logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Gujarat Assembly Elections 2022 Results: ಗುಜರಾತ್‌ನಲ್ಲಿ ಪ್ರಚಂಡ ವಿಜಯ; ಮತ್ತೆ ಅಧಿಕಾರದ ಗದ್ದುಗೆ ಏರಿದ ಬಿಜೆಪಿ

Gujarat Assembly Elections 2022 Results: ಗುಜರಾತ್‌ನಲ್ಲಿ ಪ್ರಚಂಡ ವಿಜಯ; ಮತ್ತೆ ಅಧಿಕಾರದ ಗದ್ದುಗೆ ಏರಿದ ಬಿಜೆಪಿ

HT Kannada Desk HT Kannada

Dec 08, 2022 10:21 PM IST

ಗುಜರಾತ್‌ ಸಿಎಂ ಭೂಪೇಂದ್ರ ಪಟೇಲ್‌ ಸೇರಿದಂತೆ ಬಿಜೆಪಿ ನಾಯಕರ ಸಂಭ್ರಮ

    • ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿದ್ದು, ತನ್ನ ಭದ್ರಕೋಟೆ ಗುಜರಾತ್‌ನಲ್ಲಿ ಅಧಿಪತ್ಯ ಮುಂದುವರೆಸಲಿದೆ. ಈ ಬಾರಿ ಭರ್ಜರಿ ಜಯ ಗಳಿಸುವ ಮೂಲಕ ಪ್ರಧಾನಿ ಮೋದಿ ಪಕ್ಷ ದಾಖಲೆ ನಿರ್ಮಿಸಿದೆ.
ಗುಜರಾತ್‌ ಸಿಎಂ ಭೂಪೇಂದ್ರ ಪಟೇಲ್‌ ಸೇರಿದಂತೆ ಬಿಜೆಪಿ ನಾಯಕರ ಸಂಭ್ರಮ
ಗುಜರಾತ್‌ ಸಿಎಂ ಭೂಪೇಂದ್ರ ಪಟೇಲ್‌ ಸೇರಿದಂತೆ ಬಿಜೆಪಿ ನಾಯಕರ ಸಂಭ್ರಮ (PTI)

ಗಾಂಧಿನಗರ: ಪ್ರತಿಷ್ಠೆಯ ಕಣವಾಗಿದ್ದ ಗುಜರಾತ್‌ ವಿಧಾನಸಭಾ ಚುನಾವಣೆಯಲ್ಲಿ, ಆಡಳಿತಾರೂಢ ಬಿಜೆಪಿ ಪ್ರಚಂಡ ದಿಗ್ವಿಜಯ ಸಾಧಿಸಿದೆ. ಸತತ ಏಳನೇ ಬಾರಿಗೆ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಏರುವ ಮೂಲಕ ದಾಖಲೆ ನಿರ್ಮಿಸಿದೆ. ಅತ್ತ ಹಿಮಾಚಲ ಪ್ರದೇಶದಲ್ಲಿ ಸೋಲನುಭವಿಸಿದರೂ, ಗುಜರಾತ್‌ ವಿಜಯ ಕೇಸರಿ ಪಾಳಯಕ್ಕೆ ಸಂಭ್ರಮ ತಂದಿದೆ.

ಟ್ರೆಂಡಿಂಗ್​ ಸುದ್ದಿ

ಸಾಯಿ ಬಾಬಾ ಮತ್ತೆ ಹುಟ್ಟಿದ್ರಾ, ಈ ಬಾಲಕ ಅವರ ಪುನರವತಾರವೇ, ಏನಿದು ವಿದೇಶೀಯರ ವರ್ತನೆ! - ವೈರಲ್ ವಿಡಿಯೋ

Gold Rate Today: ವಾರಾಂತ್ಯದಲ್ಲಿ ತುಸು ಇಳಿಕೆಯಾದ ಹಳದಿ ಲೋಹದ ಬೆಲೆ; ಶನಿವಾರ ಬೆಳ್ಳಿ ದರ ತಟಸ್ಥ

Gold Rate Today: ಶುಕ್ರವಾರವೂ ಏರಿಕೆಯಾದ ಚಿನ್ನ, ಬೆಳ್ಳಿ ದರ; ದೇಶದಲ್ಲಿಂದು ಆಭರಣ ದರ ಎಷ್ಟಾಗಿದೆ ಗಮನಿಸಿ

ಇಪಿಎಫ್‌ಒ; ಈ 3 ಕಾರಣ ನೀಡಿದ್ರೆ ಇಪಿಎಫ್‌ ಹಣ ಬೇಗ ಹಿಂಪಡೆಯಬಹುದು, ಹಂತ ಹಂತದ ಮಾರ್ಗದರ್ಶಿ ಇಲ್ಲಿದೆ ನೋಡಿ

ಒಟ್ಟು 182 ಸದಸ್ಯ ಬಲದ ಗುಜರಾತ್‌ ವಿಧಾನಸಭೆಯಲ್ಲಿ, ಬಹುಮತಕ್ಕೆ ಬೇಕಾಗಿರುವುದು 92 ಕ್ಷೇತ್ರಗಳಲ್ಲಿ ಗೆಲುವು. ಆದರೆ, ಇಂದು ಮತ ಎಣಿಕೆ ಆರಂಭವಾದಾಗಿನಿಂದ ಬಿಜೆಪಿಯು ಭಾರಿ ಮುನ್ನಡೆ ಕಾಯ್ದುಕೊಂಡು ಬಂದಿತ್ತು. ಅಂತಿಮವಾಗಿ ಒಟ್ಟು 156 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ರಾಜ್ಯದಲ್ಲಿ ಗದ್ದುಗೆ ಉಳಿಸಿಕೊಂಡಿದೆ. ಕಳೆದ ಬಾರಿಯ, ಅಂದರೆ 2017ರ ಚುನಾವಣೆಗೆ ಹೋಲಿಸಿದರೆ, ಈ ಬಾರಿ ಬಿಜೆಪಿ ಸಾಧನೆ ಹೆಚ್ಚಿದೆ. ಸತತ ಏಳು ಬಾರಿ ರಾಜ್ಯವೊಂದರ ವಿಧಾನ ಸಭೆಯನ್ನು ಗೆಲ್ಲುವ ಮೂಲಕ, ಪಶ್ಚಿಮ ಬಂಗಾಳದ ಎಡರಂಗದ ಸರ್ಕಾರದ ಸಾಧನೆಯನ್ನು ಗುಜರಾತ್‌ ಬಿಜೆಪಿ ಸರಿಗಟ್ಟಿದೆ. ಅಂತಿಮ ಫಲಿತಾಂಶವನ್ನು ಭಾರತೀಯ ಚುನಾವಣಾ ಆಯೋಗ ಅಧಿಕೃತವಾಗಿ ಪ್ರಕಟಿಸಿದೆ.

ಕಳೆದ ಚುನಾವಣೆಯಲ್ಲಿ ಬರೋಬ್ಬರಿ 78 ಕ್ಷೇತ್ರಗಳಲ್ಲಿ ಗೆದ್ದು ಬಿಜೆಪಿಗೆ ಪ್ರಬಲ ಪೈಪೋಟಿ ನೀಡಿದ್ದ ಕಾಂಗ್ರೆಸ್‌, ಈ ಬಾರಿ ಭಾರಿ ಹಿನ್ನಡೆ ಅನುಭವಿಸಿದೆ. ಕೇವಲ 17 ಕ್ಷೇತ್ರಗಳಲ್ಲಿ ಮಾತ್ರ ಕೈ ಅಭ್ಯರ್ಥಿಗಳು ಗೆಲ್ಲುವಲ್ಲಿ ಸಫಲರಾಗಿದ್ದಾರೆ. ಆದರೆ ಬಿಜೆಪಿ 150ರ ಗಡಿ ದಾಟಿ ದಾಖಲೆ ನಿರ್ಮಿಸಿದೆ.

ಪಕ್ಷವಾರು ಗಳಿಸಿದ ಮತಗಳು ಹೀಗಿವೆ

ಬಿಜೆಪಿ - 156

ಕಾಂಗ್ರೆಸ್‌ - 17

ಆಮ್‌ ಆದ್ಮಿ ಪಕ್ಷ - 05

ಇತರ - 04

2017ರ ಚುನಾವಣೆಯಲ್ಲಿ ಏನಾಗಿತ್ತು?

ಈ ಹಿಂದೆ, ಅಂದರೆ 2017ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು 99 ಕ್ಷೇತ್ರಗಳಲ್ಲಿ‌ ಜಯಭೇರಿ ಬಾರಿಸಿತ್ತು. ಕಾಂಗ್ರೆಸ್‌ 78 ಕ್ಷೇತ್ರಗಳಲ್ಲಿ ಜಯಿಸಿತ್ತು. ಆಗ ಆಮ್‌ ಆದ್ಮಿ ಪಕ್ಷ ಕಣಕ್ಕಿಳಿದಿರಲಿಲ್ಲ. ಆದರೆ ಈ ಬಾರಿ, ಬಿಜೆಪಿ ತನ್ನ ಕ್ಷೇತ್ರಗಳ ಸಂಖ್ಯೆಯನ್ನು ವ್ಯಾಪಕವಾಗಿ ಹೆಚ್ಚಿಸಿಕೊಂಡಿದೆ. ಇದೇ ಮೊದಲ ಬಾರಿಗೆ ಗುಜರಾತ್‌ನಲ್ಲಿ ಸ್ಪರ್ಧಿಸಿದ ಆಪ್‌, ಒಟ್ಟು 5 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ತನ್ನದು ರಾಷ್ಟ್ರೀಯ ಪಕ್ಷ ಎಂಬುದನ್ನು ಸಾಬೀತುಪಡಿಸಿದೆ. ಇದನ್ನು ಪಕ್ಷದ ಮುಖ್ಯಸ್ಥ ಕೇಜ್ರಿವಾಲ್‌ ಕೂಡಾ ಘೋಷಿಸಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ ದೇಶದ ಪ್ರಬಲ ಪಕ್ಷಗಳಿಗೆ ಕಠಿಣ ಪೈಪೋಟಿ ನೀಡುವ ಸೂಚನೆ ರವಾನಿಸಿದೆ.

ಪಕ್ಷವಾರು ಮತಗಳ ವಿವರ

ಸಿಎಂ ಆಗಿ ಡಿಸೆಂಬರ್ 12ರಂದು ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕಾರ

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ದಾಖಲೆ ಸಂಖ್ಯೆಯ ಸ್ಥಾನಗಳೊಂದಿಗೆ ವಿಜಯ ಸಾಧಿಸಿದ ಬಿಜೆಪಿಯು, ಮುಂದಿನ ಯೋಜನೇ ರೂಪಿಸಿದೆ. ಹಾಲಿ ಸಿಎಂ ಭೂಪೇಂದ್ರ ಪಟೇಲ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಪಕ್ಷ ಘೋಷಿಸಿದೆ. ಇದೇ ಡಿಸೆಂಬರ್ 12ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಹಾಲಿ ಸಿಎಂ ಭೂಪೇಂದ್ರ ಪಟೇಲ್ ಮತ್ತೊಂದು ಅವಧಿಗೆ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಿ ಆರ್ ಪಾಟೀಲ್ ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಹೇಳಿದ್ದೇನು?

ಚುನಾವಣೆಯಲ್ಲಿ ಗೆಲುವು ಖಚಿತವಾಗುತ್ತಿದ್ದಂತೆಯೇ, ಪ್ರಧಾನಿ ಮೋದಿ ಮತದಾರರಿಗೆ ಧನ್ಯವಾದ ತಿಳಿಸಿದ್ದಾರೆ. ಅಲ್ಲದೆ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಬೆಂಬಲಿಗರನ್ನುದ್ದೇಶಿಸಿ ಮಾತನಾಡಿದ ಅವರು, “ಶಾಂತಿಯುತವಾಗಿ ಚುನಾವಣೆ ನಡೆಸಿದ್ದಕ್ಕಾಗಿ ನಾನು ಚುನಾವಣಾ ಆಯೋಗಕ್ಕೆ ಧನ್ಯವಾದ ಹೇಳಲು ಬಯಸುತ್ತೇನೆ. ನನಗೆ ತಿಳಿದಂತೆ ಯಾವುದೇ ಮತಗಟ್ಟೆಯಲ್ಲಿ ಮರು ಮತದಾನದ ಅಗತ್ಯವಿಲ್ಲ. ಹಿಮಾಚಲ ಪ್ರದೇಶದ ಮತದಾರರಿಗೂ ನಾನು ಧನ್ಯವಾದ ಹೇಳಲು ಇಚ್ಛಿಸುತ್ತೇನೆ. ಇಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ನ ಮತಗಳ ನಡುವಿನ ವ್ಯತ್ಯಾಸವು 1 ಶೇಕಡಕ್ಕಿಂತ ಕಡಿಮೆ” ಎಂದು ಹೇಳಿದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ