logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  North East Election Update: ಈಶಾನ್ಯದತ್ತ ಮುಖ ಮಾಡೋಣ: ತ್ರಿಪುರಾ, ನಾಗಾಲ್ಯಾಂಡ್‌, ಮೇಘಾಲಯ ಎಣಿಕೆ ಪರಿಸ್ಥಿತಿ ಅರಿಯೋಣ

North East Election Update: ಈಶಾನ್ಯದತ್ತ ಮುಖ ಮಾಡೋಣ: ತ್ರಿಪುರಾ, ನಾಗಾಲ್ಯಾಂಡ್‌, ಮೇಘಾಲಯ ಎಣಿಕೆ ಪರಿಸ್ಥಿತಿ ಅರಿಯೋಣ

HT Kannada Desk HT Kannada

Mar 02, 2023 11:24 AM IST

ಮತ ಎಣಿಕೆ ಪ್ರಕ್ರಿಯೆ

    • ಈಶಾನ್ಯ ರಾಜ್ಯಗಳಾದ ತ್ರಿಪರಾ, ನಾಗಾಲ್ಯಾಂಡ್‌ ಹಾಗೂ ಮೇಘಾಲಯದಲ್ಲಿ ನಡೆದ ವಿಧಾನಸಭೆ ಚುನಾವಣೆಗೆ ಮತ ಎಣಿಕೆ ನಡೆಯುತ್ತಿದ್ದು, ಸದ್ಯದ ಪರಿಸ್ಥಿತಿಯಲ್ಲಿ ನಾಗಾಲ್ಯಾಂಡ್‌ ಹಾಗೂ ತ್ರಿಪುರಾದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಅದೇ ರೀತಿ ಮೇಘಾಲಯದಲ್ಲಿ ಆಡಳಿತಾರೂಢ ನ್ಯಾಶನಲ್‌ ಪೀಪಲ್ಸ್‌ ಪಾರ್ಟಿ ಭಾರೀ ಮುನ್ನಡೆ ಕಾಯ್ದುಕೊಂಡಿದೆ. ಈ ಕುರಿತು ಇಲ್ಲಿದೆ ಮಾಹಿತಿ..
ಮತ ಎಣಿಕೆ ಪ್ರಕ್ರಿಯೆ
ಮತ ಎಣಿಕೆ ಪ್ರಕ್ರಿಯೆ (HT_PRINT)

ನವದೆಹಲಿ: ಈಶಾನ್ಯ ರಾಜ್ಯಗಳಾದ ತ್ರಿಪರಾ, ನಾಗಾಲ್ಯಾಂಡ್‌ ಹಾಗೂ ಮೇಘಾಲಯದಲ್ಲಿ ನಡೆದ ವಿಧಾನಸಭೆ ಚುನಾವಣೆಗೆ ಮತ ಎಣಿಕೆ ನಡೆಯುತ್ತಿದ್ದು, ಸದ್ಯದ ಪರಿಸ್ಥಿತಿಯಲ್ಲಿ ನಾಗಾಲ್ಯಾಂಡ್‌ ಹಾಗೂ ತ್ರಿಪುರಾದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಅದೇ ರೀತಿ ಮೇಘಾಲಯದಲ್ಲಿ ಆಡಳಿತಾರೂಢ ನ್ಯಾಶನಲ್‌ ಪೀಪಲ್ಸ್‌ ಪಾರ್ಟಿ ಭಾರೀ ಮುನ್ನಡೆ ಕಾಯ್ದುಕೊಂಡಿದೆ.

ಟ್ರೆಂಡಿಂಗ್​ ಸುದ್ದಿ

ಹವಾಮಾನ ಬದಲಾವಣೆ ಎಫೆಕ್ಟ್; ತನ್ನ ಎಲ್ಲಾ ಹಿಮನದಿಗಳನ್ನು ಕಳೆದುಕೊಂಡ ಮೊದಲ ದೇಶ ವೆನೆಜುವೆಲಾ; ಏನಿದು ಬೆಳವಣಿಗೆ

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು; ಚುನಾವಣಾ ಪ್ರಚಾರಕ್ಕೆ ಮಾತ್ರ ಸೀಮಿತ

2024 ರ ಮಾರುತಿ ಸುಜುಕಿ ಸ್ವಿಫ್ಟ್ ಭಾರತದಲ್ಲಿ ಬಿಡುಗಡೆ; ಕಾರಿನ ಬೆಲೆ, ಫೀಚರ್ಸ್ ಸೇರಿ ತಿಳಿಯಬೇಕಾದ 5 ಅಂಶಗಳ ವಿವರ ಇಲ್ಲಿದೆ

Dhruv Rathee: ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿರುವ ಧ್ರುವ್ ರಾಠೀ ಯಾರು? ಈತ ಮೋದಿ ಸರ್ಕಾರವನ್ನೇ ಟಾರ್ಗೆಟ್‌ ಮಾಡಲು ಕಾರಣವೇನು?

ರಾಜ್ಯವಾರು ಮುನ್ನಡೆ ಅಂಕಿಅಂಶಗಳನ್ನು ಗಮನಿಸುವುದಾದರೆ...

ನಾಗಾಲ್ಯಾಂಡ್:‌

ಆಡಳಿತಾರೂಢ ಬಿಜೆಪಿ-ಎನ್‌ಡಿಪಿಪಿ 37 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಕಳೆದ ಬಾರಿಗಿಂತ 7 ಹೆಚ್ಚಿನ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಅದೇ ರೀತಿ ಎನ್‌ಪಿಎಫ್‌ ಕೇವಲ ಐದು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, 21 ಕ್ಷೇತ್ರಗಳಲ್ಲಿ ಹಿನ್ನಡೆ ಅನುಭವಿಸಿದೆ. ಇನ್ನು ಕಾಂಗ್ರೆಸ್‌ 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಳೆದ ಬಾರಿ ಶೂನ್ಯ ಸಂಪಾದನೆ ಮಾಡಿತ್ತು. ಇತರರು ಸದ್ಯ 15 ಕ್ಷೇತ್ರಗಳಲ್ಲಿ ಮುನ್ನಡೆ ಕಂಡಿದ್ದಾರೆ.

ತ್ರಿಪುರಾ:

ಆಡಳಿತಾರೂಢ ಬಿಜೆಪಿ 31 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಕಳೆದ ಬಾರಿಗೆ ಹೋಲಿಸಿದರೆ 13 ಕ್ಷೇತ್ರಗಳಲ್ಲಿ ಹಿನ್ನಡೆ ಅನುಭವಿಸುತ್ತಿದೆ. ಸಿಪಿಎಂ-ಕಾಂಗ್ರೆಸ್‌ ಮೈತ್ರಿಕೂಟ 16 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಉತ್ತಮ ಪ್ರದರ್ಶನ ತೋರುತ್ತಿದೆ. TIPRA 12 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಇದು ಕೂಡ ಉತ್ತಮ ಸಾಧನೆ ಎನ್ನಲಾಗುತ್ತಿದೆ. ಇತರರು ಕೇವಲ ಒಂದು ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಮೇಘಾಲಯ:

ಆಡಳಿತಾರೂಢ ಎನ್‌ಪಿಪಿ 23 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಳೆದ ಬಾರಿಗಿಂತ 3 ಹೆಚ್ಚಿನ ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಬಿಜೆಪಿ 7 ಕ್ಷೇತ್ರಗಳಲ್ಲಿ ದಾಪುಗಾಲು ಇಡುತ್ತಿದ್ದು, ಟಿಎಂಸಿ ಕೂಡ 7 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್‌ ಕೇವಲ 6 ಕ್ಷೇತ್ರಗಳಲ್ಲಿ ಮುನ್ನಡೆ ಕಂಡಿದ್ದು, ಕಳೆದ ಬಾರಿಗಿಂತ 15 ಕ್ಷೇತ್ರಗಳಲ್ಲಿ ಹಿನ್ನಡೆ ಅನುಭವಿಸುತ್ತಿದೆ.

ಈ ಅಂಕಿಅಂಶಗಳು ಕ್ಷಣಕ್ಷಣಕ್ಕೂ ಬದಲಾಗುತ್ತಿದ್ದು, ಮೂರೂ ರಾಜ್ಯಗಳಲ್ಲಿ ಬಹುತೇಕ ಪರಿಸ್ಥಿತಿ ಸ್ಥಿರವಾಗಿದೆ ಈ ಅಂಕಿಅಂಶಗಳನ್ನೇ ಪರಿಗಣನೆಗೆ ತೆಗೆದುಕೊಳ್ಳುವುದಾದರೆ, ನಾಗಾಲ್ಯಾಂಡ್‌ನಲ್ಲಿ ಬಿಜೆಪಿ-ಎನ್‌ಡಿಪಿಪಿ ಮೈತ್ರಿಕೂಟ ಹಾಗೂ ತ್ರಿಪುರಾದಲ್ಲಿ ಬಿಜೆಪಿ ಹಾಗೂ ಮೇಘಾಲಯದಲ್ಲಿ ಎನ್‌ಪಿಪಿ ಪಕ್ಷಗಳು ಅಧಿಕಾರ ರಚಿಸುವುದು ಖಚಿತ.

ತ್ರಿಪುರಾದಲ್ಲಿ ಸರ್ಕಾರ ರಚಿಸುವ ಭರವಸೆ ವ್ಯಕ್ತಪಡಿಸಿರುವ ಬಿಜೆಪಿ, ನಾಗಾಲ್ಯಾಂಡ್‌ನಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ ಎಂದು ಹೇಳುತ್ತಿದೆ. ಅದೇ ರೀತಿ ಮೇಘಾಲಯದಲ್ಲೂ ಪಕ್ಷ ಉತ್ತಮ ಪ್ರದರ್ಶನ ತೋರಲಿದೆ ಎಂದು ಬಿಜೆಪಿ ವಿಶ್ವಾಸ ವ್ಯಕ್ತಪಡಿಸಿದೆ.

ಸಂಜೆಯ ವೇಳೆಗೆ ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶದ ಸ್ಪಷ್ಟ ಚಿತ್ರಣ ಗೊತ್ತಾಗಲಿದೆ.

ಸಂಬಂಧಿತ ಸುದ್ದಿ

Nagaland Counting: ನಾಗಾಲ್ಯಾಂಡ್‌ ನೊಗ ಹೊರಲು ಸಜ್ಜಾದ ಬಿಜೆಪಿ ಮೈತ್ರಿಕೂಟ?: ಈಶಾನ್ಯದಲ್ಲಿ ಬಿಜೆಪಿ ಪ್ರಭಾವ ವಿಸ್ತರಣೆ ಶುರು

ನಾಗಾಲ್ಯಾಂಡ್‌ನಲ್ಲಿ ಬಿಜೆಪಿ-ಎನ್‌ಡಿಪಿಪಿ ಮೈತ್ರಿಕೂಟ ಮತ್ತೆ ಸರ್ಕಾರ ರಚನೆಯ ಹಾದಿಯಲ್ಲಿದ್ದು, ಬಿಜೆಪಿ ಈಶಾನ್ಯ ರಾಜ್ಯಗಳಲ್ಲಿ ತನ್ನ ಪ್ರಭಾವನ್ನು ಮತ್ತಷ್ಟು ವಿಸ್ತರಿಸುವ ಸಾಧ್ಯತೆ ದಟ್ಟವಾಗಿದೆ. ಸದ್ಯದ ಅಂಕಿ ಅಂಶಗಳ ಪ್ರಕಾರ ನಾಗಾಲ್ಯಾಂಡ್‌ನಲ್ಲಿ ಒಟ್ಟು 60 ವಿಧಾನಸಭಾ ಕ್ಷೇತ್ರಗಳ ಪೈಕಿ, ಬಿಜೆಪಿ-ಎನ್‌ಡಿಪಿಪಿ ಮೈತ್ರಿಕೂಟ 50 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ಕಿಸಿ.

North East Election Result: ಮೂರು ಈಶಾನ್ಯ ರಾಜ್ಯಗಳ ಚುನಾವಣಾ ಫಲಿತಾಂಶ ಇಂದು; ಪ್ರಗತಿಯಲ್ಲಿದೆ ಮತ ಎಣಿಕೆ- ಗಮನಿಸಬೇಕಾದ 10 ಅಂಶಗಳು

ಈ ಮೂರು ರಾಜ್ಯಗಳ ಪೈಕಿ, ತ್ರಿಪುರಾದ 60 ಸದಸ್ಯ ಬಲದ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿಗೆ ಸವಾಲೆಸೆಯಲು ಸಾಂಪ್ರದಾಯಿಕ ಎದುರಾಳಿಗಳಾದ ಕಾಂಗ್ರೆಸ್ ಮತ್ತು ಎಡಪಕ್ಷಗಳು ಮೊದಲ ಬಾರಿಗೆ ಕೈಜೋಡಿಸಿವೆ. ಪರಿಣಾಮ ರಾಷ್ಟ್ರೀಯವಾಗಿ ಉಳಿದೆರಡು ರಾಜ್ಯಗಳಿಗಿಂತ ತ್ರಿಪುರಾ ಹೆಚ್ಚು ಗಮನವನ್ನು ಸೆಳೆದಿದೆ. ಈ ಕುರಿತು ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ಕಿಸಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ