logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Gold Rate Today: ಬಂಗಾರ ಪ್ರಿಯರಿಗೆ ಮತ್ತೆ ನಿರಾಸೆ; ತುಸು ಕಡಿಮೆಯಾಗಿ ಪುನಃ ಹೆಚ್ಚಾದ ಚಿನ್ನದ ದರ, ಬೆಳ್ಳಿ ಬೆಲೆಯೂ ಏರಿಕೆ

Gold Rate Today: ಬಂಗಾರ ಪ್ರಿಯರಿಗೆ ಮತ್ತೆ ನಿರಾಸೆ; ತುಸು ಕಡಿಮೆಯಾಗಿ ಪುನಃ ಹೆಚ್ಚಾದ ಚಿನ್ನದ ದರ, ಬೆಳ್ಳಿ ಬೆಲೆಯೂ ಏರಿಕೆ

Reshma HT Kannada

May 16, 2024 06:00 AM IST

google News

ಬಂಗಾರ ಪ್ರಿಯರಿಗೆ ಮತ್ತೆ ನಿರಾಸೆ; ತುಸು ಕಡಿಮೆಯಾಗಿ ಪುನಃ ಹೆಚ್ಚಾದ ಚಿನ್ನದ ದರ, ಬೆಳ್ಳಿ ಬೆಲೆಯೂ ಏರಿಕೆ

    • ಚಿನ್ನದ ದರ ಕಡಿಮೆಯಾಯ್ತು ಎಂದು ನೀವು ಖುಷಿ ಪಟ್ಟಿದ್ದರೆ ಇಂದು ನಿಮಗೆ ನಿರಾಸೆ ಕಾಡುವುದು ಖಚಿತ. ನಿನ್ನೆಯಷ್ಟೇ (ಮೇ 15) ಕೊಂಚ ಕಡಿಮೆಯಾಗಿದ್ದ ಹಳದಿ ಲೋಹದ ಬೆಲೆ ಇಂದು ಹೆಚ್ಚಾಗಿದೆ, ಗುರುವಾರ ಬೆಳ್ಳಿ ದರದಲ್ಲೂ ಏರಿಕೆಯಾಗಿದೆ.
ಬಂಗಾರ ಪ್ರಿಯರಿಗೆ ಮತ್ತೆ ನಿರಾಸೆ; ತುಸು ಕಡಿಮೆಯಾಗಿ ಪುನಃ ಹೆಚ್ಚಾದ ಚಿನ್ನದ ದರ, ಬೆಳ್ಳಿ ಬೆಲೆಯೂ ಏರಿಕೆ
ಬಂಗಾರ ಪ್ರಿಯರಿಗೆ ಮತ್ತೆ ನಿರಾಸೆ; ತುಸು ಕಡಿಮೆಯಾಗಿ ಪುನಃ ಹೆಚ್ಚಾದ ಚಿನ್ನದ ದರ, ಬೆಳ್ಳಿ ಬೆಲೆಯೂ ಏರಿಕೆ

ಬೆಂಗಳೂರು: ಆಭರಣ ಪ್ರಿಯರು ಚಿನ್ನ, ಬೆಳ್ಳಿ ದರ ಕಡಿಮೆಯಾಗುವುದನ್ನೇ ಕಾಯುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಬಂಗಾರದ ಬೆಲೆ ಎನ್ನುವುದು ನೀರಿನ ಮೇಲಿನ ಗುಳ್ಳೆಯಂತಾಗಿದೆ. ಯಾಕೆಂದರೆ ಕಡಿಮೆಯಾಯ್ತು ಎಂದು ಚಿನ್ನ ಕೊಳ್ಳಲು ಹೋಗುವಷ್ಟರಲ್ಲಿ ದರ ಏರಿಕೆಯಾಗಿರುತ್ತದೆ. ಕೈಗೆಟುಕಿದ್ದು ಬಾಯಿಗೆ ದಕ್ಕಿಲ್ಲ ಎಂಬಂತಹ ಪರಿಸ್ಥಿತಿಯಾಗಿದೆ. ಗುರುವಾರ (ಮೇ 15) ಚಿನ್ನ ಹಾಗೂ ಬೆಳ್ಳಿ ದರ ಎರಡೂ ಹೆಚ್ಚಾಗಿದ್ದು, ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಾಗಿದೆ ಗಮನಿಸಿ.

ನಿಮ್ಮ ನಗರದಲ್ಲಿ ಇಂದಿನ ಚಿನ್ನದ ಧಾರಣೆ ಎಷ್ಟಿದೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

22 ಕ್ಯಾರೆಟ್‌ ಚಿನ್ನದ ಬೆಲೆ

ಇಂದು 1 ಗ್ರಾಂ ಚಿನ್ನಕ್ಕೆ 6,715 ರೂ. ಇದೆ. ನಿನ್ನೆ 6,675 ರೂ ಇದ್ದು, ಈ ದರಕ್ಕೆ ಹೋಲಿಸಿದರೆ 40 ರೂ ಏರಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 53,720 ರೂ. ನೀಡಬೇಕು. ನಿನ್ನೆ 53,400 ರೂ ಇದ್ದು, ನಿನ್ನೆ ದರಕ್ಕೆ ಹೋಲಿಸಿದರೆ ಇಂದು 320 ರೂ. ಹೆಚ್ಚಾಗಿದೆ. 10 ಗ್ರಾಂ ಚಿನ್ನಕ್ಕೆ 67,150 ರೂ ಇದೆ. ನಿನ್ನೆ 66,750 ರೂ. ಇತ್ತು. ಈ ದರಕ್ಕೆ ಹೋಲಿಸಿದರೆ 400 ರೂ. ಏರಿಕೆಯಾಗಿದೆ. 100 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 6,71,500 ರೂ. ನೀಡಬೇಕು. ನಿನ್ನೆ 6,67,500 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 4,000 ರೂ. ಏರಿಕೆಯಾಗಿದೆ.

24 ಕ್ಯಾರೆಟ್‌ ಚಿನ್ನದ ಬೆಲೆ

24 ಕ್ಯಾರೆಟ್‌ ಚಿನ್ನಕ್ಕೆ 1 ಗ್ರಾಂಗೆ 7,325 ರೂ. ಇದೆ. ನಿನ್ನೆ 7,282 ರೂ. ಇದು ಈ ದರಕ್ಕೆ ಹೋಲಿಸಿದರೆ 43 ರೂ ಏರಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 58,600 ರೂ. ನೀಡಬೇಕು. ನಿನ್ನೆ 58,256 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 344 ರೂ. ಹೆಚ್ಚಾಗಿದೆ. ಇಂದು 10 ಗ್ರಾಂ ಚಿನ್ನಕ್ಕೆ 73,250 ನೀಡಬೇಕು. ನಿನ್ನೆ 72,820 ರೂ. ಇದ್ದು, ಈ ದರಕ್ಕೆ ಹೋಲಿಸಿದರೆ 430 ರೂ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ 7,32,500 ರೂ. ಇದೆ. ನಿನ್ನೆ 7,28,200 ರೂ ಇತ್ತು. ಈ ದರಕ್ಕೆ ಹೋಲಿಸಿದರೆ 4,300 ರೂ ಹೆಚ್ಚಾಗಿದೆ.

ಕರ್ನಾಟಕದಲ್ಲಿ ಚಿನ್ನದ ಬೆಲೆ (10 ಗ್ರಾಂ)

ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರದಲ್ಲಿ ಇಂದು ಚಿನ್ನದ ಬೆಲೆ 22 ಕ್ಯಾರೆಟ್‌ಗೆ 67,150 ರೂ. ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆ 73,250 ರೂ. ಇದೆ. ಮೈಸೂರು, ಮಂಗಳೂರು, ಬಳ್ಳಾರಿ, ದಾವಣಗೆರೆ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇದೇ ಬೆಲೆ ಇರಲಿದೆ. ಆದರೆ ಮಜೂರಿ, ಇತರೆ ಶುಲ್ಕ ಹಾಗೂ ಇನ್ನಿತರ ದರಗಳು ವಿವಿಧ ನಗರಗಳಲ್ಲಿ ವ್ಯತ್ಯಾಸವಿರಬಹುದು.

ಹೊರ ರಾಜ್ಯಗಳಲ್ಲಿ ಚಿನ್ನದ ದರ (10 ಗ್ರಾಂ)

ಚೆನ್ನೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 67,250 ರೂ. 24 ಕ್ಯಾರೆಟ್‌ಗೆ 73,360 ರೂ. ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 67,150 ರೂ. 24 ಕ್ಯಾರೆಟ್‌ಗೆ 73,250 ರೂ. ಇದೆ. ದೆಹಲಿಯಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 67,300 ರೂ. 24 ಕ್ಯಾರೆಟ್‌ಗೆ 73,400 ಇದೆ. ಕೊಲ್ಕತ್ತಾದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 67,150 ರೂ. 24 ಕ್ಯಾರೆಟ್‌ಗೆ 73,250 ರೂ. ಇದೆ. ಹೈದರಾಬಾದ್‌ನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 67,150 ರೂ. ಇದ್ದರೆ, 24 ಕ್ಯಾರೆಟ್‌ಗೆ 73,250 ರೂ. ಇದೆ. ಕೇರಳದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 67,150 ರೂ. 24 ಕ್ಯಾರೆಟ್‌ಗೆ 73,250 ರೂ. ಆಗಿದೆ.

ಬೆಳ್ಳಿ ದರ

ಇಂದು ಬೆಳ್ಳಿ ದರವೂ ಏರಿಕೆಯಾಗಿದೆ. ಒಂದು ಗ್ರಾಂ ಬೆಳ್ಳಿಗೆ 86.50 ರೂ. ಇದೆ. 8 ಗ್ರಾಂಗೆ 692 ರೂ ಇದ್ದರೆ, 10 ಗ್ರಾಂಗೆ 865 ರೂ. ಇದೆ. 100 ಗ್ರಾಂಗೆ 8,650 ರೂ. ಹಾಗೂ 1 ಕಿಲೋಗೆ 86,500 ರೂ. ಬೆಲೆ ನಿಗದಿ ಆಗಿದೆ.

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ