್ಟದಲ್ಲೇ ಪರಿಶೀಲಿಸಿ ತೀರ್ಮಾನಗಳನ್ನು ಕೈಗೊಳ್ಳಬೇಕು ಎಂಬುದು ಸೇರಿದಂತೆ ಚುನಾವಣಾ ಸಿದ್ಧತೆ ಕುರಿತು ಪ್ರಮುಖ ಸೂಚನೆ ನೀಡಿರುವ ಚುನಾವಣಾ ಆಯೋಗದ ಅಧಿಕಾರಿಗಳು, ಯಾವುದೇ ತಪ್ಪುಗಳು, ಅಡೆತಡೆಗಳು ಇಲ್ಲದಂತೆ ಚುನಾವಣೆ ನಡೆಸಬೇಕೆಂದು ಸೂಚಿಸಿದ್ದಾರೆ.

ಎರಡನೇ ದಿನದ ಪ್ರವಾಸದಲ್ಲೂ ಅಧಿಕಾರಿಗಳೊಂದಿಗೆ ಸಿದ್ಧತಾ ಸಭೆ

ಆಂಧ್ರ ಪ್ರದೇಶದಲ್ಲಿ ಎರಡನೇ ದಿನದ ಪ್ರವಾಸವನ್ನು ಮುಂದುವರಿಸಿರುವ ಇಸಿಐ ಅಧಿಕಾರಿಗಳು, ಮತದಾರರ 2024ರ ಮತದಾರರ ಪಟ್ಟಿಗೆ ಸಮಗ್ರ ತಿದ್ದುಪಡಿ ಮತ್ತು ಚುನಾವಣಾ ಸಿದ್ಧತೆಗಳ ಕುರಿತು ವಿಜಯವಾಡದ ನೊವಾಟೆಲ್ ಹೋಟೆಲ್‌ನಲ್ಲಿ ರಾಜ್ಯ ಚುನಾವಣಾಧಿಕಾರಿಗಳು, ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ್ದು, ಕೆಲ ನಿರ್ದೇಶನಗಳನ್ನ ನೀಡಲಾಗಿದೆ. ಮತದಾನ ಸಿದ್ಧತೆ, ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಭದ್ರತಾ ವ್ಯವಸ್ಥೆ ಕುರಿತು ಚರ್ಚೆ ನಡೆಸಿದ್ದಾರೆ.

ಶುಕ್ರವಾರ ನಡೆದ ಪರಿಶೀಲನಾ ಸಭೆಯಲ್ಲಿ 18 ಜಿಲ್ಲೆಗಳ ಡಿಸಿ, ಎಸ್ಪಿಗಳು ಭಾಗವಹಿಸಿದ್ದರು. ಶನಿವಾರದ (ಡಿಸೆಂಬರ್ 23) ಸಭೆಯಲ್ಲಿ ಇನ್ನೂ 8 ಜಿಲ್ಲೆಗಳ ಉತನ್ನ ಮಟ್ಟದ ಅಧಿಕಾರಿಗಳೊಂದಿಗೆ ಸಿದ್ಧತೆಗಳ ಬಗ್ಗೆ ಸಭೆ ನಡೆಸಲಾಗಿದೆ. ಚುನಾವಣಾ ನೀತಿ ಸಂಹಿತೆಯ ಜಾರಿ ಬಳಿಕ ಭದ್ರತಾ ವ್ಯವಸ್ಥೆ, ಚೆಕ್ ಪೋಸ್ಟ್, ತನಿಖಾ ಕೇಂದ್ರಗಳ ಬಗ್ಗೆ ಚರ್ಚಿಸಲಾಗಿದೆ.

ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ಮೇಲೆ ನಿಗಾ ಇಡಿ

ಪ್ರಮುಖವಾಗಿ ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ಮೇಲೆ ನಿಗಾ ಇಡಲು ಚುನಾವಣಾಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡಲಾಗಿದೆ ಎಂದು ವರದಿಯಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾ ನಿರ್ದೇಶಕರು ಹಾಗೂ ಇತರೆ ಇಲಾಖೆಗಳ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

ಆಂಧ್ರ ಪ್ರದೇಶದ ವಿಧಾನಸಭೆಗೆ 2024ರ ಏಪ್ರಿಲ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಇಸಿ ಮೂಲಗಳು ಹೇಳಿವೆ. ಚುನಾವಣೆಗೆ ಇನ್ನೂ 4 ತಿಂಗಳು ಮಾತ್ರ ಬಾಕಿ ಇರುವ ಕಾರಣ ಅಧಿಕಾರಿಗಳಿಗೆ ಪ್ರಮುಖ ಸೂಚನೆ ನೀಡಿದ್ದಾರೆ. ಮತದಾರರ ಪಟ್ಟಿಗೆ ಬಂದಿರುವ ದೂರುಗಳ ಬಗ್ಗೆ ತೆಲುಗು ದೇಶಂ ಪಕ್ಷ, ವೈಎಸ್‌ಆರ್ ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರನ್ನು ಅಧಿಕಾರಿಗಳು ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಕ್ಷೇತ್ರ ಮಟ್ಟದ ವೀಕ್ಷಣೆ ಕುರಿತು ಜಿಲ್ಲಾವರು ವಿವರಗಳನ್ನು ಕೇಳಿದ್ದಾರೆ. ರಾಜಕೀಯ ಮುಖಂಡರು ಮುಂದಿಟ್ಟ ಆಕ್ಷೇಪಣೆಗಳನ್ನು ಬಗೆಹರಿಸಬೇಕೆಂದು ರಾಜ್ಯದ ಅಧಿಕಾರಿಗಳಿಗೆ ಇಸಿಐ ಅಧಿಕಾರಿಗಳು ಸೂಚಿಸಿದ್ದಾರೆ.

ಪ್ರಸ್ತುತ ಆಂಧ್ರ ಪ್ರದೇಶದಲ್ಲಿ ವೈೆಎಸ್ ಜಗನ್ ಮೋಹನ್ ರೆಡ್ಡಿ ಅವರ ನೇತೃತ್ವದ ವೈಎಸ್‌ಆರ್‌ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದು, ಎರಡನೇ ಬಾರಿಗೆ ಅಧಿಕಾರಕ್ಕೆ ಬರಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇನ್ನ ಮಾಜಿ ಸಿಎಂ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷವೂ 2024ರ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲೇಬೇಕೆಂದು ಪಣ ತೊಟ್ಟಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ