logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Andhra Result: ಆಂಧ್ರ ಪ್ರದೇಶದಲ್ಲಿ ಟಿಡಿಪಿ ಪಕ್ಷಕ್ಕೆ ಬಹುಮತ, ಸಿಎಂ ಗಾದಿಯತ್ತ ಚಂದ್ರಬಾಬು ನಾಯ್ಡು, ಜಗನ್ ಮೋಹನ್ ರೆಡ್ಡಿಗೆ ಹಿನ್ನಡೆ

Andhra Result: ಆಂಧ್ರ ಪ್ರದೇಶದಲ್ಲಿ ಟಿಡಿಪಿ ಪಕ್ಷಕ್ಕೆ ಬಹುಮತ, ಸಿಎಂ ಗಾದಿಯತ್ತ ಚಂದ್ರಬಾಬು ನಾಯ್ಡು, ಜಗನ್ ಮೋಹನ್ ರೆಡ್ಡಿಗೆ ಹಿನ್ನಡೆ

Reshma HT Kannada

Jun 04, 2024 07:23 PM IST

google News

ಆಂಧ್ರ ಪ್ರದೇಶದಲ್ಲಿ ಟಿಡಿಪಿ ಪಕ್ಷಕ್ಕೆ ಬಹುಮತ, ಸಿಎಂ ಗಾದಿಯತ್ತ ಚಂದ್ರಬಾಬು ನಾಯ್ಡು, ಜಗನ್ ಮೋಹನ್ ರೆಡ್ಡಿಗೆ ಹಿನ್ನಡೆ

    • ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆ 2024 ಫಲಿತಾಂಶ: ಆಂಧ್ರ ಪ್ರದೇಶದ 175 ವಿಧಾನಸಭಾ ಕ್ಷೇತ್ರಗಳಿಗೆ ಮೇ 13 ರಂದು ಮತದಾನ ನಡೆಯಿತು. ಇದೀಗ ಫಲಿತಾಂಶ ಪ್ರಕಟವಾಗಿದ್ದು, ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ನಿಚ್ಚಳ ಮೇಲುಗೈ ಸಾಧಿಸಿದೆ. ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್‌ಸಿಪಿ ಹಿನ್ನಡೆ ಅನುಭವಿಸಿದೆ. -Andhra Pradesh Assembly Elections Result
ಆಂಧ್ರ ಪ್ರದೇಶದಲ್ಲಿ ಟಿಡಿಪಿ ಪಕ್ಷಕ್ಕೆ ಬಹುಮತ, ಸಿಎಂ ಗಾದಿಯತ್ತ ಚಂದ್ರಬಾಬು ನಾಯ್ಡು, ಜಗನ್ ಮೋಹನ್ ರೆಡ್ಡಿಗೆ ಹಿನ್ನಡೆ
ಆಂಧ್ರ ಪ್ರದೇಶದಲ್ಲಿ ಟಿಡಿಪಿ ಪಕ್ಷಕ್ಕೆ ಬಹುಮತ, ಸಿಎಂ ಗಾದಿಯತ್ತ ಚಂದ್ರಬಾಬು ನಾಯ್ಡು, ಜಗನ್ ಮೋಹನ್ ರೆಡ್ಡಿಗೆ ಹಿನ್ನಡೆ

ಅಮರಾವತಿ: ಆಂಧ್ರಪ್ರದೇಶದಲ್ಲಿ ಲೋಕಸಭಾ ಚುನಾವಣೆಯ ಜೊತೆಗೆ ವಿಧಾನಸಭೆ ಚುನಾವಣೆ ಕೂಡ ನಡೆದಿತ್ತು. ಜೂನ್‌ 13ರಂದು ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು (ಜೂನ್‌ 4) ಪ್ರಕಟವಾಗಿದೆ. ಒಟ್ಟು 175 ಸ್ಥಾನಗಳಿಗೆ ಏಕಹಂತದಲ್ಲಿ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಹಿರಿಯ ನಾಯಕ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಾರ್ಟಿ (ಟಿಡಿಪಿ) ಮುನ್ನಡೆ ಸಾಧಿಸಿದ್ದು ಬಹುಮತ ಪಡೆದಿದೆ. ಟಿಡಿಪಿಯ 135 ಉಮೇದುವಾರರು ಜಯಗಳಿಸಿದ್ದಾರೆ. ಹಾಲಿ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್‌ ಕಾಂಗ್ರೆಸ್‌ ಪಾರ್ಟಿಯ (ವೈಎಸ್‌ಆರ್‌ಸಿಪಿ) ಟಿಕೆಟ್ ಮೇಲೆ ಚುನಾವಣೆ ಎದುರಿಸಿದ್ದ ಉಮೇದುವಾರರು 11 ಜಯಗಳಿಸಿದ್ದಾರೆ. ಜಗನ್ ಮೋಹನ್ ಮುಖ್ಯಮಂತ್ರಿ ಗಾದಿ ಕಳೆದುಕೊಳ್ಳುವುದು ಬಹುತೇಕ ನಿಚ್ಚಳವಾಗಿದೆ. ಉಳಿದಂತೆ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷದ 21 ಉಮೇದುವಾರರು ಜಯಗಳಿಸಿದ್ದಾರೆ. ಬಿಜೆಪಿ5 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ.

2019ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಗನ್‌ ಮೋಹನ್‌ ರೆಡ್ಡಿ ನೇತೃತ್ವದ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷವು ಗೆಲುವು ಸಾಧಿಸಿತ್ತು. ಜಗನ್‌ ಮೋಹನ್‌ ರೆಡ್ಡಿ ಆಂಧ್ರಪ್ರದೇಶದ ಸಿಎಂ ಆಗಿ ಆಯ್ಕೆಯಾಗಿದ್ದರು. ಆಂಧ್ರಪ್ರದೇಶದಲ್ಲಿ 175 ಸ್ಥಾನಗಳಿದ್ದು ಯಾವುದೇ ಪಕ್ಷ ಸರ್ಕಾರ ರಚಿಸಬೇಕು ಎಂದರೆ 88 ಸ್ಥಾನಗಳನ್ನು ಗಳಿಸಬೇಕು. ಆಂಧ್ರದಲ್ಲಿ ಜಗನ್‌ ಮೋಹನ್‌ ರೆಡ್ಡಿ 2011 ರಿಂದ ಪಕ್ಷದ ನಾಯಕತ್ವ ವಹಿಸಿಕೊಂಡಿದ್ದಾರೆ. ಟಿಡಿಪಿ ಪಕ್ಷದ ಚಂದ್ರಬಾಬು ನಾಯ್ದು 1995 ರಿಂದ ರಾಜಕೀಯ ರಂಗದಲ್ಲಿದ್ದಾರೆ. ಈ ಬಾರಿ ಜಗನ್‌ ಮೋಹನ್‌ ರೆಡ್ಡಿ ಪುಲಿವೆಂದಲ ಕ್ಷೇತ್ರದಿಂದ ಸ್ಪರ್ದಿಸಿದ್ದರೆ, ಚಂದ್ರಬಾಬು ನಾಯ್ಡು ಕುಪ್ಪಂನಿಂದ ಸ್ಪರ್ಧಿಸಿದ್ದಾರೆ. ಇವರಿಬ್ಬರೂ ಜಯ??? ಗಳಿಸಿದ್ದಾರೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌, ಎನ್‌ಡಿಎ ಮೈತ್ರಿ (ಟಿಡಿಪಿ-ಜನಸೇನಾ ಪಕ್ಷ ಹಾಗೂ ಬಿಜೆಪಿ) ಹಾಗೂ ಇಂಡಿಯಾ ಮೈತ್ರಿಯ ಕಾಂಗ್ರೆಸ್‌, ಮಾಕ್ಸಿಸ್ಟ್‌ ಹಾಗೂ ಕಮ್ಯೂನಿಸ್ಟ್‌ ಪಾರ್ಟಿ ಆಫ್‌ ಇಂಡಿಯಾಗಳು ಸ್ಪರ್ಧಿಸಿದ್ದವು. ವೈಎಸ್‌ ಜಗನ್‌ ಮೋಹನ್‌ ರೆಡ್ಡಿ, ಎನ್‌. ಚಂದ್ರಬಾಬು ನಾಯ್ದು, ಪವನ್‌ ಕಲ್ಯಾಣ್‌, ದಗ್ಗುಬಾಟಿ ಪುರಂದೇಶ್ವರಿ, ವೈ.ಎಸ್.ಶರ್ಮಿಳಾ, ವಿ. ಶ್ರೀನಿವಾಸ ರಾವ್‌, ರಾಮಕೃಷ್ಣ ಮೊದಲಾದವರು ಆಂಧ್ರದಲ್ಲಿ ವಿವಿಧ ಪಕ್ಷಗಳ ಪ್ರಮುಖ ನಾಯಕರಾಗಿದ್ದಾರೆ.

ಆಂಧ್ರಪ್ರದೇಶ ವಿಭಜನೆಯ ನಂತರ ಎರಡನೇ ವಿಧಾನಸಭೆ ಚುನಾವಣೆ ಇದಾಗಿದ್ದು, ರಾಜ್ಯದಲ್ಲಿ ಟಿಡಿಪಿ ಮೈತ್ರಿ ಹಾಗೂ ವೈಎಸ್ಆರ್‌ ಕಾಂಗ್ರೆಸ್‌ ನಡುವೆ ತೀವ್ರ ಪೈಪೋಟಿ ಎದುರಾಗಿತ್ತು. ಮೊದಲಿನಿಂದಲೂ ಆಡಳಿತ ವಿರೋಧಿ ಅಲೆ ಎದುರಿಸುತ್ತಿದ್ದ ವೈಎಸ್‌ಆರ್‌ ಕಾಂಗ್ರೆಸ್‌ಗೆ ಬೆಂಬಲವಾಗಿದ್ದು ಪಕ್ಷದ ಕಲ್ಯಾಣ ಯೋಜನೆಗಳನ್ನು ಜನರ ಮುಂದಿಟ್ಟು ಸಿಎಂ ಜಗನ್ ಮೋಹನ್ ಮತ ಯಾಚಿಸಿದ್ದರು. ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದೊಂದಿಗೆ ಟಿಡಿಪಿ ಮೈತ್ರಿ ಮಾಡಿಕೊಂಡಿದ್ದು ಮತ್ತು ಪವನ್ ಕಲ್ಯಾಣ್ ಆಂಧ್ರ ಕರಾವಳಿಯಲ್ಲಿ ಮತ ಸೆಳೆದಿದ್ದು ಚಂದ್ರಬಾಬು ನಾಯ್ಡು ಅವರಿಗೆ ವರದಾನವಾಯಿತು.

ಈ ಬಾರಿಯ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯು ಜಗನ್‌ ಮೋಹನ್‌ ಹಾಗೂ ಚಂದ್ರಬಾಯು ನಾಯ್ಡು ಇಬ್ಬರಿಗೂ ಪ್ರತಿಷ್ಠೆಯ ಕಣವಾಗಿತ್ತು. ಚಂದ್ರಬಾಯು ನಾಯ್ಡು ನೇತೃತ್ವದ ಟಿಡಿಪಿ ಹಾಗೂ ಪವನ್‌ ಕಲ್ಯಾಣ್‌ ನೇತೃತ್ವದ ಜನಸೇನಾ ಪಕ್ಷಕ್ಕೆ ಈ ಬಾರಿ ಚುನಾವಣೆಯು ಅಳಿವು ಉಳಿವಿನ ಪ್ರಶ್ನೆಯಾಗಿತ್ತು.

2019 ರ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೋಟ

2019ರಲ್ಲಿ ಏಪ್ರಿಲ್‌ 11 ರಂದು ಆಂಧ್ರಪ್ರದೇಶ ವಿಧಾನಸಭಾ ಚುನಾವಣೆ ನಡೆದಿತ್ತು. ಆಗ 175 ವಿಧಾನಸಭಾ ಕ್ಷೇತ್ರಗಳಲ್ಲಿ ಜಗನ್‌ ಮೋಹನ್‌ ರೆಡ್ಡಿ ನೇತೃತ್ವದ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷವು 151 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಆಗ ಚುನಾವಣೆಯಲ್ಲಿ ಟಿಡಿಪಿ ಕೇವಲ 23 ಸ್ಥಾನ ಗಳಿಸಿತ್ತು. ಪವನ್‌ ಕಲ್ಯಾಣ್‌ ನೇತೃತ್ವದ ಜನಸೇನಾ ಪಕ್ಷವು 1 ಸ್ಥಾನ ಗಳಿಸುವ ಮೂಲಕ ವಿಧಾನಸಭೆಗೆ ಪ್ರವೇಶಿಸಿತ್ತು. ಬಿಜೆಪಿ, ಕಾಂಗ್ರೆಸ್‌ ಹಾಗೂ ಕಮ್ಯುನಿಸ್ಟ್‌ ಪಕ್ಷಗಳಿಗೆ ಒಂದೂ ಸ್ಥಾನ ಸಿಕ್ಕಿರಲಿಲ್ಲ.

ಜಗನ್‌ ಹಿನ್ನಡೆಗೆ ಕಾರಣ

ಜಗನ್‌ ಹಿನ್ನೆಡೆಗೆ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಬಂಧನ ಮುಖ್ಯ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ. ವೈಎಸ್‌ಆರ್‌ಪಿ ಸರ್ಕಾರವು ಹಿಂದಿನ ಟಿಡಿಪಿ-ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಪ್ರಸ್ತಾಪಕ್ಕೆ ಬಂದಿದ್ದ ‘ಅಮರಾವತಿ ರಾಜಧಾನಿ’ ನಿರ್ಮಾಣ ಪ್ರಸ್ತಾಪವನ್ನು ರದ್ದುಗೊಳಿಸಿತ್ತು. ಇದು ಅಮರಾವತಿ ಭಾಗದ ರೈತರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ನಡುವೆ ಟಿಡಿಪಿ-ಜೆಎಸ್‌ಪಿ ಹಾಗೂ ಬಿಜೆಪಿ ಮೈತ್ರಿಯು ಅಮರಾವತಿ ರಾಜಧಾನಿ ಎಂಬ ಅಂಶವನ್ನು ಮರು ಸ್ಥಾಪಿಸುವ ಪ್ರತಿಜ್ಞೆ ಮಾಡಿದೆ. ಆದರೆ ಜಗನ್‌ ಮೋಹನ್‌ ರೆಡ್ಡಿ ವಿಶಾಖಪಟ್ಟಣಂ ಅನ್ನು ಆಡಳಿತ ಅಥವಾ ಕಾರ್ಯಕಾರಿ ರಾಜಧಾನಿ ಮಾಡುವುದಾಗಿ ತಿಳಿಸಿದ್ದಾರೆ. ಈ ನಡುವೆ ಮದ್ಯಪಾನ ನಿಷೇಧ, ಅಕ್ರಮ ಮರಳು ಗಣಿಗಾರಿಕೆ, ಭೂ ಹಕ್ಕು ಕಾಯಿದೆ ಈ ಎಲ್ಲವಕ್ಕೂ ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದು ಜಗನ್‌ ಹಿನ್ನಡೆಗೆ ಕಾರಣವಾಗಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

Disclaimer: ಗಮನಿಸಿ; ಇದು ಮತ ಎಣಿಕೆ ಕೇಂದ್ರಗಳಲ್ಲಿ ಲಭ್ಯವಿರುವ ಮಾಹಿತಿ ಆಧರಿಸಿ ಪ್ರಕಟಿಸಿದ ಬರಹ. ಚುನಾವಣಾ ಆಯೋಗವು ಅಧಿಕೃತವಾಗಿ ಅಂಕಿಅಂಶಗಳನ್ನು ಪ್ರಕಟಿಸಿದ ನಂತರ ಮತಗಳ ಸಂಖ್ಯೆ ಏರುಪೇರಾಗಬಹುದು. ಅಂತಿಮ ಫಲಿತಾಂಶದ ವಿವರವನ್ನು ಇದೇ ಬರಹದಲ್ಲಿ ಅಪ್‌ಡೇಟ್ ಮಾಡಲಾಗುವುದು.

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ