logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Mallikarjun Kharge: ಕರ್ನಾಟಕ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಬಜರಂಗ ದಳ ನಿಷೇಧ ಪ್ರಸ್ತಾಪ; ಮಲ್ಲಿಕಾರ್ಜುನ ಖರ್ಗೆಗೆ ಪಂಜಾಬ್ ಕೋರ್ಟ್ ಸಮನ್ಸ್

Mallikarjun Kharge: ಕರ್ನಾಟಕ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಬಜರಂಗ ದಳ ನಿಷೇಧ ಪ್ರಸ್ತಾಪ; ಮಲ್ಲಿಕಾರ್ಜುನ ಖರ್ಗೆಗೆ ಪಂಜಾಬ್ ಕೋರ್ಟ್ ಸಮನ್ಸ್

HT Kannada Desk HT Kannada

May 15, 2023 03:15 PM IST

google News

ಕರ್ನಾಟಕ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗ ದಳ ನಿಷೇಧ ಪ್ರಸ್ತಾಪ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪಂಜಾಬ್ ಕೋರ್ಟ್ ಸಮನ್ಸ್ ನೀಡಿದೆ.

  • ರಾಜ್ಯ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವ ಬಜರಂಗ ದಳ ನಿಷೇಧ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪಂಜಾಬ್ ಕೋರ್ಟ್ ಸಮನ್ಸ್ ನೀಡಿದೆ.

ಕರ್ನಾಟಕ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗ ದಳ ನಿಷೇಧ ಪ್ರಸ್ತಾಪ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪಂಜಾಬ್ ಕೋರ್ಟ್ ಸಮನ್ಸ್ ನೀಡಿದೆ.
ಕರ್ನಾಟಕ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗ ದಳ ನಿಷೇಧ ಪ್ರಸ್ತಾಪ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪಂಜಾಬ್ ಕೋರ್ಟ್ ಸಮನ್ಸ್ ನೀಡಿದೆ.

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಲ್ಲಿ (Karnataka Assembly Elections) ಕಾಂಗ್ರೆಸ್ (Congress) 135 ಸ್ಥಾನಗಳ ಭರ್ಜರಿ ಗೆಲುವಿನೊಂದಿಗೆ ಸ್ಪಷ್ಟ ಬಹುಮತ ಪಡೆದಿದ್ದು, ಸರ್ಕಾರ ರಚನೆಯ ಕಸರತ್ತು ಆರಂಭಿಸಿದೆ.

ಕಾಂಗ್ರೆಸ್ ಈ ಬಾರಿಯ ಚುನಾವಣೆಗಾಗಿ ಬಿಡುಗಡೆ ಮಾಡಿದ್ದ ಪ್ರಣಾಳಿಕೆಯಲ್ಲಿ (Congress Manifesto) ನಿಷೇಧಿತ ಇಸ್ಲಾಮಿಕ್ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ-ಪಿಎಫ್ಐ ಜೊತೆಗೆ ಸಮಾಜದಲ್ಲಿ ಶಾಂತಿಕದಡಲು ಪ್ರಯತ್ನಿಸಿದರೆ ವಿಶ್ವ ಹಿಂದೂ ಪರಿಷತ್‌ನ ಯುವ ಘಟಕವಾಗಿರುವ ಬಜರಂಗ ದಳವನ್ನು (Bhajrang Dal) ನಿಷೇಧ ಮಾಡುವುದಾಗಿ ಹೇಳಿತ್ತು.

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿನ ಭರವಸೆಯ ಸಂಬಂಧ 100 ಕೋಟಿ ರೂಪಾಯಿಗಳ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಅವರಿಗೆ ಪಂಜಾಬ್ ಕೋರ್ಟ್ (Punjab Court) ಸಮನ್ಸ್ ನೀಡಿದೆ.

ಬಜರಂಗದಳ ಹಿಂದೂಸ್ತಾನ್ ಎಂಬ ಸಂಘಟನೆಯ ಅಧ್ಯಕ್ಷ ಹಿತೇಶ್ ಭಾರದ್ವಾಜ್ ಎಂಬುವರ ದೂರಿನ ಮೇರೆಗೆ ಪಂಜಾಬ್‌ನ ಸಂಗ್ರೂರ್ ಜಿಲ್ಲಾ ಕೋರ್ಟ್ ಖರ್ಗೆ ಅವರಿಗೆ ಸಮನ್ಸ್ ಜಾರಿ ಮಾಡಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ಸಿಮಿ ಮತ್ತು ಅಲ್-ಖೈದಾದಂತಹ ದೇಶ ವಿರೋಧಿ ಸಂಘಟನೆಗಳೊಂದಿಗೆ ಹೋಲಿಸಿದೆ ಎಂದು ಅರ್ಜಿದಾರ ಹಿತೇಶ್ ತಮ್ಮ ಅರ್ಜಿಯಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ನೀಡಿರುವ ಪ್ರಣಾಳಿಕೆಯಲ್ಲಿರುವ ಈ ಅಂಶ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಸಮುದಾಯಗಳ ನಡುವೆ ದ್ವೇಷ ಅಥವಾ ದ್ವೇಷವನ್ನು ಉತ್ತೇಜಿಸುವ ಸಂಘಟನೆಗಳನ್ನು ನಿಷೇಧಿಸುವ ಭರವಸೆ ನೀಡಿದೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಿದ್ದೇನು?

ಜಾತಿ ಅಥವಾ ಧರ್ಮದ ಆಧಾರದ ಮೇಲೆ ಸಮುಂದಾಯಗಳ ನಡುವೆ ದ್ವೇಷವನ್ನು ಹರಡುವ ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ದೃಢ ಮತ್ತು ನಿರ್ಣಾಯಕ ಕ್ರಮ ಪಕ್ಷ ಬದ್ಧವಾಗಿದೆ.

ಕಾನೂನು ಮತ್ತು ಸಂವಿಧಾನವು ಪವಿತ್ರವಾಗಿದೆ. ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಸಮುದಾಯಗಳ ನಡುವೆ ದ್ವೇಷ ಅಥವಾ ದ್ವೇಷವನ್ನುಉತ್ತೇಜಿಸುವ ಬಜರಂಗದಳ, ಪಿಎಫ್‌ಐ ಅಥವಾ ಇತರೆ ಯಾವುದೇ ವ್ಯಕ್ತಿಗಳು ಮತ್ತು ಸಂಸ್ಥೆಗಳಿಂದ ಉಲ್ಲಂಘಿಸಲಾಗುಲುದಿಲ್ಲ ಎಂದು ನಾವು ನಂಬುತ್ತೇನೆ.

ಸರ್ವ ಜನಾಂಗದ ಶಾಂತಿಯ ತೋಟ ಎಂಬ ಕಾಂಗ್ರೆಸ್ ಪ್ರಣಾಳಿಕೆಯನ್ನು ಓದಿ. ರಾಜ್ಯದಲ್ಲಿ ಪಕ್ಷವು ಅಧಿಕಾರಕ್ಕೆ ಬಂದರೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಸಮುದಾಯಗಳ ನಡುವೆ ದ್ವೇಷ ಅಥವಾ ದ್ವೇಷವನ್ನುಉತ್ತೇಜಿಸುವ ಬಜರಂಗದಳ, ಪಿಎಫ್‌ಐ ಅಥವಾ ಇತರೆ ಯಾವುದೇ ವ್ಯಕ್ತಿಗಳು ಮತ್ತು ಸಂಸ್ಥೆಗಳ ವಿರುದ್ಧ ಕಾನೂನು ಪ್ರಕಾರ ನಿರ್ಣಾಯಕ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿತ್ತು.

ಇನ್ನು ಇದೇ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಅವರಿಂದ ಹಿಡಿದು ರಾಜ್ಯದ ಬಿಜೆಪಿ ನಾಯಕರ ವರೆಗೆ ಎಲ್ಲರೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕಾಂಗ್ರೆಸ್‌ನ ಈ ವಿಷಯ ಭಾರಿ ಸುದ್ದಿಯಾಗುತ್ತಿದ್ದಂತೆ ರಾಜ್ಯದಲ್ಲಿ ಚುನಾವಣಾ ಪ್ರಚಾರದಲ್ಲಿದ್ದ ಪ್ರಧಾನಿ ಮೋದಿ ಅವರು ಜೈಬಜರಂಗ ಬಲಿ ಎಂದು ಹೇಳಿ ಭಾಷಣ ಆರಂಭಿಸುವ ಮೂಲಕ ಕಾಂಗ್ರೆಸ್‌ಗೆ ಟಾಂಗ್ ನೀಡಿದ್ದರು.

ಬಜರಂಗ ಬಲಿ ಭಕ್ತರಿಗೆ ಬೀಗ ಹಾಕಲು ಕಾಂಗ್ರೆಸ್ ನಿರ್ಧರಿಸಿದೆ. ಜೈ ಬಜರಂಗಬಲಿ ಎಂದು ಜಪಿಸಿ, ಸಂಸ್ಕೃತಿ ದುರುಪಯೋಗ ಪಡಿಸುವವರನ್ನು ಶಿಕ್ಷಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕ ಸಭೆಗಳಲ್ಲಿ ನೆರದಿದ್ದವರನ್ನು ಒತ್ತಾಯಿಸಿದ್ದರು.

ರಾಜ್ಯದ ನಾಯಕರ ಕಾಂಗ್ರೆಸ್ ವಿರುದ್ಧ ಮುಗಿಬಿದ್ದು ಹೇಳಿಕೆಗಳನ್ನು ನೀಡಿದ್ದರು. ಬಜರಂಗದಳವನ್ನು ನಿಷೇಧಿಸುವ ಬಗ್ಗೆ ಮಾತನಾಡಲು ಅವರಿಗೆ ಎಷ್ಟು ಧೈರ್ಯ. ಅವರು ಪ್ರಯತ್ನಿಸಲಿ. ನಾವೇನು ಮಾಡಬಹುದು ಎಂಬುದನ್ನು ತೋರಿಸುತ್ತೇವೆ ಅಂತ ಅಶ್ವತ್ಥ್ ನಾರಾಯಣ ಗುಡುಗಿದ್ದರು.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 135 ಸ್ಥಾನಗಳ ಭರ್ಜರಿ ಗೆಲುವಿನ ಬಳಿಕ ಕಾಂಗ್ರೆಸ್, ಬಜರಂಗದಳವನ್ನು ನಿಷೇಧಿಸುವ ಯಾವುದೇ ಪ್ರಸ್ತಾಪ ನಮ್ಮ ಮುಂದಿಲ್ಲ. ಈ ಸಂಘಟನೆಗಳು ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವುದರಿಂದ ನಿಷೇಧಿಸುವಂತಹ ಅಧಿಕಾರ ಅವರಿಗೆ ಮಾತ್ರ ಇದೆ ಎಂದಿದೆ.

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ